ಅತಿಥಿ ಶಿಕ್ಷಕರ ನೇಮಕಾತಿಯಲ್ಲಿ ಲಂಚ ಹಾಗೂ ಅಧಿಕಾರ ದುರ್ಬಳಕೆ ಆರೋಪದ ಮೇಲೆ ಔರಾದ್ ತಾಲ್ಲೂಕಿನ ಕೊಳ್ಳೂರ ಸರ್ಕಾರಿ ಪ್ರೌಢಶಾಲೆ ಮುಖ್ಯಶಿಕ್ಷಕ ಸುರೇಶ ಪಾಂಡ್ರೆ ಅವರನ್ನು ಸೇವೆಯಿಂದ ಅಮಾನತು ಮಾಡಲಾಗಿದೆ.
‘ಜಿಲ್ಲಾ ಪಂಚಾಯಿತಿ ಸಿಇಒ ಡಾ.ಗಿರೀಶ ಬದೋಲೆ ಅವರು 2025ರ ಮೇ 29ರಂದು ಅಮಾನತು ಆದೇಶ ಹೊರಡಿಸಿದ್ದಾರೆ. ಜೂನ್ 20ರಂದು ಅಮಾನತುಗೊಂಡ ಮುಖ್ಯಶಿಕ್ಷಕ ಸುರೇಶ ಪಾಂಡ್ರೆ ಅವರನ್ನು ಸೇವೆಯಿಂದ ಬಿಡುಗಡೆ ಮಾಡಲಾಗಿದೆ’ ಎಂದು ಇಲಾಖೆಯಿಂದ ತಿಳಿದು ಬಂದಿದೆ.
ಅತಿಥಿ ಶಿಕ್ಷಕರ ನೇಮಕಾತಿಯಲ್ಲಿ ₹12,000 ಲಂಚ ಪಡೆದಿರುವುದು, ವಿದ್ಯಾರ್ಥಿಗಳಿಗೆ ಬಿಸಿಯೂಟದ ಜೊತೆಗೆ ಮೊಟ್ಟೆ, ಬಾಳೆ ಹಣ್ಣು ವಿತರಿಸದೇ ಇರುವುದು, ಶಾಲೆಯಲ್ಲಿನ ಲ್ಯಾಪ್‌ಟಾಪ್ ಸ್ವಂತಕ್ಕೆ ಬಳಸಿಕೊಂಡಿದ್ದು ಹಾಗೂ ಶಾಲಾ ವಿದ್ಯಾರ್ಥಿಗಳ ಶೂ, ಸಾಕ್ಸ್ ಖರೀದಿಯಲ್ಲಿ ಕಮಿಷನ್ ಪಡೆದ ಆರೋಪದ ಮೇಲೆ ಮುಖ್ಯ ಶಿಕ್ಷಕ ಸುರೇಶ ಪಾಂಡ್ರೆ ಅವರನ್ನು ಅಮಾನತು ಮಾಡಲಾಗಿದೆ.
ಇದನ್ನೂ ಓದಿ : ಬೀದರ್ | ಆರೋಗ್ಯ ಕೇಂದ್ರಕ್ಕಿಲ್ಲ ಸ್ವಂತ ಕಟ್ಟಡ : ಸರ್ಕಾರಿ ಶಾಲಾ ಕೋಣೆಯಲ್ಲೇ ಆರೋಗ್ಯ ಸೇವೆ!