ಬೀದರ್‌ | ಅನ್ನಭಾಗ್ಯ ಯೋಜನೆ : ನಗದು ಬದಲು 5ಕೆ.ಜಿ. ಅಕ್ಕಿ ವಿತರಣೆ : ಜಿಲ್ಲಾಧಿಕಾರಿ ಶಿಲ್ಪಾ ಶರ್ಮಾ

Date:

ʼಅನ್ನಭಾಗ್ಯʼ ಯೋಜನೆ ಅಡಿಯಲ್ಲಿ ಪಡಿತರ ಚೀಟಿದಾರರಿಗೆ ವಿತರಿಸಲಾಗುವ ಕೇಂದ್ರ ಸರ್ಕಾರದ 5ಕೆ.ಜಿ ಅಕ್ಕಿಯೊಂದಿಗೆ ರಾಜ್ಯ ಸರ್ಕಾರದಿಂದ ಹೆಚ್ಚುವರಿಯಾಗಿ 5 ಕೆ.ಜಿ ಅಕ್ಕಿಯ ಬದಲಾಗಿ ಪ್ರತಿ ಕೆ.ಜಿಗೆ ₹34 ರಂತೆ ಪಡಿತರ ಬ್ಯಾಂಖ್ ಖಾತೆಗೆ ನೇರವಾಗಿ ₹170 ಹಣ‌ ಜಮೆ ಮಾಡಲಾಗುತ್ತಿತ್ತು. ಆದರೆ 2025ರ ಫೆಬ್ರವರಿ ತಿಂಗಳಿಂದ ನೇರ ನಗದು ಬದಲಾಗಿ ಅನ್ನಭಾಗ್ಯ ಯೋಜನೆಯಡಿ ಅರ್ಹ ಫಲಾನುಭವಿಗಳಿಗೆ 5 ಕೆ.ಜಿ ಅಕ್ಕಿ ವಿತರಿಸಲು ರಾಜ್ಯ ಸರ್ಕಾರ ಆದೇಶಿಸಿದೆ ಎಂದು ಜಿಲ್ಲಾಧಿಕಾರಿ ಶಿಲ್ಪಾ ಶರ್ಮಾ ತಿಳಿಸಿದ್ದಾರೆ.

- Advertisement -

ಫೆಬ್ರುವರಿ ತಿಂಗಳ ಪಡಿತರ ವಿತರಣೆ ಪೂರ್ಣಗೊಂಡಿರುವುದರಿಂದ ಫೆಬ್ರವರಿ ತಿಂಗಳ ಹೆಚ್ಚುವರಿ ಅಕ್ಕಿಯನ್ನು ಮಾರ್ಚ್‌ ತಿಂಗಳ ಹಂಚಿಕೆಯೊಂದಿಗೆ ವಿತರಣೆ ಮಾಡಲಾಗುವುದು. ಮಾರ್ಚ್ ತಿಂಗಳಲ್ಲಿ ಆದ್ಯತಾ ಪಡಿತರ ಚೀಟಿಯಲ್ಲಿನ ಪ್ರತಿ ಫಲಾನುಭವಿಗಳಿಗೆ ಒಟ್ಟು 15 ಕೆ.ಜಿ ಅಕ್ಕಿಯನ್ನು ವಿತರಣೆ ಮಾಡಲಾಗುವುದು. 4 ಸದಸ್ಯರಿಗಿಂತ ಕಡಿಮೆ ಇರುವ ಅಂತ್ಯೋದಯ ಪಡಿತರ ಚೀಟಿದಾರರಿಗೆ 35 ಕೆ.ಜಿ ಅಕ್ಕಿ ವಿತರಣೆ ಮಾಡಲಾಗುವುದುʼ ಎಂದು ಗುರುವಾರ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬೆಟ್ಟದಷ್ಟಾದ ಅತ್ಯಾಚಾರ ಪ್ರಕರಣಗಳು – ತೆವಳುತ್ತಿರುವ ನ್ಯಾಯದಾನ

ಪೊಲೀಸರೆಂದು ನಟಿಸಿ ಬೆದರಿಸುವುದು, ನಿರ್ಜನ ಪ್ರದೇಶಗಳಲ್ಲಿ ತೋಳಗಳಂತೆ ಕಾದು ಹಲ್ಲೆಗೈದು ಸಾಮೂಹಿಕ ಅತ್ಯಾಚಾರ ನಡೆಸಿ ಕೊಂದೆಸೆಯುವುದು, ಕಿಂಚಿತ್ತೂ ಭಯವಿಲ್ಲದೆ ಕೃತ್ಯದ ವಿಡಿಯೋ ತುಣುಕುಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಡುವುದಲ್ಲದೆ, ಸಂತ್ರಸ್ತರ ಗುರುತು ಬಹಿರಂಗಪಡಿಸುವ ಪ್ರವೃತ್ತಿ...

ಶಾಮನೂರು ಫ್ಯಾಮಿಲಿಗೆ ಸಚಿವ ಬಸವಂತಪ್ಪ ಕೈ ಮುಗಿಯುವ ಅಗತ್ಯವಿದೆಯೇ?

ಬಸವಂತಪ್ಪನವರನ್ನು ಗೆಲ್ಲಿಸಿದ್ದು, ಕಾಂಗ್ರೆಸ್ಸಿನ ಸಾಂಪ್ರದಾಯಿಕ ಮತದಾರರು. ಶಾಮನೂರು ಕುಟುಂಬದ ಸುತ್ತ ಕಟ್ಟಿರುವ ಕಲ್ಪಿತ ಬಲವನ್ನು ಮೀರಿ, ಬಸವಂತಪ್ಪ ಬೆಳೆಯಬೇಕು ಎಂಬುದು ಕ್ಷೇತ್ರದ ಮತದಾರರ ಅಭಿಪ್ರಾಯ. ಪೌರಕಾರ್ಮಿಕರ ಮಗನಾಗಿ ಹುಟ್ಟಿ, ಸಚಿವ ಸ್ಥಾನದವರೆಗೆ ಬೆಳೆದವರು ಕೆ.ಎಸ್....

ಪಾಕ್‌ಗೆ ತಕ್ಕ ಉತ್ತರ ನೀಡಿದ್ದಾಗಿ ಎದೆ ತಟ್ಟಿಕೊಳ್ಳುವ ಮೋದೀಜಿ,...

ಬಾಲಾಕೋಟ್‌ನಿಂದ ಇತ್ತೀಚಿನ 'ಆಪರೇಷನ್ ಸಿಂಧೂರ್'ವರೆಗೆ ಪಾಕಿಸ್ತಾನಕ್ಕೆ ತಕ್ಕ ಉತ್ತರ ನೀಡಿದ್ದಾಗಿ ಪ್ರಧಾನಿ ಮೋದಿ ನೇತೃತ್ವದ ಬಿಜೆಪಿ ಸರ್ಕಾರ ಎದೆ ತಟ್ಟಿಕೊಳ್ಳುತ್ತಿದೆ. ಶತೃ ದೇಶವನ್ನು ಮಣಿಸುವುದು ಯಾರಿಗಾದರೂ ಹೆಮ್ಮೆಯೇ. ಆದರೆ, ದೇಶದ ಅಖಂಡತೆಗೆ ಅತಿ...

ಅಂತ್ಯೋದಯ ಅನ್ನ ಯೋಜನೆ (ಎವೈ) 4 ಸದಸ್ಯರಿರುವ ಪಡಿತರ ಚೀಟಿದಾರರಿಗೆ 45 ಕೆ.ಜಿ ಅಕ್ಕಿ, 5 ಸದಸ್ಯರಿರುವ ಎಎವೈ ಪಡಿತರ ಚೀಟಿದಾರರಿಗೆ 65 ಕೆ.ಜಿ ಅಕ್ಕಿ ಹಾಗೂ 6 ಸದಸ್ಯರಿರುವ ಎಎವೈ ಪಡಿತರ ಚೀಟಿದಾರರಿಗೆ 85 ಕೆ.ಜಿ ಅಕ್ಕಿ ವಿತರಣೆ ಮಾಡಲಾಗುವುದು. ವಿತರಣೆ ಮಾಡಿದ ಪಡಿತರ ಅಕ್ಕಿಯನ್ನು ಪಡಿತರ ಚೀಟಿದಾರರು ಯಾವುದೇ ಕಾರಣಕ್ಕೂ ಮಾರಾಟ ಮಾಡುವಂತಿಲ್ಲ. ಒಂದು ವೇಳೆ ಪಡಿತರ ಅಕ್ಕಿ ಮಾರಾಟ ಮಾಡುವುದು ಕಂಡು ಬಂದಲ್ಲಿ ಅಂತಹ ಪಡಿತರ ಚೀಟಿದಾರರ ಪಡಿತರ ಚೀಟಿ ಅಮಾನತ್ತುಗೊಳಿಸಲಾಗುವುದು ಎಂದು ತಿಳಿಸಿದ್ದಾರೆ.

ಸಾರ್ವಜನಿಕ ವಿತರಣಾ ಪದ್ಧತಿ ಅಡಿಯಲ್ಲಿ ಯಾವುದೇ ದೂರುಗಳು ಇದ್ದಲ್ಲಿ ಆಹಾರ ಇಲಾಖೆಯ ಸಿಬ್ಬಂದಿಯನ್ನು ಸಂಪರ್ಕಿಸಬಹುದಾದ ವಿವರ:

ಬೀದರ ಗ್ರಾಮಾಂತರ ಆಹಾರ ಶಿರಸ್ತೆದಾರ ಅನಿಲ್‌ಕುಮಾರ ವ್ಯಾಸ್ (6360177221), ಬೀದರ ಗ್ರಾಮಾಂತರ ಆಹಾರ ನಿರೀಕ್ಷಕರು ಅರುಣ್‌ಕುಮಾರ (7892199014), ಬೀದರ ಪಟ್ಟಣ ಆಹಾರ ನಿರೀಕ್ಷಕರು ರಾಮರತನ ದೆಗಲಿ (9844302280), ಬೀದರ ಪಟ್ಟಣ ಆಹಾರ ನಿರೀಕ್ಷಕರು ಶೋಭಾ (9740226135), ತಾಲ್ಲೂಕು ಕಛೇರಿ ಭಾಲ್ಕಿ: ಆಹಾರ ಶಿರಸ್ತೆದಾರರು ವೆಂಕಟರಾವ (9110413724), ಆಹಾರ ನಿರೀಕ್ಷಕರು ರಾಜೇಂದ್ರಕುಮಾರ (9972460457) ತಾಲ್ಲೂಕು ಕಛೇರಿ ಹುಮನಾಬಾದ: ಆಹಾರ ಶಿರಸ್ತೆದಾರರು ಪರಮೇಶ್ವರ (9448349496), ಆಹಾರ ನಿರೀಕ್ಷಕರು ಬಿಂದುಕುಮಾರಿ (9449382228)

ಈ ಸುದ್ದಿ ಓದಿದ್ದೀರಾ? ಔರಾದ್ ಪಾಲಿಟೆಕ್ನಿಕ್‌ನಲ್ಲಿ ಒಬ್ಬರೇ ಖಾಯಂ ಉಪನ್ಯಾಸಕ : ಬೋಧಕ ಸಿಬ್ಬಂದಿ ನೇಮಕಕ್ಕೆ ಶಾಸಕ ಪ್ರಭು ಚವ್ಹಾಣ ಆಗ್ರಹ

ತಾಲ್ಲೂಕು ಕಛೇರಿ ಚಿಟಗುಪ್ಪಾ: ಆಹಾರ ನಿರೀಕ್ಷಕರು ಶೇಖರ್ (9964874917), ತಾಲ್ಲೂಕು ಕಛೇರಿ ಬಸವಕಲ್ಯಾಣ: ಆಹಾರ ಶಿರಸ್ತೆದಾರರು ನಿಂಗಯ್ಯಾ (9916241166), ಆಹಾರ ನಿರೀಕ್ಷಕರು ನಾಗರಾಜ (8951753186), ದ್ವಿ.ದ.ಸ ರಾಜೇಶ್ವರಿ (9986775659), ತಾಲ್ಲೂಕು ಕಛೇರಿ ಹುಲಸೂರು: ಆಹಾರ ನಿರೀಕ್ಷಕರು ಪ್ರದೀಪ್ (8095453026), ತಾಲ್ಲೂಕು ಕಛೇರಿ ಔರಾದ (ಬಿ): ಆಹಾರ ಶಿರಸ್ತೆದಾರರು ಪರಮೇಶ್ವರ (9448349496), ಆಹಾರ ನಿರೀಕ್ಷಕರು ಪ್ರೇಮಲತಾ (9901741151), ತಾಲ್ಲೂಕು ಕಛೇರಿ ಕಮಲನಗರ: ಆಹಾರ ನಿರೀಕ್ಷಕರು ಶಿವಾನಂದ ಪಾಟೀಲ್ (9741614855)

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಸವನ ಬಾಗೇವಾಡಿ ಸಮೀಪ 3.5 ತೀವ್ರತೆಯ ಭೂಕಂಪ ದಾಖಲು!

ವಿಜಯಪುರ ಜಿಲ್ಲೆಯ ಬಸವನ ಬಾಗೇವಾಡಿ ತಾಲ್ಲೂಕಿನ ದಿಂದಾವರ ಗ್ರಾಮ ಪಂಚಾಯಿತಿ ಸಮೀಪ...

ಚಿಕ್ಕಮಗಳೂರು | ಚೇತನ್ ಗೊಡ್ಲುಮನೆ ಅವರಿಗೆ ಪಿಎಚ್‌ಡಿ ಪದವಿ ಪ್ರದಾನ 

ಗೊಡ್ಲುಮನೆ ಹೆಚ್.ಹೆಚ್. ರಮೇಶ್ ಗೌಡ ಹಾಗೂ ಹೆಚ್.ಆರ್. ಜಯಲಕ್ಷ್ಮಿ ದಂಪತಿಯ ಹಿರಿಯ...

ಔರಾದ್‌ | ʼಈದಿನʼ ವರದಿ ಫಲಶೃತಿ : ದುರಸ್ತಿಯಾದ ಶುದ್ಧ ಕುಡಿಯುವ ನೀರಿನ ಘಟಕ

ಔರಾದ್‌ ತಾಲೂಕಿನ ಶೆಂಬೆಳ್ಳಿ ಗ್ರಾಮ ಪಂಚಾಯತ್‌ ಕೇಂದ್ರದಲ್ಲಿ ಶುದ್ಧ ಕುಡಿಯುವ ನೀರಿನ...

ಹಾವೇರಿ | ಪಿಎಫ್ ಹೊಸ ನೀತಿ: ವಿರೋಧಿಸಿ ಮಹಿಳಾ ಉದ್ಯೋಗಿಗಳು ದಿಡೀರ್ ಹೆದ್ದಾರಿ ತಡೆದು ಪ್ರತಿಭಟನೆ

"ಕೇಂದ್ರ ಸರ್ಕಾರವು ಭವಿಷ್ಯನಿಧಿ (ಪಿಎಫ್) ಸೌಲಭ್ಯದಲ್ಲಿ ಹೊಸ ಆದೇಶ ಮಾಡಿರುವುದು ಗಾರ್ಮೆಂಟ್ಸ್...