ಭಟ್ಕಳ | ಜಲದುರಂತ: ಸಾವಿನ ಸಂಖ್ಯೆ 10ಕ್ಕೆ ಏರಿಕೆ – ರಾಷ್ಟ್ರಪತಿ, ಪ್ರಧಾನಿ, ಸಿಎಂರಿಂದ ಸಂತಾಪ; ಪರಿಹಾರ ಘೋಷಣೆ

Date:

ಉತ್ತರ ಕನ್ನಡ ಜಿಲ್ಲೆಯ ಭಟ್ಕಳ ತಾಲೂಕಿನ ಅಳ್ವೇಕೋಡಿ ತಟ್ಟೆಹಕ್ಕಲು ನದಿ ತೀರದಲ್ಲಿ ಸಂಭವಿಸಿದ ಭೀಕರ ಜಲದುರಂತದಲ್ಲಿ ಸಾವಿನ ಸಂಖ್ಯೆ 10ಕ್ಕೆ ಏರಿಕೆಯಾಗಿದೆ. ಒಂದೇ ಕುಟುಂಬದ ಸದಸ್ಯರು ಕಪ್ಪು ಚಿಪ್ಪೆ ಸಂಗ್ರಹಿಸಲು ತೆರಳಿದ್ದ ವೇಳೆ ನೀರಿನ ಭಾರೀ ಸೆಳೆತಕ್ಕೆ ಸಿಲುಕಿ ಈ ದುರಂತ ಸಂಭವಿಸಿದೆ.

- Advertisement -

ಮೊದಲು 8 ಮೃತದೇಹಗಳು ಪತ್ತೆಯಾಗಿದ್ದವು. ಬಳಿಕ ನಾಪತ್ತೆಯಾಗಿದ್ದ ಮೂವರಲ್ಲಿ ಮತ್ತಿಬ್ಬರ ಶವಗಳನ್ನು ರಕ್ಷಣಾ ತಂಡಗಳು ಪತ್ತೆಹಚ್ಚಿದ್ದು, ಇನ್ನುಳಿದ ಒಬ್ಬರಿಗಾಗಿ ತೀವ್ರ ಶೋಧ ಕಾರ್ಯಾಚರಣೆ ಮುಂದುವರಿದಿದೆ. ಮೃತರಲ್ಲಿ 9 ಮಹಿಳೆಯರು ಹಾಗೂ ಒಬ್ಬ ಪುರುಷ ಸೇರಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಅನುದಾನ ಕೊರತೆ: ವಿದ್ಯಾರ್ಥಿಗಳಿಂದ ನಿರ್ವಹಣಾ ಶುಲ್ಕ ವಸೂಲಿ, ಶಿಕ್ಷಕರ...

ಹಾವೇರಿ ಜಿಲ್ಲೆಯಲ್ಲಿ ಸರಕಾರಿ ಶಾಲೆಗಳಿಗೆ ನಿರ್ವಹಣಾ ವೆಚ್ಚದ ಅನುದಾನ ಬಿಡುಗಡೆಯಾಗದ ಹಿನ್ನೆಲೆಯಲ್ಲಿ ಶಿಕ್ಷಕರು ನಿತ್ಯದ ಖರ್ಚು-ವೆಚ್ಚ ಸರಿದೂಗಿಸಲು ಪರದಾಡುವಂತಾಗಿದೆ. ಶಾಲೆ ನಡೆಸಲು ವಿದ್ಯಾರ್ಥಿಗಳಿಂದಲೇ ಹಣ ವಸೂಲಿ ಮಾಡುತ್ತಿರುವ ಆರೋಪ ಕೇಳಿಬಂದಿದ್ದು, ಪೋಷಕರಿಂದ ಮತ್ತು...

ಬೀಗರೂಟ ಬಂದ್ ಮಾಡಿ ಸುದ್ದಿಯಾದ ಹರಗಿ ಗ್ರಾಮದಲ್ಲಿ ಸಮಸ್ಯೆಗಳದ್ದೇ...

ಶಿವಮೊಗ್ಗ ಜಿಲ್ಲೆಯ ಶಿಕಾರಿಪುರ ತಾಲೂಕಿನಲ್ಲಿರುವ ಕಟ್ಟೆ ಕಡೆಯ ಕುಗ್ರಾಮ ಎಂದು ಹೇಳಬಹುದಾದ ಹರಗಿ ಗ್ರಾಮ ಇಡೀ ರಾಜ್ಯದ ಗಮನ ಸೆಳೆಯುತ್ತಿದೆ ಬೀಗರೂಟ ಹಾಕಿಸಿದರೆ ದಂಡ ವಿಧಿಸುತ್ತೇವೆ ಎಂದು ಗ್ರಾಮಸ್ಥರು ನಿರ್ಧಾರಕ್ಕೆ ಬಂದು ಬಡ...

ಮೋದಿ ಪರವಿದ್ದ ಯುವಜನರು ತಿರುಗಿಬಿದ್ದಿದ್ದು ಹೇಗೆ?

ಚುನಾವಣಾ ಆಯೋಗದಲ್ಲಿ ಎಸ್‌ಐಆರ್‌ ಮತ್ತು ಚುನಾವಣಾ ಪ್ರಕ್ರಿಯೆಗಳ ಕುರಿತು ಮುಖ್ಯಚುನಾವಣಾ ಆಯುಕ್ತ ಗ್ಯಾನೇಶ್‌ ಕುಮಾರ್‌ ಅವರು ಸರ್ವಾಧಿಕಾರಿಯಂತೆ, ಏಕಪಕ್ಷೀಯವಾಗಿ ನಿರ್ಧಾರಗಳ ತೆಗೆದುಕೊಂಡು, ಜಾರಿ ಮಾಡುತ್ತಿದ್ದಾರೆ ಎಂಬ ತನಿಖಾ ವರದಿ ದೇಶಾದ್ಯಂತ ಭಾರೀ ಚರ್ಚೆ...

ಈ ಸುದ್ದಿ ಓದಿದ್ದೀರಾ? ಉತ್ತರ ಕನ್ನಡ | ಅಳ್ವೇಕೋಡಿ ಕಡಲ ತೀರದಲ್ಲಿ ದಾರುಣ ದುರಂತ: ಒಂದೇ ಕುಟುಂಬದ 8 ಮಂದಿ ಬಲಿ, ಮೂವರು ನಾಪತ್ತೆ

ರಾಷ್ಟ್ರಪತಿ, ಪ್ರಧಾನಿ, ಸಿಎಂರಿಂದ ಸಂತಾಪ ಈ ಭೀಕರ ದುರಂತಕ್ಕೆ ದೇಶದ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ತೀವ್ರ ಸಂತಾಪ ವ್ಯಕ್ತಪಡಿಸಿದ್ದು, ಮೃತರ ಕುಟುಂಬಗಳಿಗೆ ಸಾಂತ್ವನ ಹೇಳಿದ್ದಾರೆ. ಗಾಯಗೊಂಡವರು ಶೀಘ್ರ ಗುಣಮುಖರಾಗಲಿ ಎಂದು ಪ್ರಾರ್ಥಿಸಿದ್ದಾರೆ.

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಹ ದುರಂತದ ಬಗ್ಗೆ ಆಘಾತ ವ್ಯಕ್ತಪಡಿಸಿ, ಪ್ರಧಾನಮಂತ್ರಿಗಳ ರಾಷ್ಟ್ರೀಯ ಪರಿಹಾರ ನಿಧಿಯಿಂದ (PMNRF) ಮೃತರ ಕುಟುಂಬಗಳಿಗೆ ತಲಾ ₹2 ಲಕ್ಷ ಹಾಗೂ ಗಾಯಗೊಂಡವರಿಗೆ ₹50,000 ಪರಿಹಾರ ಘೋಷಿಸಿದ್ದಾರೆ.

ಇದೇ ವೇಳೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕೂಡ ತೀವ್ರ ದುಃಖ ವ್ಯಕ್ತಪಡಿಸಿ, ರಾಜ್ಯ ಸರ್ಕಾರದ ವತಿಯಿಂದ ಮೃತರ ಕುಟುಂಬಗಳಿಗೆ ತಲಾ ₹5 ಲಕ್ಷ ಪರಿಹಾರ ಘೋಷಿಸಿದ್ದಾರೆ.

ಈ ದುರಂತ ಉತ್ತರ ಕನ್ನಡ ಜಿಲ್ಲೆಯಲ್ಲಿ ಶೋಕದ ವಾತಾವರಣ ನಿರ್ಮಿಸಿದೆ. ರಾಷ್ಟ್ರಪತಿ ರಿಂದ ಮುಖ್ಯಮಂತ್ರಿ ತನಕ ದೇಶದ ಪ್ರಮುಖ ನಾಯಕರು ಸಂತಾಪ ಸೂಚಿಸಿರುವುದು, ಈ ದುರಂತದ ಗಂಭೀರತೆಯನ್ನು ತೋರಿಸುತ್ತದೆ. ಇನ್ನೂ ನಾಪತ್ತೆಯಾಗಿರುವ ವ್ಯಕ್ತಿಗಾಗಿ ಶೋಧ ಕಾರ್ಯಾಚರಣೆ ಮುಂದುವರಿದಿದ್ದು, ಸ್ಥಳೀಯರು ಹಾಗೂ ರಕ್ಷಣಾ ತಂಡಗಳು ನಿರಂತರವಾಗಿ ಕಾರ್ಯನಿರ್ವಹಿಸುತ್ತಿವೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಅನುದಾನ ಕೊರತೆ: ವಿದ್ಯಾರ್ಥಿಗಳಿಂದ ನಿರ್ವಹಣಾ ಶುಲ್ಕ ವಸೂಲಿ, ಶಿಕ್ಷಕರ ಜೇಬಿಗೂ ಕತ್ತರಿ!

ಹಾವೇರಿ ಜಿಲ್ಲೆಯಲ್ಲಿ ಸರಕಾರಿ ಶಾಲೆಗಳಿಗೆ ನಿರ್ವಹಣಾ ವೆಚ್ಚದ ಅನುದಾನ ಬಿಡುಗಡೆಯಾಗದ ಹಿನ್ನೆಲೆಯಲ್ಲಿ...

ಬಾಗೇಪಲ್ಲಿ ಶಾಸಕ ಸುಬ್ಬಾರೆಡ್ಡಿ ರೈತರಿಗೆ ನ್ಯಾಯ ಓದಗಿಸದಿದ್ದರೆ ಬೀದಿಗಿಳಿದು ಹೋರಾಟ ಮಾಡಬೇಕಾಗುತ್ತದೆ : ಹರಿನಾಥರೆಡ್ಡಿ

ಅಭಿವೃದ್ದಿ ಹೆಸರಿನಲ್ಲಿ ಬೇನಾಮಿ ಸಂಸ್ಥೆಯನ್ನು ಸ್ಥಾಪಿಸಿ ಎಸ್ಸಿ, ಎಸ್ಟಿ ಹಾಗೂ ಅಲ್ಪಸಂಖ್ಯಾತರ...

ಮುದ್ದೇಬಿಹಾಳದಲ್ಲಿ ತೀವ್ರ ಬರ; ಕಾಲುವೆಗಳಿಗೆ ನೀರು ಹರಿಸಲು ಶಾಸಕ ನಾಡಗೌಡ ಮನವಿ

ಬರದ ಬಿಸಿಲಿಗೆ ಮುದ್ದೇಬಿಹಾಳ ಮತ್ತು ತಾಳಿಕೋಟೆ ತಾಲೂಕುಗಳ ಗ್ರಾಮೀಣ ಬದುಕು ತತ್ತರಿಸುತ್ತಿರುವ...

ಗದಗ | ಜಿಲ್ಲೆಯಲ್ಲಿ ಸೂರ್ಯಕಾಂತಿ ಬೆಳೆಗೆ ಬೆಂಬಲ ಬೆಲೆ

"2026-27ನೇ ಸಾಲಿನ ಕೇಂದ್ರ ಸರ್ಕಾರದ ಬೆಂಬಲಬೆಲೆ ಯೋಜನೆಯಡಿ ಎಫ್.ಎ.ಕ್ಯು ಗುಣಮಟ್ಟದ ಸೂರ್ಯಕಾಂತಿ...