ಬೀದರ್ ತಾಲೂಕಿನ ಬರಿದಾಬಾದ ಗ್ರಾಮದಲ್ಲಿ ಕಲುಷಿತ ನೀರು ಸೇವಿಸಿ 21 ಜನ ಅಸ್ವಸ್ಥಗೊಂಡ ಪ್ರಕರಣದ ಹಿನ್ನಲೆಯಲ್ಲಿ ಕರ್ತವ್ಯ ಲೋಪ ಎಸಗಿದ ಪಿಡಿಒ ಅವರನ್ನು ಅಮಾನತು ಮಾಡಲಾಗಿದೆ.
ಬೀದರ್ ತಾಲೂಕಿನ ಚಟನಳ್ಳಿ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ದೇವಪ್ಪಾ ಅವರನ್ನು ಜಿಲ್ಲಾ ಪಂಚಾಯತ್ ಸಿಇಒ ಶಿಲ್ಪಾ ಎಂ. ಅವರು ಅಮಾನತುಗೊಳಿಸಿ ಆದೇಶಿಸಿದ್ದಾರೆ.
ಈ ಸುದ್ದಿ ಓದಿದ್ದೀರಾ? ಚಿತ್ರದುರ್ಗ | ಗೃಹಲಕ್ಷ್ಮಿ ಯೋಜನೆ ನೋಂದಣಿಗೆ ಹಣ ವಸೂಲಿ; ಅಧಿಕಾರಿಗಳ ದಾಳಿ
“ಒಬ್ಬ ಜವಾಬ್ದಾರಿಯುತ ಸರ್ಕಾರಿ ನೌಕರ, ಕರ್ತವ್ಯದಲ್ಲಿ ಆಸಕ್ತಿ ತೋರದೆ, ಜನರಿಗೆ ಶುದ್ಧ ಕುಡಿಯುವ ನೀರು ಪೂರೈಸುವಲ್ಲಿ ಸಂಪೂರ್ಣ ವಿಫಲವಾಗಿರುವುದು ಕಂಡುಬಂದಿರುವ ಕಾರಣ ಪಿಡಿಒ ವಿರುದ್ಧ ಶಿಸ್ತು ಕ್ರಮ ಜರುಗಿಸಲಾಗಿದೆ” ಎಂದು ಸಿಇಒ ತಿಳಿಸಿದ್ದಾರೆ.