ಬೀದರ್‌ | ಭೀಮ್‌ ಪ್ರಜಾ ಸಂಘಕ್ಕೆ ಜಿಲ್ಲಾಧ್ಯಕ್ಷರಾಗಿ ಆಕಾಶ ಶಿಂಧೆ ನೇಮಕ

Date:

ಭೀಮ್‌ ಪ್ರಜಾ ಸಂಘದ ಬೀದರ್‌ ಜಿಲ್ಲಾಧ್ಯಕ್ಷರಾಗಿ ಆಕಾಶ ಶಿಂಧೆ ಅವರನ್ನು ನೇಮಕ ಮಾಡಲಾಗಿದೆ.

- Advertisement -

ಬೀದರ್‌ ನಗರದ ಖಾಸಗಿ ಹೊಟೇಲ್‌ನಲ್ಲಿ ಸಂಘದ ರಾಜ್ಯಾಧ್ಯಕ್ಷ ವೈಟ್‌ಫೀಲ್ಡ್, ಉಪಾಧ್ಯಕ್ಷ ಮುನಿರತ್ನ ಅರವಿಂದ್ ಅವರ ನೇತ್ರತ್ವದಲ್ಲಿ ನಡೆದ ಸಭೆಯಲ್ಲಿ ಜಿಲ್ಲಾ ಸಮಿತಿಗೆ ಪದಾಧಿಕಾರಿಗಳ ಆಯ್ಕೆ ನಡೆಯಿತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

History Repeats | ರೋಮ್‌ ಉರಿಯುತ್ತಿದ್ದಾಗ ಪಿಟೀಲು ನುಡಿಸಿದ...

ದೇಶದ ಪ್ರಜಾಪ್ರಭುತ್ವದ ಆಧಾರಸ್ತಂಭಗಳು ಒಂದೊಂದಾಗಿ ಕುಸಿಯುತ್ತಾ, ಚುನಾವಣಾ ವ್ಯವಸ್ಥೆಯೇ ಅಕ್ರಮ ಎಸಗುತ್ತಿರುವಾಗ, ನಿರುದ್ಯೋಗ-ಬೆಲೆ ಏರಿಕೆಯ ಭಾರದಿಂದ ಜನ ಹೈರಾಣಾಗಿರುವಾಗ ಭಾರತದ ಪ್ರಧಾನಿ ಭಜನೆ ಮಾಡುತ್ತಿದ್ದಾರೆ. ರೋಂ ಹೊತ್ತಿ ಉರಿಯುತ್ತಿದ್ದಾಗ ನೀರೋ ಪಿಟೀಲು...

ಅಪರಾಧಿಗಳ ಪರ ಬಿ ಸಿ ರೋಡ್ ಚಲೋ: ಎಂದಿನಂತೆ...

ಕೊಲೆಯಂತಹ ಗಂಭೀರ ಅಪರಾಧ ಎಸಗಿದ ಆರೋಪ ಹೊತ್ತವರ ಪರವಾಗಿ ಸಂಘಪರಿವಾರ ಬೀದಿಗಿಳಿಯುತ್ತಿರುವುದು ಇದೇ ಮೊದಲೇನಲ್ಲ. ಕರಾವಳಿಯ ಜನತೆ ಇಂತಹ ಪ್ರಚೋದನಾತ್ಮಕ ನಡೆಗಳನ್ನು ತಿರಸ್ಕರಿಸಿ, ಸತ್ಯ ಮತ್ತು ನ್ಯಾಯದ ಪರವಾಗಿ ನಿಲ್ಲಬೇಕಾಗಿದೆ. ಕರಾವಳಿ ಕರ್ನಾಟಕವಾಗಲಿ...

14 ಆಕ್ಷೇಪಗಳಿಂದ SIT ಬೇಡಿಕೆಯವರೆಗೆ: ಗ್ಯಾನೇಶ್‌ ಕುಮಾರ್ ಸುತ್ತ...

ಚುನಾವಣಾ ಆಯೋಗದೊಳಗಿನ ಭಿನ್ನಾಭಿಪ್ರಾಯಗಳು ಬಹಿರಂಗಗೊಂಡ ಬೆನ್ನಲ್ಲೇ ಎಸ್‌ಐಆರ್‌ ವಿವಾದ ಹೊಸ ತಿರುವು ಪಡೆದುಕೊಂಡಿದೆ. ಮುಖ್ಯ ಚುನಾವಣಾ ಆಯುಕ್ತ ಗ್ಯಾನೇಶ್‌ ಕುಮಾರ್ ಅವರ ನಿರ್ಧಾರಗಳ ಕುರಿತು ಚುನಾವಣಾ ಆಯುಕ್ತರಾದ ಸುಖಬೀರ್‌ ಸಿಂಗ್‌ ಸಂಧು ಮತ್ತು...

ರಾಜ್ಯಾಧ್ಯಕ್ಷ ಮುರುಗೇಶ ಅವರು ಮಾತನಾಡಿ, ʼನಿಷ್ಕಲ್ಮಶ ನಾಡ ಪ್ರೇಮ, ನಡೆ-ನುಡಿ, ಉತ್ತಮ ಚಾರಿತ್ರ್ಯ ಹಾಗೂ ಸಮಾಜಮುಖಿ ಕೆಲಸಗಳನ್ನು ನಿಸ್ವಾರ್ಥ ಭಾವನೆಯಿಂದ ಮಾಡುವ ಉದ್ದೇಶದಿಂದ ಜಿಲ್ಲಾ ಅಧ್ಯಕರನ್ನಾಗಿ ನೇಮಿಸಲಾಗಿದೆ. ನಾಡಾಭಿಮಾನ ಎತ್ತಿ ಹಿಡಿಯುವುದರೊಂದಿಗೆ ದಲಿತರ, ಶೋಷಿತರ, ರೈತರ, ಕಾರ್ಮಿಕರ, ಮಹಿಳೆಯರ ಹಾಗೂ ವಿದ್ಯಾರ್ಥಿಗಳ ಸಮಸ್ಯೆಗಳಿಗೆ ಸ್ಪಂದಿಸಿ ನ್ಯಾಯಕ್ಕಾಗಿ ಶ್ರಮಿಸಬೇಕುʼ ಎಂದು ಹೇಳಿದರು.

ನೂತನ ಜಿಲ್ಲಾಧ್ಯಕ್ಷ ಆಕಾಶ ಶಿಂಧೆ ಮಾತನಾಡಿ, ʼಭೀಮ್‌ ಪ್ರಜಾ ಸಂಘದ ಜವಾಬ್ದಾರಿ ಅತ್ಯಂತ ಪ್ರಾಮಾಣಿಕವಾಗಿ ನಿಭಾಯಿಸುವೆ. ಬುದ್ಧ, ಬಸವ ಹಾಗೂ ಅಂಬೇಡ್ಕರ್ ಅವರ ತತ್ವ ಸಿದ್ಧಾಂತದ ಮಾರ್ಗದರ್ಶನದಲ್ಲಿ ಸಂಘಟನೆಯ ಬಲಪಡಿಸಿ ನೊಂದವರಿಗೆ ಪರ ದನಿಯಾಗುವ ಕೆಲಸ ಮಾಡುತ್ತೇವೆʼ ಎಂದು ನುಡಿದರು.

ಇದೇ ಸಂದರ್ಭದಲ್ಲಿ ಅಯೋದ್ದೀನ್ (ಜಿಲ್ಲಾ ಉಪಾಧ್ಯಕ್ಷ), ಚಂದ್ರಕಾಂತ್ ದೇವಕೆ (ಜಿಲ್ಲಾ ಕಾರ್ಯದರ್ಶಿ) ಶಿವಕುಮಾರ್ ಶಿಂದೆ (ಜಿಲ್ಲಾ ಖಜಾಂಚಿ) ಅವರನ್ನು ಆಯ್ಕೆ ಮಾಡಲಾಯಿತು.

ಇದನ್ನೂ ಓದಿ : ಸರಾಯಿ ಬಂದ್ ಮಾಡಿದ್ರೆ ಸಿದ್ರಾಮಯ್ಯ ಫೋಟೊ ಜಗಲಿ ಮೇಲಿಟ್ಟು ಪೂಜೆ ಮಾಡ್ತೀನಿ : ಶಾಸಕ ಶರಣು ಸಲಗರ

ಈ ಸಭೆಯಲ್ಲಿ ಸುರೇಶ್ ಜೋಜನಾಕರ್, ಸಂತೋಷ್ ಪಡಸಾಲೆ, ಹರ್ಷಿತ್ ದಾಂಡೇಕರ್, ಜೈವರ್ಧನ್ ಫುಲೆ, ಉಮಾಕಾಂತ್ ಶಾಸ್ತ್ರಿ , ಸಂತೋಷ್ ಹಾಲೆಹಿಪ್ಪುರ್ಗೆ, ರಾಜು ಗುಂಗೆ, ನರೇಶ್ ಚಿದ್ರಿ ಮತ್ತಿತರರು ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮಂಗಳೂರು | ಬಾಲ್ಕನಿಯ ತಡೆಗೋಡೆ ಕುಸಿದು ಬಿದ್ದು ಓರ್ವ ವಿದ್ಯಾರ್ಥಿಯ ಮೆದುಳು ನಿಷ್ಕ್ರಿಯ, ನಾಲ್ವರಿಗೆ ಗಾಯ

ಮಂಗಳೂರಿನ ಎಮ್ಮೆಕೆರೆಯ ರಾಮ ಲಕ್ಷ್ಮೀನಾರಾಯಣ ಕನ್ವೆನ್ಷನ್ ಹಾಲ್‌ನ ಬಾಲ್ಕನಿಯ ತಡೆಗೋಡೆ ಕುಸಿದು...

ಯಾದಗಿರಿ | ಯಕ್ಷಿಂತಿ ಗ್ರಾಮಕ್ಕೆ ಮೂಲಸೌಲಭ್ಯ ನೀಡಿ: ಪ್ರಜಾಸೇವಾ ಅಭಿಯಾನದಲ್ಲಿ ಗ್ರಾಮಸ್ಥರ ಮನವಿ

ವಡಗೇರಾ ತಾಲ್ಲೂಕಿನ ಹಯ್ಯಾಳ ಬಿ ಗ್ರಾಮದಲ್ಲಿ ನಡೆದ ಹೋಬಳಿ ಮಟ್ಟದ ಪ್ರಜಾಸೇವಾ...

ಯಾದಗಿರಿ | ಜನಜಾಗೃತಿ ಸಮಾವೇಶ: ಮಲ್ಲಣ್ಣ ದಾಸನಕೇರಿ ಅಧ್ಯಕ್ಷರಾಗಿ ನೇಮಕ

ಜಿಲ್ಲಾ ಕಾಂಗ್ರೆಸ್ ಪರಿಶಿಷ್ಟ ಜಾತಿ ವಿಭಾಗದ ವತಿಯಿಂದ ಹಮ್ಮಿಕೊಳ್ಳಲಿರುವ ಮಾದಿಗರ ಜನಜಾಗೃತಿ...

ಯಾದಗಿರಿ | ಪ್ರಜಾಸೇವಾ ಅಭಿಯಾನ: ದೂರುಗಳ ಪರಿಶೀಲನೆಗೆ ಅಧಿಕಾರಿಗಳಿಗೆ ಖಡಕ್ ಸೂಚನೆ

ಶಹಾಪುರ ಹಾಗೂ ಗೋಗಿ ಹೋಬಳಿ ವ್ಯಾಪ್ತಿಯ ಪ್ರಜಾಸೇವಾ ಅಭಿಯಾನದಲ್ಲಿ ಸಲ್ಲಿಕೆಯಾದ ದೂರುಗಳ...