ಭಟ್ಕಳ | ಸಾಮಾಜಿಕ ಜಾಲತಾಣದಲ್ಲಿ ಮಹಿಳೆಯರಿಗೆ ಕಿರುಕುಳ: ಹೊನ್ನಾವರ ಮೂಲದ ಆರೋಪಿಯ ಬಂಧನ

Date:

ಭಟ್ಕಳ: ಸಾಮಾಜಿಕ ಜಾಲತಾಣಗಳ ಮೂಲಕ ಮಹಿಳೆಯರ ಪರಿಚಯ ಮಾಡಿಕೊಂಡು, ಅವರಿಗೆ ಅಶ್ಲೀಲ ಸಂದೇಶಗಳನ್ನು ಕಳುಹಿಸಿ ಬೆದರಿಕೆ ಹಾಕುತ್ತಿದ್ದ ಆರೋಪಿಯನ್ನು ಭಟ್ಕಳ ಶಹರ ಪೊಲೀಸರು ಬೆಂಗಳೂರಿನಲ್ಲಿ ಬಂಧಿಸಿದ್ದಾರೆ.

- Advertisement -

ಹೊನ್ನಾವರದ ಮಂಕಿ ಭಾಷಾ ಕಾಲೋನಿ ನಿವಾಸಿ, ಪ್ರಸ್ತುತ ಬೆಂಗಳೂರಿನ ಉಬರ್ ಪಾರ್ಸಲ್ ಸೇವೆಯಲ್ಲಿ ಕೆಲಸ ಮಾಡುತ್ತಿರುವ 31 ವರ್ಷದ ಮಹ್ಮದ್ ಯುಶಾ ಬಂಧಿತ ಆರೋಪಿ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಕಲಬುರಗಿ | ‘ನಮ್ಮನ್ನ ಎಲ್ಲಿಗೆ ಕಳುಹಿಸುತ್ತೀರಿ?’: ತಗ್ಗಿನ ಬೇಲಿಯ...

92ಕ್ಕೂ ಅಧಿಕ ಸ್ಲಂ ಕುಟುಂಬಗಳ ಬದುಕು ಕೇವಲ ಜಮೀನಿನ ಹಕ್ಕಿನ ಪ್ರಶ್ನೆಯಲ್ಲ; ಅವರ ಸುರಕ್ಷಿತ ಓಡಾಟ, ಕುಡಿಯುವ ನೀರು ಹಾಗೂ ನಿತ್ಯದ ಬದುಕಿನ ಹಕ್ಕಿನ ಪ್ರಶ್ನೆಯೂ ಹೌದು. ನ್ಯಾಯಾಲಯದ ವಿಚಾರಣೆ ಅಂತಿಮಗೊಳ್ಳುವವರೆಗೆ ಯಾವುದೇ...

ಚುನಾವಣಾ ಆಯೋಗದ ಸಭೆ: ಪರಿಹಾರವಲ್ಲ, ತೇಪೆ ಹಚ್ಚುವ ಕಾರ್ಯಕ್ರಮ

ಅವೈಜ್ಞಾನಿಕ 'SIR' ಪ್ರಕ್ರಿಯೆ ಮತ್ತು ಆಯೋಗದೊಳಗಿನ ಭಿನ್ನಾಭಿಪ್ರಾಯಗಳು ಸಾರ್ವಜನಿಕವಾಗಿ ಬಯಲಾದ ಬೆನ್ನಲ್ಲೇ ಬಿಡುಗಡೆಯಾದ ಚುನಾವಣಾ ಆಯೋಗದ ಪತ್ರಿಕಾ ಪ್ರಕಟಣೆ, ತಪ್ಪುಗಳನ್ನು ತಿದ್ದುವ ಬದಲು ವ್ಯವಸ್ಥೆಯ ಲೋಪಗಳಿಗೆ ತೇಪೆ ಹಚ್ಚುವ ಯತ್ನದಂತೆ ಕಾಣುತ್ತಿದೆ. ದೇಶದ ಇತಿಹಾಸದಲ್ಲೇ...

ಹೊರಟ್ಟಿ ಅವರ ಹೋರಾಟದ ಬದುಕು ಮತ್ತು ಅವರ ಭಕ್ತ...

ಗ್ಯಾರಂಟಿ ಯೋಜನೆಗಳಿಂದ ಕೂಲಿ ಕಾರ್ಮಿಕರು ಸಿಗುತ್ತಿಲ್ಲವೆಂಬ ಬಸವರಾಜ ಹೊರಟ್ಟಿ ಅವರ ಹೇಳಿಕೆ ಮತ್ತು ಅದಕ್ಕೆ ಸಿಕ್ಕ ಸಾರ್ವಜನಿಕ ಚಪ್ಪಾಳೆಗಳು, ಕೇವಲ ಹಸಿವನ್ನೇ ಶ್ರಮದ ಇಂಧನವನ್ನಾಗಿ ನೋಡುವ ಸಮಾಜದ ಕ್ರೂರ ಮನಸ್ಥಿತಿಯನ್ನು ಅನಾವರಣಗೊಳಿಸುತ್ತವೆ. ಬಸವರಾಜ ಹೊರಟ್ಟಿ...

ಭಟ್ಕಳದ ಮುಗ್ಗುಂಕಾಲನಿಯ ನಿವಾಸಿಯೊಬ್ಬರು ಜನವರಿ 22, 2026 ರಂದು ಪೊಲೀಸರಿಗೆ ದೂರು ನೀಡಿದ್ದರು. ಆರೋಪಿಯು ಸುಮಾರು ಒಂದು ವರ್ಷದ ಹಿಂದೆ ಮಹಿಳೆಯ ಪರಿಚಯ ಮಾಡಿಕೊಂಡು, ಸಲುಗೆ ಬೆಳೆಸಿ ಅವರ ಖಾಸಗಿ ಫೋಟೋಗಳನ್ನು ಪಡೆದುಕೊಂಡಿದ್ದ.

ನಂತರ ಪದೇ ಪದೇ ಕರೆ ಮಾಡಿ ಕಿರುಕುಳ ನೀಡಲು ಆರಂಭಿಸಿದ ಈತ, ತನ್ನೊಂದಿಗೆ ಮಾತನಾಡದಿದ್ದರೆ ಖಾಸಗಿ ಫೋಟೋಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಳ್ಳುವುದಾಗಿ ಬೆದರಿಕೆ ಹಾಕಿದ್ದನು. ಅಷ್ಟೇ ಅಲ್ಲದೆ, ಫಿರ್ಯಾದಿಯ ಕುಟುಂಬದವರಿಗೆ ಫೋಟೋಗಳನ್ನು ಕಳುಹಿಸಿದ್ದಲ್ಲದೆ, ಅವರ ಗೆಳತಿಗೂ ಕರೆ ಮಾಡಿ ಮಾನಸಿಕ ಹಿಂಸೆ ನೀಡಿದ್ದನು.

ಈ ದೂರಿನನ್ವಯ ಭಟ್ಕಳ ಶಹರ ಪೊಲೀಸ್ ಠಾಣೆಯಲ್ಲಿ ಮಾಹಿತಿ ತಂತ್ರಜ್ಞಾನ ಕಾಯ್ದೆ ಹಾಗೂ ಭಾರತೀಯ ನ್ಯಾಯ ಸಂಹಿತೆಯ ವಿವಿಧ ಕಲಂಗಳಡಿ ಪ್ರಕರಣ ದಾಖಲಾಗಿತ್ತು. ತನಿಖೆ ಕೈಗೊಂಡ ಪೊಲೀಸರು ಬೆಂಗಳೂರಿನಲ್ಲಿ ಆರೋಪಿಯನ್ನು ಪತ್ತೆ ಹಚ್ಚಿ ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಈ ಸುದ್ದಿ ಓದಿದ್ದೀರಾ? ಗೋಕರ್ಣ | ‘ಮಾದಕ ಚಾಕಲೇಟ್’ ಭೀತಿ: ಸುಳ್ಳು ಸುದ್ದಿಗೆ ಕಿವಿಗೊಡಬೇಡಿ ಎಂದು ಪೊಲೀಸ್ ಇಲಾಖೆ ಸ್ಪಷ್ಟನೆ

ಬಂಧಿತನಿಂದ ಕೃತ್ಯಕ್ಕೆ ಬಳಸಿದ್ದ ಎರಡು ಮೊಬೈಲ್ ಫೋನ್‌ಗಳು ಹಾಗೂ ಪೆನ್‌ಡ್ರೈವ್‌ಗಳನ್ನು ವಶಪಡಿಸಿಕೊಳ್ಳಲಾಗಿದೆ. ತನಿಖೆಯ ವೇಳೆ ಆರೋಪಿಯು ಇನ್ನೂ ಹಲವಾರು ಮಹಿಳೆಯರೊಂದಿಗೆ ಸಂಪರ್ಕದಲ್ಲಿರುವುದು ಬೆಳಕಿಗೆ ಬಂದಿದೆ.

ಉತ್ತರ ಕನ್ನಡ ಜಿಲ್ಲಾ ಪೊಲೀಸ್ ಅಧೀಕ್ಷಕ ಶ್ರೀ ದೀಪನ್ ಎಂ.ಎನ್ ಸೇರಿದಂತೆ ಹಿರಿಯ ಅಧಿಕಾರಿಗಳ ಮಾರ್ಗದರ್ಶನದಲ್ಲಿ, ಭಟ್ಕಳ ಶಹರ ಪೊಲೀಸ್ ನಿರೀಕ್ಷಕ ದಿವಾಕರ ಪಿ.ಎಂ ನೇತೃತ್ವದ ತಂಡ ಈ ಕಾರ್ಯಾಚರಣೆ ನಡೆಸಿದೆ. ಸದ್ಯ ಆರೋಪಿಯನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ನ್ಯಾಯಾಂಗ ಬಂಧನ ವಿಧಿಸಲಾಗಿದೆ.

ವಶಪಡಿಸಿಕೊಂಡ ಮೊಬೈಲ್‌ಗಳನ್ನು ಎಫ್‌.ಎಸ್.ಎಲ್ ಪರೀಕ್ಷೆಗೆ ಕಳುಹಿಸಲಾಗಿದ್ದು, ವರದಿ ಬಂದ ನಂತರ ಹೆಚ್ಚಿನ ವಿಚಾರಣೆ ನಡೆಸಲಾಗುವುದು ಎಂದು ಪೊಲೀಸರು ತಿಳಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಹಾಸನ | ಮುಖ್ಯ ಚುನಾವಣಾ ಆಯುಕ್ತರನ್ನು ವಜಾಗೊಳಿಸಿ, SIR ನಿಲ್ಲಿಸಿ; ಸಿಪಿಐಎಂ-ಸಿಪಿಐ ಪ್ರತಿಭಟನೆ 

ತಪ್ಪಾಗಿ ಹೊರಗಿಡಲಾದವರ ಮತದಾನ ಹಕ್ಕುಗಳನ್ನು ಮರುಸ್ಥಾಪಿಸಿ. ಭಾರತ ಚುನಾವಣಾ ಆಯೋಗದ ವಿಶ್ವಾಸಾರ್ಹತೆಯನ್ನು...

ರಾಯಚೂರು | ಮುಖ್ಯ ಚುನಾವಣಾ ಆಯುಕ್ತರ ವಜಾಕ್ಕೆ ಆಗ್ರಹ: ಅ.15ರಿಂದ ಜಂತರ ಮಂಥರ್‌ನಲ್ಲಿ ಪ್ರತಿಭಟನೆ

ಕೇಂದ್ರ ಚುನಾವಣಾ ಆಯೋಗದ ಘನತೆಗೆ ಧಕ್ಕೆ ಉಂಟುಮಾಡಿ, ಅಕ್ರಮ ಚಟುವಟಿಕೆಗಳಿಗೆ ಕಾರಣರಾಗಿದ್ದಾರೆ...

ರಾಯಚೂರು | ಪೊತ್ನಾಳ ಗ್ರಂಥಾಲಯದಲ್ಲಿ ಮೂಲಸೌಕರ್ಯ ಕೊರತೆ: ಓದಲು ಬರುವ ವಿದ್ಯಾರ್ಥಿಗಳಿಗೆ ಪರದಾಟ

ಮಾನ್ವಿ ತಾಲ್ಲೂಕಿನ ಪೊತ್ನಾಳ ಗ್ರಾಮ ಪಂಚಾಯತ್ ವ್ಯಾಪ್ತಿಯ ಸರ್ಕಾರಿ ಶಾಲೆಯ ಮೈದಾನದಲ್ಲಿರುವ...

ಕಲಬುರಗಿ | ಪ್ರೀತಿಸಿದ ಯುವತಿಯನ್ನೇ ಮದುವೆಯಾಗಲು ಪಟ್ಟು: ಟವರ್ ಏರಿದ ಯುವಕ!

ತಾನು ಪ್ರೀತಿಸಿದ ಯುವತಿಯನ್ನೇ ಮದುವೆಯಾಗಬೇಕು ಎಂದು ಪಟ್ಟು ಹಿಡಿದ ಯುವಕನೊಬ್ಬ, ಮದುವೆಗೆ...