ಕಲಬುರಗಿ| ಗುತ್ತಿಗೆ ಕಾರ್ಮಿಕರಿಗೆ ಸೇವಾ ಭದ್ರತೆ ನೀಡಲು ಭೀಮ್ ಆರ್ಮಿ ಆಗ್ರಹ

Date:

ಕಲಬುರಗಿ ಜಿಲ್ಲೆಯ ಸೇಡಂ ತಾಲ್ಲೂಕಿನ ಮಳಖೇಡ ಗ್ರಾಮದಲ್ಲಿರುವ ಅಲ್ಟ್ರಾಟೆಕ್ (ರಾಜಶ್ರೀ) ಸಿಮೆಂಟ್ ಕಾರ್ಖಾನೆಯಲ್ಲಿ ಹೊರಗುತ್ತಿಗೆ ಆಧಾರದ ಮೇಲೆ ಕಾರ್ಯನಿರ್ವಹಿಸುತ್ತಿರುವ ಕಾರ್ಮಿಕರಿಗೆ ಪಿಎಫ್‌, ಇಎಸ್ಐ ಸೇರಿದಂತೆ ಇತರ ಸೌಲಭ್ಯಗಳು ಒದಗಿಸಬೇಕೆಂದು ಆಗ್ರಹಿಸಿ ಭೀಮ್ ಆರ್ಮಿ ಜಿಲ್ಲಾ ಸಮಿತಿ ಪದಾಧಿಕಾರಿಗಳು ಪ್ರತಿಭಟನೆ ನಡೆಸಿ ಮನವಿ ಪತ್ರ ಸಲ್ಲಿಸಿದರು.

- Advertisement -

ಭೀಮ್‌ ಆರ್ಮಿ ಸಂಘಟನೆ ಜಿಲ್ಲಾಧ್ಯಕ್ಷ ಸೂರ್ಯಕಾಂತ ಜಿಡಗಾ ಮಾತಾನಾಡಿ, “ಸೇಡಂ ತಾಲ್ಲೂಕಿನ ಮಳಖೇಡ ಗ್ರಾಮದಲ್ಲಿರುವ ಅಲ್ಟ್ರಾಟೆಕ್ ಸಿಮೆಂಟ್ ಕಾರ್ಖಾನೆಯಲ್ಲಿ ಮಹಾವೀರ ಮತ್ತು ಅರ್ಜುನ ಏಜೆನ್ಸಿ ಅಡಿಯಲ್ಲಿ ಕಳೆದ ಒಂದೂವರೆ ದಶಕದಿಂದ 200ಕ್ಕೂ ಅಧಿಕ ಅಸಂಘಟಿತ ಕಾರ್ಮಿಕರು ಲೋಡಿಂಗ್ ವಿಭಾಗದಲ್ಲಿ ಕೆಲಸ ನಿರ್ವಹಿಸುತ್ತಿದ್ದು, ಇವರಿಗೆ ಯಾವುದೇ ಮೂಲ ಸೌಕರ್ಯ, ಸುರಕ್ಷಿತ ಕವಚಗಳು ನೀಡದೆ ಏಜೆನ್ಸಿ ಹಾಗೂ ಕಂಪನಿಯವರು ಯಂತ್ರದಂತೆ ದುಡಿಸಿಕೊಳ್ಳುತ್ತಿದ್ದಾರೆʼ ಎಂದು ದೂರಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

SIR ವಿರೋಧಿ ಹೋರಾಟ: ಡಿಕೆಶಿ–ಮಮತಾ ತೋರಿದ ದಾರಿ ವಿಪಕ್ಷಗಳಿಗೆ...

ಭಾರತದ ಪ್ರಜಾಪ್ರಭುತ್ವದ ಅಡಿಪಾಯವೇ ನ್ಯಾಯಯುತ, ಸ್ವತಂತ್ರ ಹಾಗೂ ಪಾರದರ್ಶಕ ಚುನಾವಣೆ. ಆದರೆ, ಅಧಿಕಾರದ ಗದ್ದುಗೆ ಏರಿರುವ ಮೋದಿ-ಶಾ ಜೋಡಿ, ಈ ಅಡಿಪಾಯವನ್ನೇ (ಚುನಾವಣಾ ಆಯೋಗವನ್ನೇ) ತಮ್ಮ ಸೂತ್ರದ ಬೊಂಬೆ ಮಾಡಿಕೊಂಡಿದೆ. ಎಸ್‌ಐಆರ್‌ ಹೆಸರಿನಲ್ಲಿ...

ಪೊಲೀಸ್ ಇಲಾಖೆ ಸುಧಾರಣೆಗೆ 3 ಸಮಿತಿ; ಬದಲಾವಣೆ ಅಗತ್ಯವೇ?...

ಪೊಲೀಸ್‌ ಇಲಾಖೆಯ ಕಾರ್ಯವೈಖರಿಯಲ್ಲಿ ಸುಧಾರಣೆ, ಡಿಜಿಟಲ್‌ ಟಚ್‌ ಹಾಗೂ ನೇಮಕಾತಿ ವ್ಯವಸ್ಥೆಯ ಪುನರ್‌ರಚನೆಗೆ ರಾಜ್ಯ ಸರ್ಕಾರ ಉನ್ನತ ಮಟ್ಟದ 3 ತಜ್ಞರ ಸಮಿತಿಗಳನ್ನು ರಚಿಸಿದೆ. ಆದರೆ, ಪೊಲೀಸ್‌ ಠಾಣೆಗಳಲ್ಲಿ ಸಾರ್ವಜನಿಕರು ಎದುರಿಸುವ ಸಮಸ್ಯೆಗಳಿಂದ...

ಪಾಕಿಸ್ತಾನದಲ್ಲಿ ಅಹಿಂಸಾ ಮೂರ್ತಿಯ ‘ರಹಸ್ಯರಕ್ಷಣೆ’: ಕರಾಚಿಯಿಂದ ಇಸ್ಲಾಮಾಬಾದ್‌ಗೆ ಗಾಂಧಿ...

ಪಾಕಿಸ್ತಾನದ ಇಸ್ಲಾಮಾಬಾದ್‌ನಲ್ಲಿರುವ ಭಾರತೀಯ ಹೈಕಮಿಷನ್ ಕಚೇರಿಯ ಪ್ರವೇಶ ದ್ವಾರದಲ್ಲಿ ಮಹಾತ್ಮ ಗಾಂಧೀಜಿಯವರ ಭವ್ಯ ಕಂಚಿನ ಪ್ರತಿಮೆ ಇಂದಿಗೂ ಗಾಂಭೀರ್ಯದಿಂದ ನಿಂತಿದೆ. ಕೈಯಲ್ಲಿ ಊರುಗೋಲು ಹಿಡಿದು ದೂರದ ದಿಗಂತವನ್ನು ದಿಟ್ಟಿಸುವಂತಿರುವ ಈ ಬಾಪೂ ಪ್ರತಿಮೆಯು...

ʼಹಲವು ವರ್ಷಗಳಿಂದ ದುಡಿಯುತ್ತಿರುವ ಕಾರ್ಮಿಕರಿಗೆ ಸೇವಾ ಭದ್ರತೆ ನೀಡದೆ ಅಧಿಕ ಅವಧಿಗೆ ದುಡಿಸಿಕೊಳ್ಳುತ್ತಿದ್ದಾರೆ. ಕಾರ್ಮಿಕರು ವೇತನ ಹೆಚ್ಚಿಸುವಂತೆ ಮನವಿ ಸಲ್ಲಿಸಿದರೆ, ವೇತನ ಹೆಚ್ಚಿಸುವುದಿಲ್ಲ ಎಂದು ಹೇಳುತ್ತಾರೆ. ಇದರಿಂದ ಕಡಿಮೆ ಸಂಬಳದಲ್ಲಿ ಬದುಕು ನಡೆಸಲು ತೊಂದರೆಯಾಗುತ್ತಿದೆ ಎಂದು ಕಾರ್ಮಿಕರು ಅಳಲು ತೋಡಿಕೊಳ್ಳುತ್ತಿದ್ದಾರೆ. ಕೂಡಲೇ ಕಾರ್ಮಿಕರಿಗೆ ಸೇವಾ ಭದ್ರತೆ ಸೇರಿದಂತೆ ಅಗತ್ಯ ಸೌಲಭ್ಯ ಒದಗಿಸಲು ಕ್ರಮಕೈಗೊಳ್ಳಬೇಕುʼ ಎಂದು ಆಗ್ರಹಿಸಿದರು.

ಗುತ್ತಿಗೆ ಕಾರ್ಮಿಕರಿಗೆ ಆರೋಗ್ಯ ವಿಮೆ, ಅಪಘಾತ ಸಂದರ್ಭದಲ್ಲಿ ಆಸ್ಪತ್ರೆಯ ಪೂರ್ಣ ವೆಚ್ಚ ಪಾವತಿಸುವ ಕ್ರಮ ಜರುಗಿಸಬೇಕು. ಪ್ರತಿ ತಿಂಗಳು ವೇತನ ಮತ್ತು ಹಾಜರಾತಿ ಚೀಟಿ ಕಾರ್ಮಿಕರಿಗೆ ನೀಡಬೇಕು. ಸೇವಾ ಭದ್ರತೆ ಸೇರಿದಂತೆ ಇತರ ಸೌಲಭ್ಯ ನೀಡಬೇಕೆಂದು ಹಕ್ಕೊತ್ತಾಯ ಸಲ್ಲಿಸಿದರು.

ಈ ಸುದ್ದಿ ಓದಿದ್ದೀರಾ? ಪ್ರಿಯಾಂಕ್‌ ಖರ್ಗೆ ಆಪ್ತನಿಂದ ಬೆದರಿಕೆ ಪ್ರಕರಣ; ಇಬ್ಬರು ಹೆಡ್ ಕಾನ್‌ಸ್ಟೆಬಲ್‌ಗಳ ಅಮಾನತು

ಈ ಸಂದರ್ಭದಲ್ಲಿ ಸಮಿತಿಯ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಸೋಮಶಖರ ಬಂಗರಗಿ, ತಾಲೂಕಾಧ್ಯಕ್ಷ ಶಂಕರ ವಾಡಿ ಸೇರಿದಂತೆ ಪ್ರಮುಖರಾದ ಸಂದೀಪ್ ದೊಡ್ಡಮನಿ, ಸುನೀಲ ಮಾನ್ಪಡೆ, ಹುಸೆನಪ್ಪ ರದ್ದೆವಾಡಿ, ಯಮನೇಶ ಅಂಕಲಗಿ, ರಾಮಶೇಟ್ಟಿ ಜಾಧವ ಮತ್ತಿತರರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ತುಳುನಾಡ ರಕ್ಷಣಾ ವೇದಿಕೆ ಮಹಿಳಾ ಘಟಕದಿಂದ ಅರ್ಥಪೂರ್ಣ ಗಾಂಧಿ ಜಯಂತಿ

ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರ ಜಯಂತಿಯ ಅಂಗವಾಗಿ ತುಳುನಾಡ ರಕ್ಷಣಾ ವೇದಿಕೆ (ರಿ.)...

ಉಡುಪಿ | ಸಮುದಾಯದ ಅಭಿವೃದ್ಧಿಗೆ ಉದ್ಯಮಿಗಳ ಒಗ್ಗಟ್ಟು ಅಗತ್ಯ: ಮುಮ್ತಾಜ್ ಮನ್ಸೂರಿ

ನಮ್ಮ ಸಮುದಾಯದ ದುರ್ಬಲ ವರ್ಗಗಳನ್ನು ಮೇಲಕ್ಕೆತ್ತಲು ಎಲ್ಲರೂ ಬೆಂಬಲ ಮತ್ತು ಸಹಕಾರದೊಂದಿಗೆ...

ರಾಯಚೂರು | ಎಸ್‌ಐಆರ್ ವಿರೋಧಿಸಿ ಪ್ರತಿಭಟನೆ: ಜ್ಞಾನೇಶ ಕುಮಾರ ರಾಜೀನಾಮೆಗೆ ನಾಗರಿಕ ವೇದಿಕೆ ಆಗ್ರಹ

ಕೇಂದ್ರ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ ಕುಮಾರ ಅವರ ರಾಜೀನಾಮೆಗೆ ಆಗ್ರಹಿಸಿ...