ಭಟ್ಕಳ | ಮಗಳ ಅಶ್ಲೀಲ ವಿಡಿಯೊ ವೈರಲ್ ಮಾಡುವುದಾಗಿ ಬೆದರಿಕೆ: ಮೂವರ ಬಂಧನ

Date:

ಉತ್ತರ ಕನ್ನಡ ಜಿಲ್ಲೆಯ ಭಟ್ಕಳ ನಗರದ ಕಿದ್ವಾಯಿ ರಸ್ತೆಯೊಂದರ ತರಕಾರಿ ವ್ಯಾಪಾರಿಯನ್ನು ಬೆದರಿಸಿ ₹20 ಲಕ್ಷ ರೂಪಾಯಿ ಸುಲಿಗೆ ಮಾಡಲು ಯತ್ನಿಸಿದ ಮೂವರು ಯುವಕರನ್ನು ಭಟ್ಕಳ ನಗರ ಪೊಲೀಸರು ಪತ್ತೆ ಹಚ್ಚಿ ಬಂಧಿಸಿದ್ದಾರೆ.

- Advertisement -

ಆಗಸ್ಟ್ 16ರ ರಾತ್ರಿ ವ್ಯಾಪಾರಿಯೊಬ್ಬರು ತಮ್ಮ ಅಂಗಡಿಯಲ್ಲಿ ಇದ್ದಾಗ ಅಪರಿಚಿತರಿಂದ ಫೋನ್‌ ಕರೆ ಬಂದಿದ್ದು, “ನಿನ್ನ ಮಗಳ ಖಾಸಗಿ ಚಿತ್ರ–ವಿಡಿಯೊ ನಮ್ಮ ಬಳಿ ಇದೆ. ತಕ್ಷಣ ₹20 ಲಕ್ಷ ಕೊಡಬೇಕು. ಇಲ್ಲವಾದರೆ ವಿಡಿಯೊ ವೈರಲ್ ಮಾಡಿ ನಿನ್ನ ಮಾನ ಮರ್ಯಾದೆ ಹಾಳು ಮಾಡುತ್ತೇವೆಂದು ಆರೋಪಿಗಳು ಬೆದರಿಕೆ ಹಾಕಿದ್ದಾರೆ. ಬಳಿಕ ಆಗಸ್ಟ್ 18 ಮತ್ತು 19ರಂದು ವ್ಯಾಪಾರಿ ಪತ್ನಿಯ ಮೊಬೈಲ್‌ಗೆ ಕರೆ ಮಾಡಿ, ₹20 ಲಕ್ಷ ಸಾಧ್ಯವಿಲ್ಲದಿದ್ದರೂ ಕನಿಷ್ಠ ₹15 ಲಕ್ಷ ಕೊಡಲೇಬೇಕು” ಎಂದು ಒತ್ತಾಯ ಮಾಡಿ ತಂದೆ ತಾಯಿಗೆ ಮಾನಸಿಕ ಹಿಂಸೆ ನೀಡಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬೆಟ್ಟದಷ್ಟಾದ ಅತ್ಯಾಚಾರ ಪ್ರಕರಣಗಳು – ತೆವಳುತ್ತಿರುವ ನ್ಯಾಯದಾನ

ಪೊಲೀಸರೆಂದು ನಟಿಸಿ ಬೆದರಿಸುವುದು, ನಿರ್ಜನ ಪ್ರದೇಶಗಳಲ್ಲಿ ತೋಳಗಳಂತೆ ಕಾದು ಹಲ್ಲೆಗೈದು ಸಾಮೂಹಿಕ ಅತ್ಯಾಚಾರ ನಡೆಸಿ ಕೊಂದೆಸೆಯುವುದು, ಕಿಂಚಿತ್ತೂ ಭಯವಿಲ್ಲದೆ ಕೃತ್ಯದ ವಿಡಿಯೋ ತುಣುಕುಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಡುವುದಲ್ಲದೆ, ಸಂತ್ರಸ್ತರ ಗುರುತು ಬಹಿರಂಗಪಡಿಸುವ ಪ್ರವೃತ್ತಿ...

ಶಾಮನೂರು ಫ್ಯಾಮಿಲಿಗೆ ಸಚಿವ ಬಸವಂತಪ್ಪ ಕೈ ಮುಗಿಯುವ ಅಗತ್ಯವಿದೆಯೇ?

ಬಸವಂತಪ್ಪನವರನ್ನು ಗೆಲ್ಲಿಸಿದ್ದು, ಕಾಂಗ್ರೆಸ್ಸಿನ ಸಾಂಪ್ರದಾಯಿಕ ಮತದಾರರು. ಶಾಮನೂರು ಕುಟುಂಬದ ಸುತ್ತ ಕಟ್ಟಿರುವ ಕಲ್ಪಿತ ಬಲವನ್ನು ಮೀರಿ, ಬಸವಂತಪ್ಪ ಬೆಳೆಯಬೇಕು ಎಂಬುದು ಕ್ಷೇತ್ರದ ಮತದಾರರ ಅಭಿಪ್ರಾಯ. ಪೌರಕಾರ್ಮಿಕರ ಮಗನಾಗಿ ಹುಟ್ಟಿ, ಸಚಿವ ಸ್ಥಾನದವರೆಗೆ ಬೆಳೆದವರು ಕೆ.ಎಸ್....

ಪಾಕ್‌ಗೆ ತಕ್ಕ ಉತ್ತರ ನೀಡಿದ್ದಾಗಿ ಎದೆ ತಟ್ಟಿಕೊಳ್ಳುವ ಮೋದೀಜಿ,...

ಬಾಲಾಕೋಟ್‌ನಿಂದ ಇತ್ತೀಚಿನ 'ಆಪರೇಷನ್ ಸಿಂಧೂರ್'ವರೆಗೆ ಪಾಕಿಸ್ತಾನಕ್ಕೆ ತಕ್ಕ ಉತ್ತರ ನೀಡಿದ್ದಾಗಿ ಪ್ರಧಾನಿ ಮೋದಿ ನೇತೃತ್ವದ ಬಿಜೆಪಿ ಸರ್ಕಾರ ಎದೆ ತಟ್ಟಿಕೊಳ್ಳುತ್ತಿದೆ. ಶತೃ ದೇಶವನ್ನು ಮಣಿಸುವುದು ಯಾರಿಗಾದರೂ ಹೆಮ್ಮೆಯೇ. ಆದರೆ, ದೇಶದ ಅಖಂಡತೆಗೆ ಅತಿ...

ಇದರಿಂದ ಬೇಸತ್ತು ಯುವತಿಯ ಪೋಷಕರು ಭಟ್ಕಳ ಪೋಲಿಸರಿಗೆ ದೂರನ್ನು ನೀಡಿದ್ದು, ದೂರು ಸ್ವೀಕರಿಸಿದ ಪೊಲೀಸರು ಇನ್ಸ್‌ಪೆಕ್ಟರ್ ದಿವಾಕರ ಹಾಗೂ ಪಿಎಸ್‌ಐ ನವೀನ್ ನಾಯ್ಕ ಅವರ ನೇತೃತ್ವದಲ್ಲಿ ವಿಶೇಷ ತಂಡ ರಚಿಸಿ, ಆರೋಪಿಗಳಾದ ಮೊಹಮ್ಮದ್ ಫಾರಿಸ್, ಮೊಹಮ್ಮದ್ ಅರ್ಶದ್ ಮತ್ತು ವಿದ್ಯಾರ್ಥಿ ಅಮನ್ ಎಂಬುವವರನ್ನು ಪತ್ತೆಹಚ್ಚಿ ಬಂಧಿಸಿದರು. ಬಳಿಕ ಅವರನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.

ಈ ಸುದ್ದಿ ಓದಿದ್ದೀರಾ? ಮಂಗಳೂರು | ಸ್ನಾತಕೋತ್ತರದತ್ತ ಮುಖಮಾಡದ ಪದವೀಧರರು: ಪ್ರವೇಶಾತಿ ಗಡುವು ವಿಸ್ತರಣೆ

ಆಪರೇಷನ್ ಯಶಸ್ವಿಯಾಗಲು ಮಹೇಶ್ ಎಂ ಕೆ ಅವರ ಮಾರ್ಗದರ್ಶನ ದೊರೆತಿದ್ದು, ಠಾಣೆಯ ಸಿಬ್ಬಂದಿ ದಿನೇಶ್ ನಾಯಕ, ವಿನಾಯಕ ಪಾಟೀಲ್, ನಾಗರಾಜ ಮೊಗೇರ, ಮಹಾಂತೇಶ ಹಿರೇಮಠ, ಕಾಶಿನಾಥ ಕೊಟಗುಣಸಿ, ಲೊಕೇಶ ಕತ್ತಿ, ಮಹೇಶ್ ಅಮಗೋತ, ರಾಘವೇಂದ್ರ ಗೌಡ, ಜಗದೀಶ ನಾಯಕ ಹಾಗೂ ಜಿಲ್ಲಾ ತಾಂತ್ರಿಕ ವಿಭಾಗದ ಬಬನ್ ಮತ್ತು ಉದಯ ಎಂಬುವವರು ಸಕ್ರಿಯವಾಗಿ ಪಾಲ್ಗೊಂಡಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ವಿದ್ಯಾರ್ಥಿಗಳೊಂದಿಗೆ ನೇರ ಸಂವಾದ ನಡೆಸಿ ಸಮಸ್ಯೆಗಳ ಕುರಿತು ಮಾಹಿತಿ ಪಡೆದ ಸಚಿವರು

ಸಮಾಜ ಕಲ್ಯಾಣ ಇಲಾಖೆ ಸಚಿವ ಕೆ.ಎಚ್. ಮುನಿಯಪ್ಪ ಅವರು ಬೇತಮಂಗಲದಲ್ಲಿರುವ ಸಮಾಜ...

ವಿಜಯಪುರ | ಅರ್ಹ ಮತದಾರರ ಹಕ್ಕು ಕಸಿಯಲು ಬಿಡುವುದಿಲ್ಲ: ಎಂ ಬಿ ಪಾಟೀಲ

ವಿಶೇಷ ಮತದಾರರ ಪಟ್ಟಿ ಪರಿಷ್ಕರಣೆ (SIR) ಸಂದರ್ಭದಲ್ಲಿ ಬಬಲೇಶ್ವರ ವಿಧಾನಸಭಾ ಕ್ಷೇತ್ರ...

ಮೈಸೂರು | ಅ.13ರಂದು ಯುವ ದಸರಾ ಉದ್ಘಾಟಿಸಲಿರುವ ನಟ ಪ್ರಭುದೇವ್‌

2026ರ ಯುವ ದಸರಾ ಕಾರ್ಯಕ್ರಮವನ್ನು ಅಕ್ಟೋಬರ್ 13ರಂದು ಖ್ಯಾತ ನೃತ್ಯ ನಿರ್ದೇಶಕ...

ಯಾದಗಿರಿ–ಶಹಾಪುರ ಬೈಪಾಸ್‌ ರೈಲ್ವೆ ಮೇಲ್ಸೇತುವೆ, ಭೀಮಾ ನದಿ ಬ್ರಿಡ್ಜ್ ದುರಸ್ತಿಗೆ ಉಮೇಶ ಕೆ. ಮುದ್ನಾಳ ಆಗ್ರಹ

ಯಾದಗಿರಿ ನಗರದ ಗುರುಶಿಣಗಿ ಮೂಲಕ ಶಹಾಪುರಕ್ಕೆ ಸಂಪರ್ಕ ಕಲ್ಪಿಸುವ ಯಾದಗಿರಿ–ಶಹಾಪುರ ಬೈಪಾಸ್...