ಒಂದೆಡೆ ಬ್ಯಾಂಕ್ ಸಾಲ ಬಾಧೆ, ಮತ್ತೊಂದೆಡೆ ಅತಿವೃಷ್ಟಿಯಿಂದ ಬೆಳೆ ನಾಶವಾಗಿ ನಷ್ಟದಿಂದ ಸಂಕಷ್ಟಕ್ಕೆ ಸಿಲುಕಿದ್ದ ರೈತ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೀದರ್ ಜಿಲ್ಲೆಯಲ್ಲಿ ನಡೆದಿದೆ.
ಜಿಲ್ಲೆಯ ಔರಾದ್ ತಾಲೂಕಿನ ಹೆಡಗಾಪೂರ ಗ್ರಾಮದ ರೈತ ಗುರುಲಿಂಗಯ್ಯಾ ಸ್ವಾಮಿ (60) ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಮಂಗಳವಾರ ಸಂಜೆ ಮನೆಯಲ್ಲಿ ಯಾರೂ ಇಲ್ಲದ ವೇಳೆ ಹಿತ್ತಲಿನಲ್ಲಿ ಕಂಬಕ್ಕೆ ನೇಣು ಬಿಗಿದುಕೊಂಡು ಸಾವನ್ನಪ್ಪಿದ್ದಾರೆ. ನಾಲ್ಕು ಎಕರೆ ಜಮೀನು ಹೊಂದಿದ್ದ ಗುರುಲಿಂಗಯ್ಯ, ಬ್ಯಾಂಕ್‌ನಲ್ಲಿ ಸಾಲು ಮಾಡಿದ್ದರು ಎಂದು ಗ್ರಾಮಸ್ಥರು ತಿಳಿಸಿದ್ದಾರೆ.
ಘಟನೆ ಸಂಬಂಧ ಠಾಣಾ ಕುಶನೂರ ಪೋಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.