ಬೀದರ್ | ಮಸ್ಕಲ್ ಸರ್ಕಾರಿ ಶಾಲೆಯ ಮಕ್ಕಳಿಗೆ ಅವಿರತ ಟ್ರಸ್ಟ್‌ನಿಂದ ಉಚಿತ ನೋಟ್ ಬುಕ್ ವಿತರಣೆ

Date:

Advertisements

ಗ್ರಾಮೀಣ ಭಾಗದ ಮಕ್ಕಳ ಕಲಿಕೆಗೆ ಅನುಕೂಲ ಆಗಬೇಕೆಂಬ ಉದ್ದೇಶದಿಂದ ಉಚಿತವಾಗಿ ಪುಸ್ತಕಗಳನ್ನು ನೀಡಿ ಪ್ರೋತ್ಸಾಹಿಸಲಾಗುತ್ತಿದೆ ಎಂದು ಅವಿರತ ಟ್ರಸ್ಟ್ ಸದಸ್ಯ ಪ್ರವೀಣ ರತ್ನಾಕರ್ ಹೇಳಿದರು.

ಔರಾದ್ ತಾಲ್ಲೂಕಿನ ಮಸ್ಕಲ್ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಮಕ್ಕಳಿಗೆ ಪುಸ್ತಕ ವಿತರಣೆ ಸಮಾರಂಭದಲ್ಲಿ ಅವರು ಮಾತನಾಡಿದರು.

ಕಳೆದ ಹದಿನೆಂಟು ವರ್ಷಗಳಿಂದ ಬೆಂಗಳೂರಿನ ಅವಿರತ ಟ್ರಸ್ಟ್ ರಾಜ್ಯದ ನಾನಾ ಜಿಲ್ಲೆಗಳ ಗ್ರಾಮೀಣ ಪ್ರದೇಶದ ಸರ್ಕಾರಿ ಶಾಲೆಗಳಿಗೆ ಪ್ರತಿವರ್ಷ ನೋಟ್ ಪುಸ್ತಕಗಳನ್ನು ಪೂರೈಸಿ, ಗ್ರಾಮೀಣ ಮಕ್ಕಳ ಶಿಕ್ಷಣಕ್ಕೆ ಒತ್ತು ನೀಡುತ್ತಿದ್ದೇವೆ’ ಎಂದರು.

Advertisements

ಚಿಂತಕ ದಿಲೀಪ ಚಂದಾ ಮಾತನಾಡಿ, ‘ಬಸವಾದಿ ಶರಣರ ದಾಸೋಹ ತತ್ವದಿಂದ ಅವಿರತ ಟ್ರಸ್ಟ್ ಶೈಕ್ಷಣಿಕ ಅಭಿವೃದ್ಧಿಗೆ ಶ್ರಮಿಸುತ್ತಿದೆ. ಸರ್ಕಾರಿ ಶಾಲೆಯಲ್ಲಿ ಓದುವುದು ಮಕ್ಕಳು ಕೀಳರಿಮೆ ಪಡದೆ ಉನ್ನತ ಗುರಿ ತಲುಪಲು ಪ್ರಯತ್ನಿಸಬೇಕು’ ಎಂದರು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮುಖ್ಯ ಶಿಕ್ಷಕ ಶಿವಪುತ್ರ ಮುಕ್ರಂಬೆ ಮಾತನಾಡಿ, ‘ಸರ್ಕಾರಿ ಶಾಲೆಗಳ ಅಭಿವೃದ್ಧಿಗೆ ಗ್ರಾಮಸ್ಥರ, ಸಂಘ-ಸಂಸ್ಥೆಗಳ ಸಹಕಾರ ಅಗತ್ಯವಿದೆ. ಸ್ವಂತ ಹಣದಲ್ಲಿ ಉಚಿತವಾಗಿ ನೋಟ್ ಬುಕ್ ವಿತರಿಸುವ ಅವಿರತ ಟ್ರಸ್ಟ್ ಕಾರ್ಯ ಶ್ಲಾಘನೀಯ ‘ ಎಂದು ನುಡಿದರು.

1004080883

ಸಾಮಾಜಿಕ ಕಾರ್ಯಕರ್ತರಾದ ವಿನೋದ್ ರತ್ನಾಕರ್, ಸುಭಾಷ ಲಾಧಾ, ಪತ್ರಕರ್ತ ಬಾಲಾಜಿ ಕುಂಬಾರ ಮಾತನಾಡಿದರು.

ಇದೇ ಸಂದರ್ಭದಲ್ಲಿ ಅವಿರತ ಟ್ರಸ್ಟ್ ವತಿಯಿಂದ ಶಾಲೆಯ ಎಲ್ಲ ಮಕ್ಕಳಿಗೆ ಉಚಿತವಾಗಿ ನೋಟ್ ಬುಕ್ ವಿತರಣೆ ಮಾಡಲಾಯಿತು. ಶಾಲೆಯ ಹಳೆ ವಿದ್ಯಾರ್ಥಿ ರಾಜಕುಮಾರ ಮೇತ್ರೆ ಅವರು ಶಾಲಾ ಮಕ್ಕಳಿಗೆ ಕ್ರೀಡಾ ಸಾಮಗ್ರಿ ವಿತರಣೆ ಮಾಡಿದರು.

ಇದನ್ನೂ ಓದಿ : ಬೀದರ್ | ವಸತಿ ನಿಲಯದಲ್ಲಿ ಪದವಿ ವಿದ್ಯಾರ್ಥಿನಿ ಆತ್ಮಹತ್ಯೆ

ಎಸ್‌ಡಿಎಂಸಿ ಅಧ್ಯಕ್ಷ ಶರಣಬಸವ ಚಿದ್ರೆ, ಗ್ರಾಮದ ಪ್ರಮುಖರಾದ ವಿಜಯಕುಮಾರ್ ಪಾಟೀಲ್, ಸತೀಶ್, ಸಂಗೀತಾ, ಮೀನಾಕ್ಷಿ, ಭಾಗ್ಯಶ್ರೀ, ಸಿದ್ರಾಮ್ ಪಾಟೀಲ್, ಈಶ್ವರ್ ಸ್ವಾಮಿ, ನಾಗಯ್ಯ ಸ್ವಾಮಿ, ಸಂತೋಷ್ ಚ್ಯಾರೆ, ಕೈಲಾಸ ಸ್ವಾಮಿ, ಶಿವು ಕೋಳಿ, ಭಗವಂತ, ಶಿಕ್ಷಕರಾದ ಸಂತೋಷ್, ಮಮತಾಜ್ ಹಾಗೂ ವಿದ್ಯಾರ್ಥಿಗಳು ಹಾಜರಿದ್ದರು.

ಅವಿರತ ಟ್ರಸ್ಟ್‌ನ ವೆಂಕಟ ಚಿಟ್ಟಾ, ಸಕ್ಪಾಲ್ ಕಾಂಬಳೆ ಪ್ರಾರ್ಥನೆ ನಡೆಸಿಕೊಟ್ಟರು. ಶಿಕ್ಷಕ ಬಸವರಾಜ ಪಾಂಚಾಳ ಸ್ವಾಗತಿಸಿದರು. ನವನಾಥ ನಿರೂಪಿಸಿ, ವಂದಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಯಾದಗಿರಿ | ಅತಿವೃಷ್ಟಿಯಿಂದ ಬೆಳೆ ಹಾನಿ: ರೈತರಿಗೆ ಪರಿಹಾರ ನೀಡುವಂತೆ ಆಗ್ರಹ

ಯಾದಗಿರಿ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ಬೆಳೆ ಹಾನಿದ ರೈತರಿಗೆ ಸಮೀಕ್ಷೆ ನಡೆಸಿ ಶೀಘ್ರದಲ್ಲಿ...

ಗುಬ್ಬಿ | ಜನಪದ ಸಾಹಿತ್ಯ ಎಂದೆಂದಿಗೂ ಜೀವಂತ : ಡಾ.ಮೂರ್ತಿ ತಿಮ್ಮನಹಳ್ಳಿ

ಕನ್ನಡ ಸಾಹಿತ್ಯ ಲೋಕದಲ್ಲಿ ಹಲವು ಪ್ರಕಾರಗಳ ಪೈಕಿ ಜನಪದ ಸಾಹಿತ್ಯ...

ಉಡುಪಿ | ಮಹೇಶ್‌ ಶೆಟ್ಟಿ ತಿಮರೋಡಿ ಬೆಂಬಲಿಗರ ಕಾರು ಪೊಲೀಸ್‌ ಅಧೀಕ್ಷರಕ ಕಾರಿಗೆ ಡಿಕ್ಕಿ !

ಬೆಳ್ತಂಗಡಿಯ ಸೌಜನ್ಯ ಪರ ಹೋರಾಟಗಾರ ಮಹೇಶ್‌ ಶೆಟ್ಟಿ ತಿಮರೋಡಿಯವರನ್ನು ಬ್ರಹ್ಮಾವರ ಪೊಲೀಸ್...

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

Download Eedina App Android / iOS

X