ಬೀದರ್‌ | ಮೇ ಮೊದಲ ವಾರದೊಳಗೆ ಕಬ್ಬಿನ ಬಾಕಿ ಬಿಲ್‌ ಪಾವತಿಗೆ ಕ್ರಮ : ಡಿ.ಕೆ.ಸಿದ್ರಾಮ

Date:

2024-25ನೇ ಹಂಗಾಮಿನಲ್ಲಿ ನಾರಂಜಾ ಸಹಕಾರ ಸಕ್ಕರೆ ಕಾರ್ಖಾನೆ (ಎನ್‌ಎಸ್‌ಎಸ್‌ಕೆ) ಗೆ ಕಬ್ಬು ಪೂರೈಸಿದ ರೈತರ ಕಬ್ಬಿನ ಬಾಕಿ ಬಿಲ್‌ ಮೇ ತಿಂಗಳ ಮೊದಲನೇ ವಾರದೊಳಗಾಗಿ ಪಾವತಿಸಲು ಎಲ್ಲ ರೀತಿಯಿಂದ ಕ್ರಮವಹಿಸಲಾಗುತ್ತದೆ ಎಂದು ಕಾರ್ಖಾನೆ ಅಧ್ಯಕ್ಷ ಡಿ.ಕೆ.ಸಿದ್ರಾಮ ತಿಳಿಸಿದ್ದಾರೆ.

- Advertisement -

ನಾರಂಜಾ ಸಹಕಾರಿ ಸಕ್ಕರೆ ಕಾರ್ಖಾನೆ ಕಾರ್ಖಾನೆಯು 2024-25ನೇ ಹಂಗಾಮಿಗೆ 3 ಲಕ್ಷ ಮೆಟ್ರಿಕ್ ಟನ್‌ಗೂ ಅಧಿಕ ಕಬ್ಬು ನುರಿಸಿ ‌ಶೇ 9.75 ರಿಕವರಿಯೊಂದಿಗೆ ಸಕ್ಕರೆ ಉತ್ಪಾದಿಸಿ ಹಂಗಾಮನ್ನು ಯಶಸ್ವಿಯಾಗಿ ಪೂರ್ಣಗೊಳಿಸಿದೆ ಎಂದು ಶುಕ್ರವಾರ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಹೊಸ ಓದು | ಬಿ. ಚಂದ್ರೇಗೌಡರ ‘ಕಾಳ ಮಾವನ...

ಬಿ. ಚಂದ್ರೇಗೌಡರ 'ಬಯಲು ಸೀಮೆಯ ಕಟ್ಟೆಪುರಾಣ' ಅಂಕಣ ಬರಹದಿಂದ ಎದ್ದುಬಂದ ಕಾಳಮಾವ ಈಗ ತನ್ನ ಕಡೇ ದಿನಗಳಲ್ಲಿದ್ದಾರೆ. ಅವರು ಕಣ್ಣುಮುಚ್ಚುವ, ಕಾಲುಮಡಚುವ ದೃಶ್ಯಗಳು ಭಾರತದ ಆತ್ಮಸಾಕ್ಷಿಯ ಅಂತ್ಯಸಂಸ್ಕಾರವನ್ನು ಸಂಕೇತಿಸುವಂತಿವೆ. ನಮ್ಮ ನೆಲದ ನಾಲಿಗೆನಿಷ್ಠೆ...

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಕೇಂದ್ರ ಸರ್ಕಾರವು ಮುಕ್ತ ಮಾರುಕಟ್ಟೆಯಲ್ಲಿ ಸಕ್ಕರೆ ಮಾರಾಟ ಮಾಡಲು ನಿಯಂತ್ರಣ ವಿಧಿಸಿರುವುದರಿಂದ ಅತಿ ಕಡಿಮೆ ಪ್ರಮಾಣದಲ್ಲಿ ಸಕ್ಕರೆಯನ್ನು ಮಾರಾಟ ಮಾಡಲು ಅನುಮತಿ ಆದೇಶ ನೀಡುತ್ತಿರುವ ಹಿನ್ನೆಲೆಯಲ್ಲಿ ಕಬ್ಬು ಅಭಿವೃದ್ಧಿ ಹಾಗೂ ಸಕ್ಕರೆ ನಿರ್ದೇಶಕರು ನಾರಂಜಾ ಸಹಕಾರಿ ಸಕ್ಕರೆ ಕಾರ್ಖಾನೆಗೆ ಕಬ್ಬು ಪೂರೈಸಿದ ರೈತರ ಕಬ್ಬಿನ ಬಾಕಿ ಬಿಲ್ ಪಾವತಿಸಲು ಅನುಕೂಲವಾಗುವಂತೆ ಹೆಚ್ಚುವರಿ ಸಕ್ಕರೆ ಬಿಡುಗಡೆ ಮಾಡಲು ಆದೇಶ ನೀಡುವಂತೆ ಕೇಂದ್ರ ಸರ್ಕಾರಕ್ಕೆ ಶಿಫಾರಸ್ಸು ಮಾಡಿರುತ್ತಾರೆ. ಅದರಂತೆ ಕೇಂದ್ರ ಸರ್ಕಾರವು ಕೂಡಾ ಸಕಾರಾತ್ಮಕವಾಗಿ ಸ್ಪಂದಿಸಿ 50,000 ಕ್ವಿಂಟಲ್ ಹೆಚ್ಚುವರಿ ಸಕ್ಕರೆ ಬಿಡುಗಡೆಗೆ ಆದೇಶ ನೀಡಲಾಗುವುದು ಎಂದು ಆಶ್ವಾಸನೆ ನೀಡಿರುತ್ತದೆ. ಅಲ್ಲದೇ ಈಗಾಗಲೇ ದಿನನಿತ್ಯ ರೂ.2 ಕೋಟಿ ರೈತರ ಕಬ್ಬಿನ ಬಿಲ್ ಬಾಕಿ ಪಾವತಿ ಮಾಡಲಾಗುತ್ತಿದೆ’ ಎಂದಿದ್ದಾರೆ.

ಈ ಸುದ್ದಿ ಓದಿದ್ದಿರಾ? ಯುಗಧರ್ಮ | ಬಾಬಾಸಾಹೇಬ್ ಅಂಬೇಡ್ಕರ್ ಅವರ ಸಂವಿಧಾನ ಎಷ್ಟು ಭಾರತೀಯ?

ಜಿಲ್ಲೆಯ ರೈತ ಸಂಘಟನೆಗಳು ಹಾಗೂ ಕಾರ್ಖಾನೆಗೆ ಕಬ್ಬು ಪೂರೈಸಿದ ರೈತರು ಯಾವುದೇ ರೀತಿ ಆತಂಕ ಪಡದೇ ಸಹಕರಿಸಲು ಕಾರ್ಖಾನೆಯ ಅಧ್ಯಕ್ಷ ಡಿ.ಕೆ. ಸಿದ್ರಾಮ ಕೋರಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಭಯೋತ್ಪಾದಕ ಸಂಘಟನೆಗಳ ಸದಸ್ಯರೊಂದಿಗೆ ಸಂಪರ್ಕ ಆರೋಪ: ಭಾಲ್ಕಿ ಮೂಲದ ಯುವಕನ ಬಂಧನ

ಇನ್‌ಸ್ಟಾಗ್ರಾಮ್ ಹಾಗೂ ವಾಟ್ಸಾಪ್‌ ಮೂಲಕ ನಿಷೇಧಿತ ಭಯೋತ್ಪಾದಕ ಸಂಘಟನೆಗಳ ಸದಸ್ಯರು ಮತ್ತು...

ರಾಯಚೂರು | ಪ್ರವಾಸಕ್ಕೆ ತೆರಳಿದ್ದ ಕಾರು ಅಪಘಾತ: ಇಬ್ಬರು ಸಾವು, ಇಬ್ಬರಿಗೆ ಗಂಭೀರ ಗಾಯ

ಪ್ರವಾಸಕ್ಕೆ ತೆರಳಿದ್ದ ಕಾರು ಅಪಘಾತಕ್ಕೀಡಾಗಿ ನಾಲ್ವರ ಪೈಕಿ ಇಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದು,...

ಹಾವೇರಿ | ನಾಳೆ ಜಿಲ್ಲಾ ಮಟ್ಟದ ಕಾರ್ಯಾಗಾರ

ಸಾವಯವ ಹಾಗೂ ನೈಸರ್ಗಿಕ ಕೃಷಿ ಪದ್ಧತಿಯನ್ನು ಉತ್ತೇಜಿಸುವ ಜೊತೆಗೆ ರೈತರು ಬೆಳೆಯುವ...

ಬೀದರ್‌ | ಪಿಸ್ತೂಲ್‌ ಮಾರಾಟ ಜಾಲ ಪತ್ತೆ ಹಚ್ಚಿದ ಪೊಲೀಸರು: ಮುಖ್ಯ ಆರೋಪಿ ಸೇರಿ ನಾಲ್ವರ ಬಂಧನ

ಅಕ್ರಮವಾಗಿ ಪಿಸ್ತೂಲ್‌ ಹಾಗೂ ಜೀವಂತ ಗುಂಡುಗಳನ್ನು ಮಾರಾಟ ಮಾಡಲು ಯತ್ನಿಸುತ್ತಿದ್ದ ದಂಧೆಕೋರರನ್ನು...