ಬೀದರ್‌ | ಪರಿಶಿಷ್ಟ ಜಾತಿ ವಿದ್ಯಾರ್ಥಿಗಳಿಂದ ಶಿಷ್ಯವೇತನಕ್ಕೆ ಅರ್ಜಿ ಆಹ್ವಾನ

Date:

ಸಮಾಜ ಕಲ್ಯಾಣ ಇಲಾಖೆ ವತಿಯಿಂದ 2025-26ನೇ ಸಾಲಿಗೆ ಶಿಷ್ಯವೇತನಕ್ಕೆ ಪರಿಶಿಷ್ಟ ಜಾತಿ ವಿದ್ಯಾರ್ಥಿಗಳಿಂದ ಎಸ್‍ಎಸ್‍ಪಿ ತಂತ್ರಾಂಶದಲ್ಲಿ ಅರ್ಜಿ ಆಹ್ವಾನಿಸಲಾಗಿದೆ.

- Advertisement -

1 ರಿಂದ 10ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿರುವ ಹೊಸ ವಿದ್ಯಾರ್ಥಿಗಳು  https://ssp.postmatric.karnataka.gov.in ನಲ್ಲಿ ಅರ್ಜಿ ಸಲ್ಲಿಸಬಹುದು ಎಂದು ಸಮಾಜ ಕಲ್ಯಾಣ ಇಲಾಖೆಯ ಬೀದರ್ ತಾಲ್ಲೂಕು ಸಹಾಯಕ ನಿರ್ದೇಶಕ ಅನಿಲಕುಮಾರ ಮೇಲ್ದೊಡ್ಡಿ ತಿಳಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಹೊಸ ಓದು | ಬಿ. ಚಂದ್ರೇಗೌಡರ ‘ಕಾಳ ಮಾವನ...

ಬಿ. ಚಂದ್ರೇಗೌಡರ 'ಬಯಲು ಸೀಮೆಯ ಕಟ್ಟೆಪುರಾಣ' ಅಂಕಣ ಬರಹದಿಂದ ಎದ್ದುಬಂದ ಕಾಳಮಾವ ಈಗ ತನ್ನ ಕಡೇ ದಿನಗಳಲ್ಲಿದ್ದಾರೆ. ಅವರು ಕಣ್ಣುಮುಚ್ಚುವ, ಕಾಲುಮಡಚುವ ದೃಶ್ಯಗಳು ಭಾರತದ ಆತ್ಮಸಾಕ್ಷಿಯ ಅಂತ್ಯಸಂಸ್ಕಾರವನ್ನು ಸಂಕೇತಿಸುವಂತಿವೆ. ನಮ್ಮ ನೆಲದ ನಾಲಿಗೆನಿಷ್ಠೆ...

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ʼವಾರ್ಷಿಕ ₹2.5 ಲಕ್ಷದ ಒಳಗೆ ಆದಾಯ ಹೊಂದಿದ ಪಾಲಕರ ಮಕ್ಕಳು ಆದಾಯ, ಜಾತಿ ಪ್ರಮಾಣ ಪತ್ರ, ಸ್ಯಾಟ್ಸ್ ಸಂಖ್ಯೆ, ಎನ್‍ಪಿಸಿಇ ಲಿಂಕ್ ಹೊಂದಿದ ಬ್ಯಾಂಕ್ ಖಾತೆ, ಆಧಾರ್ ಕಾರ್ಡ್ ಹಾಗೂ ಹಿಂದಿನ ತರಗತಿಯಲ್ಲಿ ತೇರ್ಗಡೆಯಾದ ಅಂಕಪಟ್ಟಿಯೊಂದಿಗೆ ಅರ್ಜಿ ಸಲ್ಲಿಸಬಹುದುʼ ಎಂದು ಹೇಳಿದ್ದಾರೆ.

ಬಾಕಿ ಇರುವ ಬೀದರ್ ತಾಲ್ಲೂಕಿನ 53 ಶಾಲೆಗಳ ಮುಖ್ಯಶಿಕ್ಷಕರು ಸಮಾಜ ಕಲ್ಯಾಣ ಇಲಾಖೆ ಕಚೇರಿಗೆ ಆಗಮಿಸಿ ಐಎನ್‍ಒ ಆಗಿ ನೋಂದಣಿ ಮಾಡಿಸಿಕೊಳ್ಳಬೇಕು ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ʼಬೀದರ್ ತಾಲ್ಲೂಕಿನಲ್ಲಿ ನಡೆಯುತ್ತಿರುವ ವೃತ್ತಿಪರ ಕಾಲೇಜು, ಪದವಿಪೂರ್ವ ಹಾಗೂ ಪದವಿ ಕಾಲೇಜುಗಳಲ್ಲಿ ಎಂಪಾವರ್‍ಮೆಂಟ್ ಅಧಿಕಾರಿ ನೋಂದಣಿಯಾಗದಿದ್ದಲ್ಲಿ ಆಯಾ ಕಾಲೇಜುಗಳಲ್ಲಿ ಓದುತ್ತಿರುವ ವಿದ್ಯಾರ್ಥಿಗಳ ಶಿಷ್ಯವೇತನ ಮಂಜೂರಾತಿ ಸಾಧ್ಯವಾಗುವುದಿಲ್ಲ. ಹೀಗಾಗಿ ಎಲ್ಲ ಕಾಲೇಜುಗಳ ಮುಖ್ಯಸ್ಥರು ಸಮಾಜ ಕಲ್ಯಾಣ ಇಲಾಖೆಯ ವೆಬ್‍ಸೈಟ್‍ನಲ್ಲಿ ಎಂಪಾವರ್‌ಮೆಂಟ್ ಅಧಿಕಾರಿ ಆಗಿ ನೋಂದಣಿ ಮಾಡಿಸಿಕೊಳ್ಳಬೇಕುʼ ಎಂದು ಕೋರಿದ್ದಾರೆ.‌

ಹೆಚ್ಚಿನ ಮಾಹಿತಿಗೆ ದೂರವಾಣಿ ಸಂಖ್ಯೆ 8792103222, 9845944285 ಅಥವಾ 8197157805 ಗೆ ಸಂಪರ್ಕಿಸಬಹುದು ಎಂದು ತಿಳಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಾಗೇಪಲ್ಲಿ: ಬಾಲ್ಯವಿವಾಹ, ಪೋಕ್ಸೋ ಮುಕ್ತ ತಾಲ್ಲೂಕು: ಸಾರ್ವಜನಿಕರ ಸಹಕಾರ ಅಗತ್ಯ

ಬಾಗೇಪಲ್ಲಿ: ಬಾಲ್ಯವಿವಾಹ, ಪೋಕ್ಸೋ, ಮಹಿಳೆಯರ ಮತ್ತು ಹೆಣ್ಣುಮಕ್ಕಳ ಸಾಗಾಣಿಕೆ ಮುಕ್ತ ಬಾಗೇಪಲ್ಲಿ...

ಚಿಂತಾಮಣಿ | ನಿಮ್ಮಕಾಯಲಹಳ್ಳಿ ದರ್ಗಾ ಅಭಿವೃದ್ಧಿಗೆ ಶಾಸಕ ಡಾ.ಎಂ.ಸಿ. ಸುಧಾಕರ್ ಅಭಯ:ಕಾಂಪೌಂಡ್,ಪಾರ್ಕಿಂಗ್‌ಗೆ ಭರವಸೆ

ಚಿಂತಾಮಣಿ ತಾಲೂಕಿನ ನಿಮ್ಮಕಾಯಲಹಳ್ಳಿಯ ದರ್ಗಾ ಉರುಸ್ ಪ್ರಯುಕ್ತ ಉನ್ನತ ಶಾಸಕರಾದ ಡಾ.ಎಂ.ಸಿ.ಸುಧಾಕರ್...

ಕೋಲಾರ | ಅಧಿಕಾರಿಗಳ ವಿರುದ್ಧ ದಾಖಲೆಗಳಿದ್ದರೆ ಕಾನೂನು ಹೋರಾಟ ನಡೆಸಲಿ ಮುಖಂಡರ ಅಗ್ರಹ

ಜಿಲ್ಲಾಧಿಕಾರಿ ಹಾಗೂ ಗಣಿ ಮತ್ತು ಭೂವಿಜ್ಞಾನ ಇಲಾಖೆ ಅಧಿಕಾರಿಗಳ ವಿರುದ್ಧ ಯಾವುದೇ...

ರಂಗಭೂಮಿ ಅಭಿನಯ ಕಲಿಸುವುದಷ್ಟೇ ಅಲ್ಲ, ಬದುಕನ್ನೂ ಕಲಿಸುವ ಶಾಲೆ: ಶ್ರೀನಿವಾಸ ಪಾಲಹಳ್ಳಿ

ರಂಗಭೂಮಿ ಕೇವಲ ಅಭಿನಯ ಕಲಿಸುವ ವೇದಿಕೆಯಲ್ಲ. ಅದು ಬದುಕನ್ನು ಅರ್ಥಮಾಡಿಕೊಳ್ಳುವ, ಮಾನವೀಯ...