ಬೀದರ್‌ | ಎಫ್‌ಆರ್‌ಎಸ್ ಕ್ರಮ ಖಂಡಿಸಿ ಅಂಗನವಾಡಿ ಕಾರ್ಯಕರ್ತೆಯರ ಪ್ರತಿಭಟನೆ

Date:

ಅಂಗನವಾಡಿ ಕಾರ್ಯಕರ್ತೆಯರ ಮುಖಚರ್ಯೆ ಗುರುತಿಸುವ ಕ್ರಮಕ್ಕೆ (ಎಫ್ಆರ್‌ಎಸ್) ತಡೆ ಹಾಗೂ ಐಸಿಡಿಎಸ್ ಯೋಜನೆ ಕಾಯಂಗೊಳಿಸುವುದು ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ರಾಜ್ಯ ಅಂಗನವಾಡಿ ನೌಕರರ ಸಂಘ(ಎಐಟಿಯು) ನೇತ್ರತ್ವದಲ್ಲಿ ಕಾರ್ಯಕರ್ತೆಯರು ಪ್ರತಿಭಟನೆ ನಡೆಸಿದರು.

- Advertisement -

ಔರಾದ್‌ ತಾಲೂಕಿನ ಸಂತಪೂರನಲ್ಲಿ ಇರುವ ತಾಲೂಕು ಶಿಶು ಅಭಿವೃದ್ಧಿ ಯೋಜನಾಧಿಕಾರಿ ಕಚೇರಿ ಎದುರು ಬುಧವಾರ ಪ್ರತಿಭಟನೆ ನಡೆಸಿದ ಕಾರ್ಯಕರ್ತೆಯರು ಸರ್ಕಾರಕ್ಕೆ ಸಲ್ಲಿಸುವ ಮನವಿಗೆ ಸಹಿ ಸಂಗ್ರಹ ಅಭಿಯಾನ ಕೈಗೊಂಡರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

SIR ವಿರೋಧಿ ಹೋರಾಟ: ಡಿಕೆಶಿ–ಮಮತಾ ತೋರಿದ ದಾರಿ ವಿಪಕ್ಷಗಳಿಗೆ...

ಭಾರತದ ಪ್ರಜಾಪ್ರಭುತ್ವದ ಅಡಿಪಾಯವೇ ನ್ಯಾಯಯುತ, ಸ್ವತಂತ್ರ ಹಾಗೂ ಪಾರದರ್ಶಕ ಚುನಾವಣೆ. ಆದರೆ, ಅಧಿಕಾರದ ಗದ್ದುಗೆ ಏರಿರುವ ಮೋದಿ-ಶಾ ಜೋಡಿ, ಈ ಅಡಿಪಾಯವನ್ನೇ (ಚುನಾವಣಾ ಆಯೋಗವನ್ನೇ) ತಮ್ಮ ಸೂತ್ರದ ಬೊಂಬೆ ಮಾಡಿಕೊಂಡಿದೆ. ಎಸ್‌ಐಆರ್‌ ಹೆಸರಿನಲ್ಲಿ...

ಪೊಲೀಸ್ ಇಲಾಖೆ ಸುಧಾರಣೆಗೆ 3 ಸಮಿತಿ; ಬದಲಾವಣೆ ಅಗತ್ಯವೇ?...

ಪೊಲೀಸ್‌ ಇಲಾಖೆಯ ಕಾರ್ಯವೈಖರಿಯಲ್ಲಿ ಸುಧಾರಣೆ, ಡಿಜಿಟಲ್‌ ಟಚ್‌ ಹಾಗೂ ನೇಮಕಾತಿ ವ್ಯವಸ್ಥೆಯ ಪುನರ್‌ರಚನೆಗೆ ರಾಜ್ಯ ಸರ್ಕಾರ ಉನ್ನತ ಮಟ್ಟದ 3 ತಜ್ಞರ ಸಮಿತಿಗಳನ್ನು ರಚಿಸಿದೆ. ಆದರೆ, ಪೊಲೀಸ್‌ ಠಾಣೆಗಳಲ್ಲಿ ಸಾರ್ವಜನಿಕರು ಎದುರಿಸುವ ಸಮಸ್ಯೆಗಳಿಂದ...

ಪಾಕಿಸ್ತಾನದಲ್ಲಿ ಅಹಿಂಸಾ ಮೂರ್ತಿಯ ‘ರಹಸ್ಯರಕ್ಷಣೆ’: ಕರಾಚಿಯಿಂದ ಇಸ್ಲಾಮಾಬಾದ್‌ಗೆ ಗಾಂಧಿ...

ಪಾಕಿಸ್ತಾನದ ಇಸ್ಲಾಮಾಬಾದ್‌ನಲ್ಲಿರುವ ಭಾರತೀಯ ಹೈಕಮಿಷನ್ ಕಚೇರಿಯ ಪ್ರವೇಶ ದ್ವಾರದಲ್ಲಿ ಮಹಾತ್ಮ ಗಾಂಧೀಜಿಯವರ ಭವ್ಯ ಕಂಚಿನ ಪ್ರತಿಮೆ ಇಂದಿಗೂ ಗಾಂಭೀರ್ಯದಿಂದ ನಿಂತಿದೆ. ಕೈಯಲ್ಲಿ ಊರುಗೋಲು ಹಿಡಿದು ದೂರದ ದಿಗಂತವನ್ನು ದಿಟ್ಟಿಸುವಂತಿರುವ ಈ ಬಾಪೂ ಪ್ರತಿಮೆಯು...

ರಾಜ್ಯ ಅಂಗನವಾಡಿ ನೌಕರರ ಸಂಘದ(ಸಿಐಟಿಯು) ಔರಾದ್‌ ತಾಲೂಕು ಅಧ್ಯಕ್ಷೆ ಪದ್ಮಾವತಿ ಸ್ವಾಮಿ ಮಾತನಾಡಿ, ʼಮಾನವ ಅಭಿವೃದ್ಧಿ ಸೂಚ್ಯಂಕಕ್ಕೆ ಇರುವ ಐಸಿಡಿಎಸ್ ಯೋಜನೆ ಜಾರಿ ಆಗಿ 50 ವರ್ಷಗಳಾಗಿದೆ. ಆದರೆ, ಈ ಯೋಜನೆಯನ್ನು ಸರಳೀಕರಿಸಿ, ಫಲಾನುಭವಿಗಳನ್ನು ಆಕರ್ಷಿಸಲು ಸರ್ಕಾರ ಕ್ರಮ ರೂಪಿಸಬೇಕಿತ್ತು. ಅದರ ಬದಲಿಗೆ ಸಂಕೀರ್ಣಗೊಳಿಸಲಾಗಿದೆ. ಅಂಗನವಾಡಿ ಕಾರ್ಯಕರ್ತೆಯರಿಗೆ ಯಾವುದೇ ಸೌಲಭ್ಯ ನೀಡದೆ, ಮುಖಚರ್ಯೆ ಗುರುತಿಸುವ ಕ್ರಮ (ಎಫ್‍ಆರ್‌ಎಸ್) ಅಳವಡಿಸಿರುವುದರಿಂದ ತೊಂದರೆ ಅನುಭವಿಸುವಂತಾಗಿದೆʼ ಎಂದು ಆರೋಪಿಸಿದರು.

ʼ2013ರ ಆಹಾರ ಭದ್ರತೆ ಕಾಯ್ದೆ ಪ್ರಕಾರ ಯಾವುದೇ ಫಲಾನುಭವಿ ಹಸಿವಿನಿಂದ ನರಳಬಾರದು ಎಂಬ ಆಶಯಕ್ಕೆ ಹಿನ್ನಡೆಯಾಗಿದೆ. ಅಲ್ಲದೆ, ಆಧಾರ್ ಕಾರ್ಡ್ ಇಲ್ಲ ಎಂಬ ಕಾರಣಕ್ಕೆ ಸಬ್ಸಿಡಿ ಮತ್ತು ಉಚಿತವಾಗಿ ಸಿಗುವ ಸೌಲಭ್ಯಗಳಿಂದ ಫಲಾನುಭವಿಗಳು ವಂಚಿತರಾಗಬಾರದು ಎಂಬ ಸುಪ್ರೀಂ ಕೋರ್ಟ್ ಆದೇಶವೂ ಪಾಲನೆಯಾಗುತ್ತಿಲ್ಲ. ಎಫ್ಆರ್‌ಎಸ್ ಜಾರಿ ಮೂಲಕ ಫಲಾನುಭವಿಗಳ ಹಕ್ಕನ್ನು ನಿರಾಕರಿಸಲಾಗುತ್ತಿದೆʼ ಎಂದು ದೂರಿದರು.

1004305315
ಸಿಡಿಪಿಒ ಇಮಲಪ್ಪಾ ಅವರಿಗೆ ಹಕ್ಕೊತ್ತಾಯ ಪತ್ರ ಸಲ್ಲಿಸಿದರು.

ತಾಲೂಕು ಖಜಾಂಚಿ ಸುದೇಷ್ಣಾ ಬಿರಾದರ್‌ ಮಾತನಾಡಿ, ʼಎಫ್‍ಆರ್‌ಎಸ್ ಮೂಲಕ ಸಂಗ್ರಹಿಸುವ ಫಲಾನುಭವಿಗಳ ವೈಯುಕ್ತಿಕ ಮಾಹಿತಿ ಸೋರಿಕೆ ಆಗುತ್ತಿದೆ. ಇದರಿಂದ ಸೈಬರ್ ವಂಚನೆಗಳು ಹೆಚ್ಚಾಗುತ್ತಿವೆ. ಶೇ 60ರಷ್ಟು ತನ್ನ ಪಾಲಿನ ವಂತಿಗೆಯನ್ನು ನೀಡಬೇಕಾದ ಕೇಂದ್ರ ಸರ್ಕಾರ ಎಫ್‍ಆರ್‌ಎಸ್ ನಿಬಂಧನೆ ಹಾಕುವ ಮೂಲಕ ತನ್ನ ಪಾಲಿನ ಹಣ ಕಡಿಮೆ ಮಾಡಿಕೊಳ್ಳಲು ಮುಂದಾಗಿದೆʼ ಎಂದು ದೂರಿದರು.

2018ರಿಂದ ಅನ್ವಯವಾಗುವಂತೆ ವೇತನ ಹೆಚ್ಚಿಸಬೇಕು. ಫಲಾನುಭವಿಗಳ ಘಟಕದ ವೆಚ್ಚ ಹೆಚ್ಚಿಸುವುದು, ಎಫ್‌ಆರ್‌ಎಸ್ ನಿಲ್ಲಿಸುವುದು ಸೇರಿದಂತೆ ವಿವಿಧ ಬೇಡಿಕೆಗಳಿಗಾಗಿ ಒತ್ತಾಯಿಸಿ ಬುಧವಾರ (ಆ.21)ರಂದು ಕಪ್ಪು ಪಟ್ಟಿ ಧರಿಸಿ ಕಪ್ಪು ದಿನಾಚರಣೆ ಆಚರಿಸಿದರು.

ಇದನ್ನೂ ಓದಿ : ಬೀದರ್‌ | ಮಳೆ ಅಬ್ಬರ : ಮೂರು ದಿನಗಳಲ್ಲಿ 138 ಮನೆಗಳಿಗೆ ಹಾನಿ, 7,775 ಹೆಕ್ಟೇರ್‌ ಬೆಳೆ ನಾಶ!

ಸಂಘದ ತಾಲ್ಲೂಕು ಕಾರ್ಯದರ್ಶಿ ನರಸಮ್ಮಾ ಸಾದೂರೆ ಹಾಗೂ ಪ್ರಮುಖರಾದ ಸುಧಾರಾಣಿ, ರೂಪಾವತಿ, ಮಹಾನಂದಾ, ರಂಜನಾ, ದ್ರಾಕ್ಷಿಣಿ, ಸತ್ಯಾವತಿ, ಕಾವೇರಿ, ಸವಿತಾ, ವಿಮಲ, ಉಮಾ ಸೇರಿದಂತೆ ಕಮಲನಗರ, ಔರಾದ್‌ ತಾಲೂಕಿನ ಅಂಗನವಾಡಿ ಕಾರ್ಯಕರ್ತೆಯರು ಪಾಲ್ಗೊಂಡಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗದಗ | ಸಾರಿಗೆ ಬಸ್ ಟಾಯರ್ ಸ್ಪೋಟ ಪರಿಣಾಮ ಕಂಡಕ್ಟರ್ ಕಾಲಿಗೆ ಗಾಯ

ಲಕ್ಷ್ಮೇಶ್ವರ ಮಾರ್ಗದಲ್ಲಿ ಸಂಚರಿಸುತ್ತಿದ್ದ ವಾಯವ್ಯ ಕರ್ನಾಟಕ ಸಾರಿಗೆ ಸಂಸ್ಥೆಯ ಬಸ್ (ಸಂಖ್ಯೆ:...

ಉಡುಪಿ | ತುಳುನಾಡ ರಕ್ಷಣಾ ವೇದಿಕೆ ಮಹಿಳಾ ಘಟಕದಿಂದ ಅರ್ಥಪೂರ್ಣ ಗಾಂಧಿ ಜಯಂತಿ

ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರ ಜಯಂತಿಯ ಅಂಗವಾಗಿ ತುಳುನಾಡ ರಕ್ಷಣಾ ವೇದಿಕೆ (ರಿ.)...

ಉಡುಪಿ | ಸಮುದಾಯದ ಅಭಿವೃದ್ಧಿಗೆ ಉದ್ಯಮಿಗಳ ಒಗ್ಗಟ್ಟು ಅಗತ್ಯ: ಮುಮ್ತಾಜ್ ಮನ್ಸೂರಿ

ನಮ್ಮ ಸಮುದಾಯದ ದುರ್ಬಲ ವರ್ಗಗಳನ್ನು ಮೇಲಕ್ಕೆತ್ತಲು ಎಲ್ಲರೂ ಬೆಂಬಲ ಮತ್ತು ಸಹಕಾರದೊಂದಿಗೆ...