ಭಟ್ಕಳ | ಕಾರು ಹೊಂಡಕ್ಕೆ ಸಿಲುಕಿದ ಘಟನೆಗೆ ಹೊಸ ತಿರುವು; ಮೂರು ಪ್ರಕರಣ ದಾಖಲು

Date:

ಕಾರಿನ ಚಕ್ರ ರಸ್ತೆ ಬದಿಯ ಹೊಂಡದಲ್ಲಿ ಸಿಲುಕಿದ ಘಟನೆಯ ಹಿನ್ನೆಲೆಯಲ್ಲಿ ಭಟ್ಕಳ ಗ್ರಾಮೀಣ ಹಾಗೂ ಶಹರ ಪೊಲೀಸ್ ಠಾಣೆಗಳಲ್ಲಿ ಮೂರು ಪ್ರತ್ಯೇಕ ಪ್ರಕರಣಗಳು ದಾಖಲಾಗಿದ್ದು, ಪರಿಸ್ಥಿತಿ ಸಂಪೂರ್ಣ ನಿಯಂತ್ರಣದಲ್ಲಿದೆ ಎಂದು ಪೊಲೀಸರು ತಿಳಿಸಿದ್ದಾರೆ.

- Advertisement -

ಕಾರಗದ್ದೆಯ ಶಾಹೀದ್ ಖಾನ್ ಎಂಬಾತ ತನ್ನ ಪರಿಚಯದ ಯುವತಿಯನ್ನು ಮಾರುಕೇರಿ ಗ್ರಾಮದಿಂದ ಶಿರಾಲಿ ಚಿತ್ರಾಪುರದ ಗಡಿಹಬ್ಬಕ್ಕೆ ಕಾರಿನಲ್ಲಿ ಕರೆದುಕೊಂಡು ಬರುತ್ತಿದ್ದ ವೇಳೆ ಕಾರಿನ ಚಕ್ರ ರಸ್ತೆ ಬದಿಯ ಹೊಂಡದಲ್ಲಿ ಸಿಲುಕಿಕೊಂಡಿತ್ತು ಎಂದು ದೂರಿನಲ್ಲಿ ತಿಳಿಸಿದ್ದಾನೆ. ಈ ಸಂದರ್ಭದಲ್ಲಿ ಕಾರನ್ನು ಮೇಲಕ್ಕೆತ್ತಲು ನೆರವಿಗೆ ಬಂದ ಭಟ್ಕಳದ ಕುಮಾರ ನಾಯ್ಕ, ಶ್ರೀಕಾಂತ ನಾಯ್ಕ ಹಾಗೂ ಇತರರು ಯುವತಿಯ ಕುರಿತು ಪ್ರಶ್ನಿಸಿ, ತನ್ನನ್ನು ಕಾರಿನಿಂದ ಕೆಳಗಿಳಿಸಿ ಹಲ್ಲೆ ನಡೆಸಿ ಪ್ರಾಣ ಬೆದರಿಕೆ ಹಾಕಿದ್ದಾರೆ ಎಂದು ಆರೋಪಿಸಿದ್ದಾನೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಕೋಲಾರ ಕಾಂಗ್ರೆಸ್‌ಗೆ ಹೊಸ ಸಾರಥಿ: ಬಣ ರಾಜಕೀಯಕ್ಕೆ ಬೀಳುವುದೇ ತೆರೆ?

ಕೋಲಾರದ ನೂತನ ಕಾಂಗ್ರೆಸ್ ಜಿಲ್ಲಾಧ್ಯಕ್ಷರಾಗಿ ಮ್ಯಾಕಲ ನಾರಾಯಣಸ್ವಾಮಿ ಆಯ್ಕೆಯಾಗಿರುವುದು ಕಾಂಗ್ರೆಸ್ ಪಕ್ಷಕ್ಕೆ ಒಂದು ಪ್ರಮುಖ ಘಟ್ಟವಾಗಿದೆ. ಸಾರ್ವಜನಿಕ ವಲಯದಲ್ಲಿ 'ರಮೇಶ್ ಕುಮಾರ್ ಬಣ'ದ ಬೆಂಬಲದೊಂದಿಗೆ ಬಂದಿದ್ದಾರೆಂಬ ಚರ್ಚೆಗಳಿದ್ದರೂ, ಎಲ್ಲರನ್ನೂ ಒಗ್ಗೂಡಿಸಿ ಬೂತ್...

ವ್ಯವಸ್ಥೆ V/S ವಿದ್ಯಾರ್ಥಿ: ಇಂದೋರ್‌ನಲ್ಲಿ ರಾಹುಲ್ ಕಟ್ಟಿದ ಹೊಸ...

“ಅಂಧಭಕ್ತ ಯಾರು? ಅಂಧಭಕ್ತ- ವಿದ್ಯಾರ್ಥಿ ವಿರೋಧಿ. ವಿದ್ಯಾರ್ಥಿ ಎಲ್ಲಿ ಪ್ರಶ್ನೆ ಕೇಳುತ್ತಾನೋ, ವಿದ್ಯಾರ್ಥಿ ಎಲ್ಲಿ ಕುತೂಹಲದಿಂದ ಇರುತ್ತಾನೋ, ಅಲ್ಲಿ ಅಂಧಭಕ್ತ ಭ್ರಮೆಯಲ್ಲಿ, ತನ್ನದೇ ಲೋಕದಲ್ಲಿ ವಾಸಿಸುತ್ತಾನೆ. ವಿದ್ಯಾರ್ಥಿ ಎಲ್ಲಿ ಪ್ರೀತಿಯಿಂದ ಮಾತನಾಡುತ್ತಾನೋ, ಗೌರವದಿಂದ...

ಕರಾವಳಿ ಕಾಂಗ್ರೆಸ್‌ಗೆ ಬೂಸ್ಟ್ ನೀಡಿದ ಸಚಿವ ಸಂಪುಟ ಸಭೆ:...

ಕೇವಲ ಯೋಜನೆಗಳ ಘೋಷಣೆಯಾದರೆ ಸಾಲದು; ಅನುದಾನ ಬಿಡುಗಡೆಯಾಗಬೇಕು, ಟೆಂಡರ್ ಪ್ರಕ್ರಿಯೆ ಮುಗಿದು ಕಾಮಗಾರಿಗಳು ನೆಲಮಟ್ಟದಲ್ಲಿ ಆರಂಭವಾಗಬೇಕು. ಕೆಲಸ ವಿಳಂಬವಾದರೆ ಜನರಲ್ಲಿ ನಿರಾಸೆ ಮೂಡುವುದು ಖಂಡಿತ. ಈ ರಾಜಕೀಯ ಲಾಭವು ಚುನಾವಣೆಯಲ್ಲಿ ಮತಗಳಾಗಿ ಬದಲಾಗಬೇಕಾದರೆ,...

ಈ ದೂರಿನ ಮೇರೆಗೆ ಭಟ್ಕಳ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಇದೇ ಘಟನೆಗೆ ಸಂಬಂಧಿಸಿದಂತೆ ಕಾರಿನಲ್ಲಿದ್ದ ಯುವತಿಯು ಶಾಹೀದ್ ಖಾನ್ ವಿರುದ್ಧ ಪ್ರತಿದೂರು ದಾಖಲಿಸಿದ್ದಾಳೆ. ತನಗೆ ಮಾತನಾಡಬೇಕಿದೆ ಎಂದು ಹೇಳಿ ಒತ್ತಾಯಪೂರ್ವಕವಾಗಿ ಕಾರಿನಲ್ಲಿ ಕರೆದುಕೊಂಡು ಹೋಗಿದ್ದಲ್ಲದೆ, ತನ್ನೊಂದಿಗೆ ದುರ್ವರ್ತನೆ ನಡೆಸುವ ಉದ್ದೇಶದಿಂದ ಮಾರುಕೇರಿ ಕಡೆಗೆ ಕರೆದೊಯ್ಯುತ್ತಿದ್ದನು ಎಂದು ಯುವತಿ ದೂರಿನಲ್ಲಿ ಆರೋಪಿಸಿದ್ದಾಳೆ.

ಈ ಸುದ್ದಿ ಓದಿದ್ದೀರಾ? ಉತ್ತರ ಕನ್ನಡ | ಮತದಾರರ ಪಟ್ಟಿ ಪರಿಷ್ಕರಣೆ ಯಶಸ್ಸಿಗೆ ರಾಜಕೀಯ ಪಕ್ಷಗಳ ಸಹಕಾರ ಅಗತ್ಯ: ಜಿಲ್ಲಾಧಿಕಾರಿ ಲಕ್ಷ್ಮೀಪ್ರಿಯಾ

ಈ ದೂರಿನ ಹಿನ್ನೆಲೆಯಲ್ಲಿ ಗ್ರಾಮೀಣ ಪೊಲೀಸರು ಶಾಹೀದ್ ಖಾನ್‌ನನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, ನ್ಯಾಯಾಲಯವು ಆತನಿಗೆ ನ್ಯಾಯಾಂಗ ಬಂಧನ ವಿಧಿಸಿದೆ. ಮತ್ತೊಂದೆಡೆ, ಹಿಂದೂ ಸಂಘಟನೆಯ ಕಾರ್ಯಕರ್ತರ ವಿರುದ್ಧ ಪ್ರಕರಣ ದಾಖಲಿಸಿರುವುದನ್ನು ವಿರೋಧಿಸಿ ಅಂದು ರಾತ್ರಿ ಭಟ್ಕಳ ಶಹರ ಪೊಲೀಸ್ ಠಾಣೆ ಎದುರು ಜಮಾಯಿಸಿದ್ದ ಗುಂಪಿನಲ್ಲಿದ್ದ ಹನುಮಾನನಗರದ ಗೋವಿಂದ ಜಟ್ಟಪ್ಪ ನಾಯ್ಕ ಎಂಬಾತ ಗಲಾಟೆ ಸೃಷ್ಟಿಸಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.

ಪೊಲೀಸ್ ದೂರಿನ ಪ್ರಕಾರ, ಆತ ಭಟ್ಕಳದಂತಹ ಸೂಕ್ಷ್ಮ ಪ್ರದೇಶದಲ್ಲಿ ಸೌಹಾರ್ದತೆಗೆ ಧಕ್ಕೆ ಉಂಟುಮಾಡುವ ರೀತಿಯಲ್ಲಿ ಮತ್ತೊಂದು ಸಮುದಾಯದ ವಿರುದ್ಧ ಅವಹೇಳನಕಾರಿ ಹೇಳಿಕೆಗಳನ್ನು ನೀಡಿದ್ದಲ್ಲದೆ, ಕರ್ತವ್ಯ ನಿರ್ವಹಿಸುತ್ತಿದ್ದ ಭಟ್ಕಳ ಗ್ರಾಮೀಣ ಠಾಣೆಯ ಪೊಲೀಸ್ ನಿರೀಕ್ಷಕರಿಗೆ ಅವಾಚ್ಯ ಶಬ್ದಗಳಿಂದ ನಿಂದಿಸಿ ಕರ್ತವ್ಯಕ್ಕೆ ಅಡ್ಡಿಪಡಿಸಿದ್ದಾನೆ ಎಂದು ಆರೋಪಿಸಲಾಗಿದೆ. ಈ ಸಂಬಂಧ ಪೊಲೀಸ್ ನಿರೀಕ್ಷಕರು ನೀಡಿದ ದೂರಿನ ಮೇರೆಗೆ ಭಟ್ಕಳ ಶಹರ ಪೊಲೀಸ್ ಠಾಣೆಯಲ್ಲಿ ಮತ್ತೊಂದು ಪ್ರಕರಣ ದಾಖಲಾಗಿದೆ.

ಪ್ರಸ್ತುತ ಮೂರು ಪ್ರಕರಣಗಳ ತನಿಖೆ ಪ್ರಗತಿಯಲ್ಲಿದ್ದು, ಭಟ್ಕಳದಲ್ಲಿ ಶಾಂತಿಯುತ ವಾತಾವರಣ ನೆಲೆಸಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಸಾರ್ವಜನಿಕರು ಯಾವುದೇ ಸುಳ್ಳು ವದಂತಿಗಳಿಗೆ ಕಿವಿಗೊಡಬಾರದು ಎಂದು ಮನವಿ ಮಾಡಿರುವ ಜಿಲ್ಲಾ ಪೊಲೀಸ್ ಇಲಾಖೆ, ಸಾಮಾಜಿಕ ಜಾಲತಾಣಗಳ ಮೇಲೆ ತೀವ್ರ ನಿಗಾ ಇರಿಸಲಾಗಿದ್ದು, ಕಾನೂನು ಸುವ್ಯವಸ್ಥೆಗೆ ಧಕ್ಕೆ ತರುವ ಪ್ರಚೋದನಕಾರಿ ಅಥವಾ ಸುಳ್ಳು ಮಾಹಿತಿಯನ್ನು ಹರಡುವವರ ವಿರುದ್ಧ ಕಟ್ಟುನಿಟ್ಟಿನ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಸಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ಮೇಯಲು ಬಿಟ್ಟ ದನ ಟೆಂಪೋದಲ್ಲಿ ಪತ್ತೆ; 24 ಗಂಟೆಯೊಳಗೆ ನಾಲ್ವರು ಪೊಲೀಸ್ ಬಲೆಗೆ!

ಮೇಯಲು ಬಿಟ್ಟಿದ್ದ ದನವನ್ನು ಅಕ್ರಮವಾಗಿ ಟೆಂಪೋದಲ್ಲಿ ಸಾಗಿಸುತ್ತಿದ್ದರೆಂದು ಆರೋಪಿಸಿ ದಾಖಲಾಗಿದ್ದ ಪ್ರಕರಣಕ್ಕೆ...

ಕಸ್ತೂರಿರಂಗನ್ ವರದಿ ವಿರುದ್ಧ ಆಕ್ರೋಶ: ಶೃಂಗೇರಿ ಬಂದ್‌ಗೆ ರೈತ ಸಂಘಟನೆಗಳ ಬೆಂಬಲ

ಚಿಕ್ಕಮಗಳೂರು ಜಿಲ್ಲೆಯ ಶೃಂಗೇರಿ ಪಟ್ಟಣದಲ್ಲಿ ಕಸ್ತೂರಿರಂಗನ್ ವರದಿಯ ಅನುಷ್ಠಾನವನ್ನು ವಿರೋಧಿಸಿ ಇಂದು...

ಚಿಕ್ಕಮಗಳೂರು | ಕುಕ್ಕೂಡಿಗೆ ರವೀಂದ್ರ: ಇಒ ಅಧಿಕಾರಿಗೆ ಹಲ್ಲೆ, ಜೀವ ಬೆದರಿಕೆ; ಪ್ರಕರಣ ದಾಖಲು 

ಚಿಕ್ಕಮಗಳೂರು ಜಿಲ್ಲೆ ಬಾಳೆಹೊನ್ನೂರ್ ವ್ಯಾಪ್ತಿಯ ಹೇರೂರು ಬಳಿ ದಿ.19 ರಂದು ಮಾನ್ಯ...

ಕಾಂಗ್ರೆಸ್‌ಗೆ ಸವನಳ್ಳಿ, ಗೊಣಸಗಿ ಗ್ರಾಮದ ಮುಖಂಡರ ಸೇರ್ಪಡೆ; ಗ್ರಾಮಗಳ ಅಭಿವೃದ್ಧಿಗೆ ಎಂ.ಬಿ ಪಾಟೀಲ ಕರೆ

ಹೊಸ ಹಾಗೂ ಹಿರಿಯ ಕಾರ್ಯಕರ್ತರು, ಮುಖಂಡರು ಒಗ್ಗಟ್ಟಾಗಿ ಗ್ರಾಮಗಳ ಅಭಿವೃದ್ಧಿಗೆ ಶ್ರಮಿಸಬೇಕು...