ಬೀದರ್‌ | ಶರಣರು 12ನೇ ಶತಮಾನದಲ್ಲೇ ಮಹಿಳೆಯರಿಗೆ ಸಮಾನತೆ ನೀಡಿದ್ದರು: ಎಸ್‌ಪಿ ಚನ್ನಬಸವಣ್ಣ

Date:

Advertisements

12ನೇ ಶತಮಾನದಲ್ಲಿ ಬಸವಾದಿ ಶರಣರು ಯಾವುದೇ ಲಿಂಗ ತಾರತಮ್ಯ ಮಾಡದೇ ಪುರುಷ ಮತ್ತು ಮಹಿಳೆಯರಿಗೆ ಅಂದು ಸಮಾನ ಅವಕಾಶಗಳನ್ನು ನೀಡಿದ್ದರು ಎಂದು ಬೀದರ್ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಚನ್ನಬಸವಣ್ಣ ಎಸ್‌.ಎಲ್ ಹೇಳಿದರು.

ಬೀದರ್ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ‌ ಕಚೇರಿ ಸಭಾಂಗಣದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಹಾಗೂ ಜಿಲ್ಲಾ ಮಕ್ಕಳ ರಕ್ಷಣಾ ಘಟಕ ಇವರ ಸಹಯೋಗದಲ್ಲಿ ಹಮ್ಮಿಕೊಂಡಿದ್ದ ʼಬೇಟಿ ಬಚಾವೋ ಬೇಟಿ ಪಡಾವೋʼ ಕಾರ್ಯಕ್ರಮದ ಅನುಷ್ಠಾನ ಕುರಿತು ಪೊಲೀಸ್ ತನಿಖಾಧಿಕಾರಿಗಳಿಗೆ ಮತ್ತು ಅಕ್ಕಪಡೆ ಮಹಿಳಾ ವಿಶೇಷ ಪೊಲೀಸ್ ಘಟಕದಲ್ಲಿ ನಡೆದ ಜಿಲ್ಲಾ ಮಟ್ಟದ ಒಂದು ದಿನದ ಸಂವೇದನಾಶೀಲ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.

“ಮಹಿಳೆ ತಾಯಿಯಾಗಿ, ಸಹೋದರಿಯಾಗಿ, ಮಡದಿಯಾಗಿ ಹಲವಾರು ಜವಾಬ್ದಾರಿಗಳನ್ನು ನಿಭಾಯಿಸುತ್ತಾಳೆ. ಅವಳಿಗೆ ಪುರುಷರಿಗೆ ಇರುವಷ್ಟು ಸಮಾನ ಹಕ್ಕುಗಳಿವೆ. ಯಾರೂ ಕೂಡ ಲಿಂಗ ತಾರತಮ್ಯ ಮಾಡಬಾರದು ಇದು ಕಾನೂನಿನ ಪ್ರಕಾರ ಅಪರಾಧವಾಗುತ್ತದೆ” ಎಂದು ಹೇಳಿದರು.

Advertisements

“ಭೇಟಿ ಬಚಾವೋ ಭೇಟಿ ಪಡಾವೋ ಅರ್ಥಪೂರ್ಣ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ. ಪ್ರಸ್ತುತದಲ್ಲಿ ಮಹಿಳೆಯರು ಎಲ್ಲ ರಂಗಗಳಲ್ಲಿ ಕೆಲಸ ಮಾಡುತ್ತಿದ್ದಾರೆ. ಉತ್ತರ ಕರ್ನಾಟಕ ಭಾಗದಲ್ಲಿ ಇನ್ನೂ ಬಾಲ್ಯವಿವಾಹ, ಭ್ರೂಣಲಿಂಗ ಪತ್ತೆಯಂತಹ ಪ್ರಕರಣಗಳು ಅಲ್ಲಲ್ಲಿ ಕಂಡುಬರುತ್ತಿದ್ದು, ಇದು ನಡೆಯದಂತೆ ಎಲ್ಲರೂ ನಿಗಾ ವಹಿಸಬೇಕು” ಎಂದು ಹೇಳಿದರು.

“ಬೀದರ್ ಜಿಲ್ಲೆಯಲ್ಲಿ ಅಕ್ಕಪಡೆ ಮಹಿಳಾ ಪೊಲೀಸರು ರಾಜ್ಯದಲ್ಲಿ ಮಾದರಿಯಾಗಿ ಕೆಲಸ ನಿರ್ವಹಿಸುತ್ತಿದ್ದಾರೆ. ಈ ಪಡೆ ರಚನೆಯಾದ ನಂತರ ಜಿಲ್ಲೆಯಲ್ಲಿ ಮಹಿಳೆಯರ ಮೇಲಿನ ಅಪರಾಧಗಳ ಸಂಖ್ಯೆ ಕಡಿಮೆಯಾಗಿವೆ. ಈ ತಂಡ ಶಾಲೆಗಳಿಗೂ ಭೇಟಿ ನೀಡುತ್ತಿದೆ. ಈ ವರ್ಷ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ ವಿಶೇಷವಾಗಿ ಅಕ್ಕಪಡೆ ಆಚರಿಸಲಿದೆ. ಅವರಿಗಾಗಿ ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ಧಿ ಮಂಡಳಿಗೆ 35 ದ್ವಿಚಕ್ರ ವಾಹನಗಳ ಮಂಜುರಾತಿಗಾಗಿ ಪ್ರಸ್ತಾವನೆ ಸಲ್ಲಿಸಲಾಗಿತ್ತು, ಮಂಜುರಾತಿ ಸಿಕ್ಕಿದೆ. ಯಾವುದೇ ಪ್ರಕರಣಗಳ ಮಾಹಿತಿ ಸಂಗ್ರಹಿಸುವಲ್ಲಿ ಪೊಲೀಸ್ ತನಿಖಾಧಿಕಾರಿಗಳ ಪಾತ್ರವು ಬಹಳ ಮುಖ್ಯವಾಗಿದೆ” ಎಂದು ಹೇಳಿದರು.

ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ಗುರುರಾಜ ಪ್ರಾಸ್ತಾವಿಕವಾಗಿ ಮಾತನಾಡಿ, “2014ರಿಂದ ಭೇಟಿ ಬಚಾವೋ ಭೇಟಿ ಪಡಾವೋ ಕಾರ್ಯಕ್ರಮ ನಡೆಯುತ್ತಿದೆ. ಈ ಅಭಿಯಾನದ ಉದ್ದೇಶ ಪುರುಷ ಮತ್ತು ಮಹಿಳೆಯರ ಲಿಂಗಾನುಪಾತ ಸಮಾನ ಮಾಡುವುದರ ಜತೆಗೆ ಮಹಿಳಾ ಸಬಲೀಕರಣಕ್ಕೆ ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಒತ್ತು ನೀಡುತ್ತಿವೆ. ಕಡಿಮೆ ಲಿಂಗಾನುಪಾತ ಇರುವ ಜಿಲ್ಲೆಗಳಲ್ಲಿ ವಿವಿಧ ಇಲಾಖೆಗಳ ಸಹಯೋಗದಲ್ಲಿ ಈ ಕಾರ್ಯಕ್ರಮ ಹಮ್ಮಿಕೊಳ್ಳುವ ಮೂಲಕ ಜನರಲ್ಲಿ ಜಾಗೃತಿ ಮೂಡಿಸಲಾಗುತ್ತದೆ” ಎಂದು ಹೇಳಿದರು.

ಈ ಕಾರ್ಯಕ್ರಮದಲ್ಲಿ ಹಿರಿಯ ಸ್ತ್ರೀರೋಗ ತಜ್ಞೆ ಡಾ. ಆರತಿ ರಘು ಅವರು ಹೆಣ್ಣು ಭ್ರೂಣಹತ್ಯೆ ತಡೆಗಟ್ಟುವಲ್ಲಿ ಪಿಸಿಪಿಎನ್‌ಡಿಟಿ ಕಾಯ್ದೆಯಡಿಯಲ್ಲಿ ರಚಿಸಿರುವ ಜಿಲ್ಲಾ ಸಲಹಾ ಮಂಡಳಿಯ ಪಾತ್ರ ಕುರಿತು ವಿಶೇಷ ಉಪನ್ಯಾಸ ನೀಡಿದರು. ಬೀದರ್ ಲೋಕಾಯುಕ್ತ ವಿಶೇಷ ಸರ್ಕಾರಿ ಅಭಿಯೋಜಕ ಕೇಶವರಾವ್ ಶ್ರೀ ಮಾಳೆ ಪಿಸಿಪಿಎನ್‌ಡಿಟಿ 1994 ಕಾಯ್ದೆ ಕುರಿತು ಮಾಹಿತಿ ನೀಡಿದರು.

ಈ ಸುದ್ದಿ ಓದಿದ್ದೀರಾ? ಗದಗ | ಲೋಕಸಭಾ ಚುನಾವಣೆ; ಚುನಾವಣಾ ಕಾರ್ಯ ನಿರ್ವಹಣೆಗೆ ಸಮಿತಿ ರಚನೆ

ಈ ಕಾರ್ಯಕ್ರಮದಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೆಶಕ ಪ್ರಭಾಕರ್, ಹೆಚ್ಚುವರಿ ಪೊಲೀಸ್ ಅಧೀಕ್ಷಕ ಮಹೇಶ ಮೇಘಣ್ಣವರ್, ಮಕ್ಕಳ ಕಲ್ಯಾಣ ಸಮಿತಿ ಅಧ್ಯಕ್ಷ ರಜಿಯಾ ಬಳಬಟ್ಟಿ, ಪ್ರಾದೇಶಿಕ ಸಂಯೋಜಕರು ರೋಟರಿ ಕ್ಲಬ್ ನ್ಯೂ ಸೆಂಚ್ಯುರಿ ಬೀದರ್ ಡಾ. ರಘು ಕೃಷ್ಣಮೂರ್ತಿ, ಧನಲಕ್ಷ್ಮೀ ಪಾಟೀಲ, ಗೌರಿ ಶಂಕರ, ಅಕ್ಕಪಡೆ ಹಾಗೂ ಪೊಲೀಸ್ ತನಿಖಾಧಿಕಾರಿಗಳು ಸೇರಿದಂತೆ ಇತರೆ ಅಧಿಕಾರಿ ಮತ್ತು ಸಿಬ್ಬಂದಿಗಳು ಇದ್ದರು.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

Download Eedina App Android / iOS

X