ಬೈಕ್‌ಗೆ ಶಾಲಾ ವಾಹನ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಬೀದರ್ ಹೊರವಲಯದ ಚಿಕ್ಕಪೇಟ್ ರಿಂಗ್ ರಸ್ತೆಯಲ್ಲಿ ಗುರುವಾರ ಸಂಜೆ ನಡೆದಿದೆ.
ಬೀದರ್ ತಾಲೂಕಿನ ಅಲಿಯಂಬರ್ ಗ್ರಾಮದ ನಿವಾಸಿ ಮಸ್ತಾನ್ ಸಾಬ್ ಬಾಷಾ ಮಿಯ್ಯಾ (45) ಮೃತಪಟ್ಟ ವ್ಯಕ್ತಿ ಎಂದು ಗುರುತಿಸಲಾಗಿದೆ.
ಮಸ್ತಾನ್ ಸಾಬ್ ಟಿವಿಎಸ್ ಬೈಕ್ ಮೇಲೆ ತೆರಳುವ ವೇಳೆ ಹಿಂಬದಿಯಿಂದ ಬಂದ ಶಾಲಾ ವಾಹನ ಬೈಕ್‌ಗೆ ಡಿಕ್ಕಿ ಹೊಡೆದಿದ್ದು, ಪರಿಣಾಮ ಬೈಕ್ ಸವಾರ ರಸ್ತೆ ಮೇಲೆ ಬಿದ್ದು ಗಂಭೀರವಾಗಿ ಗಾಯಗೊಂಡು ಸ್ಥಳದಲ್ಲೇ ಕೊನೆಯುಸಿರೆಳೆದಿದ್ದಾನೆ ಎಂದು ತಿಳಿದು ಬಂದಿದೆ.
ಸುದ್ದಿ ತಿಳಿದು ಸ್ಥಳಕ್ಕೆ ಬೀದರ್ ಗ್ರಾಮೀಣ ಪೊಲೀಸ್ ಠಾಣೆ ಪಿಎಸ್‌ಐ ಮಲ್ಲಿಕಾರ್ಜುನ್ ಯಾತನೂರು ನೇತ್ರತ್ವದ ಸಿಬ್ಬಂದಿ ತಂಡ ಭೇಟಿ ನೀಡಿ ಪರಿಶೀಲಿಸಿದರು. ಈ ಕುರಿತು ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ