ಬೀದರ್ | ಮಕ್ಕಳನ್ನು ಕೈ ಬೀಸಿ ಕರೆಯುವ ‘ಅರಿವು ಕೇಂದ್ರ’

Date:

ಬೀದರ ತಾಲ್ಲೂಕಿನ ಅಲಿಯಾಬಾದ್ ಗ್ರಾಮ ಪಂಚಾಯತ್‌ನಲ್ಲಿ ನಿರ್ಮಿಸಿದ ಅರಿವು ಕೇಂದ್ರ ಬೇಸಿಗೆಯಲ್ಲಿ ಮಕ್ಕಳಿಗೆ ಆಟ, ಓದು ಹಾಗೂ ಕೌಶಲ್ಯ ತರಬೇತಿ ತಾಣವಾಗಿ ಮಾರ್ಪಟ್ಟಿದೆ.

- Advertisement -

ಅರಿವು ಕೇಂದ್ರದಲ್ಲಿ ದಿನಪತ್ರಿಕೆಗಳು ಸೇರಿದಂತೆ ಕಥೆ ಕಾದಂಬರಿ, ಕಲೆ, ಸಾಹಿತ್ಯ, ನಾಟಕ, ಇತಿಹಾಸ, ಆರೋಗ್ಯ, ಕೃಷಿ, ಶಿಕ್ಷಣ, ಪಠ್ಯ ಪುಸ್ತಕ, ವಿಜ್ಞಾನ, ಚರಿತ್ರೆ, ಕಾನೂನು, ಪಂಚಾಯತ್ ರಾಜ್, ಸ್ಪರ್ಧಾತ್ಮಕ ಪುಸ್ತಕಗಳು ಸೇರಿದಂತೆ ಒಟ್ಟಾರೆ 4 ಸಾವಿರ ಪುಸ್ತಕಗಳಿವೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಹಮ್ ಔರತೇನ್ ಆಜಾದ್ ಹೈ: ಸುರಕ್ಷತೆಯ ಹೆಸರಲ್ಲಿ ಕಡಿವಾಣ...

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಮಹಿಳೆಯರು ಮತ್ತು ಅಪ್ರಾಪ್ತೆಯರ ಮೇಲಿನ ಲೈಂಗಿಕ ದೌರ್ಜನ್ಯ ಪ್ರಕರಣಗಳಿಗೆ ಕಡಿವಾಣ ಇಲ್ಲದಂತಾಗಿದೆ. ಸಾರ್ವಜನಿಕ ಸ್ಥಳಗಳಲ್ಲಿ ಅಭದ್ರತೆಯ ವಾತಾವರಣವಿರುವಾಗ ಈ ಲೋಪಗಳನ್ನು ಸರಿಪಡಿಸದೆಯೇ ದೌರ್ಜನ್ಯಕ್ಕೆ ಒಳಗಾಗುತ್ತಿರುವ ಸ್ರೀ ಸಮುದಾಯದ ಉಡುವ,...

ತಮ್ಮ ವಿರುದ್ಧ ತಾವೇ’ಆರೋಪಪಟ್ಟಿ’ ಸಿದ್ಧಪಡಿಸಿಕೊಂಡ ಗ್ಯಾನೇಶ್ ಕುಮಾರ್: ಪ್ರೆಸ್...

ಚುನಾವಣಾ ಆಯೋಗದ ಇತ್ತೀಚಿನ ನಡೆಗಳು ಮತ್ತು ಸಾಂವಿಧಾನಿಕ ವೈಫಲ್ಯದ ಅಸಲಿಯತ್ತನ್ನು ಸ್ವರಾಜ್ ಇಂಡಿಯಾ ಸದಸ್ಯ ಹಾಗೂ ‘ಭಾರತ್ ಜೋಡೊ ಅಭಿಯಾನ’ದ ರಾಷ್ಟ್ರೀಯ ಸಂಚಾಲಕ ಯೋಗೇಂದ್ರ ಯಾದವ್ ಅವರು 'ದಿ ಇಂಡಿಯನ್ ಎಕ್ಸ್‌ಪ್ರೆಸ್' ಪತ್ರಿಕೆಯಲ್ಲಿ...

SIR | ‘ಫಾರ್ಮ್ 7’ ದುರ್ಬಳಕೆ – ಅಕ್ರಮ:...

ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ನಾಗರಿಕನಿಗೆ ಇರುವ ಅತ್ಯಂತ ಮೂಲಭೂತ ಮತ್ತು ಶಕ್ತಿಶಾಲಿ ಅಸ್ತ್ರ - ಮತದಾನದ ಹಕ್ಕು. ಆದರೆ, ಇತ್ತೀಚಿನ ದಿನಗಳಲ್ಲಿ ಚುನಾವಣಾ ಆಯೋಗದ ನಿರ್ಲಜ್ಜತನ ಮತ್ತು ನಿಯಮಗಳಲ್ಲಿನ ಲೋಪದೋಷಗಳನ್ನು ಬಳಸಿಕೊಂಡು, ಮತದಾರರ ಪಟ್ಟಿಯಿಂದ...

ಮಕ್ಕಳು ದಿನಪತ್ರಿಕೆ, ಪುಸ್ತಕ ಓದುವ ಹವ್ಯಾಸ ಬೆಳೆಸುವ ಜೊತೆಗೆ ಕಂಪ್ಯೂಟರ್, ಪೇಂಟಿಂಗ್ ತರಬೇತಿ ಸಹ ನೀಡಲಾಗುತ್ತದೆ. ದೇಸಿ ಕ್ರೀಡೆಗಳ ಝಲಕ್ ಸಹ ಇಲ್ಲಿ ನೋಡಲು ಸಿಗುತ್ತದೆ. ರೈತರ, ಕೂಲಿ ಕಾರ್ಮಿಕರ, ನರೇಗಾ ಕಾರ್ಮಿಕರ ಮಕ್ಕಳಿಗಾಗಿ ಈ ಬೇಸಿಗೆ ಶಿಬಿರ ಆಯೋಜಿಸಲಾಗಿದ್ದು, ಮಕ್ಕಳಿಗೆ ಆಟ, ಪಾಠದ ಜೊತೆಗೆ ತಂತ್ರಜ್ಞಾನ ತರಬೇತಿ, ಐತಿಹಾಸಿಕ ಪರಂಪರೆ ಕಲಿಸುವ ಪ್ರಯತ್ನ ಮುಂದುವರೆದಿದೆ.

1003749141
ಕಂಪ್ಯೂಟರ್‌ ಕಲಿಕೆಯಲ್ಲಿ ತಲ್ಲೀನರಾದ ವಿದ್ಯಾರ್ಥಿಗಳು

ಶಿಬಿರದಲ್ಲಿ ಭಾಗವಹಿಸುವ ವಿದ್ಯಾರ್ಥಿಗಳಿಗೆ ಬೀದರ ಕೋಟೆ, ಕರೇಜ್, ಪಾಪನಾಶ ಕೆರೆ ಸೇರಿದಂತೆ ವಿವಿಧ ಐತಿಹಾಸಿಕ ಸ್ಥಳಗಳಿಗೆ ಭೇಟಿ ಮಾಹಿತಿ ನೀಡಲಾಗಿದೆ. ಮಕ್ಕಳೆಲ್ಲರೂ ಅಲ್ಲೇ ವನಭೋಜನ ಸವಿದದ್ದು ವಿಶೇಷವಾಗಿತ್ತು.

’15ನೇ ಹಣಕಾಸು ಯೋಜನೆಯ ಆರ್‌ಡಿಪಿಆರ್‌ನ ಓದು ಬೆಳಕು ಯೋಜನೆಯಡಿ ಈ ಅರಿವು ಕೇಂದ್ರ ಸ್ಥಾಪಿಸಲಾಗಿದ್ದು. ಗ್ರಾಮೀಣ ಭಾಗದ ಮಕ್ಕಳ ಸರ್ವಾಂಗೀಣ ಅಭಿವೃದ್ಧಿ ಧ್ಯೇಯದೊಂದಿಗೆ ನಡೆಸಲಾಗುತ್ತಿದೆ’ ಎಂದು ಜಿಲ್ಲಾ ಪಂಚಾಯತ್ ಸಿಇಒ ಡಾ.ಗಿರೀಶ್ ಬದೋಲೆ ಹೇಳಿದರು.

ಇದನ್ನೂ ಓದಿ : ಗುಲಬರ್ಗಾ ವಿವಿ ಕರ್ಮಕಾಂಡ-3: ಮೂರು ವರ್ಷಗಳಿಂದ 9,024 ಫಲಿತಾಂಶ ಪೆಂಡಿಂಗ್!

1003749142
ಆಟದಲ್ಲಿ ತೊಡಗಿರುವ ವಿದ್ಯಾರ್ಥಿಗಳು

ಅಲಿಯಾಬಾದ್ ಗ್ರಾಮ ಪಂಚಾಯಿತಿ ಪಿಡಿಒ ಶರತ್‌ಕುಮಾರ್ ಮಾತನಾಡಿ, ‘ಅರಿವು ಕೇಂದ್ರದಲ್ಲಿ ಎಲ್ಲ ರೀತಿಯ ಸೌಲಭ್ಯ ಕಲ್ಪಿಸಲಾಗಿದೆ. ದಿನನಿತ್ಯ ಸಾಕಷ್ಟು ಮಕ್ಕಳು ಇಲ್ಲಿಗೆ ಓದಲು ಬರುತ್ತಿರುವುದು ಕಂಡು ಖುಷಿ ತರಿಸಿದೆ’ ಎಂದು ಹೇಳಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ₹10 ಕೋಟಿಗೂ ಅಧಿಕ ಅವ್ಯವಹಾರ ಆರೋಪ; ಕಿರಿಯ ಅಭಿಯಂತರ ಅಮಾನತು

ಸಿಂಧನೂರು ಉಪವಿಭಾಗದ ಕಿರಿಯ ಅಭಿಯಂತರ ನಾಗರಾಜ ಪ್ರಭಾ ಅವರನ್ನು ₹10 ಕೋಟಿಗೂ...

ಕರಾವಳಿಯಲ್ಲಿ ಹೈಕೋರ್ಟ್‌ ಪೀಠ ಸ್ಥಾಪನೆ: ಪರಿಶೀಲನೆಗೆ ಸಮಿತಿ ರಚನೆ

ಕರಾವಳಿಯಲ್ಲಿ ಹೈಕೋರ್ಟ್ ಸಂಚಾರಿ ಅಥವಾ ಶಾಶ್ವತ ಪೀಠ ಸ್ಥಾಪಿಸುವ ನಿಟ್ಟಿನಲ್ಲಿ ಪರಿಶೀಲನೆ...

ಕಲಬುರಗಿ | ಕನ್ನಡ ಅಧ್ಯಾಪಕರು ಸಂಘಟಿತರಾಗಿ ಭಾಷೆಯ ಉಳಿವಿಗೆ ಶ್ರಮಿಸಬೇಕು: ಪ್ರೊ. ಶಶಿಕಾಂತ ಉಡಿಕೇರಿ

ಕನ್ನಡ ಭಾಷೆಯ ಪೋಷಣೆ, ಉಳಿವು ಹಾಗೂ ಬೆಳವಣಿಗೆಗೆ ಕನ್ನಡ ಅಧ್ಯಾಪಕರು ಸಂಘಟಿತರಾಗಿ...

ಸಾಮಾಜಿಕ ಕಾರ್ಯಕರ್ತ ನದೀಮ್ ಖಾನ್ ಗೃಹಬಂಧನ: ಸೋಲಿಡಾರಿಟಿ ಯೂತ್ ಮೂವ್ಮೆಂಟ್ ಕರ್ನಾಟಕ ಖಂಡನೆ

ಮಸೀದಿಗಳು ಮತ್ತು ಇತರ ಧಾರ್ಮಿಕ ಸ್ಥಳಗಳ ಮೇಲಿನ ದಾಳಿಗಳು, ಮತದಾರರ ಪಟ್ಟಿಯಲ್ಲಿನ...