ಭಟ್ಕಳ | ಚಿತ್ರದುರ್ಗ ಬಸ್ ದುರಂತ: ಸಾವು ಗೆದ್ದ ಕುಮಟಾ ಯುವಕ

Date:

ಚಿತ್ರದುರ್ಗ ಜಿಲ್ಲೆಯ ಗೋರ್ಲತ್ತು ಕ್ರಾಸ್ ಬಳಿ ಸಂಭವಿಸಿದ ಸೀಬರ್ಡ್ ಖಾಸಗಿ ಬಸ್‌ನ ಭೀಕರ ಅಪಘಾತದ ನಂತರ ಪ್ರಯಾಣಿಕರ ಸ್ಥಿತಿಗತಿಗಳ ಕುರಿತು ಗೊಂದಲ ಮತ್ತು ಆತಂಕ ಮುಂದುವರಿದಿದೆ. ಈ ದುರ್ಘಟನೆಯಲ್ಲಿ ಉತ್ತರ ಕನ್ನಡ ಜಿಲ್ಲೆಯ ಭಟ್ಕಳ ಮೂಲದ ಯುವತಿ ಹಾಗೂ ಕುಮಟಾದ ವ್ಯಕ್ತಿಯೊಬ್ಬರು ನಾಪತ್ತೆಯಾಗಿದ್ದು, ಕುಟುಂಬಸ್ಥರು ತೀವ್ರ ಕಳವಳ ವ್ಯಕ್ತಪಡಿಸಿದ್ದಾರೆ.

- Advertisement -

ಬೆಂಗಳೂರಿನ ಖಾಸಗಿ ಕಂಪನಿಯೊಂದರಲ್ಲಿ ಸಾಫ್ಟ್‌ವೇರ್ ಇಂಜಿನಿಯರ್ ಆಗಿ ಕಾರ್ಯನಿರ್ವಹಿಸುತ್ತಿದ್ದ ಭಟ್ಕಳ ತಾಲೂಕಿನ ಶಿರಾಲಿಯ ರಶ್ಮಿ ಮಹಾಲೆ ಅವರು ಈ ಅಪಘಾತದ ನಂತರ ಪತ್ತೆಯಾಗುತ್ತಿಲ್ಲ. ಕ್ರಿಸ್‌ಮಸ್ ರಜೆ ಹಿನ್ನೆಲೆಯಲ್ಲಿ ತನ್ನಿಬ್ಬರು ಗೆಳತಿಯರೊಂದಿಗೆ ಗೋಕರ್ಣ ಮತ್ತು ಮುರುಡೇಶ್ವರ ಪ್ರವಾಸಕ್ಕೆಂದು ರಶ್ಮಿ ಹೊರಟಿದ್ದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಕಲಬುರಗಿ | ‘ನಮ್ಮನ್ನ ಎಲ್ಲಿಗೆ ಕಳುಹಿಸುತ್ತೀರಿ?’: ತಗ್ಗಿನ ಬೇಲಿಯ...

92ಕ್ಕೂ ಅಧಿಕ ಸ್ಲಂ ಕುಟುಂಬಗಳ ಬದುಕು ಕೇವಲ ಜಮೀನಿನ ಹಕ್ಕಿನ ಪ್ರಶ್ನೆಯಲ್ಲ; ಅವರ ಸುರಕ್ಷಿತ ಓಡಾಟ, ಕುಡಿಯುವ ನೀರು ಹಾಗೂ ನಿತ್ಯದ ಬದುಕಿನ ಹಕ್ಕಿನ ಪ್ರಶ್ನೆಯೂ ಹೌದು. ನ್ಯಾಯಾಲಯದ ವಿಚಾರಣೆ ಅಂತಿಮಗೊಳ್ಳುವವರೆಗೆ ಯಾವುದೇ...

ಚುನಾವಣಾ ಆಯೋಗದ ಸಭೆ: ಪರಿಹಾರವಲ್ಲ, ತೇಪೆ ಹಚ್ಚುವ ಕಾರ್ಯಕ್ರಮ

ಅವೈಜ್ಞಾನಿಕ 'SIR' ಪ್ರಕ್ರಿಯೆ ಮತ್ತು ಆಯೋಗದೊಳಗಿನ ಭಿನ್ನಾಭಿಪ್ರಾಯಗಳು ಸಾರ್ವಜನಿಕವಾಗಿ ಬಯಲಾದ ಬೆನ್ನಲ್ಲೇ ಬಿಡುಗಡೆಯಾದ ಚುನಾವಣಾ ಆಯೋಗದ ಪತ್ರಿಕಾ ಪ್ರಕಟಣೆ, ತಪ್ಪುಗಳನ್ನು ತಿದ್ದುವ ಬದಲು ವ್ಯವಸ್ಥೆಯ ಲೋಪಗಳಿಗೆ ತೇಪೆ ಹಚ್ಚುವ ಯತ್ನದಂತೆ ಕಾಣುತ್ತಿದೆ. ದೇಶದ ಇತಿಹಾಸದಲ್ಲೇ...

ಹೊರಟ್ಟಿ ಅವರ ಹೋರಾಟದ ಬದುಕು ಮತ್ತು ಅವರ ಭಕ್ತ...

ಗ್ಯಾರಂಟಿ ಯೋಜನೆಗಳಿಂದ ಕೂಲಿ ಕಾರ್ಮಿಕರು ಸಿಗುತ್ತಿಲ್ಲವೆಂಬ ಬಸವರಾಜ ಹೊರಟ್ಟಿ ಅವರ ಹೇಳಿಕೆ ಮತ್ತು ಅದಕ್ಕೆ ಸಿಕ್ಕ ಸಾರ್ವಜನಿಕ ಚಪ್ಪಾಳೆಗಳು, ಕೇವಲ ಹಸಿವನ್ನೇ ಶ್ರಮದ ಇಂಧನವನ್ನಾಗಿ ನೋಡುವ ಸಮಾಜದ ಕ್ರೂರ ಮನಸ್ಥಿತಿಯನ್ನು ಅನಾವರಣಗೊಳಿಸುತ್ತವೆ. ಬಸವರಾಜ ಹೊರಟ್ಟಿ...

ಕಚೇರಿಯಲ್ಲಿ ಮ್ಯಾನೇಜರ್ ಒತ್ತಾಯಿಸಿ ರಜೆ ಪಡೆದಿದ್ದ ರಶ್ಮಿ, ಬುಧವಾರ ಕೆಲಸ ಮುಗಿಸಿ ಬಸ್ ಏರಿದ್ದರು. ಅಪಘಾತದ ಸಮಯದಲ್ಲಿ ಅವರ ಜೊತೆಗಿದ್ದ ಗೆಳತಿಯರಾದ ಗಗನ ಮತ್ತು ರಕ್ಷಿತಾ ಪ್ರಾಣಾಪಾಯದಿಂದ ಪಾರಾಗಿದ್ದರೂ, ರಶ್ಮಿ ಅವರ ಮೊಬೈಲ್ ಸ್ವಿಚ್ ಆಫ್ ಆಗಿದೆ. ಮಗಳನ್ನು ಬರಮಾಡಿಕೊಳ್ಳಲು ಕಾಯುತ್ತಿದ್ದ ಕುಟುಂಬಸ್ಥರು ಈ ಸುದ್ದಿ ಕೇಳಿ ಈಗ ಚಿತ್ರದುರ್ಗದತ್ತ ಧಾವಿಸಿದ್ದಾರೆ.

ಇದೇ ಬಸ್‌ನಲ್ಲಿ ಕುಮಟಾಕ್ಕೆ ಪ್ರಯಾಣಿಸುತ್ತಿದ್ದ ಇಬ್ಬರು ಪ್ರಯಾಣಿಕರ ಬಗ್ಗೆಯೂ ವರದಿಯಾಗಿದೆ. 9U ಸೀಟ್‌ನಲ್ಲಿ ಪ್ರಯಾಣಿಸುತ್ತಿದ್ದ ವಿಜಯ್ ಭಂಡಾರಿ ಎಂಬುವವರು ಅಪಘಾತದ ಬಳಿಕ ಸುರಕ್ಷಿತವಾಗಿದ್ದಾರೆ. ಅವರು ಬೇರೊಬ್ಬರ ಮೊಬೈಲ್ ಮೂಲಕ ಕರೆ ಮಾಡಿ ತಾನು ಕ್ಷೇಮವಾಗಿರುವುದಾಗಿ ತಿಳಿಸಿದ್ದು, ಕುಟುಂಬಸ್ಥರು ನಿಟ್ಟುಸಿರು ಬಿಟ್ಟಿದ್ದಾರೆ.

ಆದರೆ, ಚಾಲಕನ ಹಿಂಭಾಗದ ಸೀಟಿನಲ್ಲಿ (1U) ಕುಳಿತಿದ್ದ ಮೇಘರಾಜ್ ಅವರ ಪತ್ತೆಯಾಗಿಲ್ಲ. ಅಪಘಾತ ನಡೆದ ಸಮಯದಿಂದ ಮೇಘರಾಜ್ ಅವರ ಯಾವುದೇ ಸುಳಿವು ಸಿಗದ ಕಾರಣ ಅವರ ಕುಟುಂಬಸ್ಥರಲ್ಲಿ ಆತಂಕ ಮನೆ ಮಾಡಿದೆ. ಈ ಕುರಿತು ಪೊಲೀಸರಿಗೆ ಅಧಿಕೃತ ಮಾಹಿತಿ ನೀಡುವ ಪ್ರಕ್ರಿಯೆ ನಡೆಯುತ್ತಿದೆ.

ಈ ಸುದ್ದಿ ಓದಿದ್ದೀರಾ? ಮುಂಡಗೋಡ-ಹಳಿಯಾಳದ ಮದ್ಯ-ಮಟ್ಕಾ ಅಡ್ಡೆಗಳ ಮೇಲೆ ಪೊಲೀಸ್ ದಾಳಿ; ಪಾಳಾ ಭಾಗದ ಮಟ್ಕಾ ದಂಧೆಗೆ ಬೀಳುತ್ತಾ ಬ್ರೇಕ್?

ಘಟನಾ ಸ್ಥಳದಲ್ಲಿ ಮತ್ತು ಆಸ್ಪತ್ರೆಗಳಲ್ಲಿ ನಾಪತ್ತೆಯಾದವರಿಗಾಗಿ ಪೊಲೀಸರು ಮತ್ತು ಸಂಬಂಧಿಕರು ಹುಡುಕಾಟ ನಡೆಸುತ್ತಿದ್ದಾರೆ. ಬಸ್ ದುರಂತದ ತೀವ್ರತೆಯಿಂದಾಗಿ ಪ್ರಯಾಣಿಕರ ಮಾಹಿತಿ ಸಂಗ್ರಹಿಸುವಲ್ಲಿ ಆರಂಭಿಕ ಗೊಂದಲಗಳು ಉಂಟಾಗಿದ್ದು, ಪೊಲೀಸರು ಕಾರ್ಯಾಚರಣೆಯನ್ನು ತೀವ್ರಗೊಳಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಯಚೂರು | ಪೊತ್ನಾಳ ಗ್ರಂಥಾಲಯದಲ್ಲಿ ಮೂಲಸೌಕರ್ಯ ಕೊರತೆ: ಓದಲು ಬರುವ ವಿದ್ಯಾರ್ಥಿಗಳಿಗೆ ಪರದಾಟ

ಮಾನ್ವಿ ತಾಲ್ಲೂಕಿನ ಪೊತ್ನಾಳ ಗ್ರಾಮ ಪಂಚಾಯತ್ ವ್ಯಾಪ್ತಿಯ ಸರ್ಕಾರಿ ಶಾಲೆಯ ಮೈದಾನದಲ್ಲಿರುವ...

ಕಲಬುರಗಿ | ಪ್ರೀತಿಸಿದ ಯುವತಿಯನ್ನೇ ಮದುವೆಯಾಗಲು ಪಟ್ಟು: ಟವರ್ ಏರಿದ ಯುವಕ!

ತಾನು ಪ್ರೀತಿಸಿದ ಯುವತಿಯನ್ನೇ ಮದುವೆಯಾಗಬೇಕು ಎಂದು ಪಟ್ಟು ಹಿಡಿದ ಯುವಕನೊಬ್ಬ, ಮದುವೆಗೆ...

ಅಳಿವಿನ ಅಂಚಿನಲ್ಲಿ ಅಕ್ಕಸಾಲಿಗರ ಕುಲಕಸುಬು: ಸರ್ಕಾರದ ನೆರವಿಗೆ ಚಿನ್ನ-ಬೆಳ್ಳಿ ಕೆಲಸಗಾರರ ಆಗ್ರಹ

ಒಮ್ಮೆ ರಾಜಾಶ್ರಯ ಪಡೆದಿದ್ದ ಪಾರಂಪರಿಕ ಕುಲಕಸುಬುಗಳಲ್ಲಿ ಒಂದಾಗಿದ್ದ ಚಿನ್ನ ಮತ್ತು ಬೆಳ್ಳಿ...

ಕಲಬುರಗಿ | ಅಪ್ರಾಪ್ತ ಬಾಲಕಿಯ ಮೇಲಿನ ಲೈಂಗಿಕ ದೌರ್ಜನ್ಯ: ಆರೋಪಿಗೆ 20 ವರ್ಷ ಕಠಿಣ ಕಾರಾಗೃಹ

ಅಪ್ರಾಪ್ತ ಬಾಲಕಿಯ ಮೇಲಿನ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಆರೋಪ ಸಾಬೀತಾದ ಹಿನ್ನೆಲೆಯಲ್ಲಿ...