ವ್ಯಕ್ತಿಯೊಬ್ಬರನ್ನು ಕುತ್ತಿಗೆ ಕಡಿದು ಬರ್ಬರವಾಗಿ ಹತ್ಯೆ ಮಾಡಿರುವಂತಹ ಘಟನೆ ಹುಮನಾಬಾದ್ ತಾಲ್ಲೂಕಿನ ಶಕ್ಕರಗಂಜವಾಡಿಯಲ್ಲಿ ಬುಧವಾರ ರಾತ್ರಿ ನಡೆದಿದೆ.
ಶಕ್ಕರಗಂಜವಾಡಿ ಗ್ರಾಮದ ಸಿದ್ಧರೂಡ ಬಾವಗಿ (35) ಕೊಲೆಯಾದ ವ್ಯಕ್ತಿ ಎಂದು ಗುರುತಿಸಲಾಗಿದೆ. ಮೃತರಿಗೆ ಪತ್ನಿ, ತಾಯಿ, ಇಬ್ಬರು ಪುತ್ರಿ ಹಾಗೂ ಪುತ್ರನಿದ್ದಾನೆ.
ಗ್ರಾಮದಲ್ಲಿ ಸಿದ್ಧರೂಡ ಅವರ ಅಂಗಡಿಯೊಂದರಲ್ಲಿ ಈ ಕೊಲೆ ನಡೆದಿದ್ದು, ಕೊಲೆಗೆ ನಿಖರ ಮಾಹಿತಿ ಇನ್ನೂ ತಿಳಿದು ಬಂದಿಲ್ಲ. ತನಿಖೆ ನಡೆಸುತ್ತಿದ್ದೇವೆ ಎಂದು ಪೊಲೀಸರು ತಿಳಿಸಿದ್ದಾರೆ.
ವಿಷಯ ತಿಳಿದು ಘಟನಾ ಸ್ಥಳಕ್ಕೆ ಹಿರಿಯ ಪೊಲೀಸ್ ಅಧಿಕಾರಿಗಳು ಭೇಟಿ ನೀಡಿ ಪರಿಶೀಲಿಸಿದ್ದಾರೆ. ಹಳ್ಳಿಖೇಡ(ಬಿ) ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ಜರುಗಿದೆ.