ಭಾಲ್ಕಿ | ಅಕಾಲಿಕ ಮಳೆ : 69 ಹೆಕ್ಟೇರ್ ತೋಟಗಾರಿಕೆ ಬೆಳೆಹಾನಿ

Date:

ಭಾಲ್ಕಿ ತಾಲೂಕಿನಲ್ಲಿ ಸುರಿದ ಅಕಾಲಿಕ ಮಳೆಗೆ ಸುಮಾರು 69.60 ಹೆಕ್ಟೇರ್ ತೋಟಗಾರಿಕೆ ಬೆಳೆ ಹಾನಿಯಾಗಿದೆ ಎಂದು ತೋಟಗಾರಿಕೆ ಇಲಾಖೆಯ ಸಹಾಯಕ ನಿರ್ದೇಶಕ ಮಾರುತಿ ಜಬನೂರ ಹೇಳಿದರು.

- Advertisement -

ಖಟಕ್ ಚಿಂಚೋಳಿ ಗ್ರಾಮದ ರೈತ ಶಿವಕುಮಾರ ಡಾವರಗಾಂವೆ ಅವರ ಹೊಲಕ್ಕೆ ಮಂಗಳವಾರ ಭೇಟಿ ನೀಡಿ ಹಾನಿಯಾದ ಈರುಳ್ಳಿ ಬೆಳೆ ವೀಕ್ಷಿಸಿ, ರೈತರಿಂದ ಮಾಹಿತಿ ಪಡೆದುಕೊಂಡರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ನಂಬಿಕೆಯ ಪ್ರಾರ್ಥನೆಗೆ ‘ಸಮ್ಮತಿ ಪತ್ರ’ದ ಕಾವಲು: ಮಹಾರಾಷ್ಟ್ರದ ಚರ್ಚ್...

ಸಾಮಾನ್ಯವಾಗಿ ಈ ಹಿಂದಿನಿಂದಲೂ ಚರ್ಚ್‌ಗಳ ಮೂಲಕ ಉಚಿತ ವೈದ್ಯಕೀಯ ಶಿಬಿರ, ರಕ್ತದಾನ, ಇತರೆ ಸಾಮಾಜಿಕ ಸೇವೆಗಳನ್ನು ಮಾಡಿಕೊಂಡು ಬರಲಾಗಿದೆ. ಆದರೆ ಮಹಾರಾಷ್ಟ್ರದಲ್ಲಿ ಜಾರಿಗೆ ಬಂದಿರುವ ಮತಾಂತರ ವಿರೋಧ ಕಾಯ್ದೆ ಈ ಸಾಮಾಜಿಕ ಕಾರ್ಯಗಳಿಗೂ...

ಮೋದಿ ಸರ್ಕಾರ ಗೆದ್ದದ್ದೇ ಅಥವಾ ಕದ್ದದ್ದೇ? ಸಿಇಸಿ ವಿವಾದ...

2024ರ ಲೋಕಸಭಾ ಚುನಾವಣೆಯ ಮತದಾನ ಅಂಕಿಅಂಶಗಳಲ್ಲಿ ಕಂಡುಬಂದ 4.65 ಕೋಟಿ ಮತಗಳ ವ್ಯತ್ಯಾಸ ಮತ್ತು 79 ಕ್ಷೇತ್ರಗಳ ಫಲಿತಾಂಶಗಳ ಕುರಿತು VFD ವರದಿ ಗಂಭೀರ ಪ್ರಶ್ನೆಗಳನ್ನು ಎತ್ತಿತ್ತು. ಇದೇ ವೇಳೆ ಚುನಾವಣಾ ಆಯೋಗದ...

ಮೈತ್ರಿ ಮತ್ತು ಸ್ವೀಕೃತಿಗೆ ಹೆಣ್ತನ ಮುಖ್ಯ ಎನ್ನುವ ‘ಡೋರೊಥಿ’

ಲಿಂಗತ್ವ ಅಲ್ಪಸಂಖ್ಯಾತ ಭಾವನೆಗಳನ್ನು 'ಅಸ್ಪೃಶ್ಯತೆ'ಗೆ ಸಮನಾಗಿ ಈ ಗಂಡಾಳ್ವಿಕೆ ನೋಡುತ್ತದೆ; 'ಲಿಂಗ ಸಂಕರ' ಸ್ಥಿತಿಯನ್ನು, ಜಾತಿ ಸಂಕರದಷ್ಟೇ 'ಮರ್ಯಾದಾಗೇಡು' ಎಂಬಂತೆ ಭಾವಿಸುತ್ತದೆ. ಹೀಗೆ ನೋಡುವ 'ಸನಾತನ' (ಜಡ್ಡುಗಟ್ಟಿದ ಗಂಡು ಮನಸ್ಥಿತಿ ಅಥವಾ ಮುದಿಯಾದ...

‘ಬೆಳೆಹಾನಿ ಸಂಭವಿಸಿದ ರೈತರ ಹೊಲಗಳಿಗೆ ಭೇಟಿ ನೀಡಿ ಮಾಹಿತಿ ಕಲೆ ಹಾಕಲಾಗುತ್ತಿದೆ.  ಅತಿಹೆಚ್ಚು ಪಪ್ಪಾಯಿ 26.80 ಹೆಕ್ಟೇರ್ ಹಾನಿಯಾಗಿದೆ. ಉಳಿದಂತೆ ಟೊಮೆಟೊ 21.70, ಕಲ್ಲಂಗಡಿ 11.20, ಮಾವು 4.80, ಬಾಳೆ 2.20, ಸೀಬೆ 2, ಈರುಳ್ಳಿ 0.50 ಮತ್ತು 0.40 ಹೆಕ್ಟೇರ್ ಮೆಣಸಿನಕಾಯಿ ಬೆಳೆ ಹಾನಿಯಾಗಿದೆ’ ಎಂದು ತಿಳಿಸಿದರು.

‘ನಮ್ಮ ಇಲಾಖೆ ಅಧಿಕಾರಿಗಳು ಖುದ್ದು ರೈತರ ಹೊಲಗಳಿಗೆ ಭೇಟಿ ನೀಡಿ ಬೆಳೆಹಾನಿ ಆಗಿರುವ ಬಗ್ಗೆ ಮಾಹಿತಿ ಕಲೆ ಹಾಕುತ್ತಿದ್ದಾರೆ. ಅದಕ್ಕೂ ಹೊರತುಪಡಿಸಿ ಬೆಳೆಹಾನಿ ಆಗಿದ್ದು ಕಂಡು ಬಂದರೆ ರೈತರು ತೋಟಗಾರಿಕೆ ಇಲಾಖೆ ಅಧಿಕಾರಿಗಳನ್ನು ಸಂಪರ್ಕಿಸಿ ಮಾಹಿತಿ ನೀಡಬೇಕು’ ಎಂದು ಮನವಿ ಮಾಡಿದ್ದಾರೆ.

‘ಅಕಾಲಿಕ ಮಳೆಗೆ ತೋಟಗಾರಿಕೆ ಬೆಳೆಗಳು ಹಾನಿ ಆಗಿರುವ ಬಗ್ಗೆ ಅಧಿಕಾರಿಗಳ ತಂಡದೊಂದಿಗೆ ಭೇಟಿ ನೀಡಿ ಸಮೀಕ್ಷೆ ನಡೆಸಲಾಗುತ್ತದೆ. ಶೀಘ್ರ ಸಮೀಕ್ಷೆ ಪೂರ್ಣಗೊಳಿಸಿ ಪರಿಹಾರಕ್ಕಾಗಿ ಇಲಾಖೆ ಮೇಲಾಧಿಕಾರಿಗಳಿಗೆ ವರದಿ ಸಲ್ಲಿಸುತ್ತೇವೆ’ ಎಂದು ತಿಳಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಎಂಆರ್‌ಪಿಎಲ್‌ನಲ್ಲಿ ಭಾರೀ ಸ್ಫೋಟ: ಓರ್ವ ಸಾವು; ಸುರಕ್ಷತಾ ಲೋಪದ ಸಮಗ್ರ ತನಿಖೆಗೆ ಆಗ್ರಹ

ಜೋಕಟ್ಟೆ ಸಮೀಪದ ಮಂಗಳೂರು ರಿಫೈನರಿ ಆ್ಯಂಡ್ ಪೆಟ್ರೋಕೆಮಿಕಲ್ಸ್ ಲಿಮಿಟೆಡ್‌ (ಎಂಆರ್‌ಪಿಎಲ್) ಘಟಕದಲ್ಲಿ...

ಮಡಗಾಂವ್- ಮಂಗಳೂರು ವಂದೇ ಭಾರತ್ ರೈಲು ಬೆಂಗಳೂರಿಗೆ ವಿಸ್ತರಣೆ

ಮಂಗಳೂರು-ಮಡಗಾಂವ್ ನಡುವೆ ಸಂಚರಿಸುತ್ತಿದ್ದ ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲನ್ನು ಬೆಂಗಳೂರಿನವರೆಗೆ ವಿಸ್ತರಿಸಲಾಗಿದೆ....

ಉಡುಪಿ | ಸ್ವಯಂ ನಿರೋಧಕ ಕಾಯಿಲೆಗಳ ನಿರ್ವಹಣೆಗೆ ಆಯುರ್ವೇದ–ಆಧುನಿಕ ವಿಜ್ಞಾನ ಸಂಯೋಜನೆ ಅಗತ್ಯ

ಸ್ವಯಂ ನಿರೋಧಕ ಕಾಯಿಲೆಗಳ ನಿರ್ವಹಣೆಯಲ್ಲಿ ಆಯುರ್ವೇದದ ಸಾಂಪ್ರದಾಯಿಕ ಜ್ಞಾನವನ್ನು ಆಧುನಿಕ ವೈಜ್ಞಾನಿಕ...