ಅಪರಾಧಿಗಳ ವಿರುದ್ಧ ಕಠಿಣ ಕ್ರಮ ಜರುಗಿಸುವ ಮೂಲಕ ಪೊಲೀಸ್ ಇಲಾಖೆ ಕಾನೂನು ಸುವ್ಯವಸ್ಥೆ ಕಾಪಾಡಲು ಮುಂದಾಗಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ ಖಂಡ್ರೆ ಹೇಳಿದರು.
ಸೋಮವಾರ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕಚೇರಿ ಆವರಣದಲ್ಲಿ ಕಲ್ಯಾಣ ಕರ್ನಾಟಕ ಅಭಿವೃದ್ಧಿ ಮಂಡಳಿಯ 1.25 ಕೋಟಿ ರೂಪಾಯಿ ಅನುದಾನದಲ್ಲಿ ಖರೀದಿಸಲಾದ 7 ಪೊಲೀಸ್ ಹೊಸ ವಾಹನಗಳನ್ನು ಪೊಲೀಸ್ ಇಲಾಖೆಗೆ ಹಸ್ತಾಂತರಿಸಿ ಅವರು ಮಾತನಾಡಿದರು.
‘ಅಪರಾಧ ತಡೆಗೆ ಪೊಲೀಸ್ ಇಲಾಖೆಗೆ ಎಲ್ಲಾ ರೀತಿಯಲ್ಲಿ ಸಹಕಾರ ನೀಡಲಾಗುವುದು. ಕಾನೂನು ಸುವ್ಯವಸ್ಥೆ ಚೆನ್ನಾಗಿದ್ದಾರೆ ಮಾತ್ರ ಜನರು ನೆಮ್ಮದಿಯ ನಿದ್ದೆ ಮಾಡಲು ಸಾಧ್ಯ. ಕಾನೂನು ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ಇತ್ತೀಚೆಗೆ ಕೆಕೆಆರ್‌ಡಿಬಿ ಅನುದಾನದಲ್ಲಿ ಎಐ ಕ್ಯಾಮೆರಾ ಒಳಗೊಂಡ ಕಮಾಂಡ್ ಸೆಂಟರ್ ಸ್ಥಾಪನೆ ಮಾಡಲಾಗಿದ್ದು, ಮುಂದೆಯೂ ಕಾನೂನು ಸುವ್ಯವಸ್ಧೆಗೆ ಎಲ್ಲಾ ರೀತಿಯಲ್ಲಿ ಕ್ರಮವಹಿಸಲಾಗುವುದು’ ಎಂದರು.
ಪೌರಾಡಳಿತ ಹಾಗೂ ಹಜ್ ಖಾತೆ ಸಚಿವ ರಹೀಂ ಖಾನ್, ನಗರಸಭೆ ಅಧ್ಯಕ್ಷ ಮೊಹ್ಮದ್ ಗೌಸ್, ಜಿಲ್ಲಾಧಿಕಾರಿ ಶಿಲ್ಪಾ ಶರ್ಮಾ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಪ್ರದೀಪ್ ಗುಂಟಿ ಸೇರಿದಂತೆ ಪೊಲೀಸ್ ಅಧಿಕಾರಿಗಳು, ಇತರೆ ಗಣ್ಯರು ಉಪಸ್ಥಿತರಿದ್ದರು.
ಇದನ್ನೂ ಓದಿ : ಗುಲಬರ್ಗಾ ವಿವಿ ಕರ್ಮಕಾಂಡ-3: ಮೂರು ವರ್ಷಗಳಿಂದ 9,024 ಫಲಿತಾಂಶ ಪೆಂಡಿಂಗ್!