ಬೀದರ್ | ಪೋಷಕರ ಜೊತೆ ಸೇರಿ ಪತಿಯನ್ನು ಕೊಂದ ಪತ್ನಿ

Date:

ಮದ್ಯ ಸೇವಿಸಿ ಬಂದು ಕಿರುಕುಳ ನೀಡುತ್ತಿದ್ದ ಪತಿಯನ್ನು ತನ್ನ ಪೋಷಕರ ಜೊತೆ ಸೇರಿ ಪತ್ನಿಯೇ ಕೊಲೆ ಮಾಡಿರುವ ದಾರುಣ ಘಟನೆ ಬೀದರ್ ಜಿಲ್ಲೆಯ ಔರಾದ್ ತಾಲ್ಲೂಕಿನ ಬಾಚೆಪಳ್ಳಿ ಗ್ರಾಮದಲ್ಲಿ ಮಂಗಳವಾರ ರಾತ್ರಿ ನಡೆದಿದೆ.

- Advertisement -

ಶ್ರೀಧರ್ ಶಿವರಾಜ್ (30) ಕೊಲೆಯಾದ ವ್ಯಕ್ತಿ. ಶ್ರೀಧರ್ ಕಳೆದ ಐದಾರು ವರ್ಷಗಳ ಹಿಂದೆ ಪಕ್ಕದ ಗ್ರಾಮವೊಂದರ ಸವಿತಾ ಎಂಬುವರನ್ನು ಪ್ರೀತಿಸಿ ವಿವಾಹವಾಗಿದ್ದರು. ಮೃತರಿಗೆ ಇಬ್ಬರು ಗಂಡು ಮಕ್ಕಳಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

History Repeats | ರೋಮ್‌ ಉರಿಯುತ್ತಿದ್ದಾಗ ಪಿಟೀಲು ನುಡಿಸಿದ...

ದೇಶದ ಪ್ರಜಾಪ್ರಭುತ್ವದ ಆಧಾರಸ್ತಂಭಗಳು ಒಂದೊಂದಾಗಿ ಕುಸಿಯುತ್ತಾ, ಚುನಾವಣಾ ವ್ಯವಸ್ಥೆಯೇ ಅಕ್ರಮ ಎಸಗುತ್ತಿರುವಾಗ, ನಿರುದ್ಯೋಗ-ಬೆಲೆ ಏರಿಕೆಯ ಭಾರದಿಂದ ಜನ ಹೈರಾಣಾಗಿರುವಾಗ ಭಾರತದ ಪ್ರಧಾನಿ ಭಜನೆ ಮಾಡುತ್ತಿದ್ದಾರೆ. ರೋಂ ಹೊತ್ತಿ ಉರಿಯುತ್ತಿದ್ದಾಗ ನೀರೋ ಪಿಟೀಲು...

ಅಪರಾಧಿಗಳ ಪರ ಬಿ ಸಿ ರೋಡ್ ಚಲೋ: ಎಂದಿನಂತೆ...

ಕೊಲೆಯಂತಹ ಗಂಭೀರ ಅಪರಾಧ ಎಸಗಿದ ಆರೋಪ ಹೊತ್ತವರ ಪರವಾಗಿ ಸಂಘಪರಿವಾರ ಬೀದಿಗಿಳಿಯುತ್ತಿರುವುದು ಇದೇ ಮೊದಲೇನಲ್ಲ. ಕರಾವಳಿಯ ಜನತೆ ಇಂತಹ ಪ್ರಚೋದನಾತ್ಮಕ ನಡೆಗಳನ್ನು ತಿರಸ್ಕರಿಸಿ, ಸತ್ಯ ಮತ್ತು ನ್ಯಾಯದ ಪರವಾಗಿ ನಿಲ್ಲಬೇಕಾಗಿದೆ. ಕರಾವಳಿ ಕರ್ನಾಟಕವಾಗಲಿ...

14 ಆಕ್ಷೇಪಗಳಿಂದ SIT ಬೇಡಿಕೆಯವರೆಗೆ: ಗ್ಯಾನೇಶ್‌ ಕುಮಾರ್ ಸುತ್ತ...

ಚುನಾವಣಾ ಆಯೋಗದೊಳಗಿನ ಭಿನ್ನಾಭಿಪ್ರಾಯಗಳು ಬಹಿರಂಗಗೊಂಡ ಬೆನ್ನಲ್ಲೇ ಎಸ್‌ಐಆರ್‌ ವಿವಾದ ಹೊಸ ತಿರುವು ಪಡೆದುಕೊಂಡಿದೆ. ಮುಖ್ಯ ಚುನಾವಣಾ ಆಯುಕ್ತ ಗ್ಯಾನೇಶ್‌ ಕುಮಾರ್ ಅವರ ನಿರ್ಧಾರಗಳ ಕುರಿತು ಚುನಾವಣಾ ಆಯುಕ್ತರಾದ ಸುಖಬೀರ್‌ ಸಿಂಗ್‌ ಸಂಧು ಮತ್ತು...

ಚಾಲಕ ಕೆಲಸಕ್ಕೆ ಹೋಗುತ್ತಿದ್ದ ಶ್ರೀಧರ್ ಆಗಾಗ ಕುಡಿದ ಅಮಲಿನಲ್ಲಿ ಮನೆಗೆ ಬಂದು ಪತ್ನಿಯೊಂದಿಗೆ ಜಗಳ ಮಾಡುತ್ತಿದ್ದ. ಗಂಡನ ಕಿರುಕುಳ ತಾಳಲಾರದೆ ಕೋಪಗೊಂಡ ಪತ್ನಿ ಸವಿತಾ ಫೆ.25 ರಂದು ತನ್ನ ಪೋಷಕರನ್ನು ಮನೆಗೆ ಕರೆಸಿಕೊಂಡಿದ್ದಾರೆ. ಈ ವೇಳೆ ಗಲಾಟೆ ನಡೆದಿದೆ ಎನ್ನಲಾಗಿದೆ.

ಶ್ರೀಧರ್‌ನಿಗೆ ಕೊಲೆ ಮಾಡುವ ಉದ್ದೇಶದಿಂದ ಸವಿತಾ ಹಾಗೂ ಅವರ ತಂದೆ-ತಾಯಿ ಶ್ರೀಧರ್‌ನನ್ನು ಹಗ್ಗದಿಂದ ಕೈಕಾಲು ಕಟ್ಟಿ ಕಬ್ಬಿಣದ ಸಲಾಕೆಯಿಂದ ಮಾರಣಾಂತಿಕ ಹಲ್ಲೆ ನಡೆಸಿ ಅಲ್ಲಿಂದ ಪರಾರಿಯಾಗಿದ್ದಾರೆ. ತೀವ್ರವಾಗಿ ಹಲ್ಲೆಗೊಳಗಾದ ಶ್ರೀಧರ್ ಸ್ಥಳದಲ್ಲೇ ಕೊನೆಯುಸಿರೆಳೆದಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಈ ಸುದ್ದಿ ಓದಿದ್ದೀರಾ? ಬೀದರ್ | ಹಿರಿಯ ಪತ್ರಕರ್ತ ಕಾಜಿ ಅಲಿಯೋದ್ದೀನ್‌ಗೆ ಕರ್ನಾಟಕ ಉರ್ದು ಅಕಾಡೆಮಿ ಪ್ರಶಸ್ತಿ

ಈ ಸಂಬಂಧ ಮೃತರ ತಂದೆ ಶಿವರಾಜ್ ಅವರು ನೀಡಿದ ದೂರಿನ ಮೇರೆಗೆ ಸಂತಪೂರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.‌ ವಿಷಯ ತಿಳಿದು ಡಿವೈಎಸ್ಪಿ ಶಿವಾನಂದ ಪವಾಡಶೆಟ್ಟಿ, ಸಿಪಿಐ ರಘುವೀರ್ ಸಿಂಗ್ ಠಾಕೂರ್, ಪಿಎಸ್ಐ ನಂದಕುಮಾರ್ ಅವರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಜ್ಞಾನೇಶ್ ಕುಮಾರ್ ರಾಜೀನಾಮೆಗೆ ಆಗ್ರಹಿಸಿ ಯುವ ಕಾಂಗ್ರೆಸ್ ಪ್ರತಿಭಟನೆ

ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಅವರ ಕಾರ್ಯವೈಖರಿಯನ್ನು ಖಂಡಿಸಿ ಕೃಷ್ಣರಾಜ...

ಕಾರವಾರ | ಚುನಾವಣಾ ಆಯೋಗ ಸುಧಾರಣೆಗೆ ಆಗ್ರಹ: ಜ್ಞಾನೇಶ್ ಕುಮಾರ್‌ ಪದಚ್ಯುತಿಗೆ KPRS ಒತ್ತಾಯ

ಕಾರವಾರ: ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆ ಹಾಗೂ...

ಹಾಸನ | ಹೇಮಾವತಿ ನಾಲೆ: ಯುವಕನ ಮೃತ ದೇಹ ಪತ್ತೆ 

ಹಾಸನ ಜಿಲ್ಲೆ ಚನ್ನರಾಯಪಟ್ಟಣ ತಾಲೂಕಿನ ಹೇಮಾವತಿ ನಾಲೆಯಲ್ಲಿ ಯುವಕನ ಮೃತ ದೇಹ...

ಹುಲಸೂರ | ಮುಚಳಂಬ ಗ್ರಾಮದಲ್ಲಿ ಬಸ್ ತಂಗುದಾಣ ನಿರ್ಮಾಣಕ್ಕೆ ಆಗ್ರಹ

ಹುಲಸೂರ ತಾಲೂಕಿನ ಮುಚಳಂಬ ಗ್ರಾಮದಲ್ಲಿ ಸಾರ್ವಜನಿಕರ ಅನುಕೂಲಕ್ಕಾಗಿ ಸುಸಜ್ಜಿತ ಬಸ್ ತಂಗುದಾಣ...