ಡಾ.ಬಿ.ಆರ್.ಅಂಬೇಡ್ಕರ್ ಸ್ಮರಣಾರ್ಥ ಪ್ರತಿ ವರ್ಷ ನೀಡುವ ‘ಅಂಬೇಡ್ಕರ್ ಪ್ರಶಸ್ತಿ’ಗೆ ಬೀದರ್ ಜಿಲ್ಲೆಯಿಂದ ಮಾಜಿ ವಿಧಾನ ಪರಿಷತ್ ಸದಸ್ಯ ಕೆ.ಪುಂಡಲೀಕರಾವ್ ಶೆಟ್ಟಿಬಾ ಆಯ್ಕೆ ಮಾಡಲಾಗಿದೆ.
ರಾಜ್ಯದಲ್ಲಿ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿರುವ ಒಟ್ಟು 15 ಸಾಧಕರನ್ನು ಆಯ್ಕೆ ಮಾಡಲಾಗಿದ್ದು,ಈ ಪ್ರಶಸ್ತಿಯು ತಲಾ ₹5 ಲಕ್ಷ ನಗದು, 20 ಗ್ರಾಂ ಚಿನ್ನದ ಪದಕ ಮತ್ತು ಫಲಕವನ್ನು ಹೊಂದಿದೆ.
ಕೆ.ಪುಂಡಲೀಕರಾವ್ ಅವರು ಕಳೆದ ಐದು ದಶಕದಿಂದ ರಾಜಕೀಯ ಕ್ಷೇತ್ರದಲ್ಲಿ ಸಕ್ರಿಯರಾಗಿದ್ದಾರೆ. ಔರಾದ್‌ನಲ್ಲಿ ಸಮತಾ ಪ್ರತಿಷ್ಠಾನ ಕಾರ್ಯ ಸಮಿತಿ ಶಿಕ್ಷಣ ಸಂಸ್ಥೆ ಸ್ಥಾಪಿಸಿ ಅದರ ಮೂಲಕ ಜಿಲ್ಲೆಯ ವಿವಿಧ ತಾಲೂಕುಗಳಲ್ಲಿ ಶಾಲೆ, ಬಿ.ಇಡ್, ಪಿಯುಸಿ ಹಾಗೂ ಪದವಿ ಕಾಲೇಜು ತೆರೆದು ಗ್ರಾಮೀಣ ಭಾಗದಲ್ಲಿ ಶಿಕ್ಷಣ ಅಭಿವೃದ್ಧಿಗೆ ಶ್ರಮಿಸುತ್ತಿದ್ದಾರೆ.
ಸಮಾಜ ಕಲ್ಯಾಣ ಇಲಾಖೆಯ ವತಿಯಿಂದ ಇದೇ 14ರಂದು ವಿಧಾನಸೌಧದ ಬ್ಯಾಂಕ್ವೆಟ್ ಸಭಾಂಗಣದಲ್ಲಿ ನಡೆಯಲಿರುವ ಡಾ.ಅಂಬೇಡ್ಕರ್ ಅವರ 134ನೇ ಜನ್ಮ ದಿನಾಚರಣೆ ಕಾರ್ಯಕ್ರಮದಲ್ಲಿ ಪ್ರಶಸ್ತಿ ಪ್ರದಾನ ನಡೆಯಲಿದೆ.
ಈ ಸುದ್ದಿ ಓದಿದ್ದೀರಾ? ಕೊಪ್ಪಳ | 42ನೇ ವಯಸ್ಸಿನಲ್ಲಿ ಮಗಳೊಂದಿಗೆ ಪಿಯು ಪರೀಕ್ಷೆ ಬರೆದು ಪಾಸಾದ ತಾಯಿ
2023ನೇ ಸಾಲಿನ ಅಂಬೇಡ್ಕರ್ ಪ್ರಶಸ್ತಿಗೆ ಭಾಜನರಾದ ಕೆ.ಪುಂಡಲೀಕರಾವ್ ಶೆಟ್ಟಿಬಾ ಅವರಿಗೆ ನಾಲಂದಾ ಪಿಯು ಕಾಲೇಜು ಪ್ರಾಚಾರ್ಯ ಡಾ.ಮನ್ಮಥ ಡೋಳೆ, ಮುಖಂಡರಾದ ಡಾ.ಸಂತೋಷ ಕೌಟೆ, ಹೋರಾಟಗಾರ ಶಿವಕುಮಾರ್ ಕಾಂಬಳೆ ಸೇರಿದಂತೆ ಅನೇಕರು ಹರ್ಷ ವ್ಯಕ್ತಪಡಿಸಿದ್ದಾರೆ.