ಬೀದರ್‌ | ಬೆಂಬಲ ಬೆಲೆ ಯೋಜನೆಯಡಿ ಹೆಸರು, ಉದ್ದು ಖರೀದಿಗೆ 30 ಕೇಂದ್ರ ಆರಂಭ

Date:

ಮುಂಗಾರು ಹಂಗಾಮಿನಲ್ಲಿ ಜಿಲ್ಲೆಯ ರೈತರು ಬೆಳೆದಿರುವ ಎಪ್‌ಎಕ್ಯೂ ಗುಣಮಟ್ಟದ ಹೆಸರು ಮತ್ತು ಉದ್ದಿನ ಕಾಳು ಕನಿಷ್ಠ ಬೆಂಬಲ ಬೆಲೆ ಯೋಜನೆಯಡಿ ಖರೀದಿಗೆ ಜಿಲ್ಲೆಯಲ್ಲಿ 30 ಕೇಂದ್ರಗಳನ್ನು ತೆರೆಯಲಾಗಿದೆ.

- Advertisement -

ಪ್ರತಿ ಕ್ವಿಂಟಾಲ್‍ ಹೆಸರು ₹ 8,768 ಹಾಗೂ ಉದ್ದು ₹ 7,800 ದರದಲ್ಲಿ ಬೆಂಬಲ ಬೆಲೆ ಮಾರ್ಗಸೂಚಿಗಳನ್ವಯ ರೈತರಿಂದ ಖರೀದಿಸಲು ಕರ್ನಾಟಕ ರಾಜ್ಯ ಸಹಕಾರ ಮಾರಾಟ ಮಹಾ ಮಂಡಳದ ವತಿಯಿಂದ ಖರೀದಿ ಸಂಸ್ಥೆಯನ್ನಾಗಿ ನೇಮಿಸಿ, ರಾಜ್ಯ ಸರ್ಕಾರ ಆದೇಶಿಸಿದೆ ಎಂದು ಜಿಲ್ಲಾ ಟಾಸ್ಕ್‌ ಫೋರ್ಸ್‌ ಸಮಿತಿಯ ಸಹಾಯಕ ನಿರ್ದೇಶಕರು, ಹಾಗೂ ಸದಸ್ಯ ಕಾರ್ಯದರ್ಶಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಹೊಸ ಓದು | ಬಿ. ಚಂದ್ರೇಗೌಡರ ‘ಕಾಳ ಮಾವನ...

ಬಿ. ಚಂದ್ರೇಗೌಡರ 'ಬಯಲು ಸೀಮೆಯ ಕಟ್ಟೆಪುರಾಣ' ಅಂಕಣ ಬರಹದಿಂದ ಎದ್ದುಬಂದ ಕಾಳಮಾವ ಈಗ ತನ್ನ ಕಡೇ ದಿನಗಳಲ್ಲಿದ್ದಾರೆ. ಅವರು ಕಣ್ಣುಮುಚ್ಚುವ, ಕಾಲುಮಡಚುವ ದೃಶ್ಯಗಳು ಭಾರತದ ಆತ್ಮಸಾಕ್ಷಿಯ ಅಂತ್ಯಸಂಸ್ಕಾರವನ್ನು ಸಂಕೇತಿಸುವಂತಿವೆ. ನಮ್ಮ ನೆಲದ ನಾಲಿಗೆನಿಷ್ಠೆ...

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಎಲ್ಲೆಲ್ಲಿ ಖರೀದಿ ಕೇಂದ್ರ :

ಬೀದರ :ಬಗದಲ್, ಜನವಾಡ, ಮಾಳೆಗಾಂವ್, ಮುನ್ನಳ್ಳಿ, ಅಣದೂರ, ಕಮಠಾಣಾ ಭಾಲ್ಕಿ: ಲಖನಗಾಂವ್, ಹಲಬರ್ಗಾ (ಸಹಯೋಗ ಸುವಿಧಾ ಉತ್ಪಾದಕರ ಕಂ.ಲಿ.), ಖಟಕಚಿಂಚೋಳಿ, ಕುರುಬಖೇಳಗಿ, ಸಾಯಿಗಾಂವ್, ಭಾತಂಬ್ರಾ ಹುಮನಾಬಾದ:ನಿರ್ಣಾ, ದುಬಲಗುಂಡಿ, ಚಿಟಗುಪ್ಪಾ, ಘಾಟಬೋರಾಳ್, ಹಳ್ಳಿಖೇಡ (ಬಿ), ಬೇಮಳಖೇಡ ಬಸವಕಲ್ಯಾಣ : ಮುಡಬಿ, ಕೋಹಿನೂರ್, ಮಂಠಾಳ, ರಾಜೇಶ್ವರ, ಹುಲಸೂರ್, ಮುಚಳಂಬ ಔರಾದ (ಬಾ) : ಔರಾದ (ಬಾ), ಚಿಂತಾಕಿ, ಸಂತಪೂರ, ಠಾಣಾಕುಶನೂರ, ಮುಧೋಳ (ಬಿ) ಹಾಗೂ ಕಮಲನಗರ

ರಾಜ್ಯ ಸರ್ಕಾರದ ಆದೇಶ ಹೊರಡಿಸಿದ ದಿನಾಂಕದಿಂದ ರೈತರ ನೊಂದಣಿ ಕಾಲಾವಧಿಯನ್ನು 80 ದಿನಗಳವರೆಗೆ ಹಾಗೂ ಖರೀದಿ ಅವಧಿಯನ್ನು 90 ದಿನಗಳವರೆಗೆ ನಿಗದಿಪಡಿಸಿದೆ.  ಖರೀದಿ ಪ್ರಕ್ರಿಯೆಯಲ್ಲಿ ರೈತರು ಪ್ರತಿ ಎಕರೆಗೆ ಗರಿಷ್ಠ ಹೆಸರು -15 ಮತ್ತು ಉದ್ದು-30 ಕ್ವಿಂಟಲ್‍ನಂತೆ ಎಪ್‌ಎಕ್ಯೂ ಗುಣಮಟ್ಟದ ಹೆಸರು ಮತ್ತು ಉದ್ದಿನ ಕಾಳು ಮಾರಾಟ ಮಾಡಬಹುದಾಗಿದೆ.

ಖರೀದಿ ಕೇಂದ್ರಗಳು ಲಾಗ್‍ಇನ್ ಕ್ರೆಡೆನ್ಸಿಯಲ್ಸ್‍ಗಳನ್ನು ಪಡೆದು ನೋಂದಣಿ ಪ್ರಕ್ರಿಯೆ ಪ್ರಾರಂಭಿಸಿದ ಮೇಲೆ ನೋಂದಣಿ ಮಾಡಿಕೊಳ್ಳಲು ಇಚ್ಚಿಸುವ ರೈತರು ಸಮೀಪದ ಖರೀದಿ ಕೇಂದ್ರಗಳಿಗೆ ನೋಂದಣೀ ಮಾಡಿಸಿಕೊಂಡು ಹೆಸರು, ಉದ್ದಿನ ಕಾಳು ಕನಿಷ್ಠ ಬೆಂಬಲ ಬೆಲೆ ಯೋಜನೆಯಡಿ ಮಾರಾಟ ಮಾಡಿ ಸದರಿ ಯೋಜನೆಯನ್ನು ಸದುಪಯೋಗಪಡಿಸಿಕೊಳ್ಳಲು ತಿಳಿಸಿದ್ದಾರೆ.

ಇದನ್ನೂ ಓದಿ : ಬೀದರ್‌ | ಮುಖ್ಯಮಂತ್ರಿ, ಕೃಷಿ ಸಚಿವರು ಖುದ್ದಾಗಿ ಅತಿವೃಷ್ಟಿ ಹಾನಿ ಪರಿಶೀಲಿಸಲಿ : ಶಾಸಕ ಶರಣು ಸಲಗರ

2025-26 ನೇ ಸಾಲಿನಲ್ಲಿ ಕರ್ನಾಟಕ ರಾಜ್ಯದಿಂದ 38,000MT ಹೆಸರು ಕಾಳು, 60,810MT ಉದ್ದು, 15,650 MT ಸೂರ್ಯಕಾಂತಿ, 61,148 MT ಕಡಲೆಬೀಜ ಮತ್ತು 1,15,000 ಸೋಯಾಬಿನ್ ಬೆಳೆಯನ್ನು ಖರೀದಿಸಲು ಕೇಂದ್ರ ಸರ್ಕಾರದ ಕೃಷಿ ಇಲಾಖೆ ಅನುಮತಿ ನೀಡಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಕಲೇಶಪುರ | 25 ವರ್ಷ ನೆನಗುದಿಗೆ ಬಿದ್ದಿದ್ದ ಆಟೋ ನಿಲ್ದಾಣ ನಿರ್ಮಾಣ 

ಹಾಸನ ಜಿಲ್ಲೆ ಸಕಲೇಶಪುರ ಪಟ್ಟಣದ ಹಳೆ ಬಸ್ ನಿಲ್ದಾಣದ ಸಮೀಪ ಸ್ಥಳೀಯ...

ಕಾರವಾರ | ಗ್ರಾಮ ಆಡಳಿತ ಅಧಿಕಾರಿ ಪರೀಕ್ಷೆ ಸುಸೂತ್ರ: ಒಟ್ಟು 11,671 ಅಭ್ಯರ್ಥಿಗಳು ಹಾಜರು

ಕಾರವಾರ: ಕರ್ನಾಟಕ ಪರೀಕ್ಷಾ ಪ್ರಾಧಿಕಾರ (KEA) ವತಿಯಿಂದ ಕಂದಾಯ ಇಲಾಖೆಯ ಗ್ರಾಮ...

ಹಾಸನ | ₹426 ಕೋಟಿ; ಹಾಸನ-ಬೇಲೂರು ಚತುಷ್ಪಥ ರಸ್ತೆ ಅಭಿವೃದ್ಧಿ ಯೋಜನೆ; ಸಂಸದ ಶ್ರೇಯಸ್ ಪಟೇಲ್ 

ಹಾಸನ ನಗರದಲ್ಲಿ ಸುದ್ದಿಗಾರರೊಂದಿಗೆ ಸಂಸದ ಶ್ರೇಯಸ್ ಪಟೇಲ್ ಮಾತನಾಡಿ, ಹಾಸನ -...

ಯಲ್ಲಾಪುರ | ವಜ್ರಳ್ಳಿಯಲ್ಲಿ ರಸ್ತೆ ಕಾಮಗಾರಿಗೆ ಸಂಗ್ರಹಿಸಿದ್ದ ₹36 ಸಾವಿರ ಮೌಲ್ಯದ ಕಡಿ, ಎಂ-ಸ್ಯಾಂಡ್ ಕಳವು

ಯಲ್ಲಾಪುರ: ರಸ್ತೆ ಕಾಮಗಾರಿಗಾಗಿ ಸಂಗ್ರಹಿಸಿಟ್ಟಿದ್ದ ಕಡಿ ಹಾಗೂ ಎಂ-ಸ್ಯಾಂಡ್ ಕಳವು ಮಾಡಿರುವ...