ಬೀದರ್ | ಬಿಸಿಯೂಟ ಸೇವಿಸಿ 30 ಮಕ್ಕಳು ಅಸ್ವಸ್ಥ; ನೀರಿನ ಸಮಸ್ಯೆಯೇ ಕಾರಣ?

Date:

ಶಾಲೆಯಲ್ಲಿ ಬಿಸಿಯೂಟ ಸೇವಿಸಿದ್ದ 30ಕ್ಕೂ ಹೆಚ್ಚು ಮಕ್ಕಳು ಅಸ್ವಸ್ಥರಾಗಿ, ಆಸ್ಪತ್ರೆಗೆ ದಾಖಲಾಗಿರುವ ಘಟನೆ ಬೀದರ್ ಜಿಲ್ಲೆಯ ಹುಮ್ನಾಬಾದ್ ತಾಲೂಕಿನ ನಿಂಬೂರು ಸರ್ಕಾರಿ ಪ್ರೌಢಶಾಲೆಯಲ್ಲಿ ನಡೆದಿದೆ.

ಶಾಲೆಯ ಒಟ್ಟು 94 ಮಂದಿ ವಿದ್ಯಾರ್ಥಿಗಳು ಎಂದಿನಂತೆ, ಜೂನ್ 23ರ ಮಧ್ಯಾಹ್ನವೂ ಬಿಸಿಯೂಟ ಸೇವಿಸಿದ್ದರು. ಆದರೆ, ಸಂಜೆ 5 ಗಂಟೆಯ ವೇಳೆಗೆ ಮಕ್ಕಳಲ್ಲಿ ವಾಂತಿ-ಭೇದಿ ಕಾಣಿಸಿಕೊಂಡಿದೆ. ಕೂಡಲೇ, ಶಿಕ್ಷಕರು ಮಕ್ಕಳನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿದ್ದಾರೆ.

ಚಿಕಿತ್ಸೆ ನೀಡಿದ ಬಳಿಕ ಮಕ್ಕಳ ಆರೋಗ್ಯದಲ್ಲಿ ಚೇತರಿಕೆ ಕಂಡಿದ್ದು, ವಿಶ್ರಾಂತಿ ಪಡೆಯುತ್ತಿದ್ದಾರೆ ಎನ್ನಲಾಗಿದೆ.

ಬೀದರ್, ರಾಯಚೂರು, ಕಲಬುರಗಿ, ಕೊಪ್ಪಳ ಜಿಲ್ಲೆಗಳಲ್ಲಿ ಕಲುಷಿತ ನೀರು ಕುಡಿದು ನಾನಾ ಗ್ರಾಮಗಳ ಜನರು ಅಸ್ವಸ್ಥರಾಗಿ, ಆಸ್ಪತ್ರೆ ಸೇರುತ್ತಿರುವುದು ಕಳೆದ ಆರು ತಿಂಗಳಿನಿಂದ ನಿರಂತರವಾಗಿ ನಡೆಯುತ್ತಲೇ ಇದೆ. ಈ ನಡುವೆ, ಶಾಲೆಯ ಬಿಸಿಯೂಟ ಸೇವಿಸಿದ ಮಕ್ಕಳೂ ಅಸ್ವಸ್ಥರಾಗಿದ್ದಾರೆ. ನೀರಿನ ಸಮಸ್ಯೆಯಿಂದಲೇ ಆರೋಗ್ಯ ಸಮಸ್ಯೆ ಕಾಣಿಸಿಕೊಂಡಿದೆ ಎಂದು ಹೇಳಲಾಗಿದೆ.

ಶಾಲೆಯ ಮುಖ್ಯ ಶಿಕ್ಷಕ ಮಹಾದೇವ ಸಜ್ಜನ ಈ ದಿನ.ಕಾಮ್‌ನೊಂದಿಗೆ ಮಾತನಾಡಿ, “ಶಾಲೆಯ ಒಟ್ಟು 94 ಮಂದಿ ವಿದ್ಯಾರ್ಥಿಗಳು ಎಂದಿನಂತೆ ಮಧ್ಯಾಹ್ನದ ಬಿಸಿಯೂಟ ಸೇವಿಸಿದರು. ಸಂಜೆ 4 ಗಂಟೆಗೆ ಕೆಲವು ಮಕ್ಕಳಿಗೆ ವಾಂತಿ ಭೇದಿ ಕಾಣಿಸಿಕೊಂಡಿತ್ತು. ತಕ್ಷಣ ಆಸ್ಪತ್ರೆಗೆ ಸೇರಿಸಿದ್ದೇವೆ. ಎಲ್ಲಾ ಮಕ್ಕಳು ಮನೆಗೆ ಹೋದ ನಂತರ ಸಂಜೆ 5 ಗಂಟೆ ಮತ್ತೆ ಕೆಲವು ವಿದ್ಯಾರ್ಥಿಗಳು ಅಸ್ವಸ್ಥರಾಗಿದ್ದರು. ಎಲ್ಲರಿಗೂ ಹುಮನಾಬಾದ್ ತಾಲೂಕು ಆಸ್ಪತ್ರೆಗೆ ಸೇರಿಸಿದ್ದೇವೆ. ಸೂಕ್ತ ಚಿಕ್ಸಿತ್ಸೆ ನೀಡಲಾಗಿದೆ. ಈಗ ಎಲ್ಲರೂ ಕ್ಷೇಮವಾಗಿದ್ದಾರೆ” ಎಂದು ತಿಳಿಸಿದರು.

ವೈದಾಧಿಕಾರಿ ಡಾ. ನಾಗನಾಥ ಹುಲಸೂರೆ ಮಾತನಾಡಿ, “ಆಸ್ಪತ್ರೆಗೆ ಒಟ್ಟು 59 ಮಕ್ಕಳು ದಾಖಲಾಗಿದ್ದರು. ಊಟದಲ್ಲಿ ಏರುಪೇರಾಗಿರುವ ಕಾರಣ ಅಸ್ವಸ್ಥರಾಗಿರಬಹುದು. ಬಿಸಿಯೂಟವನ್ನು ಪ್ರಯೋಗಲಯಕ್ಕೆ ಕಳಿಸಿದ್ದೇವೆ. 50 ಮಕ್ಕಳಿಗೆ ಚಿಕಿತ್ಸೆ ನೀಡಿ, ಈಗಾಗಲೇ ಮನೆಗೆ ಕಳಿಸಿದ್ದೇವೆ. ಉಳಿದ ಮಕ್ಕಳಿಗೆ ಇಂದು ಬಿಡುಗಡೆ ಮಾಡಲಾಗುವುದು” ಎಂದು ತಿಳಿಸಿದರು.

ಶಾಸಕ, ಜಿಲ್ಲಾಧಿಕಾರಿ ಭೇಟಿ, ವಿಚಾರಣೆ:

ವಿಷಯ ತಿಳಿದ ಕೂಡಲೇ ಸ್ಥಳೀಯ ಶಾಸಕ ಡಾ. ಸಿದ್ದಲಿಂಗಪ್ಪ ಪಾಟೀಲ್ ಆಸ್ಪತ್ರೆಗೆ ಭೇಟಿ ನೀಡಿ ಮಕ್ಕಳ ಆರೋಗ್ಯ ವಿಚಾರಿಸಿದ್ದು, ಘಟನೆ ಕುರಿತು ಸೂಕ್ತ ವರದಿ ನೀಡುವಂತೆ ಸೂಚಿಸಿದರು.

ಜಿಲ್ಲಾಧಿಕಾರಿ ಗೋವಿಂದರೆಡ್ಡಿ, ಎಸ್. ಪಿ ಚನ್ನಬಸವಣ್ಣ ಲಂಗೋಟಿ, ಸಿಇಒ ಶಿಲ್ಪಾ ಎಂ ಅವರು ತಡರಾತ್ರಿ ಆಸ್ಪತ್ರೆಗೆ ಭೇಟಿ ನೀಡಿ, ಘಟನೆ ಕುರಿತು ಮಾಹಿತಿ ಪಡೆದರು. ವಿಧಾನ ಪರಿಷತ್ ಸದಸ್ಯ ಡಾ. ಚಂದ್ರಶೇಖರ್ ಪಾಟೀಲ್, ಭೀಮರಾವ ಪಾಟೀಲ್ ಭೇಟಿಯಾಗಿ ಮಕ್ಕಳ ಆರೋಗ್ಯ ವಿಚಾರಿಸಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗದಗ | ಚಿಕ್ಕನರಗುಂದದಲ್ಲಿ ಕಾಲುಬಾಯಿ ಲಸಿಕಾ ಕಾರ್ಯಕ್ರಮಕ್ಕೆ ಚಾಲನೆ

ನರಗುಂದ ತಾಲ್ಲೂಕಿನ ಚಿಕ್ಕನರಗುಂದ ಗ್ರಾಮದಲ್ಲಿ ರಾಷ್ಟ್ರೀಯ ಜಾನುವಾರು ರೋಗಗಳ ನಿಯಂತ್ರಣ ಯೋಜನೆಯ...

ದಕ್ಷಿಣ ಕನ್ನಡ | ಶಿಳ್ಳೇಕ್ಯಾತ ಕುಟುಂಬಗಳನ್ನು ಒಕ್ಕಲೆಬ್ಬಿಸುವ ಹುನ್ನಾರ; ಸಂತ್ರಸ್ತರ ಭೀತಿ

ದೋಣಿಗಳ ಮೂಲಕ ಮೀನು ಹಿಡಿದು ಬದುಕು ಸಾಗಿಸುತ್ತಿರುವ ಕಟುಂಬಗಳನ್ನು ಒಕ್ಕಲೆಬ್ಬಿಸುವ ಹುನ್ನಾರ...

ಧಾರವಾಡ | ಫ್ಲಿಪ್‍ಕಾರ್ಟ್ ಕಂಪನಿಗೆ 17,632 ರೂ. ದಂಡ

ಫ್ಲಿಪ್‌ಕಾರ್ಟ್‌ ಮತ್ತು ಸಿಆಯ್‍ಜಿ ಎಫ್ಆಯ್‍ಎಲ್ ಲಿಮಿಟೆಡ್ ಕಂಪನಿಗಳಿಗೆ 17,632 ರೂ. ದಂಡ...

ದಕ್ಷಿಣ ಕನ್ನಡ | ಮಸೀದಿಗೆ ನುಗ್ಗಿ ‘ಜೈ ಶ್ರೀರಾಮ್’ ಘೋಷಣೆ; ಇಬ್ಬರು ಆರೋಪಿಗಳ ಬಂಧನ

ಹಿಂದುತ್ವ ಕೋಮುವಾದಿ ಕಾರ್ಯಕರ್ತರು ಮಸೀದಿಗೆ ನುಗ್ಗಿ ಜೈ ಶ್ರೀರಾಮ್ ಘೋಷಣೆ ಕೂಗಿ...