ಮುರುಡೇಶ್ವರ ಸಮೀಪದ ನೇತ್ರಾಣಿ ದ್ವೀಪದ ಬಳಿ ‘ಮಹಾ ಮುರುಡೇಶ್ವರ’ ಎಂಬ ಹೆಸರಿನ ಪರ್ಷಿಯನ್ ಬೋಟ್ ಮುಳುಗಡೆಯಾಗಿದ್ದು, ಅದೃಷ್ಟವಶಾತ್ ಬೋಟ್‌ನಲ್ಲಿದ್ದ 25 ಮೀನುಗಾರರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಈ ದುರಂತದಲ್ಲಿ ಅಂದಾಜು 80 ಲಕ್ಷಕ್ಕೂ ಹೆಚ್ಚು ನಷ್ಟ ಸಂಭವಿಸಿದೆಯೆಂದು ಅಂದಾಜಿಸಲಾಗಿದೆ. ಈ ಬೋಟ್ ಭಟ್ಕಳದ ಕಾಯ್ಕಿಣಿ ಮೂಲದವರೊಬ್ಬರ ಮಾಲೀಕತ್ವಕ್ಕೆ ಸೇರಿದ್ದಾಗಿದೆ ಎಂದು ತಿಳಿದುಬಂದಿದೆ.
ಬೋಟ್ ಮುಳುಗುತ್ತಿದ್ದ ಸಂದರ್ಭದಲ್ಲಿ ತಕ್ಷಣವೇ ಕರಾವಳಿ ಕಾವಲುಪಡೆಯ ಕಂಟ್ರೋಲ್ ರೂಮ್‌ಗೆ ಕರೆ ಮಾಡಲಾಗಿದೆ. ಮಾಹಿತಿ ತಿಳಿದ ತಕ್ಷಣ ಸ್ಥಳೀಯವಾಗಿ ಮೀನುಗಾರಿಕೆಗೆ ತೆರಳಿದ್ದ ‘ವೆಲ್ಲನ್ಕಿಣಿ’ ಮತ್ತು ‘ಮಚ್ಚೆದುರ್ಗ’ ಎಂಬ ಎರಡು ಬೋಟ್‌ಗಳು ಘಟನಾ ಸ್ಥಳಕ್ಕೆ ಧಾವಿಸಿ, ಮುಳುಗುತ್ತಿದ್ದ ಬೋಟ್‌ನಲ್ಲಿದ್ದ ಎಲ್ಲ 25 ಮಂದಿ ಮೀನುಗಾರರನ್ನು ರಕ್ಷಣೆ ಮಾಡಿವೆ.
ಈ ಸುದ್ದಿ ಓದಿದ್ದೀರಾ? ಬೀದರ್ | ʼಕೈಗೆ ಬಂದ ತುತ್ತುʼ ಕಸಿದ ಅತಿವೃಷ್ಟಿ : ಬೆಳೆ ಪರಿಹಾರದ ನಿರೀಕ್ಷೆಯಲ್ಲಿ ರೈತರು!
ಈ ಘಟನೆಯಿಂದ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ. ಸಮಯೋಚಿತ ಸಹಾಯ ಮತ್ತು ರಕ್ಷಣಾ ಕಾರ್ಯದಿಂದಾಗಿ ದೊಡ್ಡ ದುರಂತ ತಪ್ಪಿದಂತಾಗಿದೆ. ಆದರೆ, ಬೋಟ್ ಮುಳುಗಡೆಯಿಂದ ಬೋಟ್ ಮಾಲೀಕನಿಗೆ ಹಾಗೂ ಮಿನುಗಾರರಿಗೆ ಭಾರೀ ಆರ್ಥಿಕ ನಷ್ಟ ಉಂಟಾಗಿದ್ದು, ಕುಟುಂಬಸ್ಥರು ಆತಂಕದಲ್ಲಿದ್ದಾರೆ.