ಬೀದರ್‌ | ನ.29, 30ರಂದು ಅನುಭವ ಮಂಟಪ ಉತ್ಸವ : ಸಾಧಕರಿಗೆ ವಿವಿಧ ಪ್ರಶಸ್ತಿ ಘೋಷಣೆ

Date:

ಬೀದರ್‌ ಜಿಲ್ಲೆಯ ಬಸವಕಲ್ಯಾಣದಲ್ಲಿ ನವೆಂಬರ್‌ 29, 30ರಂದು ನಡೆಯುವ 46ನೇ ಶರಣ ಕಮ್ಮಟ ಹಾಗೂ ಅನುಭವ ಮಂಟಪ ಉತ್ಸವ–2025ರಲ್ಲಿ ಅನುಭವ ಮಂಟಪದಿಂದ ನೀಡುವ ವಿವಿಧ ಪ್ರಶಸ್ತಿಗಳಿಗೆ ಆಯ್ಕೆಯಾಗಿರುವವರ ಪಟ್ಟಿಯನ್ನು ಬಿಡುಗಡೆಗೊಳಿಸಲಾಗಿದೆ.

- Advertisement -

ಬೀದರ್‌ ನಗರದ ನಿವೃತ್ತ ಶಿಕ್ಷಕ, ಚಿತ್ರಕಲಾವಿದ ಸಿ.ಬಿ.ಸೋಮಶೆಟ್ಟಿ ಅವರು ತಮ್ಮ ಸಂಪೂರ್ಣ ಆಯುಷ್ಯವನ್ನು ಚಿತ್ರಕಲೆಗಾಗಿ ಸಮರ್ಪಿಸಿದವರು. ವಿಶೇಷವಾಗಿ ಬಸವಾದಿ ಶರಣರ ಚಿತ್ರಗಳು ಬಿಡಿಸುವಲ್ಲಿ ಎತ್ತಿದ ಕೈ. ಬಸವಣ್ಣನವರ ಜೀವನಕ್ಕೆ ಸಂಬಂಧಿಸಿದ 115 ಕ್ಕೂ ಹೆಚ್ಚು ವರ್ಣಚಿತ್ರಗಳು ಬಿಡಿಸಿದ ಹೆಗ್ಗಳಿಗೆ ಇವರದ್ದಾಗಿದೆ. ಇವರನ್ನು ಡಾ.ಚನ್ನಬಸವ ಪಟ್ಟದ್ದೇವರು ಅನುಭವಮಂಟಪ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ ಎಂದು ಅನುಭವ ಮಂಟಪ ಟ್ರಸ್ಟ್ ಅಧ್ಯಕ್ಷ ಬಸವಲಿಂಗ ಪಟ್ಟದ್ದೇವರು ಘೋಷಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಮೋದಿ ಪ್ರಚಾರ, ರಾಹುಲ್ ವ್ಯಕ್ತಿತ್ವ ಮತ್ತು ರೆಜಿಮ್ ಚೇಂಜ್

ಮೋದಿ ಅನುಭವಿ ನಟನಂತೆ, ಪ್ರದರ್ಶಕನಂತೆ ಕಾಣುತ್ತಾರೆ. ರಾಹುಲ್ ಗಾಂಧಿ ಪಾತ್ರದ ಒಳಹೊಕ್ಕು ನಟಿಸುವ ಕಲಾವಿದನಂತೆ ಕಾಣುತ್ತಾರೆ. ಈ ನಿಟ್ಟಿನಲ್ಲಿ ರಾಹುಲ್ ರಾಜಕೀಯ ನಡೆಗಳು ಮೋದಿಯವರ ರಾಜಕೀಯ ನಡೆಗಳೊಂದಿಗೆ ವಿಶ್ಲೇಷಣೆಗೊಳಗಾಗುತ್ತಿವೆ. ಕಳೆದ 12 ವರ್ಷಗಳ...

137 ಜೀವ ರಕ್ಷಕ ಕ್ಯಾನ್ಸರ್ ಔಷಧಗಳ ದರ ಶೇ.70ರಷ್ಟು...

ಕ್ಯಾನ್ಸರ್ ಚಿಕಿತ್ಸೆಯ ದುಬಾರಿ ವೆಚ್ಚದಿಂದ ಕಂಗೆಟ್ಟಿರುವ ರೋಗಿಗಳಿಗೆ ಕೇಂದ್ರ ಸರ್ಕಾರದಿಂದ ಕೊಂಚ ನಿರಾಳತೆಯ ಸುದ್ದಿಯೊಂದಿದೆ! 137 ಜೀವರಕ್ಷಕ ಕ್ಯಾನ್ಸರ್ ಔಷಧಗಳ ಬೆಲೆ ಇಳಿಕೆಯಾಗುವ ಸಾಧ್ಯತೆಯಿದ್ದು, ಕೆಲವು ಔಷಧಗಳ ಗರಿಷ್ಠ ಚಿಲ್ಲರೆ ಬೆಲೆ ಶೇ.70ರವರೆಗೆ...

‘ದೇಶ್ ಕೋ ಬಿಕನೇ ನಹೀ ದೂಂಗಾ’ ಎಂದು ನವಮಂಗಳೂರು...

​ರೈಲ್ವೆ, ವಿಮಾನ ನಿಲ್ದಾಣ, ಟೆಲಿಕಾಂ ಸೇರಿದಂತೆ ದೇಶದ ಪ್ರಮುಖ ಜಯಶೀಲ ಸಾರ್ವಜನಿಕ ವಲಯಗಳನ್ನು ಈಗಾಗಲೇ ಆಯ್ದ ಕಾರ್ಪೊರೇಟ್ ಕುಳಗಳಿಗೆ ಒಪ್ಪಿಸಿರುವ ಮೋದಿ ಸರ್ಕಾರ, ಈಗ ತನ್ನ ದೃಷ್ಟಿಯನ್ನು ಕಡಲತೀರಗಳತ್ತ ಹರಿಸಿದೆ. ದೇಶದ ಆಮದು-ರಫ್ತು...
WhatsApp Image 2025 11 15 at 8.41.04 AM
ಬಸವರಾಜ ಬಂಗೇರಿ, ಮಲ್ಲಿಕಾರ್ಜುನ ರಗಟೆ

ಬಸವಭಾಸ್ಕರ್ ರಾಷ್ಟ್ರೀಯ ಪ್ರಶಸ್ತಿಗೆ ಶಿರೂರಿನ ನಾಟಕಕಾರ ಬಸವರಾಜ ಬೇಂಗೇರಿ, ಅನುಭವಮಂಟಪ ರಾಷ್ಟ್ರೀಯ ಪ್ರಶಸ್ತಿಗೆ ಬೆಂಗಳೂರಿನ ಸುಮಂಗಲಿ ಸೇವಾ ಆಶ್ರಮದ ಅಧ್ಯಕ್ಷೆ ಎಸ್.ಜಿ.ಸುಶೀಲಮ್ಮ ಆಯ್ಕೆಯಾಗಿದ್ದಾರೆ. ಈ ಮೂರೂ ಪ್ರಶಸ್ತಿಯು ತಲಾ ₹1ಲಕ್ಷ ನಗದು ಹಾಗೂ ಪ್ರಶಸ್ತಿ ಫಲಕ ಒಳಗೊಂಡಿವೆ.

ಹೊಸಪೇಟೆಯ ಚಿಂತಕ ಕೆ.ರವೀಂದ್ರನಾಥ ಅವರಿಗೆ ಡಾ.ಎಂ.ಎಂ.ಕಲಬುರಗಿ ಸಾಹಿತ್ಯ ಸಂಶೋಧನಾ ರಾಷ್ಟ್ರೀಯ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ. ಪ್ರಶಸ್ತಿಯು ₹50 ಸಾವಿರ ಹಾಗೂ ಫಲಕ ಹೊಂದಿದೆ.

WhatsApp Image 2025 11 15 at 8.42.15 AM
ಸೋಮಶೇಖರ್‌ , ಕೆ.ರವೀಂದ್ರನಾಥ

ಶರಣ ವೈದ್ಯ ಸಂಗಣ್ಣ ಪ್ರಶಸ್ತಿಗೆ ಮಹಾರಾಷ್ಟ್ರದ ದೇಗಲೂರಿನ ಪ್ರಸಿದ್ಧ ವೈದ್ಯ ಮಲ್ಲಿಕಾರ್ಜುನ ರಗಟೆ, ಶರಣ ಒಕ್ಕಲಿಗ ಮುದ್ದಣ್ಣ ಪ್ರಶಸ್ತಿ (2024)ಗೆ ಖಾನಾಪೂರದ ಸಾವಯವ ಕೃಷಿಕ ರಮೇಶ ಮೋರ್ಗೆ, ಶರಣ ಒಕ್ಕಲಿಗ ಮುದ್ದಣ್ಣ ಪ್ರಶಸ್ತಿ (2025)ಯನ್ನು ಹುಡಗಿಯ ಸಾವಯವ ಕೃಷಿಕ ಸೋಮಶಂಕರ ಅವರಿಗೆ ನೀಡಲಾಗುತ್ತಿದೆ. ಈ ಪ್ರಶಸ್ತಿಗಳು ತಲಾ ₹10 ಸಾವಿರ ನಗದು ಹಾಗೂ ಫಲಕ ಒಳಗೊಂಡಿವೆ.

ಇದನ್ನೂ ಓದಿ : ಬೀದರ್ | ಟನ್ ಕಬ್ಬಿಗೆ ₹3,100 ಬೆಲೆ ಕೊಡಲೇಬೇಕು : ಪಟ್ಟು ಹಿಡಿದ ರೈತರು, ಧರಣಿ ಆರಂಭ

ಎಲ್ಲ ಪ್ರಶಸ್ತಿಗಳು ಅನುಭವಮಂಟಪ ಉತ್ಸವದಲ್ಲಿ ಪೂಜ್ಯರ ಹಾಗೂ ಗಣ್ಯರ ಸಮ್ಮುಖದಲ್ಲಿ ಪ್ರದಾನ ಮಾಡಲಾಗುವುದು ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ಎಸ್‌ಐಆರ್ ರದ್ದತಿಗೆ ಆಗ್ರಹಿಸಿ ಬೃಹತ್ ಪಾದಯಾತ್ರೆ ; ಮಳೆಯಲ್ಲೂ ಮುಂದುವರಿದ ಪ್ರತಿಭಟನೆ

ಕೇಂದ್ರ ಚುನಾವಣಾ ಆಯೋಗದ ಎಸ್‌ಐಆರ್‌ ಪ್ರಕ್ರಿಯೆ ರದ್ದುಗೊಳಿಸುವಂತೆ ಹಾಗೂ ಮುಖ್ಯ ಚುನಾವಣಾ...

ಉಡುಪಿ | 110 ಕೋಟಿ ರೂ. ವೆಚ್ಚದ ಆಸ್ಪತ್ರೆಗೆ ಹಳೆಯ ಪರಿಕರಗಳ ಅಳವಡಿಕೆ ಸಲ್ಲದು: ಫ್ರ್ಯಾಂಕಿ ಡಿಸೋಜ

ಸುಮಾರು 110 ಕೋಟಿ ರೂ. ವೆಚ್ಚದಲ್ಲಿ ನಿರ್ಮಾಣಗೊಂಡಿರುವ ನೂತನ ಉಡುಪಿ ಜಿಲ್ಲಾ...

ಹಾಸನ | ಮನೆಯಲ್ಲಿಯೇ ವ್ಯಕ್ತಿ ಹತ್ಯೆ; ಪ್ರಕರಣ ದಾಖಲು 

ತಾಲೂಕಿನ ಕಲ್ಲಹಳ್ಳಿ ಗ್ರಾಮದಲ್ಲಿ ಮಾರಕಾಸ್ತ್ರದಿಂದ ವ್ಯಕ್ತಿಯನ್ನು ಬರ್ಬರವಾಗಿ ಹತ್ಯೆ ಮಾಡಿರುವ ದಾರುಣ...