ಬೀದರ್‌ | ಶರಣರ ತತ್ವಾದರ್ಶ ಅಳವಡಿಸಿಕೊಳ್ಳಿ : ಡಿಸಿ ಬಿ.ಫೌಜಿಯಾ ತರನ್ನುಮ್

Date:

ಬಸವಾದಿ ಶರಣರ ವಚನಗಳು ನಾವು ದಿನನಿತ್ಯ ಪಠಣ ಮಾಡುವುದರಿಂದ ಜ್ಞಾನ ವೃದ್ಧಿಯಾಗುತ್ತದೆ ಎಂದು ಕಲಬುರಗಿ ಜಿಲ್ಲಾಧಿಕಾರಿ ಬಿ.ಫೌಜಿಯಾ ತರನ್ನುಮ್ ಹೇಳಿದರು.

- Advertisement -

ಬಸವಕಲ್ಯಾಣದಲ್ಲಿ ನ.29, 30ರಂದು ನಡೆಯಲಿರುವ 46ನೇ ಶರಣ ಕಮ್ಮಟ ಹಾಗೂ ಅನುಭವ ಮಂಟಪ ಉತ್ಸವ-2025ರ ಅಂಗವಾಗಿ ಆಯೋಜಿಸಿದ ರಾಜ್ಯ ಮಟ್ಟದ ವಚನ ಕಂಠಪಾಠ ಸ್ಪರ್ಧೆಯ ಉದ್ಘಾಟನೆ ನೆರವೇರಿಸಿ ಅವರು ಮಾತನಾಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಶಿವಮೊಗ್ಗ | ಅಸುರಕ್ಷತೆಯ ತಾಣವಾದ ರೈಲ್ವೆ ನಿಲ್ದಾಣ: ಪ್ರಯಾಣಿಕರ...

ಕುಡಿಯುವ ನೀರಿಲ್ಲದಿರುವುದು, ಹಾಳಾದ ಶೌಚಾಲಯಗಳು, ರಾತ್ರಿ ವೇಳೆ ಬೀದಿದೀಪ ಹಾಗೂ ಕಾವಲುಗಾರರ ಕೊರತೆಯಿಂದಾಗಿ ಈ ನಿಲ್ದಾಣವು ನಿರ್ಜನ ಪ್ರದೇಶದಂತೆ ಭಾಸವಾಗುತ್ತಿದೆ. ಇದರೊಂದಿಗೆ ಕಳ್ಳತನ, ಅನೈತಿಕ ಚಟುವಟಿಕೆಗಳು ಹೆಚ್ಚಾಗಿರುವುದು ಜೊತೆಗೆ ಸಿಸಿಟಿವಿ ಕ್ಯಾಮೆರಾಗಳೂ ಇಲ್ಲದಿರುವುದು...

ಮೋದಿ ಆಡಳಿತದಲ್ಲಿ ಮಾಹಿತಿ ಹಕ್ಕು ಕಾಯ್ದೆಯ ‘ಸ್ಥಿತಿ’ ಹೇಗಿದೆ?...

ಯಾವುದೇ ಸರ್ಕಾರ ಆಡಳಿತದಲ್ಲಿರಲಿ ಪ್ರಜಾಸತ್ತಾತ್ಮಕ ವ್ಯವಸ್ಥೆಯನ್ನು ಕಾಪಾಡಬೇಕಾದ ಸಂಸ್ಥೆಗಳ ಸ್ವಾಯತ್ತತೆ ಉಳಿಯಬೇಕು. ಅವು ಪಾರದರ್ಶಕವಾಗಿರಬೇಕು. ಪ್ರಜಾಸತ್ತೆಯ ಕಾರ್ಯವೈಖರಿಯನ್ನು ಕುರಿತಂತೆ ಮುಕ್ತ ಚರ್ಚೆ ನಡೆಯುತ್ತಿರಬೇಕು. ಇದು ಸಕ್ರಿಯ, ಅರ್ಥಪೂರ್ಣ ಪ್ರಜಾಸತ್ತೆಯ ಕನಿಷ್ಠ ಅವಶ್ಯಕತೆ. ಹಾಗಾಗಿ...

ಬಂಗಾಳ ವಿಭಜನೆ | ವಿಭಜನೆಯ ವಿಷಬೀಜದಿಂದ ಒಗ್ಗಟ್ಟಿನ ಜ್ಯೋತಿ...

ಬ್ರಿಟಿಷರ 'ಒಡೆದು ಆಳುವ ನೀತಿ'ಯ ಭಾಗವಾಗಿ 1905ರ ಅಕ್ಟೋಬರ್‌ನಲ್ಲಿ ಜಾರಿಗೆ ಬಂದ ಬಂಗಾಳ ವಿಭಜನೆಯು ಭಾರತೀಯರ ರಾಷ್ಟ್ರೀಯತೆಯನ್ನು ಒಡೆಯುವ ಕುತಂತ್ರವಾಗಿತ್ತು. ಇದಕ್ಕೆ ಪ್ರತಿಯಾಗಿ ಭಾರತೀಯರು 'ರಾಷ್ಟ್ರೀಯ ಶೋಕ ದಿನ' ಆಚರಿಸಿ, ಪರಸ್ಪರ ರಾಖಿ...

ʼವಚನ ಕಂಠಪಾಠ ಸ್ಪರ್ಧೆಯಲ್ಲಿ ಎಲ್ಲರೂ ಭಾಗವಹಿಸಿ, ವಚನ ಪಠಣ ಮಾಡುವುದರ ಜೊತೆ ಬಸವಾದಿ ಶರಣರ ತತ್ವಾದರ್ಶಗಳು ನಮ್ಮ ಜೀವನದಲ್ಲಿ ಅಳವಡಿಸಿಕೊಳ್ಳೋಣʼ ಎಂದು ನುಡಿದರು.

ಭಾಲ್ಕಿ ಹಿರೇಮಠ ಸಂಸ್ಥಾನದ ಪೀಠಾಧಿಪತಿ ಗುರುಬಸವ ಪಟ್ಟದ್ದೇವರ ಸಾನಿಧ್ಯ ವಹಿಸಿ ಮಾತನಾಡಿ, ʼವಚನ ಸಾಹಿತ್ಯ ಸರ್ವಕಾಲಕ್ಕೂ ಪ್ರಸ್ತುತವಾಗಿದೆ. ಶರಣರು ತಮ್ಮ ಅನುಭಾವದಿಂದ ವಚನಗಳು ಬರೆದಿದ್ದಾರೆ. ನಮ್ಮ ಜೀವನದ ಸಮಸ್ಯೆಗಳಿಗೆ ವಚನ ಸಾಹಿತ್ಯದಲ್ಲಿ ಪರಿಹಾರವಿದೆʼ ಎಂದರು.

ʼಚಿಕ್ಕ ವಯಸ್ಸಿನ ಮಕ್ಕಳಲ್ಲಿ ವಚನ ಪ್ರಜ್ಞೆ ಬೆಳೆದರೆ ಅವರ ವ್ಯಕ್ತಿತ್ವ ವಿಕಾಸವಾಗುತ್ತದೆ ಎಂಬ ಉದ್ದೇಶದಿಂದ ಡಾ.ಬಸವಲಿಂಗ ಪಟ್ಟದ್ದೇವರು ಅನೇಕ ವರ್ಷಗಳಿಂದ ವಚನ ಕಂಠಪಾಠ ಸ್ಪರ್ಧೆಯನ್ನು ನಡೆಸುಕೊಂಡು ಬರುತ್ತಿದ್ದಾರೆ. ಅದರ ಪರಿಣಾಮವಾಗಿ ರಾಜ್ಯದ ಅನೇಕ ಜಿಲ್ಲೆಗಳ ಸ್ಪರ್ಧಾಳುಗಳು ಭಾಗವಹಿಸುತ್ತಿರುವುದು ಹೆಮ್ಮೆಯ ಸಂಗತಿʼ ಎಂದು ತಿಳಿಸಿದರು.

WhatsApp Image 2025 11 24 at 11.08.42 AM

ಕಾರ್ಯಕ್ರಮದಲ್ಲಿ ಶಿವಾನಂದ ಸ್ವಾಮಿ, ಅತ್ತಿವೇರಿ ಬಸವಶ್ರೀ ಮಾತಾಜಿ, ಬಸವದೇವರು, ಪ್ರಭುಲಿಂಗ ದೇವರು, ಶಿವಬಸವ ದೇವರು, ಸುಗುಣಾತಾಯಿ ಅವರು ಸಮ್ಮುಖ ವಹಿಸಿದ್ದರು.

ಸುಶೀಲಾದೇವಿ ಬಿ.ಪಟೇಲ್ ಚಾರಿಟೇಬಲ್ ಟ್ರಸ್ಟ್ ಅಧ್ಯಕ್ಷ ಕುಪೇಂದ್ರ ಪಾಟೀಲ್‌ ಅವರು ಬಸವಗುರು ಪೂಜೆ ನೆರವೇರಿಸಿದರು. ಪತ್ರಕರ್ತ ದೇವಯ್ಯ ಗುತ್ತೇದಾರ ಅವರು ಅಧ್ಯಕ್ಷತೆ ವಹಿಸಿದರು. ‌ಕಲಬುರಗಿ ಜಂಟಿ ಕೃಷಿ ನಿರ್ದೇಶಕ ಸಮದ್ ಪಟೇಲ್ ಸೇರಿದಂತೆ ಪ್ರಮುಖರಾದ ವಿಜಯಲಕ್ಷ್ಮಿ ಗಡ್ಡೆ, ಬಸವರಾಜ ಮೂರುಡೆ, ಶಿವಪುತ್ರ ದುರ್ಗೆ, ಲಕ್ಷ್ಮಿಪುತ್ರ ನಿಂಬಾಳಕರ್ ಉಪಸ್ಥಿತರಿದ್ದರು.

ಇದನ್ನೂ ಓದಿ : ಉತ್ತರ ಪ್ರದೇಶ | ಮೂರು ವರ್ಷದ ಹೆಣ್ಣು ಮಗುವಿನ ಮೇಲೆ ಅತ್ಯಾಚಾರ ಎಸಗಿದ ಕಾಮುಕ

ಆಕಾಶ ಖಂಡಾಳೆ ಅವರು ಸ್ವಾಗತಿಸಿದರು. ದೀಪಕ ಠಮಕೆ ನಿರೂಪಿಸಿದರು. ಜಗನ್ನಾಥ ಪಾಟೀಲ ವಂದಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕಮಲನಗರ | ಚಕ್ರ ಎಸೆತ : ಅಂಬೇಡ್ಕರ್‌ ವಸತಿ ಶಾಲೆ ವಿದ್ಯಾರ್ಥಿ ರಾಜ್ಯ ಮಟ್ಟಕ್ಕೆ ಆಯ್ಕೆ

2026–27ನೇ ಸಾಲಿನ ಕ್ರೀಡಾಕೂಟದಲ್ಲಿ ಕಮಲನಗರ ತಾಲ್ಲೂಕಿನ ಡಾ. ಬಿ.ಆರ್. ಅಂಬೇಡ್ಕರ್ ವಸತಿ...

ಔರಾದ ಪಟ್ಟಣದಲ್ಲಿ ಕುಡಿಯುವ ನೀರಿನ ಅಭಾವ: ತೇಗಂಪೂರ ಕೆರೆ ನೀರು ಪೂರೈಕೆಗೆ ಆಗ್ರಹ

ಔರಾದ ಪಟ್ಟಣದಲ್ಲಿ ಕಳೆದ ಎಂಟು ದಿನಗಳಿಂದ ಕುಡಿಯುವ ನೀರು ಸರಬರಾಜಿನಲ್ಲಿ ವ್ಯತ್ಯಯ...

ಔರಾದ್‌ | ಖೋಖೋ : ಕೌಡಗಾಂವ ಶಾಲೆಯ ಬಾಲಕಿಯರ ತಂಡ ವಿಭಾಗ ಮಟ್ಟಕ್ಕೆ ಆಯ್ಕೆ

ಬೀದರ್‌ ಹೊರವಲಯದ ನಂದಿನಗರದಲ್ಲಿರುವ ಪಶುವೈದ್ಯಕೀಯ ವಿಶ್ವವಿದ್ಯಾಲಯದ ಆವರಣದಲ್ಲಿ ಅಕ್ಟೋಬರ್ 16ರಂದು ನಡೆದ...

ಹಾವೇರಿ | ಬ್ಯಾಂಕಿಂಗ್ ವ್ಯವಹಾರದಲ್ಲಿ ಎಚ್ಚರಿಕೆ ವಹಿಸಿ: ಯಶೋಧಾ ವಂಟಗೋಡಿ

"ಸೈಬರ್ ವಂಚನೆ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಸಾರ್ವಜನಿಕರು ಬ್ಯಾಂಕಿಂಗ್ ವ್ಯವಹಾರಗಳಲ್ಲಿ ಎಚ್ಚರಿಕೆ...