ಹೆತ್ತ ಮಗಳ ಮೇಲೆಯೇ ಕಾಮುಕ ತಂದೆಯೊಬ್ಬ ಅತ್ಯಾಚಾರ ಎಸಗಿರುವ ಪೈಶಾಚಿಕ ಕೃತ್ಯ ಬೀದರ್ ಜಿಲ್ಲೆಯ ಬಸವಕಲ್ಯಾಣ ತಾಲೂಕಿನಲ್ಲಿ ನಡೆದಿದೆ.
ಜುಲೈ 29ರ ಸಂಜೆ ಮನೆಯಲ್ಲಿ ಯಾರು ಇಲ್ಲದಾಗ 12 ವರ್ಷದ ಅಪ್ರಾಪ್ತ ಮಗಳ ಮೇಲೆ ಕಾಮುಕ ತಂದೆ ಅತ್ಯಾಚಾರ ಎಸಗಿದ್ದಾನೆ. ಆ ವೇಳೆ ಸಂತ್ರಸ್ತೆಯ ಅಜ್ಜಿ ಮನೆಗೆ ಬಂದಿದ್ದು, ಕೃತ್ಯ ಎಸಗುತ್ತಿದ್ದ ಆರೋಪಿ ಸಿಕ್ಕಿಬಿದ್ದಿದ್ದಾನೆ.
ಕೊರೊನಾ ಲಾಕ್‌ಡೌನ್ (ಕಳೆದ ಮೂರು ವರ್ಷ) ಸಮಯದಿಂದಲೇ ನಿರಂತರವಾಗಿ ಅಪ್ರಾಪ್ತೆಯ ಮೇಲೆ ಅತ್ಯಾಚಾರ ಎಸಗಿದ್ದಾನೆ. ಕೃತ್ಯದ ಬಗ್ಗೆ ಯಾರ ಬಳಿಯಾದರೂ ಬಾಯಿ ಬಿಟ್ಟರೆ ಕೊಲೆ ಮಾಡುತ್ತೇನೆಂದು ಸಂತ್ರಸ್ತೆಗೂ, ಆಕೆಯ ತಾಯಿಗೂ ಬೆದರಿಕೆ ಹಾಕಿದ್ದ ಎಂದು ಆರೋಪಿಸಲಾಗಿದೆ.
ಸಂತ್ರಸ್ತೆಯ ಅಜ್ಜಿ ಬಸವಕಲ್ಯಾಣ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಆಕೆಯ ದೂರಿನ ಆಧಾರದ ಮೇಲೆ ಆರೋಪಿಯ ವಿರುದ್ಧ ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಿಸಿರುವ ಪೊಲೀಸರು, ಆರೋಪಿಯನ್ನು ಬಂಧಿಸಿದ್ದಾರೆ.
ಶಿಶು ಅಭಿವೃದ್ಧಿ ಯೋಜನೆ ಇಲಾಖೆಯ ಮೇಲ್ವಿಚಾರಕಿ ಸಂತ್ರಸ್ತೆ ಮನೆಗೆ ಭೇಟಿ ನೀಡಿದ್ದು, ಸಂತ್ರಸ್ತೆಯನ್ನು ಆಪ್ತ ಸಮಾಲೋಚನೆಗೆ ಒಳಪಡಿಸಿದ್ದಾರೆ.