ಬೀದರ್ | ಅಪ್ರಾಪ್ತೆಯನ್ನು ವಿವಾಹವಾದ ಸರ್ಕಾರಿ ಶಾಲೆ ಶಿಕ್ಷಕ; ಪ್ರಕರಣ ದಾಖಲು

Date:

ರಾಜ್ಯದಲ್ಲಿ ಬಾಲ್ಯ ವಿವಾಹ ನಿಷೇಧವಿದೆ. ಈ ಕುರಿತು ಎಲ್ಲ ಕಡೆ ಜಾಗೃತಿ ಮೂಡಿಸುವ ಕಾರ್ಯ ನಿರಂತರವಾಗಿ ನಡೆಯುತ್ತಿದೆ. ಆದರೆ ಸಮಾಜ ಅತ್ಯಂತ ಗೌರವದಿಂದ ಗುರುತಿಸುವ ಸರ್ಕಾರಿ ಶಿಕ್ಷಕರೊಬ್ಬರು ಇಂಥ ಕೃತ್ಯದಲ್ಲಿ ಭಾಗಿಯಾಗಿರುವುದು ನೋವಿನ ಸಂಗತಿ. ಈ ಪ್ರಕರಣದಿಂದ ಇಡೀ ಶಿಕ್ಷಣ ಇಲಾಖೆ ತಲೆತಗ್ಗಿಸುವಂತಾಗಿದೆ. ಇದರಿಂದ ಪೋಷಕರು, ವಿದ್ಯಾರ್ಥಿಗಳೂ ಶಿಕ್ಷಕರನ್ನು ಅನುಮಾನದಿಂದ ನೋಡುವಂತಾಗಿದೆ.

ಮಕ್ಕಳಿಗೆ ಬಾಲ್ಯ ವಿವಾಹ ನಿಷೇಧ ಕಾಯ್ದೆ ಕುರಿತು ಬೋಧಿಸಬೇಕಾಗಿರು ಸರ್ಕಾರಿ ಶಾಲೆಯ ಶಿಕ್ಷಕರೊಬ್ಬರು ಅಪ್ರಾಪ್ತ ಬಾಲಕಿಯನ್ನು ವಿವಾಹವಾಗಿರುವ ಘಟನೆ ಬೀದರ್ ಜಿಲ್ಲೆಯಲ್ಲಿ ತಡವಾಗಿ ಬೆಳಕಿಗೆ ಬಂದಿದೆ.

ಬೀದರ್ ಜಿಲ್ಲೆಯ ಭಾಲ್ಕಿ ತಾಲೂಕಿನ ಗಡಿ ಗ್ರಾಮ ಹಲಸಿ ತುಗಾಂವ ಸರ್ಕಾರಿ ಮಾದರಿ ಪ್ರಾಥಮಿಕ ಶಾಲೆಯ ಸಹ ಶಿಕ್ಷಕ ಸಂದೀಪಕುಮಾರ ಅಜೂರೆ ಎಂಬುವರು ಅಪ್ರಾಪ್ತೆಯನ್ನು ವಿವಾಹವಾದ ಬಗ್ಗೆ ಭಾಲ್ಕಿ ತಾಲೂಕು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಶಿಶು ಅಭಿವೃದ್ಧಿ ಯೋಜನಾಧಿಕಾರಿ ಶ್ರೀನಿವಾಸ ಬಾಳುವಾಲೆ ಅವರು ಮೇಹಕರ್ ಪೋಲೀಸ್ ಠಾಣೆಯಲ್ಲಿ ಶಿಕ್ಷಕನ ವಿರುದ್ಧ ಆಗಸ್ಟ್‌ 5 ರಂದು ಬಾಲ್ಯ ವಿವಾಹ ನಿಷೇಧ ಕಾಯ್ದೆಯಡಿ ದೂರು ನೀಡಿದ್ದು, ಪ್ರಕರಣ ದಾಖಲಾಗಿದೆ.

ಕ್ಷೇತ್ರ ಶಿಕ್ಷಣಾಧಿಕಾರಿಗಳು 2023 ಜೂ. 6 ರಂದು ಶಿಕ್ಷಕ ಸಂದೀಪಕುಮಾರ ಅಜೂರೆ ಅವರ ಮದುವೆಗೆ ಸಂಬಂಧಿಸಿದ ಭಾವಚಿತ್ರ ಹಾಗೂ ವಿದ್ಯಾರ್ಥಿನಿ ಶಾಲಾ ದಾಖಲಾತಿಯನ್ನು ತಾಲೂಕು ಶಿಶು ಅಭಿವೃದ್ಧಿ ಯೋಜನಾಧಿಕಾರಿ ಅವರಿಗೆ ನೀಡಿ, 2023 ಮಾರ್ಚ್ 29 ರ ಆಸುಪಾಸಿನಲ್ಲಿ ನಡೆದ ಈ ಮದುವೆಯ ಭಾವಚಿತ್ರ ನೋಡಿದರೆ ಸ್ಪಷ್ಟವಾಗಿ ಬಾಲ್ಯ ವಿವಾಹ ಆಗಿರುವುದು ಕಂಡು ಬರುತ್ತದೆ. ಈ ಬಗ್ಗೆ ಕೂಲಂಕುಷವಾಗಿ ಪರಿಶೀಲಿಸಿ ವರದಿ ಸಲ್ಲಿಸುವಂತೆ ಮೌಖಿಕವಾಗಿ ಹೇಳಿದರು.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ಶಿಕ್ಷಣಾಧಿಕಾರಿ ಜೂ.23ರಂದು ವರದಿ ನೀಡಿದ್ದು, ಶಿಕ್ಷಕ ಬಾಲ್ಯ ವಿವಾಹ ಆಗಿರುವ ಬಗ್ಗೆ ಯಾವುದೇ ಸಾಕ್ಷ್ಯಾಧಾರಗಳಿಲ್ಲ. ಹೀಗಾಗಿ ಪ್ರಕರಣ ದಾಖಲಿಸಲು ಸಾಧ್ಯವಾಗುತ್ತಿಲ್ಲ ಎಂದು ಪ್ರಕರಣ ಕೈಬಿಟ್ಟಿದ್ದಾರೆ. ಇದನ್ನು ಗಂಭೀರವಾಗಿ ಪರಿಗಣಿಸಿದ ಶಿಶು ಅಭಿವೃದ್ಧಿ ಯೋಜನಾಧಿಕಾರಿ ಆಗಸ್ಟ್‌ 5 ರಂದು ಪ್ರಕರಣ ದಾಖಲಿಸಿದ್ದಾರೆ.

ರಾಜ್ಯದಲ್ಲಿ ಬಾಲ್ಯ ವಿವಾಹ ನಿಷೇಧವಿದೆ. ಈ ಕುರಿತು ಎಲ್ಲ ಕಡೆ ಜಾಗೃತಿ ಮೂಡಿಸುವ ಕಾರ್ಯ ನಿರಂತರವಾಗಿ ನಡೆಯುತ್ತಿದೆ. ಆದರೆ ಸಮಾಜ ಅತ್ಯಂತ ಗೌರವದಿಂದ ಗುರುತಿಸುವ ಸರ್ಕಾರಿ ಶಿಕ್ಷಕರೊಬ್ಬರು ಇಂಥ ಕೃತ್ಯದಲ್ಲಿ ಭಾಗಿಯಾಗಿರುವುದು ನೋವಿನ ಸಂಗತಿ. ಈ ಪ್ರಕರಣದಿಂದ ಇಡೀ ಶಿಕ್ಷಣ ಇಲಾಖೆ ತಲೆತಗ್ಗಿಸುವಂತಾಗಿದೆ. ಇದರಿಂದ ಪೋಷಕರು, ವಿದ್ಯಾರ್ಥಿಗಳೂ ಶಿಕ್ಷಕರನ್ನು ಅನುಮಾನದಿಂದ ನೋಡುವಂತಾಗಿದೆ.

ಭಾಲ್ಕಿ ತಾಲೂಕು ಶಿಶು ಅಭಿವೃದ್ಧಿ ಯೋಜನಾಧಿಕಾರಿ ಶ್ರೀನಿವಾಸ ಬಾಳುವಾಲೆ ಈ ದಿನ.ಕಾಮ್ನೊಂದಿಗೆ ಮಾತನಾಡಿ, “ಪ್ರಕರಣ ಕುರಿತು ನನಗೆ ಕ್ಷೇತ್ರ ಶಿಕ್ಷಣಾಧಿಕಾರಿ ಮಾಹಿತಿ ನೀಡಿದರು. ಸಂಬಂಧಪಟ್ಟ ಭಾವಚಿತ್ರ ಹಾಗೂ ದಾಖಲೆ ಕಳುಹಿಸಿದ್ದರು. ಇದನ್ನು ಗಂಭೀರವಾಗಿ ಪರಿಗಣಿಸಿದ್ದು, ಬಾಲ್ಯ ವಿವಾಹ ನಿಷೇಧ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ. ಪೋಲೀಸರು ತನಿಖೆ ಮುಂದುವರಿಸಿದ್ದಾರೆ” ಎಂದು ಹೇಳಿದರು.

ರಾಜ್ಯ ಮಕ್ಕಳು ಹಕ್ಕುಗಳ ರಕ್ಷಣಾ ಆಯೋಗದ ಸದಸ್ಯ ಶಶಿಧರ ಕೋಸಂಬೆ ಈ ದಿನ.ಕಾಮ್‌‌ನೊಂದಿಗೆ ಮಾತನಾಡಿ, “ಬಾಲ್ಯ ವಿವಾಹ ನಿಷೇಧ ಕುರಿತು ಜಾಗೃತಿ ಮೂಡಿಸುವ ಅಕ್ಷರಸ್ಥರಿಂದಲೇ ಬಾಲ್ಯ ವಿವಾಹ ನಡೆದಿರುವುದು ಅಕ್ಷಮ್ಯ ಅಪರಾಧ. ಇದು ತುಂಬಾ ಗಂಭೀರ ಪ್ರಕರಣವೂ ಹೌದು. ಸ್ಥಳೀಯ ಬಾಲ್ಯ ವಿವಾಹ ನಿಷೇಧ ಅಧಿಕಾರಿಗಳಾದ ಪಿಡಿಒ, ಕಂದಾಯ ನಿರೀಕ್ಷಕರು, ಶಾಲಾ ಮುಖ್ಯಗುರು ಸೇರಿದಂತೆ ಬಿಇಒ ಅವರು ಈ ಕುರಿತು ಪ್ರಕರಣ ದಾಖಲು ಮಾಡಬೇಕಿತ್ತು. ಈ ಬಗ್ಗೆ ಶಿಕ್ಷಣ ಇಲಾಖೆ ನಿರ್ಲಕ್ಷ್ಯ ಮಾಡಿರುವುದು ಮೇಲ್ನೋಟಕ್ಕೆ ಕಾಣುತ್ತಿದೆ. ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಸೂಚಿಸುವೆ” ಎಂದು ತಿಳಿಸಿದರು.

ಇದನ್ನೂ ಓದಿದ್ದೀರಾ? ಜೀವ ಸಂಪತ್ತಿಗೆ ಸಂಚಕಾರ ತಂದಿದೆ ಜೀವ ವೈವಿಧ್ಯ ತಿದ್ದುಪಡಿ ಮಸೂದೆ

“ಸಾರ್ವಜನಿಕ ಶಿಕ್ಷಣ ಇಲಾಖೆ ಉಪನಿರ್ದೇಶಕರಿಗೆ ಮಾತನಾಡಿ ಶಾಲೆಗೆ ಭೇಟಿ ನೀಡಿ ಪರಿಶೀಲನೆ ನಡೆಸಿ ಈ ಬಗ್ಗೆ ವರದಿ ನೀಡುವಂತೆ ಸೂಚಿಸಿದ್ದೇನೆ” ಎಂದು ಹೇಳಿದರು.

ಈ ಸಂಬಂಧ ಮಾಹಿತಿಗಾಗಿ ಭಾಲ್ಕಿ ಕ್ಷೇತ್ರ ಶಿಕ್ಷಣಾಧಿಕಾರಿ ಅವರಿಗೆ ಈ ದಿನ.ಕಾಮ್ ಸಂಪರ್ಕಿಸಿದ್ದು, ಯಾವುದೇ ಪ್ರತಿಕ್ರಿಯೆ ದಾರೆತಿಲ್ಲ.

ಬಾಲಾಜಿ ಕುಂಬಾರ್
+ posts

ಕವಿ, ಪತ್ರಕರ್ತ

ಪೋಸ್ಟ್ ಹಂಚಿಕೊಳ್ಳಿ:

ಬಾಲಾಜಿ ಕುಂಬಾರ್
ಬಾಲಾಜಿ ಕುಂಬಾರ್
ಕವಿ, ಪತ್ರಕರ್ತ

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಎರಡು ಕ್ವಿಂಟಲ್ ಬೆಳ್ಳುಳ್ಳಿ ಕದ್ದ ಕಳ್ಳರು; ರೈತ ಕಂಗಾಲು

ಈವರೆಗೆ ದಾವಣಗೆರೆ ಜಿಲ್ಲೆಯ ವ್ಯಾಪ್ತಿಯಲ್ಲಿ ಅಡಿಕೆ, ತೆಂಗಿನಕಾಯಿಗಳನ್ನು ಕುದಿಯುತ್ತಿದ್ದ ಕಳ್ಳರು, ಈಗ...

ಮೈಸೂರು | ಸ್ಥಳೀಯರ ಬೇಡಿಕೆಗೆ ಮಣಿದ ಎಂಸಿಸಿ; ಟ್ರಾಫಿಕ್ ಸಿಗ್ನಲ್ ಅಳವಡಿಕೆಗೆ ಕಾರ್ಯಾರಂಭ

ಮೈಸೂರು ನಗರದ ಹೊರವಲಯದಲ್ಲಿರುವ ಆರ್ ಆರ್ ನಗರ, ದಟ್ಟಗಳ್ಳಿ, ಬೋಗಾದಿ ಮತ್ತು...

ಬಳ್ಳಾರಿ | ರಾಜಕಾರಣಿಗಳು ಮಾತ್ರ ಗೂಂಡಾಗಳಲ್ಲ, ಅಧಿಕಾರಿಗಳೂ ಗೂಂಡಾಗಳೇ: ರವಿಕೃಷ್ಣಾ ರೆಡ್ಡಿ ಕಿಡಿ

ಬಳ್ಳಾರಿ ಜಿಲ್ಲೆಯಲ್ಲಿ ರಾಜಕಾರಣಿಗಳು ಮಾತ್ರ ಗೂಂಡಾಗಳಲ್ಲ. ಅಧಿಕಾರಿಗಳೂ ಗೂಂಡಾಗಳೇ. ಇಲ್ಲಿನ ಎಸ್‌ಪಿಗೆ...

ವಿಜಯಪುರ | ಸ್ಲಂ ನಿವಾಸಿಗಳಿಗೆ ಹಕ್ಕುಪತ್ರ ನೀಡುವಂತೆ ಆಗ್ರಹ

ಸ್ಲಂ ನಿವಾಸಿಗಳ ಹಕ್ಕುಪತ್ರಗಳಿಗಾಗಿ ಶಿಖರಖಾನೆ ಭಾಗ -2 ಹಾಗೂ ಭಾಗ 3ನ್ನು...