ಬೀದರ್‌ | ಎಸ್‌ಎಸ್‌ಎಲ್‌ಸಿ ಫಲಿತಾಂಶ ಹೆಚ್ಚಳಕ್ಕೆ 29 ಅಂಶಗಳ ಕಾರ್ಯಕ್ರಮ ಕಡ್ಡಾಯ : ಡಿಸಿ ಶಿಲ್ಪಾ ಶರ್ಮಾ

Date:

ಬೀದರ್ ಜಿಲ್ಲೆಯಲ್ಲಿ ಎಸ್‌ಎಸ್‌ಎಲ್‌ಸಿ ಫಲಿತಾಂಶ ಹೆಚ್ಚಿಸಲು ಶಿಕ್ಷಣ ಇಲಾಖೆ ಹೊರಡಿಸಿರುವ 29 ಅಂಶಗಳ ಕಾರ್ಯಕ್ರಮಗಳನ್ನು ಎಲ್ಲಾ ಶಾಲೆಗಳಲ್ಲಿ ಕಡ್ಡಾಯವಾಗಿ ಜಾರಿಗೆ ತರಬೇಕೆಂದು ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಶಿಲ್ಪಾ ಶರ್ಮಾ ಸೂಚಿಸಿದರು.‌

- Advertisement -

ನಗರದ ಸರ್ಕಾರಿ ನೌಕರರ ಸಮುದಾಯ ಭವನದಲ್ಲಿ ಈಚೆಗೆ ಹಮ್ಮಿಕೊಂಡಿದ್ದ 2024-25ನೇ ಸಾಲಿನ ಪರಖ ರಾಷ್ಟ್ರೀಯ ಸರ್ವೆಕ್ಷಣಾ ಸಮೀಕ್ಷೆ ಹಾಗೂ ಮುಂದಿನ ಶೈಕ್ಷಣಿಕ ವರ್ಷದಲ್ಲಿ ಕೈಗೊಳ್ಳಬೇಕಾದ ಕ್ರಮಗಳ ಮತ್ತು ಎಸ್‌ಎಸ್‌ಎಲ್‌ಸಿ ಫಲಿತಾಂಶವನ್ನು ಉತ್ತಮ ಪಡಿಸುವ ನಿಟ್ಟಿನಲ್ಲಿ ಇಲಾಖೆ ಹೊರಡಿಸಿರುವ 29 ಅಂಶಗಳ ಆದೇಶವನ್ನು ಜಿಲ್ಲೆಯಲ್ಲಿ ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸುವ ಬಗ್ಗೆ ಜಿಲ್ಲೆಯ ಎಲ್ಲ ಸರ್ಕಾರಿ, ಅನುದಾನಿತ, ಅನುದಾನ ರಹಿತ, ಕ್ರೈಸ್ ಸಂಸ್ಥೆಯ ಅಡಿಯಲ್ಲಿ ನಡೆಯುತ್ತಿರುವ ಶಾಲೆಗಳ ಮತ್ತು ಕೇಂದ್ರ ಸರ್ಕಾರದ ನವೋದಯ, ಕೇಂದ್ರೀಯ ವಿದ್ಯಾಲಯಗಳ ಮುಖ್ಯಸ್ಥರೊಂದಿಗೆ ನಡೆಸಿದ ಸಂವಾದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

‘ಹಾಸ್ಟೆಲ್‌’ ಇಲ್ಲದ ಶಿಕ್ಷಣದ ಸ್ವರೂಪ ಹೇಗಿರಲಿದೆ?

ಸಾಮಾನ್ಯವಾಗಿ ʼಶಿಕ್ಷಣʼ ಎಂದರೆ ʼತರಗತಿ, ಪಠ್ಯಪುಸ್ತಕ ಮತ್ತು ಪರೀಕ್ಷೆಗಳʼ ಸುತ್ತ ಹೆಣೆದುಕೊಂಡಿರುವ ಕಲ್ಪನೆ. ಆದರೆ ಒಬ್ಬ ವಿದ್ಯಾರ್ಥಿ ದಿನದ ಬಹುಪಾಲು ಕಳೆಯುವ ಜಾಗ ʼಹಾಸ್ಟೆಲ್‌ʼ. ಹೆಚ್ಚಾಗಿ ಚರ್ಚೆಗೆ ಬಾರದ ಈ ʼಹಾಸ್ಟೆಲ್‌ʼ ಎಂಬ...

ಬರದ ಬೇಗೆಯಲ್ಲಿ ರಾಜ್ಯ ಬೆಂದರೂ ಅನುದಾನಕ್ಕ ದನಿ ಎತ್ತದ...

ಸದಾ ಕಾಲ 'ಮೋದಿ ಜಪ' ಮಾಡುತ್ತಾ, ಕೇವಲ ರಾಜಕೀಯಕ್ಕಾಗಿ ಮತ್ತು ಪಕ್ಷದ ಅಜೆಂಡಾಗಳಿಗಾಗಿ ರಾಜ್ಯಾದ್ಯಂತ ಸುತ್ತುವ ಈ ಸಂಸದರಿಗೆ, ನಾಡಿನ ಜನತೆ ಬರಗಾಲದ ತೀವ್ರ ಸಂಕಷ್ಟದಲ್ಲಿ ಬೆಂದು ಹೋಗುತ್ತಿರುವಾಗ ಅದೇ ಪ್ರಧಾನಿ ನರೇಂದ್ರ...

SIR ಅಕ್ರಮ | ಗ್ಯಾನೇಶ್‌ ಕುಮಾರ್ ‘ಅಪರಾಧಿ’ಯಾದ್ರೆ, ಮೋದಿ-ಅಮಿತ್...

ಭಾರತೀಯ ಪ್ರಜಾಪ್ರಭುತ್ವದ ಇತಿಹಾಸದಲ್ಲೇ ಅತ್ಯಂತ ಕರಾಳ ಅಧ್ಯಾಯವೊಂದು ಈಗ ಜಗಜ್ಜಾಹೀರಾಗಿದೆ. ಪ್ರತಿಯೊಬ್ಬ ನಾಗರಿಕನ ಅತಿ ದೊಡ್ಡ ರಾಜಕೀಯ ಶಕ್ತಿಯಾಗಿರುವ 'ಮತದಾನದ ಹಕ್ಕು' ಮತ್ತು ಅದನ್ನು ಕಾಯಬೇಕಾದ ಸಾಂವಿಧಾನಿಕ ಸಂಸ್ಥೆಯನ್ನೇ ಆಡಳಿತಾರೂಢ ಮೋದಿ-ಅಮಿತ್ ಶಾ...

ʼಪ್ರತಿಯೊಂದು ಶಾಲೆಗಳ ಮುಖ್ಯ ಶಿಕ್ಷಕರಿಂದ ತಮ್ಮ ಶಾಲೆಯಲ್ಲಿ ಫಲಿತಾಂಶ ಸುಧಾರಣೆಗಾಗಿ ಕೈಗೊಳ್ಳುತ್ತಿರುವ ಚಟುವಟಿಕೆಗಳ ಬಗ್ಗೆ ಮಾಹಿತಿ ಪಡೆದುಕೊಂಡರು. ಯಾವ ರೀತಿ ಪಾಠ ಬೋಧಿಸಬೇಕು, ಶಾಲೆಯಲ್ಲಿ ಕೈಗೊಳ್ಳಬಹುದಾದ ನಾವೀನ್ಯಯುತ ಚಟುವಟಿಕೆಗಳ ಬಗ್ಗೆ ಸಮಗ್ರ ಮಾಹಿತಿಯನ್ನು ಜಿಲ್ಲಾಧಿಕಾರಿಗಳು ನೀಡಿದರು.

ಪರಖ ರಾಷ್ಟ್ರೀಯ ಸರ್ವೆಕ್ಷಣಾ ಸಮೀಕ್ಷೆಯ ಪ್ರಕಾರ ಜಿಲ್ಲೆಯ ಫಲಿತಾಂಶ ಕಡಿಮೆ ಇರುವ ಅಸಮಧಾನ ವ್ಯಕ್ತಪಡಿಸಿದ ಜಿಲ್ಲಾಧಿಕಾರಿಗಳು ಈ ರೀತಿಯ ಫಲಿತಾಂಶ ಮರುಕಳಿಸದಂತೆ ಎಲ್ಲಾ ಶಿಕ್ಷಕರು ಎಚ್ಚರಿಕೆಯಿಂದ ಕೆಲಸ ನಿರ್ವಹಿಸುವಂತೆ ಅಧಿಕಾರಿಗಳಿಗೆ ತಿಳಿಸಿದರು.

ಸಭೆಯಲ್ಲಿ ಬಸವಕಲ್ಯಾಣ ಸಹಾಯಕ ಆಯುಕ್ತರಾದ ಮುಕುಲ ಜೈನ್ ಮುಖ್ಯ ಶಿಕ್ಷಕರಿಗೆ ಗಣಿತ ಮತ್ತು ವಿಜ್ಷಾನ ವಿಷಯದ ಪ್ರಶ್ನೆ ಪತ್ರಿಕೆಯ ವಿಶ್ಲೇಷಣೆ ಮಾಡಬೇಕು ಎಂಬುದರ ಕುರಿತು ಹಾಗೂ ಬಹು ಆಯ್ಕೆ ಪ್ರಶ್ನೆಗಳಿಗೆ ಹೇಗೆ ಉತ್ತರಿಸಬೇಕು ಎಂಬುದರ ಕುರಿತು ಸವಿವರ ಮಾಹಿತಿ ನೀಡಿದರು. ಪ್ರೊಬೆಷನರ್ ಐಎಎಸ್ ಅಧಿಕಾರಿ ರಮ್ಯಾ ಅವರು ಸಮಾಜ ವಿಷಯದ ಕುರಿತು ಮಾಹಿತಿ ನೀಡಿದರು.

ಇದನ್ನೂ ಓದಿ : ಬೀದರ್‌ | ಮುಂಗಾರು ಮಳೆ : 36 ಮನೆಗಳಿಗೆ ಹಾನಿ, ಇಬ್ಬರ ಸಾವು

ಶಿಕ್ಷಣ ಇಲಾಖೆಯ ಉಪನಿರ್ದೇಶಕರು, ಡಯಟ್ ಪ್ರಾಚಾರ್ಯರರು, ಉಪನ್ಯಾಸಕರು, ಡಿವೈಪಿಸಿಗಳು ಸೇರಿದಂತೆ ಇಲಾಖೆಯ ಎಲ್ಲ ಅಧಿಕಾರಿಗಳು, ಸಿಬ್ಬಂದಿ ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಹಾಸನ | ಅ. 29ರಿಂದ ನ. 11ರವರೆಗೆ ಹಾಸನಾಂಬೆ ಜಾತ್ರಾ ಮಹೋತ್ಸವ

ಹಾಸನ ಜಿಲ್ಲೆಯಲ್ಲಿ 12 ದಿನ ಭಕ್ತರಿಗೆ ಹಾಸನಾಂಬೆ ದರ್ಶನ ಶುರುವಾಗಲಿದೆ. ಅಕ್ಟೋಬರ್...

ಚಿಕ್ಕಮಗಳೂರು | ಭೀಕರ ರಸ್ತೆ ಅಪಘಾತ: ಸವಾರ ಸ್ಥಳದಲ್ಲೇ ಸಾವು 

ಚಿಕ್ಕಮಗಳೂರು ಜಿಲ್ಲೆ ಮೂಡಿಗೆರೆ ತಾಲೂಕಿನ ಗೋಣಿಬೀಡು ಸಮೀಪದ ಕಸ್ಕೆಬೈಲ್‌ನಲ್ಲಿ ರಸ್ತೆಯಲ್ಲಿ ಸಂಚರಿಸುತ್ತಿದ್ದ...

ಚಿಕ್ಕಮಗಳೂರು | ಮದ್ಯಪಾನಕ್ಕೆ 2 ಸಾವಿರ ಹಣಕ್ಕಾಗಿ ಪತ್ನಿಗೆ ಹಲ್ಲೆ, ಜೀವ ಬೆದರಿಕೆ 

ಚಿಕ್ಕಮಗಳೂರು ಜಿಲ್ಲೆ ಕಡೂರು ತಾಲೂಕು ಸಿಂಗಟಗೆರೆ ಹೋಬಳಿಯ ಸೋಮನಹಳ್ಳಿ ತಾಂಡ್ಯದಲ್ಲಿ ಮದ್ಯಪಾನ...

ಭಾಲ್ಕಿ | ಮಡಿವಾಳ ಮಾಚಿದೇವರ ಕಾಯಕ ನಿಷ್ಠೆ ಸಮಾಜಕ್ಕೆ ಆದರ್ಶ: ಮಹಾಲಿಂಗ ಸ್ವಾಮೀಜಿ

ಕಾಯಕ ಹಾಗೂ ವಿಶಿಷ್ಟ ವಚನಗಳ ಮೂಲಕ ಸಮಾಜ ತಿದ್ದುವ ಕಾರ್ಯ ಮಾಡಿದ...