ಬೀದರ್‌ | ಕಲಿಕೆಯ ಹೊಸ ಮಾದರಿ : ಪ್ರಕೃತಿ ಮಡಿಲಲ್ಲಿ ವಿದ್ಯಾರ್ಥಿಗಳ ಕಾಲ್ನಡಿಗೆ

Date:

ವಿದ್ಯಾರ್ಥಿಗಳಲ್ಲಿ ಹೊಸ ಕಲಿಕಾ ಆಸಕ್ತಿ ಹೆಚ್ಚಿಸುವ ನಿಟ್ಟಿನಲ್ಲಿ ಔರಾದ್‌ ತಾಲೂಕಿನ ಯನಗುಂದಾ ಸರಕಾರಿ ಪ್ರೌಢ ಶಾಲೆಯ ಶಿಕ್ಷಕರು ಪ್ರಕೃತಿ ಮಡಿಲಲ್ಲಿ ವಿದ್ಯಾರ್ಥಿಗಳನ್ನು ಕಾಲ್ನಡಿಗೆ ಮಾಡಿಸಿರುವುದು ಮಕ್ಕಳಲ್ಲಿ ಉತ್ಸಾಹ ಹೆಚ್ಚಿಸುವಂತೆ ಮಾಡಿತು.

- Advertisement -

ಶಿಕ್ಷಣವು ಮಕ್ಕಳಿಗೆ ಜೀವನ‌ ಕಲಿಸುವಂತಾಗಬೇಕು, ಇತ್ತೀಚಿಗೆ ಮಕ್ಕಳು ಮೊಬೈಲ್ ಬಳಕೆ ಅತಿಯಾಗಿ ಸಾಧಾರಣ ಚಟುವಟಿಕೆಗಳಿಂದ ವಂಚಿತರಾಗುತ್ತಿರುವುದು ಕಳವಳಕಾರಿ ಸಂಗತಿ. ತತ್ವಜ್ಞಾನಿ ರೂಸೋ ಅವರು ಮರಳಿ ನಿಸರ್ಗಕ್ಕೆ ಎನ್ನುವ ಸಂದೇಶ ನೀಡಿದ್ದಾರೆ. ಅದರಂತೆ ಯನಗುಂದಾ ಶಾಲಾ ಶಿಕ್ಷಕರು ಪ್ರತಿವರ್ಷ ಮಕ್ಕಳಿಗೆ ಶೈಕ್ಷಣಿಕ ಚಟುವಟಿಕಗಳ ಜೊತೆಗೆ ನಿಸರ್ಗದ ಬಗ್ಗೆ ಅರಿವು ಮೂಡಿಸುವ ಪ್ರಯತ್ನ ಮಾಡುತ್ತಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಡಾ. ಟಿ.ಎಸ್.‌ ಚನ್ನೇಶ್‌ ಸರಣಿ | ವೈದ್ಯಕೀಯ ನೊಬೆಲ್‌...

ನಮ್ಮ ಮೆದುಳು, ಭಾವನೆಗಳನ್ನು, ವರ್ತನೆಗಳನ್ನು ಮತ್ತು ದೈಹಿಕ ಕಾರ್ಯಗಳನ್ನು ಹೇಗೆ ನಿಯಂತ್ರಿಸುತ್ತದೆ ಎಂಬುದನ್ನು ಸಂಶೋಧನೆಯಿಂದ ಬಿಡಿಸಿಟ್ಟು 2026ರ ವೈದ್ಯಕೀಯ ನೊಬೆಲ್‌ ಪ್ರಶಸ್ತಿಗೆ ಪಾತ್ರರಾದ ಮೂವರು ಸಂಶೋಧಕರು ಮತ್ತು ಸಂಶೋಧನೆಯ ಸುತ್ತಲಿನ ವಿಶ್ಲೇಷಣಾತ್ಮಕ ಬರಹ ಈ...

ಪೊಲೀಸ್ ಸುಧಾರಣೆ | ಹೈಟೆಕ್ ಪೊಲೀಸಿಂಗ್ Vs ವಾಸ್ತವ:...

ಪೊಲೀಸ್‌ ಇಲಾಖೆಯನ್ನು ಆಧುನೀಕರಿಸಲು AI, ಸೈಬರ್‌ ತಂತ್ರಜ್ಞಾನ, ಡಿಜಿಟಲ್‌ ತನಿಖೆ, ಸಿಸಿಟಿವಿ, ಬಾಡಿ ಕ್ಯಾಮೆರಾ ಸೇರಿದಂತೆ ಹಲವು ತಂತ್ರಜ್ಞಾನಗಳು ಪ್ರವೇಶಿಸುತ್ತಿವೆ. ಆದರೆ ಹೈಟೆಕ್‌ ಆಗುತ್ತಿರುವ ಪೊಲೀಸ್‌ ವ್ಯವಸ್ಥೆ ಜನರ ಬದುಕಿಗೆ ಎಷ್ಟು ಹತ್ತಿರವಾಗುತ್ತಿದೆ?...

ಐದು ಭಾಷೆ, ಆರು ದಶಕ, ಅನಂತ ಪ್ರಯೋಗ: ಭಾರತೀಯ...

ಬದುಕಿನ ಕೊನೆಯ ಉಸಿರಿನವರೆಗೂ ಕೇವಲ ಸಿನಿಮಾವನ್ನೇ ಶ್ವಾಸವಾಗಿಸಿಕೊಂಡಿದ್ದ, 95ನೇ ವಯಸ್ಸಿನಲ್ಲೂ ಹೊಸ ಕಥೆಯ ಕನಸು ಕಾಣುತ್ತಿದ್ದ ಭಾರತೀಯ ಚಿತ್ರರಂಗದ ಅಪ್ರತಿಮ ದಾರ್ಶನಿಕ ಸಿಂಗೀತಂ ಶ್ರೀನಿವಾಸರಾವ್ ನಮ್ಮೊಂದಿಗಿಲ್ಲ. ಆರು ದಶಕಗಳ ಕಾಲ ತಮ್ಮ ಅನಂತ...

ನಿಸರ್ಗದಲ್ಲಿ ಮಡಿಲಲ್ಲಿ ನಡೆದಾಡುವುದರಿಂದ ಮಾನಸಿಕವಾಗಿಯು ಮತ್ತು ದೈಹಿಕವಾಗಿಯು ಪ್ರಯೋಜನವಾಗಲಿದೆ. ಮಾನಸಿಕ ಒತ್ತಡ ಕಡಿಮೆ ಮಾಡುವ ಮೂಲಕ ನಮ್ಮಗೆ ಪರಿಶುದ್ಧ ಗಾಳಿ ಹಾಗೂ ವಿವಿಧ ಪಕ್ಷಿ, ಪ್ರಾಣಿ, ಸಸ್ಯ, ಮರ ಹೊಲದಲ್ಲಿನ ವಿವಿಧ ಬೆಳೆಗಳ ಬಗ್ಗೆ ಅರಿತುಕೊಳ್ಳಲು ಸಹಕಾರಿಯಾಗಿದೆ ಎಂದು ಶಾಲೆಯ ಮುಖ್ಯಗುರು ಬಸವರಾಜ ಮಠಪತಿ ಮಾಹಿತಿ ನೀಡಿದ್ದರು.

ನಮ್ಮ ಶಾಲೆಯಲ್ಲಿ ಕಲಿಕೆಯ ಜೊತೆಗೆ ವಿವಿಧ ರಚನಾತ್ಮಕ ಚಟುವಟಿಕೆ ಹಮ್ಮಿಕೊಂಡು ವಿದ್ಯಾರ್ಥಿಗಳಲ್ಲಿ ರಚನಾತ್ಮಕ, ಕ್ರಿಯಾಶೀಲ, ಸೃಜನಶೀಲತೆ ಮೂಡಿಸಲಾಗುತ್ತಿದೆ. ಮಕ್ಕಳಿಗಾಗಿ ಪಥಸಂಚಲನ, ಮಡಬಾತ್, ಪರಿಸರ ಪ್ರಜ್ಞೆ ಹಾಗೂ ಪ್ರಕೃತಿ ಮಡಿಲಲ್ಲಿ ವನಭೋಜನ, ಸ್ವಚ್ಛ ಭಾರತ ಮಿಷನ್ ಜಾಗೃತಿ ಕಾರ್ಯಕ್ರಮ ಸಂಘಟಿಸುವ ಮೂಲಕ ಮಕ್ಕಳಿಗೆ ಗುಣಾತ್ಮಕ ಶಿಕ್ಷಣ ಒದಗಿಸಲಾಗುತ್ತಿದೆ ಎಂದು ಶಿಕ್ಷಕ ಲಕ್ಷ್ಮರಡ್ಡಿ ಗಂಗಾಪೂರೆ ತಿಳಿಸಿದ್ದಾರೆ‌.

WhatsApp Image 2025 10 31 at 3.46.38 PM

ʼನಮ್ಮ‌ ಗುರುಗಳು ನಮಗೆ ನಿಸರ್ಗದ ಮಡಿಲಲ್ಲಿ ಓಡಾಡಲು ನಮ್ಮನ್ನು ಕರೆದುಕೊಂಡು ಹೋಗಿರುವುದು ನಮಗೆ ತುಂಬಾ ಖುಷಿಯಾಗಿದೆ.ಇದರಿಂದ ಪ್ರಕೃತಿ ಸೌಂದರ್ಯ ಸವಿಯುವ ಜೊತೆಗೆ ಹೊಸತನ ಕಲಿಕೆಗೆ ಪ್ರೇರಣೆಯಾಗಿದೆʼ ಎಂದು ವಿದ್ಯಾರ್ಥಿ ಅರ್ಪಿತ ಈಶ್ವರ್ ಅವರು ನುಡಿದರು.

ಕಾರ್ಯಕ್ರಮದಲ್ಲಿ ಶಾಲೆಯ ದೈಹಿಕ ಶಿಕ್ಷಣ ಶಿಕ್ಷಕರಾದ ಮಲ್ಲಿಕಾರ್ಜುನ ಟಂಕಸಾಲೆ, ಎಂ.ಡಿ ಸಿರಾಜ್, ಮುಸ್ತಫಾ ಆಜಾದ್ ಖುರ್ರಮ್ ಮುರ್ತುಜಾ, ತೇಜಸ್ವಿ ಚಾಂದಕವಠೆ ಭಾಗವಹಿಸಿ ಮಕ್ಕಳಿಗೆ ಮಾರ್ಗದರ್ಶನ ನೀಡಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೀದರ್‌ | ಒತ್ತಡ ನಿವಾರಣೆಗೆ ಸಾಂಸ್ಕೃತಿಕ ಚಟುವಟಿಕೆ ಅಗತ್ಯ: ಡಿಸಿ ಶಿಲ್ಪಾ ಶರ್ಮಾ

ಯುವಜನರಲ್ಲಿರುವ ಪ್ರತಿಭೆಯನ್ನು ಹೊರತರುವುದರ ಜೊತೆಗೆ, ದೈನಂದಿನ ಜೀವನದ ಮಾನಸಿಕ ಒತ್ತಡ ನಿವಾರಿಸಿ...

ಕಲಬುರಗಿ | ವಸತಿ ನಿಲಯದ ಊಟ ಸೇವಿಸಿ 10ಕ್ಕೂ ಹೆಚ್ಚು ವಿದ್ಯಾರ್ಥಿಗಳು ಅಸ್ವಸ್ಥ

ಆಳಂದ ಪಟ್ಟಣದ ಡಾ. ಬಿ.ಆರ್. ಅಂಬೇಡ್ಕರ್ ಮೆಟ್ರಿಕ್ ನಂತರದ ವಸತಿ ನಿಲಯದಲ್ಲಿ...

ಕಲಬುರಗಿ | ತಾಂತ್ರಿಕ ದೋಷಕ್ಕೆ ತುರ್ತು ಲ್ಯಾಂಡಿಂಗ್; ತೊಗರಿ ಜಮೀನಿನಲ್ಲಿ ಲಘು ವಿಮಾನದ ತುರ್ತು ಭೂಸ್ಪರ್ಶ

ಹಾರಾಟದ ವೇಳೆ ದಿಢೀರ್‌ ತಾಂತ್ರಿಕ ದೋಷ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ತರಬೇತಿ ಲಘು...

ಬೀದರ್‌ | ನಿಮ್ಕಡಿ ಸೋಯಾ ಕೊಯ್ಲಕ ಮಂದಿ ಸಿಗ್ತಾರೇನ್?

ಹೊಲ್ದಾಗ್‌ ಸೋಯಾ ಕೊಯ್ಲಕ್‌ ಬಂದುದ, ನಮ್ಮೂರಾಗ ಕೂಲಿ ಮಂದಿ ಒಬ್ರೂ ಸಿಗ್ಲಾತಿಲ,...