ಬೀದರ್‌ | ಪತ್ರಕರ್ತನ ಮೇಲೆ ಹಲ್ಲೆ: ಕ್ರಮಕ್ಕೆ ಆಗ್ರಹಿಸಿ ಗೃಹ ಸಚಿವರಿಗೆ ಮನವಿ

Date:

ಗದಗ ನಗರದಲ್ಲಿ ಪತ್ರಕರ್ತನ ಮೇಲೆ ಹಲ್ಲೆ ನಡೆಸಿದವರ ವಿರುದ್ಧ ಕೂಡಲೇ ಕ್ರಮ ಕೈಗೊಳ್ಳಬೇಕು ಎಂದು ಜಿಲ್ಲಾ ಸ್ಯಾಟ್‌ಲೈಟ್ ಮೀಡಿಯಾ ಅಸೋಸಿಯೇನ್ ಆಗ್ರಹಿಸಿದೆ.

- Advertisement -

ಅಸೋಸಿಯೇಷನ್ ಪದಾಧಿಕಾರಿಗಳು ನಗರದಲ್ಲಿ ಶುಕ್ರವಾರ ನಿಯೋಗದಲ್ಲಿ ಜಿಲ್ಲಾಧಿಕಾರಿ ಕಚೇರಿಗೆ ತೆರಳಿ ಗೃಹ ಸಚಿವ ಡಾ. ಜಿ. ಪರಮೇಶ್ವರ್ ಅವರ ಹೆಸರಿಗೆ ಬರೆದ ಮನವಿ ಪತ್ರವನ್ನು ಬೀದರ್ ಉಪ ವಿಭಾಗಾಧಿಕಾರಿ ಮುಹಮ್ಮದ್ ಶಕೀಲ್ ಅವರಿಗೆ ಸಲ್ಲಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ರಾಮದುರ್ಗ, ಸವದತ್ತಿ ಬರ ಘೋಷಣೆಗೆ ರೈತರ ಆಗ್ರಹ: 10...

"ಬರಪೀಡಿತ ತಾಲೂಕು ಘೋಷಣೆಯಾಗುತ್ತದೆಂಬ ವಿಶ್ವಾಸದಲ್ಲಿ ಗ್ರೌಂಡ್ ಟ್ರೂಥಿಂಗ್ ಮಾಡಲು ಸಿದ್ಧರಾಗಿದ್ದೆವು. ಆದರೆ ಅದು ಆಗಿಲ್ಲ. ಬರಪೀಡಿತ ತಾಲೂಕು ಎಂದು ಘೋಷಣೆ ಮಾಡಲು ಇನ್ನೂ ಅವಕಾಶವಿದೆ" ಎಂದು ಕೃಷಿ ಅಧಿಕಾರಿಗಳು ಹೇಳಿದರು. ಮುಂಗಾರು ಆರಂಭದಲ್ಲಿ ಉತ್ತಮ...

ಕರಗುವ ಹಿಮಾಲಯ, ಕುಸಿಯುವ ಆರ್ಥಿಕತೆ: ಹಿಮಪ್ರಳಯದ ಹಾದಿಯಲ್ಲಿ ಭಾರತದ...

ಹಿಮಾಲಯವು ಕೇವಲ ಮಂಜಿನ ಬೆಟ್ಟಗಳ ಸಮೂಹವಲ್ಲ; ಅದು ಭಾರತದ ಆರ್ಥಿಕ ಸ್ಥಿರತೆ, ಆಹಾರ ಭದ್ರತೆ ಮತ್ತು ಶಕ್ತಿ ಭದ್ರತೆಯ ತಾಣ. ಇಂದಿನ ಜಾಗತಿಕ ತಾಪಮಾನ ಏರಿಕೆಯ ಸವಾಲನ್ನು ಭಾರತವು ಕೇವಲ ಪರಿಸರ ಸಮಸ್ಯೆಯಾಗಿ...

ಈ ದಿನ ಕವಿತೆ | ಇಸ್ರೇಲಿನ ವಾಯುದಾಳಿಯ ರಾತ್ರಿಯಲಿ...

ಈ ಬಾರಿ ಪ್ಯಾಲೆಸ್ತೀನ್‌ನ ಕವಿ ಮೊಸಾಬ್ ಅಬು ತೋಹಾ ಅವರ ಕವನವನ್ನು ಇಂಗ್ಲಿಷ್‌ನಿಂದ ಕನ್ನಡಕ್ಕೆ ತಂದಿದ್ದಾರೆ ಸಿ ಎಚ್‌ ಭಾಗ್ಯ ಅವಳು ತನ್ನ ಹಾಸಿಗೆಯ ಸುತ್ತಾ ಇರುವ ಮಕ್ಕಳನ್ನು ಒಟ್ಟೈಸುವಳು.ಹೊಟೇಲ್ ಬಿಡುವ...

ಅಸೋಸಿಯೇಷನ್ ಅಧ್ಯಕ್ಷ ಮಲ್ಲಿಕಾರ್ಜುನ ಮರಕಲೆ ಮಾತನಾಡಿ, ʼಮತದಾರರ ಪಟ್ಟಿಗೆ ಅಕ್ರಮವಾಗಿ ಹೆಸರು ಸೇರ್ಪಡೆ ಮಾಡಲಾಗುತ್ತಿದೆ ಎಂಬ ಮಾಹಿತಿ ಹಿನ್ನೆಲೆಯಲ್ಲಿ ವರದಿ ಮಾಡಲು ಬಿಜೆಪಿಯ ವಿಧಾನ ಪರಿಷತ್ ಸದಸ್ಯ ಎಸ್.ವಿ.ಸಂಕನೂರ ಅವರ ಜನ ಸಂಪರ್ಕ ಕಚೇರಿಗೆ ಹೋಗಿದ್ದ ನ್ಯೂಸ್ ಫಸ್ಟ್ ವರದಿಗಾರ ಸುರೇಶ್ ಕಡ್ಲಿಮಟ್ಟಿ ಅವರ ಮೇಲೆ ಹಲ್ಲೆ ನಡೆಸಲಾಗಿದೆʼ ಎಂದು ತಿಳಿಸಿದರು.

ʼವಿಡಿಯೋ ಚಿತ್ರಿಕರಿಸಿ ವಾಪಸ್ ಬರುವಾಗ ವರದಿಗಾರನ ಕ್ಯಾಮೆರಾ ಕಸಿಯಲು ಯತ್ನಿಸಲಾಗಿದೆ. ಸಂಕನೂರ ವರದಿಗಾರನ ಕೈ, ಕೊರಳಪಟ್ಟಿ ಹಿಡಿದು ಹಲ್ಲೆಗೆ ಪ್ರಚೋದನೆ ನೀಡಿದ್ದಾರೆ. ಕಾರ್ಯಕರ್ತರು ಹಲ್ಲೆ ನಡೆಸಿದ್ದಾರೆ. ಪತ್ರಿಕಾ ರಂಗ ಪ್ರಜಾಪ್ರಭುತ್ವದ ನಾಲ್ಕನೇ ಅಂಗವಾಗಿದೆ. ಪತ್ರಕರ್ತನ ಮೇಲೆ ನಡೆದ ಹಲ್ಲೆಯನ್ನು ತೀವ್ರವಾಗಿ ಖಂಡಿಸಲಾಗುತ್ತದೆʼ ಎಂದು ಹೇಳಿದರು.‌

ಸಂಕನೂರ ಕೂಡಲೇ ಕ್ಷಮೆಯಾಚಿಸಬೇಕು. ಎಂಎಲ್ಸಿ ಎಸ್.ವಿ.ಸಂಕನೂರ ಹಾಗೂ ಅವರ ಬೆಂಬಲಿಗರ ವಿರುದ್ಧ ಸರ್ಕಾರ ಕಾನೂನು ಕ್ರಮ ಜರುಗಿಸಬೇಕು ಎಂದು ಒತ್ತಾಯಿಸಿದರು.

ಇದನ್ನೂ ಓದಿ : ಬೀದರ್‌ | ʼಈದಿನʼ ಫಲಶೃತಿ : ನಾಗಮಾರಪಳ್ಳಿ ಶಾಲೆಗೆ ತಾಲೂಕು ಪಂಚಾಯತ್ ಇಒ ಭೇಟಿ

ಅಸೋಸಿಯೇಷನ್ ಗೌರವಾಧ್ಯಕ್ಷ ರಾಜಕುಮಾರ ಸ್ವಾಮಿ, ಕಾರ್ಯಾಧ್ಯಕ್ಷ ಮಲ್ಲಿಕಾರ್ಜುನ ನಾಗರಾಳ, ಉಪಾಧ್ಯಕ್ಷರಾದ ಎಲ್.ಆರ್. ಕೃಷ್ಣ, ಸಂಜುಕುಮಾರ ಬುಕ್ಕಾ, ಪ್ರಧಾನ ಕಾರ್ಯದರ್ಶಿ ಸುರೇಶ್ ನಾಯ್ಕ್, ಅನಿಲಕುಮಾರ ದೇಶಮುಖ, ಓಂಕಾರ ಮಠಪತಿ, ನಂದಕುಮಾರ ಕರಂಜೆ, ವಿಶ್ವಕುಮಾರ ಕಲ್ಲಾ, ಲಿಂಗರಾಜ ಮರಕಲೆ, ಶಿವಾನಂದ ಅಮರಗೋಳ, ದುರ್ಗಪ್ಪ ಹೊಸಮನಿ, ಶಿವಯ್ಯ ಮಠಪತಿ, ಕಲ್ಲಪ್ಪ ಹಳ್ಳದಕೇರಿ, ಅಮರೇಶ ಹಿರೇಮಠ, ಮಹೇಶ ಸಜ್ಜನಶೆಟ್ಟಿ, ಆಸಿಫ್ ಚಿದ್ರಿ, ಭರತ ಮರಕಲೆ, ಶರಣಯ್ಯ ಸ್ವಾಮಿ, ದೇವರಾಜ ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು | ಸಿಎಂ ಭೇಟಿ ಹಿನ್ನೆಲೆ: ಸಂಚಾರ ಮಾರ್ಗ ಬದಲಾವಣೆ

ಚಿಕ್ಕಮಗಳೂರು ಜಿಲ್ಲೆ ನರಸಿಂಹರಾಜಪುರ ತಾಲೂಕಿನ ಬಾಳೆಹೊನ್ನೂರು ಹೋಬಳಿಗೆ ಮುಖ್ಯಮಂತ್ರಿಗಳಾದ ಡಿ.ಕೆ. ಶಿವಕುಮಾ‌ರ್...

ಕೋಲಾರ | ಕ್ರಷರ್ ಘಟಕದಿಂದ ಸೀತಿ ಬೆಟ್ಟದ ದೇವಾಲಯಕ್ಕೆ ಹಾನಿ: ಸ್ಥಗಿತಕ್ಕೆ ಗ್ರಾಮಸ್ಥರ ಪ್ರತಿಭಟನೆ

ತಾಲ್ಲೂಕಿನ ವೇಮಗಲ್ ಹೋಬಳಿ ಸೀತಿ ಗ್ರಾಮದ ಬಳಿ ಗೋಮಾಳ ಜಮೀನಿನಲ್ಲಿ ನಿಯಮ...

ಕೋಲಾರ | ಕೆ.ಎಸ್. ಗಣೇಶ್ ನೇತೃತ್ವದಲ್ಲಿ ಬೆಳೆದ ಸಂಘದಿಂದ ಎರಡು ಜಿಲ್ಲೆಗಳ ಪತ್ರಕರ್ತರಿಗೆ ಆರ್ಥಿಕ, ಆರೋಗ್ಯ ಹಾಗೂ ಸಾಮಾಜಿಕ ನೆರವು

ಪತ್ರಕರ್ತರ ಆರ್ಥಿಕ ಹಾಗೂ ಸಾಮಾಜಿಕ ಅಗತ್ಯಗಳಿಗೆ ಸ್ಪಂದಿಸುವ ಉದ್ದೇಶದಿಂದ ಆರಂಭಗೊಂಡಿರುವ ಕೋಲಾರ...

ಚಿಕ್ಕಮಗಳೂರು | ಸಿಎಂ ಭೇಟಿ: ಕಾಂಗ್ರೆಸ್ ಸರ್ಕಾರ ಜನಪರ ಕಾಳಜಿಗೆ ಸಾಕ್ಷಿಯಾಗಿದೆ; ಹೆಚ್.ಪಿ ಮಂಜೇಗೌಡ

ಚಿಕ್ಕಮಗಳೂರು ನಗರದ ಪತ್ರಿಕಾಗೋಷ್ಠಿಯಲ್ಲಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹೆಚ್.ಪಿ.ಮಂಜೇಗೌಡ ಮಾತನಾಡಿ,"ಕಸ್ತೂರಿ ರಂಗನ್...