ಬೀದರ್ ಹೊರವಲಯದ ಕೊಳಾರ ಕೈಗಾರಿಕಾ ಪ್ರದೇಶದಲ್ಲಿ ಬೈಕ್ ಮತ್ತು ಸರ್ಕಾರಿ ಬಸ್ ನಡುವೆ ಮುಖಾಮುಖಿ ಢಿಕ್ಕಿ ಸಂಭವಿಸಿದ್ದು, ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆ ಭಾನುವಾರ ಮಧ್ಯಾಹ್ನ ನಡೆದಿದೆ.
ಮೃತ ದುರ್ದೈವಿ ಅರುಣ ಪಡಸಾಲೆ (33) ಎಂಬಾತ ಬೀದರ್ ಜಿಲ್ಲೆಯ ಔರಾದ್ ತಾಲೂಕಿನ ಬಳತ ಗ್ರಾಮದವರು. ಆದರೆ, ಅವರು ನೌಬಾದ್‌ನಲ್ಲಿ ಬಾಡಿಗೆ ಮನೆಯಲ್ಲಿ ವಾಸವಿದ್ದರು.
ಈ ಸುದ್ದಿ ಓದಿದ್ದೀರಾ? ತುಮಕೂರು | ಸಹ ಶಿಕ್ಷಕಿಗೆ ಲೈಂಗಿಕ ಕಿರುಕುಳ; ಶಿಕ್ಷಕ ಅಮಾನತು
ಖಾಸಗಿ ಶಾಲೆಯಲ್ಲಿ ಶಿಕ್ಷಕರಾಗಿ ಸೇವೆ ಸಲ್ಲಿಸುತ್ತಿದ್ದ ಅರುಣ ಪಡಸಾಲೆ ಎರಡು ದಿನಗಳ ಹಿಂದೆಯಷ್ಟೇ ಮದುವೆಯಾಗಿದ್ದರು. ಇದೀಗ ವಿಧಿಯಾಟಕ್ಕೆ ದುರಂತ ಸಂಭವಿಸಿದೆ ಎನ್ನಲಾಗಿದೆ.