ಭಟ್ಕಳ | ಕರ್ತವ್ಯ ಲೋಪ ಆರೋಪ: ಗ್ರಾಮೀಣ ಠಾಣೆಯ ಸಿಪಿಐ ಹಾಗೂ ಹೆಡ್ ಕಾನ್ಸ್‌ಟೇಬಲ್ ಅಮಾನತು!

Date:

ಭಟ್ಕಳ: ಮದ್ಯಪಾನ ಮಾಡಿ ವಾಹನ ಚಾಲನೆ ಮಾಡಿದ ಪ್ರಕರಣವೊಂದರಲ್ಲಿ ಸಾರ್ವಜನಿಕರಿಂದ ದಂಡದ ರೂಪದಲ್ಲಿ ಹಣ ಪಡೆದು, ಅದನ್ನು ನ್ಯಾಯಾಲಯಕ್ಕೆ ಪಾವತಿಸದೆ ವಂಚಿಸಿದ ಗಂಭೀರ ಆರೋಪದ ಹಿನ್ನೆಲೆಯಲ್ಲಿ ಭಟ್ಕಳ ಗ್ರಾಮೀಣ ಪೊಲೀಸ್ ಠಾಣೆಯ ಸಿಪಿಐ ಮಂಜುನಾಥ ಲಿಂಗಾರೆಡ್ಡಿ ಹಾಗೂ ಅವರಿಗೆ ಸಾಥ್ ನೀಡಿದ್ದ ಹೆಡ್ ಕಾನ್ಸ್‌ಟೇಬಲ್ ಅಶೋಕ್ ನಾಯ್ಕ್ ಅವರನ್ನು ಸೇವೆಯಿಂದ ಅಮಾನತುಗೊಳಿಸಿ ಉತ್ತರ ಕನ್ನಡ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳು ಆದೇಶ ಹೊರಡಿಸಿದ್ದಾರೆ ಎಂದು ತಿಳಿದುಬಂದಿದೆ.

- Advertisement -
1000396839

ಪ್ರಕರಣದ ಹಿನ್ನೆಲೆ: ಕಳೆದ ಜುಲೈ ತಿಂಗಳಲ್ಲಿ ನಡೆದ ‘ಡ್ರಂಕ್ ಅಂಡ್ ಡ್ರೈವ್’ ಪ್ರಕರಣವೊಂದಕ್ಕೆ ಸಂಬಂಧಿಸಿದಂತೆ ಸಿಪಿಐ ಮಂಜುನಾಥ ಲಿಂಗಾರೆಡ್ಡಿ ವಿರುದ್ಧ ಅಧಿಕೃತ ದೂರು ದಾಖಲಾಗಿತ್ತು. ಈ ಪ್ರಕರಣದಲ್ಲಿ ಸಾರ್ವಜನಿಕರಿಂದ ಸುಮಾರು 15 ಸಾವಿರ ರೂಪಾಯಿಗಳನ್ನು ದಂಡದ ಹೆಸರಿನಲ್ಲಿ ವಸೂಲಿ ಮಾಡಲಾಗಿತ್ತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

History Repeats | ರೋಮ್‌ ಉರಿಯುತ್ತಿದ್ದಾಗ ಪಿಟೀಲು ನುಡಿಸಿದ...

ದೇಶದ ಪ್ರಜಾಪ್ರಭುತ್ವದ ಆಧಾರಸ್ತಂಭಗಳು ಒಂದೊಂದಾಗಿ ಕುಸಿಯುತ್ತಾ, ಚುನಾವಣಾ ವ್ಯವಸ್ಥೆಯೇ ಅಕ್ರಮ ಎಸಗುತ್ತಿರುವಾಗ, ನಿರುದ್ಯೋಗ-ಬೆಲೆ ಏರಿಕೆಯ ಭಾರದಿಂದ ಜನ ಹೈರಾಣಾಗಿರುವಾಗ ಭಾರತದ ಪ್ರಧಾನಿ ಭಜನೆ ಮಾಡುತ್ತಿದ್ದಾರೆ. ರೋಂ ಹೊತ್ತಿ ಉರಿಯುತ್ತಿದ್ದಾಗ ನೀರೋ ಪಿಟೀಲು...

ಅಪರಾಧಿಗಳ ಪರ ಬಿ ಸಿ ರೋಡ್ ಚಲೋ: ಎಂದಿನಂತೆ...

ಕೊಲೆಯಂತಹ ಗಂಭೀರ ಅಪರಾಧ ಎಸಗಿದ ಆರೋಪ ಹೊತ್ತವರ ಪರವಾಗಿ ಸಂಘಪರಿವಾರ ಬೀದಿಗಿಳಿಯುತ್ತಿರುವುದು ಇದೇ ಮೊದಲೇನಲ್ಲ. ಕರಾವಳಿಯ ಜನತೆ ಇಂತಹ ಪ್ರಚೋದನಾತ್ಮಕ ನಡೆಗಳನ್ನು ತಿರಸ್ಕರಿಸಿ, ಸತ್ಯ ಮತ್ತು ನ್ಯಾಯದ ಪರವಾಗಿ ನಿಲ್ಲಬೇಕಾಗಿದೆ. ಕರಾವಳಿ ಕರ್ನಾಟಕವಾಗಲಿ...

14 ಆಕ್ಷೇಪಗಳಿಂದ SIT ಬೇಡಿಕೆಯವರೆಗೆ: ಗ್ಯಾನೇಶ್‌ ಕುಮಾರ್ ಸುತ್ತ...

ಚುನಾವಣಾ ಆಯೋಗದೊಳಗಿನ ಭಿನ್ನಾಭಿಪ್ರಾಯಗಳು ಬಹಿರಂಗಗೊಂಡ ಬೆನ್ನಲ್ಲೇ ಎಸ್‌ಐಆರ್‌ ವಿವಾದ ಹೊಸ ತಿರುವು ಪಡೆದುಕೊಂಡಿದೆ. ಮುಖ್ಯ ಚುನಾವಣಾ ಆಯುಕ್ತ ಗ್ಯಾನೇಶ್‌ ಕುಮಾರ್ ಅವರ ನಿರ್ಧಾರಗಳ ಕುರಿತು ಚುನಾವಣಾ ಆಯುಕ್ತರಾದ ಸುಖಬೀರ್‌ ಸಿಂಗ್‌ ಸಂಧು ಮತ್ತು...

ಆದರೆ, ನಿಯಮದಂತೆ ಈ ಮೊತ್ತವನ್ನು ನ್ಯಾಯಾಲಯಕ್ಕೆ ಜಮಾ ಮಾಡದೆ ಸ್ವಂತಕ್ಕೆ ಬಳಸಿಕೊಂಡಿರುವ ಗಂಭೀರ ಲೋಪವು ಇಲಾಖೆಯ ತನಿಖೆಯ ವೇಳೆ ಬೆಳಕಿಗೆ ಬಂದಿದೆ. ದೂರಿನ ಆಧಾರದ ಮೇಲೆ ನಡೆಸಲಾದ ಪ್ರಾಥಮಿಕ ತನಿಖೆಯಲ್ಲಿ ಸಿಪಿಐ ಮಂಜುನಾಥ ಅವರು ತಮ್ಮ ತಪ್ಪನ್ನು ಒಪ್ಪಿಕೊಂಡಿದ್ದಾರೆ ಎನ್ನಲಾಗಿದೆ.

ಈ ಸುದ್ದಿ ಓದಿದ್ದೀರಾ? ಸಿದ್ದಾಪುರ | ರೈತರ ಸಂಕಷ್ಟದ ನಡುವೆ ಕೋಟಿ ವೆಚ್ಚದ ಉತ್ಸವ ಬೇಕಿತ್ತೇ?; ಜಿಲ್ಲಾಡಳಿತದ ವಿರುದ್ಧ ಶಾಸಕ ಭೀಮಣ್ಣ ನಾಯ್ಕ ಆಕ್ರೋಶ

ಇನ್ನು ಇದೇ ಪ್ರಕರಣದಲ್ಲಿ ಭಾಗಿಯಾಗಿದ್ದ ಮಂಕಿ ಮೂಲದ ಹೆಡ್ ಕಾನ್ಸ್‌ಟೇಬಲ್ ಅಶೋಕ್ ನಾಯ್ಕ್ ಅವರು, ದೂರು ನೀಡದಂತೆ ದೂರುದಾರರಿಗೆ ಬೆದರಿಕೆ ಹಾಕಿದ್ದರು ಎಂಬ ಆರೋಪ ಕೇಳಿಬಂದಿದೆ. ಈ ಭ್ರಷ್ಟಾಚಾರ ಮತ್ತು ಕರ್ತವ್ಯ ನಿರ್ಲಕ್ಷ್ಯವನ್ನು ಗಂಭೀರವಾಗಿ ಪರಿಗಣಿಸಿದ ಎಸ್‌ಪಿ ಅವರು ಇಬ್ಬರನ್ನೂ ಅಮಾನತುಗೊಳಿಸಿ ಶಿಸ್ತುಕ್ರಮ ಜರುಗಿಸಿದ್ದಾರೆ.

ಸಾರ್ವಜನಿಕರಿಂದ ಹಣ ಪಡೆದು ಸರಕಾರದ ಖಜಾನೆಗೆ ಪಾವತಿಸದೆ ವಂಚಿಸಿರುವುದು ಮತ್ತು ದೂರುದಾರರ ಮೇಲೆ ಒತ್ತಡ ಹೇರಿರುವುದು ಪೊಲೀಸ್ ಇಲಾಖೆಯ ಘನತೆಗೆ ಕುಂದು ತಂದಿದೆ ಎಂದು ಹೇಳಲಾಗುತ್ತಿದ್ದು, ಈ ಘಟನೆ ಇಡೀ ಜಿಲ್ಲೆಯಾದ್ಯಂತ ಭಾರೀ ಚರ್ಚೆಗೆ ಗ್ರಾಸವಾಗಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮಂಗಳೂರು | ಬಾಲ್ಕನಿಯ ತಡೆಗೋಡೆ ಕುಸಿದು ಬಿದ್ದು ಓರ್ವ ವಿದ್ಯಾರ್ಥಿಯ ಮೆದುಳು ನಿಷ್ಕ್ರಿಯ, ನಾಲ್ವರಿಗೆ ಗಾಯ

ಮಂಗಳೂರಿನ ಎಮ್ಮೆಕೆರೆಯ ರಾಮ ಲಕ್ಷ್ಮೀನಾರಾಯಣ ಕನ್ವೆನ್ಷನ್ ಹಾಲ್‌ನ ಬಾಲ್ಕನಿಯ ತಡೆಗೋಡೆ ಕುಸಿದು...

ಯಾದಗಿರಿ | ಯಕ್ಷಿಂತಿ ಗ್ರಾಮಕ್ಕೆ ಮೂಲಸೌಲಭ್ಯ ನೀಡಿ: ಪ್ರಜಾಸೇವಾ ಅಭಿಯಾನದಲ್ಲಿ ಗ್ರಾಮಸ್ಥರ ಮನವಿ

ವಡಗೇರಾ ತಾಲ್ಲೂಕಿನ ಹಯ್ಯಾಳ ಬಿ ಗ್ರಾಮದಲ್ಲಿ ನಡೆದ ಹೋಬಳಿ ಮಟ್ಟದ ಪ್ರಜಾಸೇವಾ...

ಯಾದಗಿರಿ | ಜನಜಾಗೃತಿ ಸಮಾವೇಶ: ಮಲ್ಲಣ್ಣ ದಾಸನಕೇರಿ ಅಧ್ಯಕ್ಷರಾಗಿ ನೇಮಕ

ಜಿಲ್ಲಾ ಕಾಂಗ್ರೆಸ್ ಪರಿಶಿಷ್ಟ ಜಾತಿ ವಿಭಾಗದ ವತಿಯಿಂದ ಹಮ್ಮಿಕೊಳ್ಳಲಿರುವ ಮಾದಿಗರ ಜನಜಾಗೃತಿ...

ಯಾದಗಿರಿ | ಪ್ರಜಾಸೇವಾ ಅಭಿಯಾನ: ದೂರುಗಳ ಪರಿಶೀಲನೆಗೆ ಅಧಿಕಾರಿಗಳಿಗೆ ಖಡಕ್ ಸೂಚನೆ

ಶಹಾಪುರ ಹಾಗೂ ಗೋಗಿ ಹೋಬಳಿ ವ್ಯಾಪ್ತಿಯ ಪ್ರಜಾಸೇವಾ ಅಭಿಯಾನದಲ್ಲಿ ಸಲ್ಲಿಕೆಯಾದ ದೂರುಗಳ...