ಬಿಡದಿ ಟೌನ್‌ಶಿಪ್ | ಸರ್ವೆಗೆ ಬಂದ ಅಧಿಕಾರಿಗಳಿಗೆ ರೈತ ಮಹಿಳೆಯರಿಂದ ಪೊರಕೆ ಏಟು; ಕಾರಿಗೆ ಮುತ್ತಿಗೆ

Date:

ರಾಮನಗರ ಜಿಲ್ಲೆಯ ಬಿಡದಿ ಟೌನ್‌ಶಿಪ್‌ ಯೋಜನೆಗೆ ಸಂಬಂಧಿಸಿದಂತೆ ಜಮೀನು ಸರ್ವೇ ಕಾರ್ಯಕ್ಕೆ ಬಂದವರಿಗೂ ಸ್ಥಳೀಯ ರೈತರಿಗೂ ಗಲಾಟೆಯಾಗಿದೆ. ಸರ್ವೇ ಕಾರ್ಯವನ್ನು ತೀವ್ರ ವಿರೋಧ ವ್ಯಕ್ತಪಡಿಸಿ, ಸ್ಥಳೀಯ ರೈತ ಮಹಿಳೆಯರು ಅಧಿಕಾರಿಗಳ ಕಾರಿಗೆ ಮುತ್ತಿಗೆ ಹಾಕಿ ಪೊರಕೆಯಿಂದ ಹೊಡೆದು ಆಕ್ರೋಶ ಹೊರಹಾಕಿದ್ದಾರೆ. ಮಂಡಲಹಳ್ಳಿ ಗ್ರಾಮದಲ್ಲಿ ಈ ಘಟನೆ ನಡೆದಿದೆ. ಕೆಲವು ರೈತರಿಗೆ, ಪೊಲೀಸರಿಗೆ ಗಾಯಗಳಾಗಿವೆ.

- Advertisement -

ಬಿಡದಿ ಟೌನ್‌ಶಿಪ್‌ ಯೋಜನೆಗಾಗಿ ಜಿಬಿಡಿಎ ಅಧಿಕಾರಿಗಳು ಜಂಟಿ ಮಾಪನ (JMC) ಸರ್ವೇ ನಡೆಸಲು ಮಂಡಲಹಳ್ಳಿ ಗ್ರಾಮಕ್ಕೆ ಆಗಮಿಸಿದ್ದರು. ಜಮೀನು ಕಳೆದುಕೊಳ್ಳುವ ಭೀತಿಯಲ್ಲಿ ಈ ಯೋಜನೆಗೆ ಮೊದಲಿನಿಂದಲೂ ತೀವ್ರ ವಿರೋಧ ವ್ಯಕ್ತಪಡಿಸುತ್ತಿರುವ ರೈತರು ಸರ್ವೇಗೆ ಬಂದವರಿಗೆ ಪೊರಕೆ ಏಟು ನೀಡಿದ್ದಾರೆ. ರೈತರು, ಸ್ಥಳೀಯರು ಅಧಿಕಾರಿಗಳ ಕಾರಿಗೆ ಮುತ್ತಿಗೆ ಹಾಕಿದ್ದಾರೆ. ಸರ್ಕಾರಿ ಅಧಿಕಾರಿಗಳು ಸರ್ವೇ ಕಾರ್ಯವನ್ನು ಕೈಬಿಟ್ಟು ಸ್ಥಳದಿಂದ ಕಾಲ್ಕಿತ್ತಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬೋಟ್ ಕ್ಲಬ್‌ನಿಂದ ಜಂತರ್ ಮಂತರ್‌ವರೆಗೆ; ದೆಹಲಿಯ ಪ್ರತಿಭಟನಾ ತಾಣ...

ಸ್ವಾತಂತ್ರ್ಯಾನಂತರ ಹಲವು ದಶಕಗಳವರೆಗೆ ದೆಹಲಿಯ ಇಂಡಿಯಾ ಗೇಟ್ ಸಮೀಪದ ರಾಜಪಥದಲ್ಲಿರುವ ಬೋಟ್ ಕ್ಲಬ್ ಮೈದಾನವು ದೇಶದ ಪ್ರಮುಖ ರಾಜಕೀಯ ಪ್ರತಿಭಟನೆಗಳು, ರೈತ ಸಮಾವೇಶಗಳು ಮತ್ತು ಸಾರ್ವಜನಿಕ ಚಳವಳಿಗಳಿಗೆ ವೇದಿಕೆಯಾಗಿತ್ತು. ದೆಹಲಿಯ ಜಂತರ್ ಮಂತರ್ ಪ್ರತಿಭಟನಾ...

2026ರ ಅರ್ಥಶಾಸ್ತ್ರ ನೊಬೆಲ್ ಪ್ರಶಸ್ತಿಯ ಹಿಂದಿನ ತಿರುಳು

ಅಮೆರಿಕದ ಇಬ್ಬರು ವಿದ್ವಾಂಸರಾದ ರಾಬರ್ಟ್ ಇ. ಹಾಲ್ ಮತ್ತು ಮೈಕಲ್ ವುಡ್‌ಫೋರ್ಡ್ ರೂಪಿಸಿದ 'ನವ-ಕೇನ್ಸಿಯನ್ ಮಾದರಿ'ಗಳು ಇಂದು ಜಗತ್ತಿನ ಬಹುತೇಕ ಕೇಂದ್ರ ಬ್ಯಾಂಕುಗಳ ಮತ್ತು ಹಣಕಾಸು ಇಲಾಖೆಗಳ ದೈನಂದಿನ ದಿಕ್ಸೂಚಿಯಾಗಿವೆ. ಆ ಕಾರಣಕ್ಕೆ...

ಮಣಿಪುರ | ಜನಾಂಗೀಯ ಕಿಚ್ಚಿಗೆ ದ್ವೇಷ ರಾಜಕಾರಣದ ತುಪ್ಪ;...

ಮಣಿಪುರದಲ್ಲಿ ಕಳೆದ ಮೂರು ವರ್ಷಗಳಿಂದ ಮುಗಿಯದ ಜನಾಂಗೀಯ ರಕ್ತಪಾತಕ್ಕೆ, ಸಮುದಾಯಗಳ ನಡುವಿನ ಹಳೆಯ ವೈರತ್ವವನ್ನು ಮೀರಿ, ಸರ್ಕಾರದ ಪಕ್ಷಪಾತದ ರಾಜಕಾರಣ, ಆಡಳಿತಾತ್ಮಕ ವೈಫಲ್ಯ ಮತ್ತು ವಿಭಜನಾತ್ಮಕ ನೀತಿಗಳೂ ಕಾರಣವಾಗಿವೆ. ಉರಿಯುವ ಬೆಂಕಿಗೆ ತುಪ್ಪ...

ಇದನ್ನೂ ಓದಿ: ಬಿಡದಿ ಟೌನ್‌ಶಿಪ್ ವಿವಾದ: ಬೆಂಗಳೂರು ಮಾತ್ರವೇ ಕರ್ನಾಟದ ಅಭಿವೃದ್ಧಿಯೇ?

ಸ್ಥಳದಲ್ಲಿ ಪೊಲೀಸರು ಉಪಸ್ಥಿತರಿದ್ದರೂ ರೈತರ ಮತ್ತು ಮಹಿಳೆಯರ ಉದ್ವಿಗ್ನ ಆಕ್ರೋಶವನ್ನು ನಿಯಂತ್ರಿಸಲು ಸಾಧ್ಯವಾಗಲಿಲ್ಲ. ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡಾಗ ಪೊಲೀಸರು ಕೆಲವು ಪ್ರತಿಭಟನಾಕಾರರನ್ನು ವಶಕ್ಕೆ ಪಡೆದಿದ್ದಾರೆ.

ಮುಖ್ಯಮಂತ್ರಿ ಅಥವಾ ಉನ್ನತ ಮಟ್ಟದ ನಾಯಕರ ನೇತೃತ್ವದಲ್ಲಿ ರೈತರೊಂದಿಗೆ ಸೂಕ್ತ ಸಭೆ ನಡೆಸಿ ಚರ್ಚಿಸುವ ಮುನ್ನ ಯಾವುದೇ ಸರ್ವೇ ಮಾಡುವುದಿಲ್ಲ ಎಂದು ಸರ್ಕಾರ ಭರವಸೆ ನೀಡಿತ್ತು. ಆದರೆ ಈ ಭರವಸೆಯನ್ನು ಉಲ್ಲಂಘಿಸಿ, ಯಾವುದೇ ಮುನ್ಸೂಚನೆ ನೀಡದೆ ಪೊಲೀಸರ ರಕ್ಷಣೆಯೊಂದಿಗೆ ಏಕಾಏಕಿ ಸರ್ವೇ ನಡೆಸಲು ಮುಂದಾಗಿರುವುದು ರೈತರ ಆಕ್ರೋಶಕ್ಕೆ ಕಾರಣವಾಗಿದೆ.

ಬಿಡದಿ ಸುತ್ತಮುತ್ತಲಿನ ಜಮೀನುಗಳು ಅತ್ಯಂತ ಫಲವತ್ತಾಗಿದ್ದು, ರೈತರು ಇಲ್ಲಿ ತೆಂಗು, ಮಾವು, ರಾಗಿ, ಭತ್ತ ಸೇರಿದಂತೆ ಹಲವು ಪ್ರಮುಖ ಬೆಳೆಗಳನ್ನು ಬೆಳೆಯುತ್ತಿದ್ದಾರೆ. ಈ ಹಸಿರು ಮತ್ತು ಕೃಷಿ ಪ್ರಧಾನ ಪ್ರದೇಶವನ್ನು ನಗರೀಕರಣಗೊಳಿಸುವುದಕ್ಕೆ ರೈತರ ತೀವ್ರ ಆಕ್ಷೇಪವಿದೆ.

ಈ ಯೋಜನೆಗಾಗಿ ಸುಮಾರು 9,600ಕ್ಕೂ ಹೆಚ್ಚು ಎಕರೆ ಜಮೀನನ್ನು ಸ್ವಾಧೀನಪಡಿಸಿಕೊಳ್ಳಲು ಸರ್ಕಾರ ಮುಂದಾಗಿದೆ. ಇದರಿಂದಾಗಿ ತಲೆಮಾರುಗಳಿಂದ ಕೃಷಿಯನ್ನೇ ನಂಬಿ ಬದುಕುತ್ತಿರುವ ಸಾವಿರಾರು ರೈತ ಕುಟುಂಬಗಳು ತಮ್ಮ ಏಕೈಕ ಆದಾಯದ ಮೂಲ ಹಾಗೂ ಜೀವನಾಧಾರವನ್ನು ಕಳೆದುಕೊಂಡು ಬೀದಿಗೆ ಬೀಳುವ ಆತಂಕ ಎದುರಾಗಿದೆ.

ಅಷ್ಟು ಮಾತ್ರವಲ್ಲದೆ ರೈತರ ಒಪ್ಪಿಗೆಯಿಲ್ಲದೆ ಸರ್ಕಾರ ಬಲವಂತವಾಗಿ ಭೂಮಿ ಕಸಿದುಕೊಳ್ಳುತ್ತಿದೆ ಮತ್ತು ಜಿಬಿಡಿಎ ಅಧಿಕಾರಿಗಳು ನೀಡಿರುವ “ಶೇ 90 ರಷ್ಟು ರೈತರು ಜಮೀನು ನೀಡಲು ಒಪ್ಪಿದ್ದಾರೆ” ಎಂಬ ವರದಿ ಸುಳ್ಳು ಹಾಗೂ ತಿರುಚಲ್ಪಟ್ಟಿದೆ ಎಂದು ರೈತರು ಆರೋಪಿಸುತ್ತಿದ್ದಾರೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮಂಗಳೂರು | SIR ರದ್ದತಿ, ಜ್ಞಾನೇಶ್ ಕುಮಾರ್ ಅಮಾನತಿಗೆ ಆಗ್ರಹಿಸಿ ಮನವಿ

ಕರ್ನಾಟಕದಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯನ್ನು ರದ್ದುಗೊಳಿಸಬೇಕು,...

ಕಲಬುರಗಿ | ದೌರ್ಜನ್ಯ ತಡೆ ಕಾಯ್ದೆ ಕುರಿತು ಜಾಗೃತಿ: ಕಾನೂನು ಅರಿವು ಬೆಳೆಸಿಕೊಳ್ಳಲು ಕರೆ

ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಮೇಲಿನ ದೌರ್ಜನ್ಯಗಳನ್ನು ತಡೆಗಟ್ಟಲು ಹಾಗೂ...

6 ರಾಜ್ಯಗಳಿಗೆ ನೂತನ ರಾಜ್ಯಪಾಲರ ನೇಮಕ: ಕರ್ನಾಟಕದ ರಾಜ್ಯಪಾಲರಾಗಿ ಡಾ. ಸುಧಾ ಯಾದವ್

ರಾಷ್ಟ್ರಪತಿ ಭವನವು ಸೋಮವಾರ ಹೊರಡಿಸಿದ ಅಧಿಕೃತ ಪ್ರಕಟಣೆಯ ಪ್ರಕಾರ, ರಾಷ್ಟ್ರಪತಿಯವರು ಕರ್ನಾಟಕ...

ಮಂಗಳೂರು | 2018ರಿಂದ ಬಾಕಿ ಉಳಿದ ನಿವೇಶನ ಹಕ್ಕು: ಕೊರಗ ಸಮುದಾಯದ ಅರೆಬೆತ್ತಲೆ ಮೆರವಣಿಗೆ

ವಾಮಂಜೂರು ಮಂಗಳಜ್ಯೋತಿಯ ಕೊರಗ ಸಮುದಾಯದ ನಿವೇಶನ ರಹಿತ ಕುಟುಂಬಗಳಿಗೆ ನಿವೇಶನ ಹಾಗೂ...