ಸರ್ಕಾರದ ಕ್ಷೀರಭಾಗ್ಯ ಯೋಜನೆಯ ಹಾಲಿನ ಪೌಡರ್ ಹಾಗೂ ಗ್ಯಾಸ್ ಸಿಲಿಂಡರ್ ಕಳವು ಪ್ರಕರಣದ ಇಬ್ಬರು ಆರೋಪಿಗಳಿಗೆ ಎರಡು ವರ್ಷ ಜೈಲು ಶಿಕ್ಷೆ ಹಾಗೂ ₹11 ಸಾವಿರ ದಂಡ ವಿಧಿಸಿ ಹುಮನಾಬಾದ್‌ನ ಹೆಚ್ಚುವರಿ ಜೆಎಂಎಫ್‌ಸಿ ನ್ಯಾಯಾಲಯ ಆದೇಶಿಸಿದೆ.
ಚಿಟಗುಪ್ಪ ಪಟ್ಟಣದ ನಿವಾಸಿಗಳಾದ ಮಹಮ್ಮದ್ ಶಾರೂಕ್ ಅಹ್ಮದ್ ಹಾಗೂ ಅಕ್ಬರಲಿ ತೇರಿವಾಲೆ ಶಿಕ್ಷೆಗೆ ಒಳಗಾದದವರು.
2023ರ ಮೇ 6ರಂದು ಚಿಟಗುಪ್ಪ ಪಟ್ಟಣದ ಸರ್ಕಾರಿ ಕನ್ಯಾ ಪ್ರೌಢ ಶಾಲಾ ಕಚೇರಿಯ ಬೀಗ ಮುರಿದು ವಿದ್ಯಾರ್ಥಿಗಳಿಗೆ ವಿತರಿಸುವ ಕ್ಷೀರಭಾಗ್ಯ ಯೋಜನೆಯಡಿಯ 187 ನಂದಿನಿ ಹಾಲಿನ ಪುಡಿ ಹಾಗೂ ಗ್ಯಾಸ್ ಸಿಲಿಂಡರ್‌ವೊಂದು ಕಳ್ಳತನ ಮಾಡಿದ್ದರು.
ಈ ಸಂಬಂಧ ಚಿಟಗುಪ್ಪ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಚಿಟಗುಟ್ಟ ಠಾಣೆಯ ಪಿಎಸ್ಐ ಅವರು ತನಿಖೆ ನಡೆಸಿ, ದೋಷಾರೋಪ ಪಟ್ಟಿಯನ್ನು ನ್ಯಾಯಾಲಯಕ್ಕೆ ಸಲ್ಲಿಸಿದ್ದರು.
ಹುಮನಾಬಾದ್ ಹೆಚ್ಚುವರಿ ಜೆಎಂಎಫ್‌ಸಿ ನ್ಯಾಯಾಲಯ ನ್ಯಾಯಾಧೀಶ ಅಲ್ತಾಫ್ ಹುಸೈನ್ ಅವರು ಫೆ.28 ರಂದು ವಿಚಾರಣೆ ನಡೆಸಿ ಇಬ್ಬರು ಆರೋಪಿತರಿಗೆ ಶಿಕ್ಷೆ ವಿಧಿಸಿದ್ದಾರೆ. ಸರ್ಕಾರದ ಪರವಾಗಿ ಸರ್ಕಾರಿ ಅಭಿಯೋಜಕ ಪ್ರಶಾಂತ ಪ್ರಭುರಾಜ ವಾದ ಮಂಡಿಸಿದರು.