ಬೀದರ್ | ಆಶಾ ರಾಠೋಡ್‌ಗೆ ಬಂಜಾರ ಅಕಾಡೆಮಿ ವಾರ್ಷಿಕ ಪ್ರಶಸ್ತಿ

Date:

Advertisements

ಕರ್ನಾಟಕ ಬಂಜಾರ ಸಂಸ್ಕೃತಿ ಹಾಗೂ ಭಾಷಾ ಅಕಾಡೆಮಿಯು 2023-24ನೇ ಸಾಲಿನ ಪ್ರಶಸ್ತಿಗಳನ್ನು ಪ್ರಕಟಿಸಿದ್ದು, ‘ಬಂಜಾರ ನೃತ್ಯ ಕಸೂತಿ’ ಕ್ಷೇತ್ರದಲ್ಲಿ ಸಾಧನೆಗೈದ ಭಾಲ್ಕಿ ತಾಲ್ಲೂಕಿನ ಆಶಾ ರಾಠೋಡ್‌ ಅವರು ಬಂಜಾರ ಅಕಾಡೆಮಿ ವಾರ್ಷಿಕ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ.

ಕರ್ನಾಟಕ ಜಾನಪದ ಪರಿಷತ್ತಿನ ಮಹಿಳಾ ಘಟಕದ ಭಾಲ್ಕಿ ತಾಲ್ಲೂಕು ಅಧ್ಯಕ್ಷರಾದ ಆಶಾಬಾಯಿ ರಾಥೋಡ್ ಅವರು ರಾಜ್ಯ ಸರ್ಕಾರದ ಸಹಯೋಗದೊಂದಿಗೆ ದೇಶದ ವಿವಿಧ ರಾಜ್ಯಗಳಲ್ಲಿ ಜರುಗಿದ ಜನಪದ ಉತ್ಸವ, ಲಂಬಾಣಿ ಉತ್ಸವಗಳಲ್ಲಿ ಲಂಬಾಣಿ ಕಲಾ ತಂಡದೊಂದಿಗೆ ಭಾಗವಹಿಸಿ ಕಲಾ ಪ್ರದರ್ಶನ ಮಾಡಿದ್ದಾರೆ.

ಮಹಿಳೆಯರಿಗೆ ಲಂಬಾಣಿ ಕಸೂತಿ ತರಬೇತಿ ನೀಡುವ ಮುಖಾಂತರ ಗಡಿ ಭಾಗದಲ್ಲಿ ಲಂಬಾಣಿ ಸಂಸ್ಕೃತಿ ಉಳಿಸಿ ಬೆಳೆಸುವ ಕಾರ್ಯ ಮಾಡಿದ್ದಾರೆ. ಅವರ ಸೇವೆಯನ್ನು ಗುರುತಿಸಿ ರಾಜ್ಯ ಸರ್ಕಾರ ವಾರ್ಷಿಕ ಪ್ರಶಸ್ತಿಗೆ ಆಯ್ಕೆ ಮಾಡಿದೆ. ಪ್ರಶಸ್ತಿಯು 25 ಸಾವಿರ ನಗದು ಹಾಗೂ ಪ್ರಶಸ್ತಿ ಫಲಕ ಒಳಗೊಂಡಿದೆ.

Advertisements

ಈ ಸುದ್ದಿ ಓದಿದ್ದೀರಾ? ಬೀದರ್ | ಭಾರತೀಯರೊಂದಿಗೆ ಅಮೇರಿಕಾ ಅಮಾನುಷ ವರ್ತನೆ : ಸಂಸದ ಸಾಗರ್ ಖಂಡ್ರೆ ಖಂಡನೆ

ಆಶಾದೇವಿ ರಾಠೋಡ್ ಅವರಿಗೆ ಪ್ರಶಸ್ತಿ ಘೋಷಣೆಯಾಗಿದ್ದಕ್ಕೆ ಕರ್ನಾಟಕ ಜಾನಪದ ಪರಿಷತ್ ಜಿಲ್ಲಾ ಹಾಗೂ ತಾಲೂಕು ಘಟಕ ಮತ್ತು ರಾಷ್ಟ್ರೀಯ ಜನಪದ ಬುಡಕಟ್ಟು ಕಲಾ ಪರಿಷತ್ ನವದೆಹಲಿ ಪರವಾಗಿ ಡಾ.ಜಗನ್ನಾಥ ಹೆಬ್ಬಾಳೆ, ಡಾ.ರಾಜಕುಮಾರ ಹೆಬ್ಬಾಳೆ, ನಿಜಲಿಂಗಪ್ಪ ತಗಾರೆ, ಪ್ರೊ.ಎಸ್.ಬಿ.ಬಿರಾದಾರ, ಶಂಕ್ರೆಪ್ಪ ಹೊನ್ನಾ, ಡಾ.ಸಂಜೀವಕುಮಾರ ಜುಮ್ಮಾ, ಡಾ.ಸುನಿತಾ ಕೂಡ್ಲಿಕರ್, ಡಾ.ಮಹಾನಂದ ಮಡಕಿ, ಡಾ.ಸಾವಿತ್ರಿಬಾಯಿ ಹೆಬ್ಬಾಳೆ, ಎಸ್.ಬಿ.ಕುಚಬಾಳ, ಶಿವಶರಣಪ್ಪ ಗಣೇಶಪುರ, ಪ್ರಕಾಶ ಕನ್ನಾಳೆ, ಮಹಾರುದ್ರ ಡಾಕುಳಗಿ, ಶಿವರಾಜ್ ಖಪಲೆ ಹರ್ಷ ವ್ಯಕ್ತಪಡಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮಂಡ್ಯ | ಕಿರುಗಾವಲು ಜ್ಯುವೆಲರಿ ಶಾಪ್ ಕಳ್ಳತನ; ಆರೋಪಿ ಕಾಲಿಗೆ ಗುಂಡು

ಮಂಡ್ಯ ಜಿಲ್ಲೆ, ಕಿರುಗಾವಲು ಜ್ಯುವೆಲರಿ ಶಾಪ್ ನಲ್ಲಿ ನಡೆದ ಕಳ್ಳತನ ಹಾಗೂ...

ಬಾಗಲಕೋಟೆ | ಬೀದಿ ನಾಯಿಗಳ ಹಾವಳಿ; ಶೀಘ್ರ ಕ್ರಮಕ್ಕೆ ಡಿಸಿ ಸಂಗಪ್ಪ ಸೂಚನೆ

ಬಾಗಲಕೋಟೆ ಜಿಲ್ಲೆಯ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿನ ಬೀದಿನಾಯಿಗಳ ಹಾವಳಿಯಿಂದ ಸಾರ್ವಜನಿಕರು ಹಾಗೂ...

ಶಿವಮೊಗ್ಗ | ಡಿ.ಎ.ಆರ್.ಸಭಾಂಗಣದಲ್ಲಿ ಜಿಲ್ಲಾಧಿಕಾರಿ ನೇತೃತ್ವದಲ್ಲಿ ಶಾಂತಿ ಸಮಿತಿ ಸಭೆ

ಎಲ್ಲಾ ಧರ್ಮದವರು ಹಬ್ಬಗಳನ್ನು ಸಡಗರ-ಸಂಭ್ರಮಗಳಿಂದ ಆಚರಿಸುವಂತೆ ಜಿಲ್ಲಾಧಿಕಾರಿ ಗುರುದತ್ ಹೆಗಡೆ ಕರೆ...

ಬಾಗೇಪಲ್ಲಿ | ನೋಟಿಸ್ ನೀಡದೇ ಕೆಲಸದಿಂದ ತೆಗೆದ ಗಾರ್ಮೆಂಟ್ ಫ್ಯಾಕ್ಟರಿ; ಪ್ರತಿಭಟನೆಗಿಳಿದ ಮಹಿಳಾ ನೌಕರರು

ಬಾಗೇಪಲ್ಲಿ ತಾಲೂಕಿನ ಹೊರವಲಯದ ರಾಷ್ಟ್ರೀಯ ಹೆದ್ದಾರಿ ನಾರೇಪಲ್ಲಿ ಟೋಲ್ ಗೇಟ್ ಬಳಿ...

Download Eedina App Android / iOS

X