ಭಟ್ಕಳ | ​ಮದುವೆ ಸಂಭ್ರಮ ಬಿಟ್ಟು ಫ್ಯಾಕ್ಟರಿಯಲ್ಲಿ ಕೂಲಿ ಕೆಲಸಕ್ಕೆ ಸೇರಿದ್ದ ಯುವಕ: 3 ತಿಂಗಳ ಬಳಿಕ ತುಮಕೂರಿನಲ್ಲಿ ಪತ್ತೆ!

Date:

ಭಟ್ಕಳ: ಮದುವೆಗೆಂದು ವಿದೇಶದಿಂದ ಊರಿಗೆ ಬಂದು, ಚಿನ್ನ ಖರೀದಿಸಲು ಹೋದವನು ಮಸೀದಿಯಿಂದ ನಾಪತ್ತೆಯಾದ ರೋಚಕ ಪ್ರಕರಣವೊಂದನ್ನು ಭಟ್ಕಳ ಪೊಲೀಸರು ಭೇದಿಸಿದ್ದಾರೆ.

- Advertisement -

ಕಳೆದ ಮೂರೂವರೆ ತಿಂಗಳಿನಿಂದ ಪೊಲೀಸರಿಗೆ ಸವಾಲಾಗಿದ್ದ ಕುಮಟಾ ಮೂಲದ ಯುವಕ ಜಾಕೀರ್ ಬೇಗ (33) ಎಂಬುವವರು ತುಮಕೂರಿನ ಫ್ಯಾಕ್ಟರಿಯೊಂದರಲ್ಲಿ ಪತ್ತೆಯಾಗಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

SIR ವಿರೋಧಿ ಹೋರಾಟ: ಡಿಕೆಶಿ–ಮಮತಾ ತೋರಿದ ದಾರಿ ವಿಪಕ್ಷಗಳಿಗೆ...

ಭಾರತದ ಪ್ರಜಾಪ್ರಭುತ್ವದ ಅಡಿಪಾಯವೇ ನ್ಯಾಯಯುತ, ಸ್ವತಂತ್ರ ಹಾಗೂ ಪಾರದರ್ಶಕ ಚುನಾವಣೆ. ಆದರೆ, ಅಧಿಕಾರದ ಗದ್ದುಗೆ ಏರಿರುವ ಮೋದಿ-ಶಾ ಜೋಡಿ, ಈ ಅಡಿಪಾಯವನ್ನೇ (ಚುನಾವಣಾ ಆಯೋಗವನ್ನೇ) ತಮ್ಮ ಸೂತ್ರದ ಬೊಂಬೆ ಮಾಡಿಕೊಂಡಿದೆ. ಎಸ್‌ಐಆರ್‌ ಹೆಸರಿನಲ್ಲಿ...

ಪೊಲೀಸ್ ಇಲಾಖೆ ಸುಧಾರಣೆಗೆ 3 ಸಮಿತಿ; ಬದಲಾವಣೆ ಅಗತ್ಯವೇ?...

ಪೊಲೀಸ್‌ ಇಲಾಖೆಯ ಕಾರ್ಯವೈಖರಿಯಲ್ಲಿ ಸುಧಾರಣೆ, ಡಿಜಿಟಲ್‌ ಟಚ್‌ ಹಾಗೂ ನೇಮಕಾತಿ ವ್ಯವಸ್ಥೆಯ ಪುನರ್‌ರಚನೆಗೆ ರಾಜ್ಯ ಸರ್ಕಾರ ಉನ್ನತ ಮಟ್ಟದ 3 ತಜ್ಞರ ಸಮಿತಿಗಳನ್ನು ರಚಿಸಿದೆ. ಆದರೆ, ಪೊಲೀಸ್‌ ಠಾಣೆಗಳಲ್ಲಿ ಸಾರ್ವಜನಿಕರು ಎದುರಿಸುವ ಸಮಸ್ಯೆಗಳಿಂದ...

ಪಾಕಿಸ್ತಾನದಲ್ಲಿ ಅಹಿಂಸಾ ಮೂರ್ತಿಯ ‘ರಹಸ್ಯರಕ್ಷಣೆ’: ಕರಾಚಿಯಿಂದ ಇಸ್ಲಾಮಾಬಾದ್‌ಗೆ ಗಾಂಧಿ...

ಪಾಕಿಸ್ತಾನದ ಇಸ್ಲಾಮಾಬಾದ್‌ನಲ್ಲಿರುವ ಭಾರತೀಯ ಹೈಕಮಿಷನ್ ಕಚೇರಿಯ ಪ್ರವೇಶ ದ್ವಾರದಲ್ಲಿ ಮಹಾತ್ಮ ಗಾಂಧೀಜಿಯವರ ಭವ್ಯ ಕಂಚಿನ ಪ್ರತಿಮೆ ಇಂದಿಗೂ ಗಾಂಭೀರ್ಯದಿಂದ ನಿಂತಿದೆ. ಕೈಯಲ್ಲಿ ಊರುಗೋಲು ಹಿಡಿದು ದೂರದ ದಿಗಂತವನ್ನು ದಿಟ್ಟಿಸುವಂತಿರುವ ಈ ಬಾಪೂ ಪ್ರತಿಮೆಯು...

ಪ್ರಕರಣದ ಹಿನ್ನೆಲೆ: ವಿದೇಶದಲ್ಲಿ ಉದ್ಯೋಗದಲ್ಲಿದ್ದ ಜಾಕೀರ್ ಬೇಗ ಅವರಿಗೆ ಕೆಲವೇ ದಿನಗಳಲ್ಲಿ ಮದುವೆ ನಿಶ್ಚಯವಾಗಿತ್ತು. ಈ ಹಿನ್ನೆಲೆಯಲ್ಲಿ ಅಕ್ಟೋಬರ್ 18, 2025 ರಂದು ತಮ್ಮ ಅತ್ತಿಗೆ ಹಾಗೂ ಸಂಬಂಧಿಕರೊಂದಿಗೆ ಮದುವೆಗೆ ಚಿನ್ನಾಭರಣ ಖರೀದಿಸಲು ಕುಮಟಾದಿಂದ ಭಟ್ಕಳಕ್ಕೆ ಬಂದಿದ್ದರು.

ಮಧ್ಯಾಹ್ನ 1:15ರ ಸುಮಾರಿಗೆ ಇಲ್ಲಿನ ನೂರಪಳ್ಳಿ ಮಸೀದಿಗೆ ನಮಾಜ್‌ಗೆಂದು ಹೋದವರು ಮರಳಿ ಬಂದಿರಲಿಲ್ಲ. ಮೊಬೈಲ್ ಕೂಡ ಸ್ವಿಚ್ ಆಫ್ ಮಾಡಿಕೊಂಡಿದ್ದರಿಂದ ಆತಂಕಗೊಂಡ ಕುಟುಂಬಸ್ಥರು ಪೊಲೀಸರಿಗೆ ದೂರು ನೀಡಿದ್ದರು.

ಭಟ್ಕಳ ಶಹರ ಪೊಲೀಸರು ಪ್ರಕರಣದ ತನಿಖೆಯನ್ನು ತಾಂತ್ರಿಕ ಹಂತದಲ್ಲಿ ತೀವ್ರಗೊಳಿಸಿದಾಗ, ಜಾಕೀರ್ ತನ್ನ ಮೊಬೈಲ್ ಫೋನ್ ಅನ್ನು ಮಾರಾಟ ಮಾಡಿರುವುದು ಬೆಳಕಿಗೆ ಬಂದಿದೆ. ಈ ಸುಳಿವನ್ನೇ ಬೆನ್ನತ್ತಿದ ಇನ್ಸ್‌ಪೆಕ್ಟರ್ ದಿವಾಕರ್ ಪಿ.ಎಂ ಹಾಗೂ ಪಿ.ಎಸ್.ಐ ನವೀನ ನಾಯ್ಕ ನೇತೃತ್ವದ ವಿಶೇಷ ತಂಡಕ್ಕೆ ಜಾಕೀರ್ ತುಮಕೂರಿನಲ್ಲಿರುವ ಮಾಹಿತಿ ಲಭ್ಯವಾಯಿತು.

ಈ ಸುದ್ದಿ ಓದಿದ್ದೀರಾ ? ಕಾರವಾರ | ಸರಕಾರಿ ಬಾಲಮಂದಿರದಲ್ಲಿ ಪೋಕ್ಸೋ ಸಂತ್ರಸ್ತೆಯ ಆತ್ಮಹತ್ಯೆ ಯತ್ನ; ಆಸ್ಪತ್ರೆಗೆ ದಾಖಲು

ಪೊಲೀಸರು ಅಲ್ಲಿಗೆ ದಾಳಿ ನಡೆಸಿದಾಗ, ವಿದೇಶದಲ್ಲಿ ಕೈತುಂಬಾ ಸಂಪಾದಿಸುತ್ತಿದ್ದ ಯುವಕ ಮದುವೆ ಸಂಭ್ರಮವನ್ನು ಬಿಟ್ಟು ಅಲ್ಲಿನ ಕಾರ್ಖಾನೆಯೊಂದರಲ್ಲಿ ಕೂಲಿ ಕೆಲಸಕ್ಕೆ ಸೇರಿಕೊಂಡಿರುವುದು ಪತ್ತೆಯಾಗಿದೆ.

ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ದೀಪನ್ ಎಂ.ಎನ್ ಮಾರ್ಗದರ್ಶನದಲ್ಲಿ ನಡೆದ ಈ ಕಾರ್ಯಾಚರಣೆಯಲ್ಲಿ ಪಿಎಸ್‌ಐ ನವೀನ್ ನಾಯ್ಕ್ ಮತ್ತು ಸಿಬ್ಬಂದಿಗಳಾದ ರವಿ ಪಟಗಾರ, ದೇವು ನಾಯ್ಕ್, ಕಾಶಿನಾಥ ಹಾಗೂ ಟೆಕ್ನಿಕಲ್ ಸೆಲ್‌ನ ಉದಯ್ ಮತ್ತು ಬಬನ್ ಕದಂ ಪಾಲ್ಗೊಂಡಿದ್ದರು.

ಅತ್ಯಂತ ಕ್ಲಿಷ್ಟಕರವಾಗಿದ್ದ ಈ ಪ್ರಕರಣವನ್ನು ಯಶಸ್ವಿಯಾಗಿ ಭೇದಿಸಿದ ಪೊಲೀಸ್ ತಂಡದ ಕಾರ್ಯಕ್ಕೆ ಸಾರ್ವಜನಿಕ ವಲಯದಲ್ಲಿ ಮೆಚ್ಚುಗೆ ವ್ಯಕ್ತವಾಗಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ತುಳುನಾಡ ರಕ್ಷಣಾ ವೇದಿಕೆ ಮಹಿಳಾ ಘಟಕದಿಂದ ಅರ್ಥಪೂರ್ಣ ಗಾಂಧಿ ಜಯಂತಿ

ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರ ಜಯಂತಿಯ ಅಂಗವಾಗಿ ತುಳುನಾಡ ರಕ್ಷಣಾ ವೇದಿಕೆ (ರಿ.)...

ಉಡುಪಿ | ಸಮುದಾಯದ ಅಭಿವೃದ್ಧಿಗೆ ಉದ್ಯಮಿಗಳ ಒಗ್ಗಟ್ಟು ಅಗತ್ಯ: ಮುಮ್ತಾಜ್ ಮನ್ಸೂರಿ

ನಮ್ಮ ಸಮುದಾಯದ ದುರ್ಬಲ ವರ್ಗಗಳನ್ನು ಮೇಲಕ್ಕೆತ್ತಲು ಎಲ್ಲರೂ ಬೆಂಬಲ ಮತ್ತು ಸಹಕಾರದೊಂದಿಗೆ...

ರಾಯಚೂರು | ಎಸ್‌ಐಆರ್ ವಿರೋಧಿಸಿ ಪ್ರತಿಭಟನೆ: ಜ್ಞಾನೇಶ ಕುಮಾರ ರಾಜೀನಾಮೆಗೆ ನಾಗರಿಕ ವೇದಿಕೆ ಆಗ್ರಹ

ಕೇಂದ್ರ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ ಕುಮಾರ ಅವರ ರಾಜೀನಾಮೆಗೆ ಆಗ್ರಹಿಸಿ...