ಭಟ್ಕಳ | ಬೇಡ್ತಿ-ವರದಾ ಯೋಜನೆಗೆ ಅಡಿಪಾಯ ಹಾಕಿದ್ದೇ ಬಿಜೆಪಿ: ಸಚಿವ ಮಂಕಾಳ ವೈದ್ಯ ವಾಗ್ದಾಳಿ

Date:

ಭಟ್ಕಳ: ವಿವಾದಿತ ಬೇಡ್ತಿ-ವರದಾ ನದಿ ಜೋಡಣೆ ಯೋಜನೆಗೆ ಸಂಬಂಧಿಸಿದಂತೆ ರಾಜ್ಯ ಮೀನುಗಾರಿಕೆ ಮತ್ತು ಬಂದರು ಸಚಿವ ಮಂಕಾಳ ವೈದ್ಯ ಅವರು ಬಿಜೆಪಿ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ.

- Advertisement -

“ಈ ಯೋಜನೆ ಜಾರಿಗೆ ಅಂದು ಮುಖ್ಯಮಂತ್ರಿಯಾಗಿದ್ದ ಬಿ.ಎಸ್. ಯಡಿಯೂರಪ್ಪ ಅವರೇ ಬಜೆಟ್‌ನಲ್ಲಿ ಘೋಷಣೆ ಮಾಡಿದ್ದರು” ಎಂಬ ಸತ್ಯವನ್ನು ಬಿಚ್ಚಿಡುವ ಮೂಲಕ ಬಿಜೆಪಿಯ ಇಂದಿನ ಹೋರಾಟವನ್ನು ಅವರು ಪ್ರಶ್ನಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಜನತಂತ್ರದ ಬಿಕ್ಕಟ್ಟಿಗೆ ಮೌನ; ವ್ಯಾಪಾರಿಗಳ ನಷ್ಟಕ್ಕೆ ಪರಿಹಾರದ ಭರವಸೆ;...

ಚುನಾವಣಾ ಜನತಂತ್ರ ಬಿಕ್ಕಟ್ಟಿಗೆ ಸಿಲುಕಿದಾಗ, ನಾಗರಿಕರ ಪ್ರತಿಭಟನಾ ಹಕ್ಕು ಬೀದಿಗೆ ಬಿದ್ದಾಗ ಸುಪ್ರೀಂ ಕೋರ್ಟ್ ತಳೆದ ಮೌನ, ಸ್ಪಂದಿಸಿದ ರೀತಿ, ಕನಾಟ್ ಪ್ಲೇಸ್‌ನ ವ್ಯಾಪಾರಿಗಳು ಹಾಗೂ ಉದ್ಯೋಗಿಗಳ ಜೀವನೋಪಾಯಕ್ಕೆ ಧಕ್ಕೆಯಾದರೆ ಮಧ್ಯಪ್ರವೇಶಿಸಿ ಪರಿಹಾರ...

‘ಕೈಮುಗಿದು ಕಾಲಿಗೆ ಬೀಳುವೆ…’ ಪ್ರಜಾಪ್ರಭುತ್ವ ಕುಸಿತಕ್ಕೆ ಮುನ್ನುಡಿಯೇ?

ಜಾತಿ ಅಸಮಾನತೆ, ಸಾಮಾಜಿಕ ಶೋಷಣೆ ಮತ್ತು ರಾಜಕೀಯ ಪ್ರಭಾವದ ಮುಂದೆ ಜನಪ್ರತಿನಿಧಿಗಳೇ ಕೈಮುಗಿದು ನಿಲ್ಲುವ ದುಸ್ಥಿತಿ ಪ್ರಜಾಪ್ರಭುತ್ವದ ಅಡಿಪಾಯವನ್ನೇ ಅಲುಗಾಡಿಸುತ್ತಿದೆ. ಸಂವಿಧಾನ ಸಾರಿದ ಸಮಾನತೆ, ಸ್ವಾತಂತ್ರ್ಯ ಮತ್ತು ಭ್ರಾತೃತ್ವ ಕೇವಲ ಕಾಗದಕ್ಕೆ ಸೀಮಿತವಾಗುತ್ತಿದೆಯೇ...

JNU ವಿದ್ಯಾರ್ಥಿ ‘ನಜೀಬ್’ ನಾಪತ್ತೆಗೆ 10 ವರ್ಷಗಳು: ಉತ್ತರ...

ತನಿಖಾ ಸಂಸ್ಥೆಗಳು ಕಡತವನ್ನು ಮುಚ್ಚಿದ ಮಾತ್ರಕ್ಕೆ ಒಬ್ಬ ತಾಯಿಯ ಹುಡುಕಾಟವನ್ನಾಗಲಿ ಅಥವಾ ಅಮಾಯಕ ವಿದ್ಯಾರ್ಥಿಯೊಬ್ಬನ ನಾಪತ್ತೆ ಕುರಿತ ಪ್ರಶ್ನೆಗಳನ್ನಾಗಲಿ ಅಳಿಸಿಹಾಕಲು ಸಾಧ್ಯವಿಲ್ಲ. ನಜೀಬ್ ಅಹ್ಮದ್ ಅವರನ್ನು ಕೇವಲ ಒಂದು ಪ್ರತಿಭಟನೆಯ ಸಂಕೇತವಾಗಿ ನೆನೆಯುವ...

ಭಟ್ಕಳದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಸಚಿವರು, ಹಳೆಯ ದಾಖಲೆಗಳನ್ನು ಉಲ್ಲೇಖಿಸಿ ಬಿಜೆಪಿಯ ಇಬ್ಬಗೆಯ ನೀತಿಯನ್ನು ಟೀಕಿಸಿದರು. ಯಡಿಯೂರಪ್ಪ ಅವರು ಮುಖ್ಯಮಂತ್ರಿಯಾಗಿದ್ದ ಅವಧಿಯಲ್ಲೇ ಈ ಯೋಜನೆಗೆ ಅಡಿಪಾಯ ಬಿದ್ದಿತ್ತು ಎಂದು ಪುನರುಚ್ಚರಿಸಿದ ಸಚಿವರು, “ಅಂದಿನ ಬಜೆಟ್‌ನ 21ನೇ ಪುಟದ 89ನೇ ಪ್ಯಾರಾವನ್ನು ಗಮನಿಸಿದರೆ ಸತ್ಯ ತಿಳಿಯಲಿದೆ.

ಅಂದು ಜಿಲ್ಲೆಯ ಐವರು ಶಾಸಕರು ಬಿಜೆಪಿಯವರೇ ಆಗಿದ್ದರು, ವಿಶ್ವೇಶ್ವರ ಹೆಗಡೆ ಕಾಗೇರಿ ಅವರು ಸ್ಪೀಕರ್ ಆಗಿದ್ದರು. ಆಗ ಸುಮ್ಮನಿದ್ದವರು ಈಗ ವಿರೋಧ ವ್ಯಕ್ತಪಡಿಸುತ್ತಿರುವುದು ಹಾಸ್ಯಾಸ್ಪದ” ಎಂದರು. ಈ ಯೋಜನೆಯ ಒಟ್ಟು 23 ಸಾವಿರ ಕೋಟಿ ರೂಪಾಯಿ ವೆಚ್ಚದಲ್ಲಿ ಶೇ. 90ರಷ್ಟು ಪಾಲು ಕೇಂದ್ರ ಸರ್ಕಾರದ್ದಾಗಿದೆ.

ಈ ಸುದ್ದಿ ಓದಿದ್ದೀರಾ? ಮುಂಡಗೋಡ | ಸಬ್ ರಿಜಿಸ್ಟ್ರಾರ್ ಆಫೀಸ್ ನಲ್ಲಿ ಡಿಜಿಟಲ್ ಇ-ಸ್ಟ್ಯಾಂಪ್ ಕುರಿತು ತರಬೇತಿ ಕಾರ್ಯಾಗಾರ ಆಯೋಜನೆ

ಒಂದೆಡೆ ಕೇಂದ್ರ ಸರ್ಕಾರ ಯೋಜನೆ ಜಾರಿಗೆ ಮುಂದಾಗಿದೆ, ಮತ್ತೊಂದೆಡೆ ಅದೇ ಪಕ್ಷದ ಸಂಸದ ಬಸವರಾಜ ಬೊಮ್ಮಾಯಿ ಅವರಿಗೆ ಈ ಯೋಜನೆ ಬೇಕಿದೆ. ಆದರೆ ಜಿಲ್ಲೆಯ ನಾಯಕರು ವಿರೋಧಿಸುತ್ತಿದ್ದಾರೆ. ಮೊದಲು ಬಿಜೆಪಿ ತನ್ನೊಳಗಿನ ಗೊಂದಲವನ್ನು ಬಗೆಹರಿಸಿಕೊಳ್ಳಲಿ ಎಂದು ಮಂಕಾಳ ವೈದ್ಯ ಸಲಹೆ ನೀಡಿದರು.

ಕೇಂದ್ರ ಬಜೆಟ್‌ನಿಂದ ಕರ್ನಾಟಕಕ್ಕೆ ಅಥವಾ ಉತ್ತರ ಕನ್ನಡ ಜಿಲ್ಲೆಗೆ ಯಾವುದೇ ವಿಶೇಷ ನಿರೀಕ್ಷೆಗಳಿಲ್ಲ ಎಂದು ಬೇಸರ ವ್ಯಕ್ತಪಡಿಸಿದ ಸಚಿವರು, ರಾಜ್ಯದ ಬಿಜೆಪಿ ಸಂಸದರಿಗೆ ಪ್ರಧಾನಿ ನರೇಂದ್ರ ಮೋದಿ ಅವರ ಮುಂದೆ ನಿಂತು ರಾಜ್ಯದ ಪರವಾಗಿ ಧ್ವನಿ ಎತ್ತುವ ತಾಕತ್ತಿಲ್ಲ ಎಂದು ಲೇವಡಿ ಮಾಡಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಲೂನ್ ಮಾರುವ 9 ವರ್ಷದ ಬಾಲಕಿ ಅತ್ಯಾಚಾರ, ಕೊಲೆ ಪ್ರಕರಣ: ಅಪರಾಧಿ ಕಾರ್ತಿಕ್‌ಗೆ ಗಲ್ಲು ಶಿಕ್ಷೆ

ಕಳೆದ ವರ್ಷದ ದಸರಾ ಮಹೋತ್ಸವದ ಸಂದರ್ಭದಲ್ಲಿ ಕುಟುಂಬದೊಂದಿಗೆ ಟೆಂಟ್‌ನಲ್ಲಿ ಮಲಗಿದ್ದ 9...

ಬಾಗೇಪಲ್ಲಿ | ಬೆಂಗಳೂರು ಉತ್ತರ ವಿಶ್ವವಿದ್ಯಾಲಯ ಅಂತರ ಕಾಲೇಜು ವಿದ್ಯಾರ್ಥಿಗಳ ಗುಡ್ಡಗಾಡು ಓಟ ಸ್ಪರ್ಧೆ

ವಿದ್ಯಾರ್ಥಿಗಳು ಪಠ್ಯ ಚಟುವಟಿಕೆಗಳ ಜೊತೆಗೆ ಪಠ್ಯೇತರ ಚಟುವಟಿಕೆಗಳಾದ ಕ್ರೀಡೆಗಳಲ್ಲಿ ಭಾಗವಹಿಸುವುದರಿಂದ ಶಾರೀರಿಕ...

ರಾಯಚೂರು | ಮಾನ್ವಿ ಬಳಿ ಈರುಳ್ಳಿ ಸಾಗಿಸುತ್ತಿದ್ದ ಲಾರಿ ಪಲ್ಟಿ; ಚಾಲಕ, ಕ್ಲೀನರ್‌ಗೆ ಗಾಯ

ಮಾನ್ವಿ ತಾಲೂಕಿನ ಗ್ರಾಮದ ಸಮೀಪದ ಹೊರವಲಯದಲ್ಲಿ ಮಾನ್ವಿ ರಸ್ತೆಯಲ್ಲಿ ಈರುಳ್ಳಿ ಸಾಗಿಸುತ್ತಿದ್ದ...