ಬೀದರ್‌ | ಶಿರಸ್ತೇದಾರ್‌ ಮೇಲೆ ಹಲ್ಲೆ: ಗ್ರೇಡ್–2 ತಹಶೀಲ್ದಾರ್ ವಜಾಗೆ ಆಗ್ರಹ

Date:

Advertisements

ಚಿಟಗುಪ್ಪ ತಾಲ್ಲೂಕಿನ ಗ್ರೇಡ್–2 ತಹಶೀಲ್ದಾರ್ ಜಯಶ್ರೀ ಅವರನ್ನು ಅಮಾನತು ಮಾಡಬೇಕೆಂದು ಆಗ್ರಹಿಸಿ ವೀರಶೈವ ಲಿಂಗಾಯತ ಸಮಾಜದಿಂದ ಚಿಟಗುಪ್ಪ ಪಟ್ಟಣದಲ್ಲಿ ಸೋಮವಾರ ಪ್ರತಿಭಟನಾ ಮೆರವಣಿಗೆ ನಡೆಯಿತು.

ಗಣೇಶ್ ಮಂದಿರದಿಂದ ಮಹಾತ್ಮ ಗಾಂಧಿ ವೃತ್ತ, ಬಸವೇಶ್ವರ ವೃತ್ತದ ಮೂಲಕ ನೇರವಾಗಿ ತಹಶೀಲ್ದಾರ್‌ ಕಚೇರಿಯವರೆಗೆ ಪ್ರತಿಭಟನಾ ಮೆರವಣಿಗೆ ಜರುಗಿತು.

ಈ ಸಂಬಂಧ ಕಂದಾಯ ಸಚಿವ ಕೃಷ್ಣ ಬೈರೇಗೌಡ ಅವರ ಹೆಸರಿಗೆ ಬರೆದ ಮನವಿ ಪತ್ರವನ್ನು ತಹಶೀಲ್ದಾರ್ ಮಂಜುನಾಥ್ ಪಂಚಾಳ್ ಅವರಿಗೆ ಸಲ್ಲಿಸಿದರು.

Advertisements

ಸಮಾಜದ ಮುಖಂಡ ಮಲ್ಲಿಕಾರ್ಜುನ ಪಾಟೀಲ ಮಾತನಾಡಿ, ʼಶಿರಸ್ತೇದಾರ್ ಸುಭಾಷ್ ಚಂದ್ರ ಅವರು ತಮ್ಮ ಕರ್ತವ್ಯ ಮುಗಿಸಿಕೊಂಡು ಚಿಟಗುಪ್ಪದಿಂದ ಸ್ವಗ್ರಾಮ ಚಿಂಚೋಳಿ ತಾಲ್ಲೂಕಿನ ಸುಲೆಪೇಟ್ ಗ್ರಾಮಕ್ಕೆ ಬಸ್‌ನಲ್ಲಿ ತೆರಳುತ್ತಿದ್ದ ಸಂದರ್ಭದಲ್ಲಿ ಗ್ರೇಡ್–2 ತಹಶೀಲ್ದಾರ್ ಪತಿ ಹಾಗೂ ಇತರ ಮೂವರು ಬಸ್ಸಿಗೆ ಕಾರು ಅಡ್ಡಗಟ್ಟಿ ಸುಭಾಷ್ ಚಂದ್ರ ಅವರನ್ನು ಇಳಿಸಿಕೊಂಡು ತಮ್ಮ ಕಾರಿನಲ್ಲಿ ಕರೆದುಕೊಂಡು ಹೋಗಿ ಮಾರಣಾಂತಿಕ ಹಲ್ಲೆ ನಡೆಸಿರುವುದು ಖಂಡನಾರ್ಹʼ ಎಂದು ಆಕ್ರೋಶ ವ್ಯಕ್ತಪಡಿಸಿದರು.

ʼಘಟನೆಗೆ ಪ್ರಚೋದನೆ ನೀಡಿದ ಚಿಟಗುಪ್ಪ ತಾಲ್ಲೂಕಿನ ಗ್ರೇಡ್–2 ತಹಶೀಲ್ದಾರ್ ಜಯಶ್ರೀ ಅವರನ್ನು ತಕ್ಷಣ ಸೇವೆಯಿಂದ ಅಮಾನತು ಮಾಡಬೇಕುʼ ಎಂದು ಪ್ರತಿಭಟನಾಕಾರರು ಆಗ್ರಹಿಸಿದರು.‌

ಇದನ್ನೂ ಓದಿ : ಬೀದರ್‌ | ಇದ್ದರೆ ಇರಬೇಕು ಇಂಥ ಸರ್ಕಾರಿ ಶಾಲೆ : ಹಳ್ಳಿ ಶಾಲೆಗೆ ಬಣ್ಣದ ಚಿತ್ತಾರ!

ಸಮಾಜದ ಪ್ರಮುಖರಾದ ರವಿ ಶಿವುಪೂಜಿ, ವೀರೇಶ್ ತುಂಗಾವ, ವಿಜಯಕುಮಾರ್, ರಾಜಶೇಖರ ಕೋರವಾರ್, ಸಿದ್ರಾಮ್ ಗೌಳಿ, ಮುಜಾಫರ್ ಪಟೇಲ್, ಬಾಬಾ ಆರ್.ಸಿ.ಸಿ., ಸುಭಾಷ್ ಕುಂಬಾರ, ಅಮಿತ್ ಹೊಸದೋಡ್ಡಿ, ಉದಯ್ ಬಬಡಿ, ನಿಲೇಶ್ ಮಳ್ಳಿ, ಶರಣಪ್ಪ, ಪರಮೇಶ್ವರ , ಅಣೇಪ್ಪ ಇಟಗಾ, ಕಾಂತಯ್ಯ ಸ್ವಾಮಿ, ಪ್ರವೀಣ್ ರಾಜಪೂರ್, ರವಿ ಸ್ವಾಮಿ, ರಶೀದ್‌ ಅಲಿ ಪಟೇಲ್ ಸೇರಿದಂತೆ ಮತ್ತಿತರರು ಪಾಲ್ಗೊಂಡಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಯಚೂರು | ಸಾಗುವಳಿ ರೈತರಿಗೆ ಭೂಮಿಯನ್ನು ಮಂಜೂರು ಮಾಡಬೇಕು : ಮಾರೆಪ್ಪ ಹರವಿ

ಸಾಗುವಳಿ ಮಾಡುತ್ತಿರುವ ರೈತರಿಗೆ ಭೂ ಮಂಜೂರಾತಿ ನೀಡಬೇಕೆಂದು ಭೂಮಿ ಮತ್ತು ವಸತಿ...

ಸರ್ಕಾರಿ ಶಾಲೆಗಳನ್ನು ಮುಚ್ಚಿ, ಜವಾಬ್ದಾರಿಯಿಂದ ನುಣುಚಿಕೊಳ್ಳಲು ಸರ್ಕಾರದಿಂದಲೇ ಷಡ್ಯಂತ್ರ: ಪ್ರೊ. ಮುರಿಗೆಪ್ಪ

"ತನ್ನ ಮೇಲಿನ ಭಾರವನ್ನು ಇಳಿಸಿಕೊಳ್ಳಲು ಸರ್ಕಾರಿ ಶಾಲೆಗಳನ್ನು ಮುಚ್ಚಿ ಖಾಸಗಿ ಶಾಲೆಗಳಿಗೆ...

ಬೀದರ್‌ | ಸೆ.3ರಂದು ಬಸವ ಸಂಸ್ಕೃತಿ ಅಭಿಯಾನ : ರಂಗೋಲಿ, ಬಾಲ ಶರಣರ ವೇಷಧಾರಿ ಸ್ಪರ್ಧೆ

ಬಸವ ಸಂಸ್ಕೃತಿ ಅಭಿಯಾನದ ಅಂಗವಾಗಿ ಅಭಿಯಾನ ಸಮಿತಿ ವತಿಯಿಂದ ಬೀದರ್ ನಗರದಲ್ಲಿ...

Download Eedina App Android / iOS

X