ಪ್ರಯಾಗ್‍ರಾಜ್‍ನಲ್ಲಿ ನಡೆಯುತ್ತಿರುವ ಮಹಾ ಕುಂಭಮೇಳದಲ್ಲಿ ಭಾಗವಹಿಸಿ ಪುಣ್ಯಸ್ನಾನ ಮಾಡಲು ತೆರಳುತ್ತಿದ್ದ ಬೀದರ್ ತಾಲ್ಲೂಕಿನ ಚಿಲ್ಲರ್ಗಿ ಗ್ರಾಮದ ವ್ಯಕ್ತಿಯೊಬ್ಬರು ಮಹಾರಾಷ್ಟ್ರದ ನಾಗಪುರ ಸಮೀಪ ಮಂಗಳವಾರ ನಡೆದ ರಸ್ತೆ ಅಪಘಾತದಲ್ಲಿ ಮೃತಪಟ್ಟಿದ್ದಾರೆ.
ಚಿಲ್ಲರ್ಗಿ ಗ್ರಾಮದ ರಂಗಾರೆಡ್ಡಿ ಮಾಣಿಕರೆಡ್ಡಿ ಸುಧಾ (60) ಮೃತರು. ಮೃತರಿಗೆ ಪತ್ನಿ ಪುತ್ರ ಹಾಗೂ ಪುತ್ರಿ ಇದ್ದಾರೆ.
ರಂಗಾರೆಡ್ಡಿ ದಂಪತಿ ತಮ್ಮ ಸಂಬಂಧಿಕರೊಂದಿಗೆ ಬೀದರ್‌ನಿಂದ ಕ್ರೂಸರ್ ವಾಹನದಲ್ಲಿ ಕುಂಭಮೇಳಕ್ಕೆ ಹೋಗುತ್ತಿದ್ದರು. ಕ್ರೂಸರ್ ವಾಹನ ಮುಂದೆ ಸಾಗುತ್ತಿದ್ದ ಕಂಟೇನರ್ ಲಾರಿಗೆ ಡಿಕ್ಕಿ ಹೊಡೆದು ಅವಘಡ ಸಂಭವಿಸಿದೆ ಎನ್ನಲಾಗಿದೆ.
ಡಿಕ್ಕಿಯ ರಭಸಕ್ಕೆ ರಂಗಾರೆಡ್ಡಿ ಸ್ಥಳದಲ್ಲೇ ಕೊನೆಯುಸಿರೆಳೆದರೆ, ಅವರ ಪತ್ನಿ ಆರತಿ ಸೇರಿ ಇಬ್ಬರ ಕೈ, ಕಾಲಿಗೆ ಗಂಭೀರ ಗಾಯಗಳಾಗಿವೆ. ಉಳಿದವರಿಗೆ ಸಣ್ಣ ಪುಟ್ಟ ಗಾಯಗಳಾಗಿವೆ. ಕ್ರೂಸರ್‌ನಲ್ಲಿ 12 ಜನ ತೆರಳುತ್ತಿದ್ದರು.
ಮರಣೋತ್ತರ ಪರೀಕ್ಷೆ ನಡೆಸಿ ಮೃತದೇಹ ಅಂಬುಲೆನ್ಸ್‌ನಲ್ಲಿ ಗ್ರಾಮಕ್ಕೆ ತರಲಾಗುತ್ತಿದ್ದು, ಬುಧವಾರ ಸ್ವಗ್ರಾಮದಲ್ಲಿ ಅಂತ್ಯಕ್ರಿಯೆ ನಡೆಯಲಿದೆ ಎಂದು ಮೂಲಗಳಿಂದ ತಿಳಿದು ಬಂದಿದೆ.