ಮೈಸೂರು | ಮಾನಸಿಕ ತೊಳಲಾಟವನ್ನು ಮಣಿಸುವ ಶಕ್ತಿ ಭರತನಾಟ್ಯಕ್ಕಿದೆ: ಡಾ ಎನ್ ಶ್ರೀನಿವಾಸ್

Date:

ಆಧುನಿಕ ಪ್ರಪಂಚದಲ್ಲಿ ತಾಂತ್ರಿಕತೆಯನ್ನು ಕಂಡ ಮನುಷ್ಯ ಮಾನಸಿಕ ನೆಮ್ಮದಿಯ ಹುಡುಕಾಟದಲ್ಲಿದ್ದಾನೆ. ಆತನ ಮಾನಸಿಕ ತೊಳಲಾಟವನ್ನು ಮಣಿಸುವ ಶಕ್ತಿ ಭರತನಾಟ್ಯಕ್ಕಿದೆ ಎಂದು ಯೋಗನರಸಿಂಹ ಸ್ವಾಮಿ ದೇವಸ್ಥಾನದ ಆಡಳಿತಾಧಿಕಾರಿ ಡಾ.ಎನ್. ಶ್ರೀನಿವಾಸನ್ ಅಭಿಪ್ರಾಯಪಟ್ಟರು.

- Advertisement -

ಮೈಸೂರಿನ ಜಗನ್ಮೋಹನ ಅರಮನೆ ಆವರಣದಲ್ಲಿ ಗುರುದೇವ ಅಕಾಡೆಮಿ ಆಫ್ ಫೈನ್‌ಆರ್ಟ್ ವತಿಯಿಂದ ಶನಿವಾರ ಆಯೋಜಿಸಲಾಗಿದ್ದ ಚೇತನೋತ್ಸವ-೨೦೨೬ ಶಾಸ್ತ್ರೀಯ ನೃತ್ಯಪ್ರದರ್ಶನ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಮೌಢ್ಯತೆಯೊಳಗೆ ನಾ ಕಂಡ ಭಾರತ

ಭಾರತವು ಏಕತೆಯಲ್ಲಿ ವೈವಿಧ್ಯತೆಯನ್ನು ಕಂಡ ದೇಶ. ಹಲವು ಭಾಷೆಗಳು, ಧರ್ಮಗಳು, ಸಂಸ್ಕೃತಿಗಳು, ಆಹಾರ ಪದ್ಧತಿಗಳು, ಜೀವನಶೈಲಿಗಳು ಮತ್ತು ಆಚರಣೆಗಳು ಇಲ್ಲಿನ ಸಾಮಾಜಿಕ ಬದುಕಿನ ವೈಶಿಷ್ಟ್ಯ. ಈ ವೈವಿಧ್ಯತೆಯೇ ಭಾರತದ ಶಕ್ತಿ. ಆದರೆ, ವೈವಿಧ್ಯತೆಯನ್ನು...

ಅಂಬಾರಿಯ ಮುಂದೆ ಪೊಲೀಸರು ಸೆಲ್ಫಿ ತೆಗೆದುಕೊಂಡರೆ ಭದ್ರತೆಗೆ ಹೇಗೆ...

ಚಿನ್ನದ ಅಂಬಾರಿಯನ್ನು ಜಂಬೂಸವಾರಿಯ ದಿನ ಬಳಸಿಕೊಳ್ಳಲು ಸರ್ಕಾರ ಅರಸು ಮನೆತನದವರಿಂದ ಪಡೆಯುತ್ತದೆ. ಉಚಿತವಾಗಿ ಅಲ್ಲ; ನಿಗದಿಪಡಿಸಿರುವ ಹಣವನ್ನು ಸಂದಾಯ ಮಾಡಿ. ಅಂಬಾರಿಯ ಭದ್ರತೆಯ ಹೊಣೆ ಸರ್ಕಾರದ ಮೇಲೂ ಇರುತ್ತದೆ. ಪೊಲೀಸರು ಸೆಲ್ಫಿ ತೆಗೆದುಕೊಂಡರೆ...

ಜನತಂತ್ರಕ್ಕೆ ಕುತ್ತು: ‘ಖಾಸಗಿತನ’ದ ನೆಪದಲ್ಲಿ ಪತ್ರಿಕಾ ಸ್ವಾತಂತ್ರ್ಯ ಹತ್ತಿಕ್ಕಲು...

ಮೋದಿ ಸರ್ಕಾರವು ಈ ಕಾಯ್ದೆಯನ್ನು ಏಕಾಏಕಿ ಜಾರಿಗೊಳಿಸದೆ, ಹಂತ ಹಂತವಾಗಿ ಜಾರಿಗೊಳಿಸುತ್ತಾ ಪ್ರಜಾಪ್ರಭುತ್ವದ ಕತ್ತು ಹಿಸುಕುತ್ತಿದೆ. ಆರ್‌ಟಿಐ ಕಾಯ್ದೆಯನ್ನು ದುರ್ಬಲಗೊಳಿಸುವ ತಿದ್ದುಪಡಿಯು ಈಗಾಗಲೇ ನವೆಂಬರ್ 2025ರಿಂದಲೇ ಜಾರಿಯಲ್ಲಿದ್ದರೆ, ಡೇಟಾ ಬಳಕೆಯ ಕಠಿಣ ನಿಯಮಗಳು...

ಆಧುನಿಕತೆಯ ಜಗದೊಳಗೆ ನಮ್ಮ ದೇಶದ ಸಂಸ್ಕೃತಿ, ಪರಂಪರೆಯನ್ನು ಮೈಗೂಡಿಸಿಕೊಳ್ಳುವಂತೆ ಪ್ರೇರೇಪಿಸಲು ಶಾಸ್ತ್ರೀಯ ನೃತ್ಯ ಕಲೆಗಳು ಉತ್ತಮ ಆಯ್ಕೆಯಾಗಿದೆ. ಇದು ರೋಗಕ್ಕೆ ಮದ್ದಾಗಿ ಕೆಲಸ ಮಾಡುತ್ತದೆ. ಆಧ್ಯಾತ್ಮಿಕ ಹಿನ್ನೆಲೆ, ಸಾಂಪ್ರದಾಯಿಕ ಪರಂಪರೆ ಒಳಗೊಂಡ ಶಿಕ್ಷಣ ನೀಡುವಲ್ಲಿ ಗುರುದೇವ ಅಕಾಡೆಮಿ ಆಫ್ ಫೈನ್‌ಆರ್ಟ್ ವಿಶೇಷ ಕಾಳಜಿ ವಹಿಸುತ್ತಿದೆ ಎಂದರು.

ಮೈಸೂರು ಜಿಲ್ಲಾ ಪತ್ರಕರ್ತರ ಸಂಘದ ಅಧ್ಯಕ್ಷ ಕೆ. ದೀಪಕ್ ಮಾತನಾಡಿ, “ಈ ಹಿಂದೆ ಮಕ್ಕಳನ್ನು, ತಮ್ಮ ಹಿರಿಯರ ಹೋಲಿಕೆ ಅನುಗುಣವಾಗಿ ಗುರುತಿಸುತ್ತಿದ್ದೆವು. ಈಗ ಕಾಲ ಬದಲಾಗಿದೆ. ಮೊಬೈಲ್‌ನಂತೆ ಮಕ್ಕಳು ಎನ್ನುವ ಕಾಲಘಟ್ಟಕ್ಕೆ ಬಂದು ನಿಂತಿದ್ದೇವೆ. ಅತೀ ವೇಗದ ಈ ಸ್ಪರ್ಧಾತ್ಮಕ ಜಗತ್ತಿನಲ್ಲಿ ಈ ದೇಶದ ಪರಂಪರೆ, ಸಂಸ್ಕೃತಿ, ಐತಿಹಾಸಿಕತೆ ಹಿನ್ನೆಲೆಯನ್ನು ಮೈಗೂಡಿಸಿಕೊಂಡು, ಡಿಜಿಟಲ್ ಜಗತ್ತಿಗೆ ತನ್ನ ಜ್ಞಾನವನ್ನು ವೃದ್ಧಿಸಿಕೊಳ್ಳಬೇಕಿದೆ. ಇಂದಿನ ಕಾಲಘಟ್ಟದಲ್ಲಿ ಮಕ್ಕಳು ಯಶಸ್ವಿಯಾಗಬೇಕಾದರೆ ಸಹಜ ಶಿಕ್ಷಣದೊಂದಿಗೆ ಕೌಶಲ್ಯ ಇರಬೇಕು ಎಂದು ಹೇಳುತ್ತಾರೆ. ಆದರೆ, ಅವರಲ್ಲಿ ಕೌಶಲದೊಂದಿಗೆ ಸಂಸ್ಕೃತಿಯನ್ನು ಜೊತೆಯಾಗಿಸಿ ಮುಂದೆ ಸಾಗಿದಾಗ ಯಶಸ್ಸು ತಮ್ಮದಾಗುತ್ತದೆ” ಎಂದು ಕಿವಿಮಾತು ಹೇಳಿದರು.

ಈ ಸುದ್ದಿ ಓದಿದ್ದೀರಾ? ಮೈಸೂರು | ಗಾಂಧೀ ದೇಶಪ್ರೇಮ ಮೈಗೂಡಿಸಿಕೊಳ್ಳಿ : ಡಾ ಕವಿತಾ ರೈ

ಗುರುದೇವ ಅಕಾಡೆಮಿ ಆಫ್ ಫೈನ್‌ಆರ್ಟ್ ವತಿಯಿಂದ ಸಮಾಜ ಸೇವಕ ಅಚ್ಯುತ ರಾಮಪ್ರಸಾದ ಕಾಮತ್ ಅವರಿಗೆ ಗುರುದೇವ ಪ್ರಶಸ್ತಿ ನೀಡಿ ಗೌರವಿಸಲಾಯಿತು. ತಾ.ಪಂ ಮಾಜಿ ಅಧ್ಯಕ್ಷ ಎಂ. ಮಲ್ಲಿಕಾರ್ಜುನ ಸ್ವಾಮಿ, ವಕೀಲ ವಿಶ್ವನಾಥ್ ದೇವಸ್ಯ, ವ್ಯವಸ್ಥಾಪಕ ನಿರ್ದೇಶಕ ಪಿ.ಎಂ. ರಾಧಾಕೃಷ್ಣ, ಕಲಾತ್ಮಕ ನಿರ್ದೇಶಕ ಡಾ. ಚೇತನ ರಾಧಾಕೃಷ್ಣ ಕಾರ್ಯಕ್ರಮದಲ್ಲಿ ಇದ್ದರು.

ಈ ವಿಡಿಯೋ ವೀಕ್ಷಿಸಿ:https://youtu.be/yue3D6jXHgI?si=0hfXbtYRTM1bGbLC

eedina
ಈ ದಿನ ಡೆಸ್ಕ್‌
Website | + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕಲಬುರಗಿ | ನಗರದ ಪ್ರಮುಖ ರಸ್ತೆಗಳಲ್ಲಿ ಭೂಗತ ವಿದ್ಯುತ್ ಜಾಲ ನಿರ್ಮಾಣಕ್ಕೆ ಯೋಜನೆ: ಸಚಿವ ಪ್ರಿಯಾಂಕ್ ಖರ್ಗೆ

ನಗರದ ಪ್ರಮುಖ ರಸ್ತೆಗಳಲ್ಲಿ ವಿದ್ಯುತ್ ಕಂಬಗಳು ಮತ್ತು ಮೇಲ್ಮಟ್ಟದ ತಂತಿಗಳ ಜಾಲವನ್ನು...

ವಿಜಯಪುರ |ಕುಡಿಯುವ ನೀರಿನ ಸಮಸ್ಯೆ ತಲೆದೋರದಂತೆ ಮುನ್ನೆಚ್ಚರಿಕೆ ವಹಿಸಿ;ಡಿಸಿ ಆನಂದ ಕೆ

ಜಿಲ್ಲೆಯಲ್ಲಿ ಬೇಸಿಗೆಯಲ್ಲಿ ಕುಡಿಯುವ ನೀರಿನ ಸಮಸ್ಯೆ ಎದುರಾಗದಂತೆ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಬೇಕು....

ಯಾದಗಿರಿ | ಬುದ್ಧನ ಸಮಾನತೆ, ಶಾಂತಿ ಸಂದೇಶದೊಂದಿಗೆ ವರ್ಷವಾಸ ಸಮಾರೋಪ; ಭಿಕ್ಕುಗಳಿಗೆ ಚೀವರದಾನ

ಬುದ್ಧನ ಸಮಾನತೆ, ಶಾಂತಿ, ಮಾನವೀಯತೆ ಹಾಗೂ ಪ್ರಜ್ಞೆಯ ಸಂದೇಶವನ್ನು ಜನಜೀವನದಲ್ಲಿ ಅಳವಡಿಸಿಕೊಳ್ಳುವ...

ರಾಯಚೂರು | ದೇವರಗುಡ್ಡ ಸೀಮಾಂತರದಲ್ಲಿ ₹11.94 ಲಕ್ಷ ಮೌಲ್ಯದ 23.89 ಕೆ.ಜಿ. ಗಾಂಜಾ ಜಪ್ತಿ: ಆರೋಪಿ ಬಂಧನ

ದೇವದುರ್ಗ ತಾಲೂಕಿನ ದೇವರಗುಡ್ಡ ಸೀಮಾಂತರದಲ್ಲಿ ಪೊಲೀಸರು ದಾಳಿ ನಡೆಸಿ, ಅಕ್ರಮವಾಗಿ ಬೆಳೆದಿದ್ದ...