ಬೀದರ್-ಬೆಂಗಳೂರು ವಿಮಾನ ಸೇವೆ: 2 ವಾರದಲ್ಲಿ ವರದಿ ಸಲ್ಲಿಸಲು ಸಚಿವ ಎಂ.ಬಿ.ಪಾಟೀಲ್ ಸೂಚನೆ

Date:

ಬೀದರ್–ಬೆಂಗಳೂರು ನಡುವೆ ನಾಗರಿಕ ವಿಮಾನಯಾನ ಸೇವೆ ಪುನ: ಆರಂಭಿಸುವ ಕುರಿತಂತೆ ವಿವಿಧ ವಿಮಾನಯಾನ ಕಂಪನಿಗಳೊಂದಿಗೆ ಚರ್ಚಿಸಿ ಎರಡು ವಾರಗಳ ಒಳಗಾಗಿ ಪ್ರಸ್ತಾವನೆ ಸಲ್ಲಿಸುವಂತೆ ಮೂಲಸೌಕರ್ಯ ಅಭಿವೃದ್ಧಿ ಸಚಿವ ಎಂ.ಬಿ.ಪಾಟೀಲ್ ಅವರು ಅಧಿಕಾರಿಗಳಿಗೆ ನಿರ್ದೇಶನ ನೀಡಿದ್ದಾರೆ.

- Advertisement -

ಬೆಂಗಳೂರಿನ ವಿಧಾನಸೌಧದ ಸಮಿತಿ ಕೊಠಡಿಯಲ್ಲಿ ಬೀದರ್ ಉಸ್ತುವಾರಿ ಮತ್ತು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ. ಖಂಡ್ರೆ ಮತ್ತು ಪೌರಾಡಳಿತ ಸಚಿವ ರಹೀಂ ಖಾನ್ ಅವರೊಂದಿಗೆ ನಡೆದ ಉನ್ನತ ಮಟ್ಟದ ಸಭೆಯಲ್ಲಿ ಸಚಿವರು ಮೇಲಿನಂತೆ ಸೂಚಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಕತೆ | ಪೌರಶ್ರೀ – ಐಸಾಕ್‌ ಅಸಿಮೋವ್

ಪೌರಶ್ರೀ ಓದುವುದಕ್ಕೂ ಮುನ್ನ- ಒಂದು ಪುಟ್ಟ ಟಿಪ್ಪಣಿ ಈ ಸಹಸ್ರಮಾನದ ಅತ್ಯದ್ಭುತ ವೈಜ್ಞಾನಿಕ ಲೇಖಕ ರಲ್ಲಿ ಒಬ್ಬರು ಅಮೆರಿಕ ಬೋಸ್ಟನ್ ವಿಶ್ವ ವಿದ್ಯಾಲಯ ದಲ್ಲಿ ರಸಾಯನ ಶಾಸ್ತ್ರದ ಪ್ರಾಧ್ಯಾಪಕರಾಗಿದ್ದ ಐಸಾಕ್ ಅಸಿಮೋವ್. ವಿಶ್ವ...

ಶಿವಮೊಗ್ಗ | ದಾಖಲೆಗಳಲ್ಲಿ ಪೂರ್ಣ, ವಾಸ್ತವದಲ್ಲಿ ನೆನೆಗುದಿಗೆ...

ಶಿವಮೊಗ್ಗ ತಾಲೂಕಿನ ಕಾಚಿನಕಟ್ಟೆ ಗ್ರಾಮದಲ್ಲಿ ಸಮುದಾಯ ಭವನದ ಅಪೂರ್ಣ ಕಾಮಗಾರಿ ಆದರೆ ಶಿವಮೊಗ್ಗ ನಿರ್ಮಿತಿ ಕೇಂದ್ರ ದಾಖಲೆ ಪ್ರಕಾರ ಕಾಮಗಾರಿ ಸಂಪೂರ್ಣವಾಗಿದೆ ಎಂದು ದಾಖಲೆಗಳಲ್ಲಿ. ಈ ಸಂಬಂಧ ಲಂಚಮುಕ್ತ ಕರ್ನಾಟಕ ಮತ್ತು KRS ಪಕ್ಷದ...

ವಿಜಯಪುರ | ಹೆಚ್ಚುತ್ತಿರುವ ಬೀದಿ ನಾಯಿಗಳ ಹಾವಳಿ: 9...

ಬೀದಿ ನಾಯಿ ನಿಯಂತ್ರಣಕ್ಕೆ ನಗರಸಭೆ, ಪುರಸಭೆ, ಪಟ್ಟಣ ಪಂಚಾಯಿತಿ ಹಾಗೂ ಗ್ರಾಮ ಪಂಚಾಯಿತಿಗಳು ಪರಸ್ಪರ ಸಮನ್ವಯದಿಂದ ಕಾರ್ಯನಿರ್ವಹಿಸಿ, ಬೀದಿ ನಾಯಿಗಳ ಹಾವಳಿ ಹೆಚ್ಚಿರುವ ಪ್ರದೇಶಗಳನ್ನು ಗುರುತಿಸಿ ನಿಯಂತ್ರಣ ಕ್ರಮ ಕೈಗೊಳ್ಳಬೇಕು. ಶಾಲೆ, ಆಸ್ಪತ್ರೆ,...

ಬೀದರ್ ಮತ್ತು ಬೆಂಗಳೂರು ನಡುವೆ ವಿಮಾನಯಾನ ಸೇವೆ ಪುನಾರಂಭಿಸುವ ಕುರಿತಂತೆ 72 ಆಸನಗಳ ಚಿಕ್ಕ ವಿಮಾನಯಾನ ಸೇವೆ ಒದಗಿಸುವ ವಿವಿಧ ಕಂಪನಿಗಳ ಜೊತೆಯಲ್ಲಿ ಮಾತುಕತೆ ನಡೆಸಿ 2 ವಾರಗಳ ಒಳಗಾಗಿ ಪ್ರಸ್ತಾವನೆ ಸಲ್ಲಿಸಲು ಸಚಿವ ಎಂ.ಬಿ.ಪಾಟೀಲ್ ಸೂಚಿಸಿದರು.

ಸಚಿವ ಈಶ್ವರ ಖಂಡ್ರೆ ಮಾತನಾಡಿ, ʼಹಿಂದುಳಿದ ಕಲ್ಯಾಣ ಕರ್ನಾಟಕಕ್ಕೆ ಸೇರಿದ ಗಡಿ ಜಿಲ್ಲೆ ಬೀದರ್‌ಗೆ ವಿಮಾನಯಾನ ಸೇವೆ ಕಲ್ಪಿಸಬೇಕೆಂಬ ಜನರ ಹೋರಾಟಕ್ಕೆ ಮಣಿದು 2020ರಲ್ಲಿ ಭಾರತೀಯ ವಾಯುಪಡೆಗೆ ಸೇರಿದ ವಿಮಾನ ನಿಲ್ದಾಣದಲ್ಲಿಯೇ ನಾಗರಿಕ ವಿಮಾನಯಾನ ಸೇವೆ ಆರಂಭಿಸಲಾಗಿತ್ತು. ಸ್ಥಗಿತಗೊಂಡಿದ್ದ ವಿಮಾನಯಾನ ಮತ್ತೆ 2022ರಲ್ಲಿ ಪುನಾರಂಭವಾಗಿತ್ತು. ಈಗ ಮತ್ತೆ ಕಳೆದ ಡಿಸೆಂಬರ್‌ನಿಂದ ಸಂಪೂರ್ಣ ಸ್ಥಗಿತಗೊಂಡಿದೆʼ ಎಂದು ಮಾಹಿತಿ ನೀಡಿದರು.

ʼಉಡಾನ್ ಸಬ್ಸಿಡಿ ನಿಲ್ಲಿಸಿರುವ ಕಾರಣ ವಿಮಾನ ಸೇವೆ ಒದಗಿಸಲು ಸಾಧ್ಯವಿಲ್ಲ. ಮತ್ತೆ ಸಬ್ಸಿಡಿ ನೀಡುವುದಾದರೆ ಸೇವೆ ಒದಗಿಸಲು ಸಿದ್ಧ ಎಂದು ಸೇವಾ ಪೂರೈಕೆದಾರ ಸಂಸ್ಥೆಗಳು ಹೇಳುತ್ತಿವೆ. ರಾಜ್ಯ ಸರ್ಕಾರದಿಂದಲೇ ಸಬ್ಸಿಡಿ ಹಣ ಭರಿಸುವ ಕುರಿತಂತೆ ವಿಮಾನಯಾನ ಸೇವಾ ಪೂರೈಕೆದಾರರೊಂದಿಗೆ ಮಾತುಕತೆ ನಡೆಸಿ, ಜಿಲ್ಲೆಯ ಜನರಿಗೆ ಅಗ್ಗದ ದರದಲ್ಲಿ ನಾಗರಿಕ ವಿಮಾನಯಾನ ಸೇವೆ ಪುನಾರಂಭಿಸಬೇಕುʼ ಎಂದು ಸಚಿವ ಖಂಡ್ರೆ ಆಗ್ರಹಿಸಿದರು.

ಈ ಸುದ್ದಿ ಓದಿದ್ದೀರಾ? ಕಲಬುರಗಿ | ಪತ್ನಿ ಕೊಲೆಗೆ ಯತ್ನಿಸಿದ ಪತಿಗೆ 2 ವರ್ಷ ಜೈಲು, ದಂಡ

ಸಭೆಯಲ್ಲಿ ಇಲಾಖೆಯ ಕಾರ್ಯದರ್ಶಿ ಡಾ. ಎನ್. ಮಂಜುಳಾ ಮತ್ತಿತರರು ಪಾಲ್ಗೊಂಡಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗದಗ | ರಾಜ್ಯ ಮಟ್ಟದ ಕುಸ್ತಿ ಪಂದ್ಯಾವಳಿ: ಶಿಸ್ತುಬದ್ಧ, ಅಚ್ಚುಕಟ್ಟಾದ ವ್ಯವಸ್ಥೆಗೆ ಜಿಲ್ಲಾಧಿಕಾರಿ ಸಿ. ಎನ್. ಶ್ರೀಧರ ಸೂಚನೆ

ಜಿಲ್ಲೆಯಲ್ಲಿ ಆಯೋಜಿಸಲಾಗಿರುವ ರಾಜ್ಯ ಮಟ್ಟದ ಕುಸ್ತಿ ಪಂದ್ಯಾವಳಿಯನ್ನು ಅತ್ಯಂತ ಯಶಸ್ವಿಯಾಗಿ ಹಾಗೂ...

ಶಿವಮೊಗ್ಗ | ದಾಖಲೆಗಳಲ್ಲಿ ಪೂರ್ಣ, ವಾಸ್ತವದಲ್ಲಿ ನೆನೆಗುದಿಗೆ ಬಿದ್ದ ಸಮುದಾಯ ಭವನ

ಶಿವಮೊಗ್ಗ ತಾಲೂಕಿನ ಕಾಚಿನಕಟ್ಟೆ ಗ್ರಾಮದಲ್ಲಿ ಸಮುದಾಯ ಭವನದ ಅಪೂರ್ಣ ಕಾಮಗಾರಿ ಆದರೆ...

‌ಬೀದರ್‌ | ಮತದಾನ ಹಕ್ಕು ಕಸಿಯುವ ʼಎಸ್‌ಐಆರ್ʼ ಪ್ರಕ್ರಿಯೆ ವಿರೋಧಿಸಿ ಅ.12ರಂದು ಪ್ರತಿಭಟನೆ

ದೇಶಾದ್ಯಂತ ಎಸ್‌ಐಆರ್ ಹೆಸರಿನಲ್ಲಿ ಮತದಾರರ ಪಟ್ಟಿಯಿಂದ ಕೋಟ್ಯಂತರ ಮತದಾರರನ್ನು ಕೈಬಿಡಲಾಗಿರುವುದನ್ನು ಆರೋಪಿಸಿ,...

ವಿಜಯಪುರ | ದಸಂಸ ರಾಜ್ಯ ಸಂಘಟನಾ ಸಂಚಾಲಕಿಯಾಗಿ ಪ್ರತಿಭಾ ಹೊಸಮನಿ ಆಯ್ಕೆ

ಕರ್ನಾಟಕ ದಲಿತ ಸಂಘರ್ಷ ಸಮಿತಿ (ಅಂಬೇಡ್ಕರ್‌ವಾದ) ಚಿಕ್ಕಮಗಳೂರಿನಲ್ಲಿ ಆಯೋಜಿಸಲಾಗಿದ್ದ ರಾಜ್ಯ...