ಬೀದರ್‌ | ಬಸವ ಜಯಂತಿ : ಉತ್ಸವ ಸಮಿತಿ ಅಧ್ಯಕ್ಷರಾಗಿ ಜೈರಾಜ ಖಂಡ್ರೆ ಆಯ್ಕೆ

Date:

2025ನೇ ಸಾಲಿನ ಬಸವ ಜಯಂತಿ ಉತ್ಸವ ಸಮಿತಿಯ ಅಧ್ಯಕ್ಷರಾಗಿ ಡಾ.ಚನ್ನಬಸವ ಪಟ್ಟದ್ದೇವರ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ಜೈರಾಜ ಖಂಡ್ರೆ ಅವರನ್ನು ಆಯ್ಕೆ ಮಾಡಲಾಗಿದೆ.

- Advertisement -

ಬೀದರ್ ನಗರದ ಗಾಂಧಿಗಂಜ್‍ನ ಬಸವೇಶ್ವರ ದೇವಸ್ಥಾನದಲ್ಲಿ ಹಿರಿಯ ಪತ್ರಕರ್ತ ಶಿವಶರಣಪ್ಪ ವಾಲಿ ಅವರ ಅಧ್ಯಕ್ಷತೆಯಲ್ಲಿ ನಡೆದ ಕರ್ನಾಟಕದ ಸಾಂಸ್ಕೃತಿಕ ನಾಯಕ ವಿಶ್ವಗುರು ಬಸವಣ್ಣನವರ ಜಯಂತಿ ಉತ್ಸವ ಸಮಿತಿ ಸಭೆಯಲ್ಲಿ ಅವರನ್ನು ಆಯ್ಕೆ ಮಾಡಲಾಯಿತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಮೋದಿ ಆಡಳಿತದಲ್ಲಿ ಮಾಹಿತಿ ಹಕ್ಕು ಕಾಯ್ದೆಯ ‘ಸ್ಥಿತಿ’ ಹೇಗಿದೆ?...

ಯಾವುದೇ ಸರ್ಕಾರ ಆಡಳಿತದಲ್ಲಿರಲಿ ಪ್ರಜಾಸತ್ತಾತ್ಮಕ ವ್ಯವಸ್ಥೆಯನ್ನು ಕಾಪಾಡಬೇಕಾದ ಸಂಸ್ಥೆಗಳ ಸ್ವಾಯತ್ತತೆ ಉಳಿಯಬೇಕು. ಅವು ಪಾರದರ್ಶಕವಾಗಿರಬೇಕು. ಪ್ರಜಾಸತ್ತೆಯ ಕಾರ್ಯವೈಖರಿಯನ್ನು ಕುರಿತಂತೆ ಮುಕ್ತ ಚರ್ಚೆ ನಡೆಯುತ್ತಿರಬೇಕು. ಇದು ಸಕ್ರಿಯ, ಅರ್ಥಪೂರ್ಣ ಪ್ರಜಾಸತ್ತೆಯ ಕನಿಷ್ಠ ಅವಶ್ಯಕತೆ. ಹಾಗಾಗಿ...

ಬಂಗಾಳ ವಿಭಜನೆ | ವಿಭಜನೆಯ ವಿಷಬೀಜದಿಂದ ಒಗ್ಗಟ್ಟಿನ ಜ್ಯೋತಿ...

ಬ್ರಿಟಿಷರ 'ಒಡೆದು ಆಳುವ ನೀತಿ'ಯ ಭಾಗವಾಗಿ 1905ರ ಅಕ್ಟೋಬರ್‌ನಲ್ಲಿ ಜಾರಿಗೆ ಬಂದ ಬಂಗಾಳ ವಿಭಜನೆಯು ಭಾರತೀಯರ ರಾಷ್ಟ್ರೀಯತೆಯನ್ನು ಒಡೆಯುವ ಕುತಂತ್ರವಾಗಿತ್ತು. ಇದಕ್ಕೆ ಪ್ರತಿಯಾಗಿ ಭಾರತೀಯರು 'ರಾಷ್ಟ್ರೀಯ ಶೋಕ ದಿನ' ಆಚರಿಸಿ, ಪರಸ್ಪರ ರಾಖಿ...

ನಟ ಇಮ್ರಾನ್ ಖಾನ್ ಪ್ರತಿಭಟಿಸಿದರೆ ಗಡಿಪಾರು; ಟ್ರಂಪ್ ಪರ...

ಕಾನೂನು ಮತ್ತು ರಾಜತಾಂತ್ರಿಕ ನಿಯಮಗಳು ಎಲ್ಲರಿಗೂ ಒಂದೇ ಆಗಿರಬೇಕು ಹೊರತು ಪ್ರಧಾನಿ ಮೋದಿಯವರ ರಾಜಕೀಯ ಅನುಕೂಲಕ್ಕೆ ತಕ್ಕಂತೆ ಬದಲಾಗಬಾರದು. ವಿದೇಶಿ ಪ್ರಜೆಯೊಬ್ಬ ಭಾರತದ ನೆಲದಲ್ಲಿ ಪ್ರತಿಭಟನೆಯಲ್ಲಿ ಪಾಲ್ಗೊಳ್ಳುವುದು ತಪ್ಪು ಎನ್ನುವುದಾದರೆ, ಭಾರತದ ಪ್ರಧಾನಿಯೊಬ್ಬರು...

ʼರಾಷ್ಟ್ರೀಯ ಬಸವ ದಳದ ಬೀದರ್ ತಾಲ್ಲೂಕು ಘಟಕದ ಅಧ್ಯಕ್ಷ ಸಂಜೀವಕುಮಾರ ಪಾಟೀಲ ಅವರನ್ನು ಪ್ರಧಾನ ಕಾರ್ಯದರ್ಶಿಯಾಗಿ ಹಾಗೂ ಹೈದರಾಬಾದ್ ಕರ್ನಾಟಕ ಶಿಕ್ಷಣ ಸಂಸ್ಥೆಯ ಆಡಳಿತ ಮಂಡಳಿ ಸದಸ್ಯ ಡಾ.ರಜನೀಶ್ ವಾಲಿ ಅವರನ್ನು ಕೋಶಾಧ್ಯಕ್ಷರಾಗಿ ಸರ್ವಾನುಮತದಿಂದ ಆಯ್ಕೆ ಮಾಡಲಾಯಿತು.

ʼಎಲ್ಲರೂ ಜತೆಗೂಡಿ ಪ್ರತಿ ವರ್ಷದಂತೆ ಈ ವರ್ಷವೂ ಬಸವ ಜಯಂತಿಯನ್ನು ಅದ್ಧೂರಿ ಹಾಗೂ ಅರ್ಥಪೂರ್ಣವಾಗಿ ಆಚರಿಸೋಣʼ ಎಂದು ಜೈರಾಜ ಖಂಡ್ರೆ ಹೇಳಿದರು.

2024ನೇ ಸಾಲಿನ ಬಸವ ಜಯಂತಿ ಉತ್ಸವ ಸಮಿತಿಯ ಅಧ್ಯಕ್ಷ ಸುರೇಶ ಚನಶೆಟ್ಟಿ ಬಸವ ಜಯಂತಿಯ ಲೆಕ್ಕ ಪತ್ರ ಮಂಡಿಸಿದರು.

ಲಿಂಗಾಯತ ಸಮಾಜ ಕ್ಷೇಮಾಭಿವೃದ್ಧಿ ಸಂಘದ ಅಧ್ಯಕ್ಷ ಬಿ.ಜಿ. ಶೆಟಕಾರ್, ಭಾರತೀಯ ಬಸವ ಬಳಗದ ರಾಜ್ಯ ಅಧ್ಯಕ್ಷ ಬಾಬು ವಾಲಿ, ರಾಷ್ಟ್ರೀಯ ಬಸವ ದಳದ ಜಿಲ್ಲಾ ಘಟಕದ ಅಧ್ಯಕ್ಷ ಸೋಮಶೇಖರ ಪಾಟೀಲ ಗಾದಗಿ, ಬಸವ ಕೇಂದ್ರದ ಜಿಲ್ಲಾ ಘಟಕದ ಅಧ್ಯಕ್ಷ ಶರಣಪ್ಪ ಮಿಠಾರೆ, ಜಾಗತಿಕ ಲಿಂಗಾಯತ ಮಹಾಸಭೆಯ ಜಿಲ್ಲಾ ಘಟಕದ ಅಧ್ಯಕ್ಷ ಬಸವರಾಜ ಧನ್ನೂರ, ರಾಜ್ಯ ಸರ್ಕಾರಿ ನೌಕರರ ಸಂಘದ ಜಿಲ್ಲಾ ಘಟಕದ ಮಾಜಿ ಅಧ್ಯಕ್ಷ ರಾಜೇಂದ್ರಕುಮಾರ ಗಂದಗೆ, ಉದ್ಯಮಿ ದೀಪಕ ವಾಲಿ, ಪತ್ರಕರ್ತ ಸಿದ್ರಾಮಯ್ಯ ಸ್ವಾಮಿ, ಕುಶಾಲರಾವ್ ಪಾಟೀಲ ಖಾಜಾಪುರ, ಬಸವರಾಜ ಭತಮುರ್ಗೆ, ರಾಜಕುಮಾರ ಪಾಟೀಲ ಬಗದಲ್, ರಮೇಶ ಮಠಪತಿ, ವಿಶ್ವನಾಥ ಕಾಜಿ, ಶಿವಕುಮಾರ ಕಟ್ಟೆ, ಬಾಬುರಾವ್ ದಾನಿ, ವಿಜಯಕುಮಾರ ಪಾಟೀಲ ಯರನಳ್ಳಿ, ಡಾ. ವಿಜಯಶ್ರೀ ಬಶೆಟ್ಟಿ, ಭಾರತಿ ವಸ್ತ್ರದ್, ಜಯದೇವಿ ಯದಲಾಪುರೆ, ಡಾ. ದೇವಕಿ ನಾಗೂರೆ, ವಿಜಯಲಕ್ಷ್ಮಿ ಕೌಟಗೆ ಪಾಲ್ಗೊಂಡಿದ್ದರು.

ಈ ಸುದ್ದಿ ಓದಿದ್ದೀರಾ? ಬೀದರ್‌ | ದೇಶದಲ್ಲಿ ಬೆಲೆಯೇರಿಕೆಯಾಗಿದ್ದು ಕೇಂದ್ರ ಬಿಜೆಪಿ ಸರ್ಕಾರದಿಂದ : ಸಿಎಂ ಸಿದ್ದರಾಮಯ್ಯ

ಬಸವ ಬ್ರಿಗೇಡ್ ಅಧ್ಯಕ್ಷ ಬಸವರಾಜ ಪಾಟೀಲ ಹಾರೂರಗೇರಿ ಸ್ವಾಗತಿಸಿದರು. ರಾಷ್ಟ್ರೀಯ ಬಸವ ದಳದ ಪ್ರಧಾನ ಕಾರ್ಯದರ್ಶಿ ಸುರೇಶ ಸ್ವಾಮಿ ನಿರೂಪಿಸಿದರು. ಬಸವ ಜಯಂತಿ ಉತ್ಸವ ಸಮಿತಿಯ ನಿಕಟಪೂರ್ವ ಪ್ರಧಾನ ಕಾರ್ಯದರ್ಶಿ ವಿರೂಪಾಕ್ಷ ಗಾದಗಿ ವಂದಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೀದರ್ ದಕ್ಷಿಣ | ಜಿಪಂ ಮೀಸಲಾತಿಯಲ್ಲಿ ಪರಿಶಿಷ್ಟ ಜಾತಿಗೆ ಅನ್ಯಾಯ: ಜನಪ್ರತಿನಿಧಿಗಳಿಗೆ ಎಚ್ಚರಿಕೆ

ಬೀದರ್ ದಕ್ಷಿಣ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯ ಆರು ಜಿಲ್ಲಾ ಪಂಚಾಯಿತಿ ಕ್ಷೇತ್ರಗಳಲ್ಲಿ...

ಉಡುಪಿ | ಹಿರಿಯ ಸಾಹಿತಿ ಎ.ಎಸ್.ಎನ್. ಹೆಬ್ಬಾರ್ ಅವರಿಗೆ ಸೂಕ್ತ ರಕ್ಷಣೆ ನೀಡಲು ಜಿಲ್ಲಾಧಿಕಾರಿಗೆ ಮನವಿ

ಉಡುಪಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಸ್ಥಾಪಕ ಅಧ್ಯಕ್ಷರು, ಹಿರಿಯ ವಕೀಲರು...

ಉಡುಪಿ | ಕಾರ್ಮಿಕರು ಹಕ್ಕು ಮತ್ತು ಸೌಲಭ್ಯಗಳಿಂದ ವಂಚಿತರಾಗದಂತೆ ನೋಡಿಕೊಳ್ಳಿ: ಟಿ.ಎಂ. ಶಾಹಿದ್ ತೆಕ್ಕಿಲ್

ಕಾರ್ಮಿಕರ ಹಿತಾಸಕ್ತಿಯನ್ನು ಕಾಪಾಡುವುದರೊಂದಿಗೆ ಸರ್ಕಾರದ ಕಲ್ಯಾಣ ಕಾರ್ಯಕ್ರಮಗಳು ಅರ್ಹ ಫಲಾನುಭವಿಗಳಿಗೆ ತಲುಪುವಂತೆ...

ಬಾಗೇಪಲ್ಲಿಯಲ್ಲಿ ರಸ್ತೆ ಅಪಘಾತ:ರೈತ ನಂಜಪ್ಪ ಸಾವು

ಕೆಎಸ್‌ಆರ್‌ಟಿಸಿ ಬಸ್ ಡಿಕ್ಕಿ ಹೊಡೆದು ದ್ವಿಚಕ್ರ ವಾಹನದಲ್ಲಿ ಹೊಲಕ್ಕೆ ತೆರಳುತ್ತಿದ್ದ ನಡಂಪಲ್ಲಿ...