ಬೆಳಗಾವಿಯನ್ನು 2ನೇ ರಾಜಧಾನಿಯನ್ನಾಗಿ ಮಾಡುವಂತೆ ಭಾರತೀಯ ಕಿಸಾನ್ ಸಂಘ‌ ಒತ್ತಾಯ

Date:

ಉತ್ತರ ಕರ್ನಾಟಕದ 14 ಜಿಲ್ಲೆಯ ಸಾರ್ವಜನಿಕರು ತಮ್ಮ ವಿವಿಧ ಇಲಾಖೆಯ ಕೆಲಸಗಳನ್ನು ಮಾಡಿಸಿಕೊಳ್ಳಲು ಬೆಂಗಳೂರಿಗೆ ಹೋಗಿ ಬರಬೇಕಾದರೆ ಊಟ, ವಸತಿ, ವಾಹನಕ್ಕೆ ಸಾಕಷ್ಟು ಪ್ರಮಾಣದ ಹಣ ಹಾಗೂ ಸಮಯ ವ್ಯರ್ಥವಾಗುತ್ತಿತ್ತು. ಇದನ್ನು ತಪ್ಪಿಸಲು ಈಗಾಗಲೇ ಬೆಳಗಾವಿಯಲ್ಲಿ ಸುವರ್ಣ ಸೌಧ ನಿರ್ಮಿಸಿ ಪ್ರತಿ ವರ್ಷ ಚಳಿಗಾಲ ಅಧಿವೇಶನ ನಡೆಸುತ್ತಿದ್ದು, ಸಾರ್ವಜನಿಕರ ಹಿತದೃಷ್ಟಿಯಿಂದ ಬೆಳಗಾವಿಯನ್ನು 2ನೇ ರಾಜಧಾನಿ ಸ್ಥಾನಮಾನ ನೀಡಬೇಕೆಂದು ಭಾರತೀಯ ಕಿಸಾನ್ ಸಂಘ ಕರ್ನಾಟಕ ಪ್ರದೇಶ ಉತ್ರರ ಪ್ರಾಂತ ಬಾಗಲಕೋಟೆ ಜಿಲ್ಲಾಧ್ಯಕ್ಷ ವಿರುಪಾಕ್ಷಯ್ಯ ಹಿರೇಮಠ ಸರ್ಕಾರಕ್ಕೆ ಒತ್ತಾಯಿಸಿದ್ದಾರೆ.

- Advertisement -

‌ಬೀಳಗಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, “ಬೆಳಗಾವಿಯನ್ನು 2ನೇ ರಾಜಧಾನಿಯನ್ನಾಗಿ ಮಾಡಿದರೆ ಜನರ ಹಣ ಮತ್ತು ಸಮಯ ಉಳಿಯುತ್ತದೆ. ಅದಕ್ಕಾಗಿ ಸುವರ್ಣ ಸೌಧದಲ್ಲಿ ಮುಖ್ಯ ಕಾರ್ಯದರ್ಶಿ ಸೇರಿದಂತೆ ಎಲ್ಲ ಇಲಾಖೆಯ ಆಡಳಿತಾತ್ಮಕ ಕಚೇರಿಗಳನ್ನು ತೆರೆದು ಸಚಿವ ಸಂಪುಟ ಬೆಳಗಾವಿಯಲ್ಲಿ 3 ದಿನ, ಬೆಂಗಳೂರಿನಲ್ಲಿ 3 ದಿನ ಕಾರ್ಯನಿರ್ವಹಿಸುವಂತಾಗಬೇಕು” ಎಂಬ ಅಭಿಪ್ರಾಯ ವ್ಯಕ್ತಪಡಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಮುಸ್ಲಿಯಾರ್ ಹೇಳಿಕೆ ಎಬ್ಬಿಸಿದ ಪ್ರಶ್ನೆ— ಧಾರ್ಮಿಕ ಮೌಲ್ಯಗಳ ನಡುವೆ...

ಮಹಿಳೆಯ ಗೌರವವನ್ನು ರಕ್ಷಿಸುವ ಹೆಸರಿನಲ್ಲಿ ಆಕೆಯ ಶಿಕ್ಷಣ, ಪ್ರತಿಭೆ, ವೃತ್ತಿ ಅಥವಾ ಸಾಮಾಜಿಕ ಸೇವೆಯ ಬಾಗಿಲುಗಳನ್ನು ಮುಚ್ಚುವುದು ಒಂದು ವಿಷಯ; ಧಾರ್ಮಿಕ ಹಯಾ ಮತ್ತು ಮೌಲ್ಯಗಳನ್ನು ಕಾಪಾಡಿಕೊಂಡೇ ಸಮಾಜದಲ್ಲಿ ಜವಾಬ್ದಾರಿಯುತವಾಗಿ ಪಾಲ್ಗೊಳ್ಳಲು ಅವಕಾಶ...

ಧಾರವಾಡ | ಹುಲಕೊಪ್ಪ‌ ಶಾಲೆ ಶೌಚಾಲಯ ಕಾಮಗಾರಿ ಅಪೂರ್ಣ;...

ಧಾರವಾಡ ಜಿಲ್ಲೆಯ ಕಲಘಟಗಿ ಪ್ರಾಥಮಿಕ ಶಾಲೆಯಲ್ಲಿ‌ ಶೌಚಾಲಯ ಸೇರಿದಂತೆ ಮೂಲಭೂತ ಸೌಲಭ್ಯಗಳ ಕೊರತೆಯಿಂದ ವಿದ್ಯಾರ್ಥಿಗಳು ಸಮಸ್ಯೆ ಎದುರಿಸುತ್ತಿದ್ದಾರೆ. ಹೈಟೆಕ್ ಶೌಚಾಲಯ ಆರಂಭವಾಗಿ ಸುಮಾರು ವರ್ಷಗಳೇ ಕಳೆದರೂ ಇನ್ನೂ ಕಾಮಗಾರಿ ಮುಗಿದಿಲ್ಲ. ಶಾಲೆಯ...

ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನ ಮತ್ತು ಸದ್ಯದ ಬಿಕ್ಕಟ್ಟುಗಳು

ಇಂದು ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನ. ಜಾಗತಿಕವಾಗಿ ಕುಸಿಯುತ್ತಿರುವ ಪ್ರಜಾಪ್ರಭುತ್ವವನ್ನು ಎತ್ತಿಹಿಡಿಯಲು ಯುನೈಟೆಡ್ ನೇಷನ್ಸ್ ಜನರಲ್ ಅಸೆಂಬ್ಲಿಯು ಸೆಪ್ಟಂಬರ್ 15ನ್ನು ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನವನ್ನಾಗಿ ಆಚರಿಸುವ ಘೋಷಣೆ ಮಾಡಿತು. ಪರಿಣಾಮ ಇಂಟರ್ ಪಾರ್ಲಿಮೆಂಟರಿ ಯೂನಿಯನ್...

“ಬೆಳಗಾವಿಯ ಅಧಿವೇಶನ ನೆಪಮಾತ್ರಕ್ಕೆ ನಡೆಯುತ್ತದೆ. ಪ್ರತಿವರ್ಷ ಜನರ ತೆರಿಗೆ ಹಣ ಪೋಲಾಗುತ್ತದೆ. ಉತ್ತರ ಕರ್ನಾಟಕದ ಜನರು ತಮ್ಮ ಬೇಡಿಕೆಗಳನ್ನು ಈಡೇರಿಸಲು ಧರಣಿ ನಡೆಸಬೇಕೆಂಬುದಕ್ಕೂ ಪೊಲೀಸ್ ಇಲಾಖೆ ಸಮಯ ನಿಗದಿ ಪಡಿಸಿದೆ. ಆ ಸಮಯದವರೆಗೆ ಮಾತ್ರ ಧರಣಿ ನಡೆಸುವಂತಾಗಿದೆ. ಬೇಡಿಕೆಗೆ ಸಂಭಂದಿಸಿದ ಇಲಾಖೆಯ ಸಚಿವರನ್ನು ಕಳುಹಿಸದೆ ಬೇರೆ ಯಾವುದೋ ಇಲಾಖೆ ಸಚಿವರನ್ನು ಕಳುಹಿಸಿ ಮನವಿ ಕೊಡುವಂತೆ ಪೊಲೀಸ್ ಇಲಾಖೆಯವರು ಒತ್ತಾಯಿಸಿತ್ತಾರೆ. ʼನಮ್ಮ ಬೇಡಿಕೆಗೆ ಸಂಬಂಧಪಟ್ಟ ಸಚಿವರು ಬಂದರೆ ಮಾತ್ರ ಮನವಿ ಕೊಡುತ್ತೇವೆ. ಇಲ್ಲದಿದ್ದರೆ ನಮ್ಮ ಧರಣಿ ನಿರಂತರ ಇರುತ್ತದೆʼ ಎಂದು ಭಾರತೀಯ ಕಿಸಾನ್ ಸಂಘದ ಸದಸ್ಯರು ಪೊಲೀಸರಿಗೆ ತಿಳಿಸಿದರೂ ಅವರು 135 ಜನರನ್ನು ಬಂಧಿಸುವ ಮೂಲಕ ಹೋರಾಟವನ್ನು ಹತ್ತಿಕ್ಕಿ ಬ್ರಿಟಿಷ್‌ರಂತೆ ವರ್ತಿಸಿ ರೈತರಿಗೆ ಅವಮಾನ ಮಾಡಿರುವುದು ಖಂಡನೀಯ” ಎಂದು ಆಕ್ರೋಶ ಹೊರಹಾಕಿದರು.

“ಕೃಷ್ಣಾ ಮೇಲ್ದಂಡೆ ಯೋಜನೆಯ ಆಲಮಟ್ಟಿ ಅಣೆಕಟ್ಟೆಯನ್ನು 524ಕ್ಕೆ ಏರಿಸಿ ಶ್ರೀಘ ಅನುಷ್ಠಾನ ತರಲು ಪ್ರತಿ ವರ್ಷ 40 ಸಾವಿರ ಕೋಟಿ ರೂಪಾಯಿ ಹಣ ಮೀಸಲಿಡಬೇಕು. ಆಲಮಟ್ಟಿ ಯೋಜನೆಯ ಹಿನ್ನೀರಿನಿಂದ ರೈತರ ಜಮೀನುಗಳು ಸವಳು ಜವಳು ಆಗಿದ್ದು, ಭೂಮಿ ಬರಡಾಗಿದೆ. ಸರ್ಕಾರ ಗ್ರಾಮ ಪಂಚಾಯಿತಿ, ತಾಲೂಕು ಪಂಚಾಯತ್, ಜಿಲ್ಲಾ ಪಂಚಾಯತ್ ಸಹಯೋಗದಲ್ಲಿ ಮನರೇಗಾ ಯೋಜನೆಯಡಿ ಸವಳು ಜವಳು ನಿಯಂತ್ರಣಕ್ಕೆ ತರಬೇಕು. ಅತಿವೃಷ್ಟಿಯಿಂದ ಹಾನಿಯಾದ ಬೆಳೆಗಳಿಗೆ ಬೆಳೆನಷ್ಟ ಪರಿಹಾರ ವಿತರಣೆಯನ್ನು ಎನ್‌ಡಿಆರ್‌ಎಫ್‌, ಎಸ್‌ಡಿಆರ್‌ಎಫ್‌ ಮಾರ್ಗ ಸೂಚಿ ಉಲ್ಲಂಘನೆ ಮಾಡಿ ಸರ್ಕಾರ ತನ್ನ ಮನಸ್ಸಿಗೆ ಬಂದಷ್ಟು ಹೆಕ್ಟೇರ್‌ಗೆ 2000/3000 ರೂಪಾಯಿಯಂತೆ ಬೇಕಾಬಿಟ್ಟಿ ಪರಿಹಾರ ನೀಡಿದೆ” ಎಂದು ಆರೋಪಿಸಿದರು.

ಈ ಸುದ್ದಿ ಓದಿದ್ದೀರಾ? ಚಿತ್ರದುರ್ಗ | ಖರೀದಿ ಕೇಂದ್ರ ತೆರೆದು ಬೆಳೆ ಪರಿಹಾರ ಬಿಡುಗಡೆಗೆ ರೈತ ಸಂಘ ಹಾಗೂ ಹಸಿರು ಸೇನೆ ಆಗ್ರಹ

“3 ತಿಂಗಳಾದರೂ ಬೆಳೆವಿಮೆ ವಿತರಿಸದೇ ಇರುವುದರಿಂದ ರೈತರಿಗೆ ತೊಂದರೆಯಾಗಿದೆ, ಶೀಘ್ರವೇ ಕ್ಲೇಮ್ ವಿತರಿಸಬೇಕು. ಮರು ಪರಿಶೀಲನೆ ಮಾಡಿ ನ್ಯಾಯಯುತ ಪರಿಹಾರ ವಿತರಿಸಬೇಕು. ಮುಳುಗಡೆ ಸಂತ್ರಸ್ತರ ಮಕ್ಕಳಿಗೆ ಎ ಬಿ ಗ್ರೇಡ್ ಹುದ್ದೆಗಳಿಗೆ ನೇಮಕಾತಿಯಲ್ಲಿ ಪ್ರಾಶಸ್ತ್ಯ ಕೊಡಬೇಕು. ಪಿಜಿಯವಗೆ ಶಿಕ್ಷಣ ಕಲಿಯಲು ಅವಕಾಶ ನೀಡಬೇಕು. ಸಂತ್ರಸ್ತರು ನೌಕರಾಗಿದ್ದರೆ ಅವರಿಗೆ ಬಡ್ತಿ ಸೌಲಭ್ಯ ಒದಗಿಸಬೇಕು, ರಾಜ್ಯದಲ್ಲಿ ಖಾಲಿ ಇರುವ ಎಲ್ಲ ಹುದ್ದೆಗಳನ್ನು ಶೀಘ್ರದಲ್ಲಿ ತುಂಬಬೇಕು” ಆಗ್ರಹಿಸಿದರು.

ಈ ಸಂದರ್ಭದಲ್ಲಿ ಉ.ಪ್ರಾ ಕಾರ್ಯಕಾರಿಣಿ ಸದಸ್ಯ ಸುಬ್ಬರಾಯಗೌಡ ಪಾಟೀಲ, ತಾಲೂಕು ಅಧ್ಯಕ್ಷ ಮಲ್ಲಪ್ಪ ಗಾಣಿಗೇರ, ಜಿಲ್ಲಾ ಕಾರ್ಯಕಾರಿಣಿ ಸದಸ್ಯ ಅಶೋಕ ಮಂತ್ರಿ ಇದ್ದರು.

WhatsApp Image 2025 07 12 at 17.38.34 e1752322718567
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | UAPA, NSA ಕಾಯ್ದೆಗಳು ಸಂವಿಧಾನಿಕ ಹಕ್ಕುಗಳ ದಮನಕ್ಕೆ ಅಸ್ತ್ರವಾಗುತ್ತಿವೆ : ಪ್ರೊ. ಫಣಿರಾಜ್

ವಿದ್ಯಾರ್ಥಿ ನಾಯಕ ಉಮರ್ ಖಾಲಿದ್ ಬಂಧನವಾಗಿ ಆರು ವರ್ಷ ಪೂರ್ಣಗೊಂಡ ಹಿನ್ನೆಲೆಯಲ್ಲಿ,...

ಉಡುಪಿ | ಕಟ್‌ಬೇಲ್ತೂರು ರೈಲ್ವೆ ಸೇತುವೆ ಅಪಾಯಕಾರಿ ತಿರುವು ಸರಿಪಡಿಸಲು ಆಗ್ರಹಿಸಿ ಸಿಪಿಎಂ ಪ್ರತಿಭಟನೆ

ಕಟ್‌ಬೇಲ್ತೂರು ಗ್ರಾಮದ ರೈಲ್ವೆ ಸೇತುವೆಯಲ್ಲಿರುವ ಅಪಾಯಕಾರಿ ತಿರುವನ್ನು ತಕ್ಷಣ ಸರಿಪಡಿಸಿ, ಸಾರ್ವಜನಿಕರ...

ಉಡುಪಿ | ಮಲ್ಪೆ–ತೀರ್ಥಹಳ್ಳಿ ಹೆದ್ದಾರಿ ಕಾಮಗಾರಿ ಅಂತಿಮ ಹಂತ; ಬಾಕಿ ಭೂಸ್ವಾಧೀನಕ್ಕೆ ಕೋಟ ಶ್ರೀನಿವಾಸ ಪೂಜಾರಿ ಸೂಚನೆ

ರಾಷ್ಟ್ರೀಯ ಹೆದ್ದಾರಿ 169ಎರ ಮಲ್ಪೆ–ಕರಾವಳಿ ಬೈಪಾಸ್‌ವರೆಗಿನ ಬಾಕಿ ಉಳಿದಿರುವ ಭೂಸ್ವಾಧೀನ ಪ್ರಕ್ರಿಯೆಯನ್ನು...