ವಿದ್ಯುತ್ ಶುಲ್ಕ ಏರಿಕೆ ವಿರೋಧಿಸಿ ಮತ್ತು ದರ ಏರಿಕೆ ಹಿಂಪಡೆಯಬೇಕೆಂದು ಆಗ್ರಹಿಸಿ ಬೀದರ್ ವಾಣಿಜ್ಯ ಮತ್ತು ಕೈಗಾರಿಕಾ ಸಂಸ್ಥೆ ಹಾಗೂ ಸಾರ್ವಜನಿಕ ಹಿತ ಸಂರಕ್ಷಣಾ ಸಮಿತಿ ನೇತೃತ್ವದಲ್ಲಿ ಜೂ.22ರಂದು ಬೀದರ್ ಬಂದ್ ಮತ್ತು ಪ್ರತಿಭಟನಾ ಮೆರವಣಿಗೆಗೆ ಕರೆ ನೀಡಲಾಗಿದೆ.
ಈ ಕುರಿತು ಬೀದರ್ ವಾಣಿಜ್ಯ ಮತ್ತು ಕೈಗಾರಿಕಾ ಸಂಸ್ಥೆ ಹಾಗೂ ಸಾರ್ವಜನಿಕ ಹಿತ ಸಂರಕ್ಷಣಾ ಸಮಿತಿ ಪದಾಧಿಕಾರಿಗಳು ಸುದ್ದಿಗೋಷ್ಠಿ ನಡೆಸಿ ಮಾಹಿತಿ ನೀಡಿದ್ದಾರೆ.
ಬೀದರ್ ವಾಣಿಜ್ಯ ಮತ್ತು ಕೈಗಾರಿಕಾ ಸಂಸ್ಥೆ ನೇತೃತ್ವದಲ್ಲಿ ಕರ್ನಾಟಕ ವಾಣಿಜ್ಯೋದ್ಯಮ ಸಂಸ್ಥೆ, ಉದ್ಯೋಗಿಗಳು, ವ್ಯಾಪಾರಸ್ಥರು, ಶಿಕ್ಷಣ ಸಂಸ್ಥೆಗಳ ಪ್ರಮುಖರು ಮತ್ತು ಸಾರ್ವಜನಿಕರು ಜೊತೆ ಗೂಡಿ ಒಂದು ದಿನ ಬೀದರ್ ಬಂದ್‌ಗೆ ಕರೆ ನೀಡಿದ್ದೇವೆ ಎಂದು ತಿಳಿಸಿದ್ದಾರೆ.
ಕರ್ನಾಟಕ ಸರ್ಕಾರ ಇತ್ತೀಚೆಗೆ ಶೇ. 40ರಷ್ಟು ವಿದ್ಯುತ್ ದರ ಏರಿಕೆ ಖಂಡಿಸಿ ರಾಜ್ಯದ್ಯಂತ ಬಂದ್ ಕರೆನೀಡಿ ಪ್ರತಿಭಟನೆ ಹಮ್ಮಿಕೊಂಡಿದ್ದು, ಅದರಂತೆ ನಾವು ಸಹ ಬೀದರ್ ಜಿಲ್ಲಾದ್ಯಂತ ಬಂದ್ ಕರೆ ನೀಡಿದ್ದೇವೆ. ಅಂದು ತಮ್ಮ ಎಲ್ಲಾ ಕೆಲಸ ಕಾರ್ಯಗಳನ್ನು ಸ್ಥಗಿತಗೊಳಿಸಿ ಸಾರ್ವಜನಿಕರು ಬಂದ್‌ಗೆ ಸಹಕರಿಸಿ ಎಂದು ಮನವಿ ಮಾಡಿದ್ದಾರೆ.
ಸುದ್ದಿಗೋಷ್ಠಿಯಲ್ಲಿ ಬೀದರ್ ವಾಣಿಜ್ಯ ಮತ್ತು ಕೈಗಾರಿಕಾ ಸಂಸ್ಥೆ ಅಧ್ಯಕ್ಷ ಬಿ ಜಿ ಶೆಟಕಾರ, ಕಾರ್ಯದರ್ಶಿ ಡಾ. ವೀರೇಂದ್ರ ಶಾಸ್ತ್ರಿ, ಸಾರ್ವಜನಿಕ ಹಿತ ಸಂರಕ್ಷಣಾ ಸಮಿತಿ ಸಂಚಾಲಕ ರೇವಣ್ಣಸಿದ್ದಪ್ಪ ಜಲಾದೆ ಇದ್ದರು.
ಈ ಸುದ್ದಿ ಓದಿದ್ದೀರಾ? ಚಿತ್ರದುರ್ಗ | ಕೇವಲ ಬಿರಿಯಾನಿಗಾಗಿ ಮತಾಂತರವಾಗುತ್ತಿದ್ದಾರೆ; ಬಿಜೆಪಿ ಸಚಿವ ಆಕ್ಷೇಪಾರ್ಹ ಹೇಳಿಕೆ