ಬೀದರ್‌ | ಬಸವಾದಿ ಶರಣರು ನಡೆ-ನುಡಿ ಸಿದ್ಧಾಂತ ವೀರರು : ವಿಜಯಶ್ರೀ ಬಶೆಟ್ಟಿ

Date:

ಹನ್ನೆರಡನೆಯ ಶತಮಾನದ ಬಸವಾದಿ ಶರಣರು ನುಡಿ ವೀರರು ಅಷ್ಟೇ ಅಲ್ಲದೆ ನಡೆ ಸಿದ್ಧಾಂತದ ವೀರರಾಗಿದ್ದರು ಎಂದು ಡಾ.ವಿಜಯಶ್ರೀ ಬಶೆಟ್ಟಿ ನುಡಿದರು

- Advertisement -

ಬೀದರ್‌ನ ಖಾಸಗಿ ಹೋಟೆಲ್‌ ಸಭಾಂಗಣದಲ್ಲಿ ವಚನಾಮೃತ ಕನ್ನಡ ಸಂಘದಿಂದ ಈಚೆಗೆ ಆಯೋಜಿಸಿದ್ದ ಶಿವಶರಣೆ ಬೊಂತಾದೇವಿ ಹಾಗೂ ಶಿವಶರಣ ಮರುಳ ಶಂಕರದೇವ ಕುರಿತಾದ ಉಪನ್ಯಾಸ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ʼಸಮಾಜದಲ್ಲಿ ರಾಜಪ್ರಭುತ್ವ, ಪ್ರಜಾಪ್ರಭುತ್ವ ನಂತರ ಈಗ ಪ್ರಜ್ಞಾಪ್ರಭುತ್ವ ಬರಬೇಕಾದ ಅವಶ್ಯಕತೆ ಇದೆʼ ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

SIR ವಿರೋಧಿ ಹೋರಾಟ: ಡಿಕೆಶಿ–ಮಮತಾ ತೋರಿದ ದಾರಿ ವಿಪಕ್ಷಗಳಿಗೆ...

ಭಾರತದ ಪ್ರಜಾಪ್ರಭುತ್ವದ ಅಡಿಪಾಯವೇ ನ್ಯಾಯಯುತ, ಸ್ವತಂತ್ರ ಹಾಗೂ ಪಾರದರ್ಶಕ ಚುನಾವಣೆ. ಆದರೆ, ಅಧಿಕಾರದ ಗದ್ದುಗೆ ಏರಿರುವ ಮೋದಿ-ಶಾ ಜೋಡಿ, ಈ ಅಡಿಪಾಯವನ್ನೇ (ಚುನಾವಣಾ ಆಯೋಗವನ್ನೇ) ತಮ್ಮ ಸೂತ್ರದ ಬೊಂಬೆ ಮಾಡಿಕೊಂಡಿದೆ. ಎಸ್‌ಐಆರ್‌ ಹೆಸರಿನಲ್ಲಿ...

ಪೊಲೀಸ್ ಇಲಾಖೆ ಸುಧಾರಣೆಗೆ 3 ಸಮಿತಿ; ಬದಲಾವಣೆ ಅಗತ್ಯವೇ?...

ಪೊಲೀಸ್‌ ಇಲಾಖೆಯ ಕಾರ್ಯವೈಖರಿಯಲ್ಲಿ ಸುಧಾರಣೆ, ಡಿಜಿಟಲ್‌ ಟಚ್‌ ಹಾಗೂ ನೇಮಕಾತಿ ವ್ಯವಸ್ಥೆಯ ಪುನರ್‌ರಚನೆಗೆ ರಾಜ್ಯ ಸರ್ಕಾರ ಉನ್ನತ ಮಟ್ಟದ 3 ತಜ್ಞರ ಸಮಿತಿಗಳನ್ನು ರಚಿಸಿದೆ. ಆದರೆ, ಪೊಲೀಸ್‌ ಠಾಣೆಗಳಲ್ಲಿ ಸಾರ್ವಜನಿಕರು ಎದುರಿಸುವ ಸಮಸ್ಯೆಗಳಿಂದ...

ಪಾಕಿಸ್ತಾನದಲ್ಲಿ ಅಹಿಂಸಾ ಮೂರ್ತಿಯ ‘ರಹಸ್ಯರಕ್ಷಣೆ’: ಕರಾಚಿಯಿಂದ ಇಸ್ಲಾಮಾಬಾದ್‌ಗೆ ಗಾಂಧಿ...

ಪಾಕಿಸ್ತಾನದ ಇಸ್ಲಾಮಾಬಾದ್‌ನಲ್ಲಿರುವ ಭಾರತೀಯ ಹೈಕಮಿಷನ್ ಕಚೇರಿಯ ಪ್ರವೇಶ ದ್ವಾರದಲ್ಲಿ ಮಹಾತ್ಮ ಗಾಂಧೀಜಿಯವರ ಭವ್ಯ ಕಂಚಿನ ಪ್ರತಿಮೆ ಇಂದಿಗೂ ಗಾಂಭೀರ್ಯದಿಂದ ನಿಂತಿದೆ. ಕೈಯಲ್ಲಿ ಊರುಗೋಲು ಹಿಡಿದು ದೂರದ ದಿಗಂತವನ್ನು ದಿಟ್ಟಿಸುವಂತಿರುವ ಈ ಬಾಪೂ ಪ್ರತಿಮೆಯು...

ಶಿವಶರಣೆ ಬೊಂತಾದೇವಿ ಅವರ ಬದುಕು-ಬರಹ ಕುರಿತು ಜಯದೇವಿ ಯದಲಾಪುರೆ ಅವರು ಮಾತನಾಡಿ, ʼ12ನೇ ಶತಮಾನದಲ್ಲಿ ಬಸವಣ್ಣವರ ಕೀರ್ತಿ ಕಾಶ್ಮೀರದ ರಾಜ ಮನೆತನದ ಬೊಂತಾದೇವಿಗೆ ತಲುಪಿ ರಾಜವೈಭವ ಬದಿಗೊತ್ತಿ ಕಲ್ಯಾಣದ ಕಡೆ ಮುಖ ಮಾಡಿದರುʼ ಎಂದು ಹೇಳಿದರು.

ʼಬೊಂತಾದೇವಿ ಅವರ ಮೂಲ ಹೆಸರು ʼನಿಜದೇವಿʼ ಎಂಬ ಹೆಸರು ಪಡೆದ ಬೊಂತಾದೇವಿ ಕಲ್ಯಾಣಕ್ಕೆ ಬಂದು ಶರಣ ಸಂಕುಲದೊಂದಿಗೆ ಸಂವಾದದಲ್ಲಿ ಪಾಲ್ಗೊಂಡು ವಚನಗಳನ್ನು ರಚಿಸಿದರು. ಅವರು ಬರೆದ ಆರು ವಚನ ಮಾತ್ರ ಲಭ್ಯವಾಗಿವೆ. ಸಮಾನತೆಯ ಸಮಾಜದ ಕನಸು ಕಂಡಿದ್ದ ಅವರು ತಮ್ಮ ವಚನಗಳಲ್ಲಿ ಬೇಧ-ಭಾವ ತೊಡೆದು ಸಮಾನತೆ ಸಮಾಜದಿಂದ ನೆಮ್ಮದಿ ಕಾಣಲು ಸಾಧ್ಯವೆಂಬ ವಿಚಾರ ಮಂಡಿಸಿದರುʼ ಎಂದು ನುಡಿದರು.

ಅಧ್ಯಕ್ಷತೆ ವಹಿಸಿದ ಪ್ರೊ.ಸಿದ್ರಾಮಪ್ಪ ಮಾಸಿಮಾಡೆ ಅವರು ಮಾತನಾಡಿ, ʼಶರಣ ಮರುಳಶಂಕರದೇವರು 35 ವಚನಗಳನ್ನು ರಚಿಸಿದ್ದಾರೆ. ಅವರು ಬಸವಣ್ಣನವರ ಮಹಾಮನೆಯಲ್ಲಿ ಬರುವ ಅತಿಥಿಗಳಿಗೆ ಉಣ ಬಡಿಸುವ ಕಾಯಕ ಮಾಡುತ್ತಿದ್ದರು. ಮರುಳು ಶಂಕರದೇವರ ಘನ ವ್ಯಕ್ತಿತ್ವವನ್ನು ಅಲ್ಲಮಪ್ರಭುಗಳಿಗೆ ಪರಿಚಯವಾದ ಬಳಿಕ ಅವರನ್ನು ಅನುಭವ ಮಂಟಪದ ಸದಸ್ಯರನ್ನಾಗಿಸಿದರುʼ ಎಂದು ಹೇಳಿದರು.

ಬರುವ ನವೆಂಬರ್‌ 22 ಮತ್ತು 23 ರಂದು ಬೀದರ ನಗರದ ಪೂಜ್ಯ ಡಾ.ಚನ್ನಬಸವ ಪಟ್ಟದ್ದೇವರು ರಂಗ ಮಂದಿರದಲ್ಲಿ ʼವಚನ ಸಾಹಿತ್ಯೋತ್ಸವʼ ಕಾರ್ಯಕ್ರಮ ಹಮ್ಮಿಕೊಳ್ಳಲು ನಿರ್ಧರಿಸಲಾಗಿದೆ ಎಂದು ಸಿದ್ರಾಮಪ್ಪ ಮಾಸಿಮಾಡೆ ತಿಳಿಸಿದರು.

ಇದನ್ನೂ ಓದಿ : ಕಲ್ಯಾಣ ಕರ್ನಾಟಕ ಜಿಲ್ಲೆಗಳಲ್ಲಿ ರೈತರ ಆತ್ಮಹತ್ಯೆ ಇಳಿಮುಖ

ಮುಖ್ಯ ಅತಿಥಿಗಾಳಗಿ ಭಾಗ್ಯಲಕ್ಷ್ಮಿ ಗುರುಮೂರ್ತಿ, ಸಿದ್ದಪ್ಪಾ ಜ್ಯಾಂತೆ ಹಾಗೂ ಕನ್ನಡ, ಸಾಹಿತ್ಯಾಸಕ್ತರು ಉಪಸ್ಥಿತರಿದ್ದರು. ರೇಣುಕಾ ಎನ್.ಬಿ, ರೇಣುಕಾ ಮಳ್ಳಿ ಅವರು ವಚನ ಗಾಯನ ನಡೆಸಿಕೊಟ್ಟರು. ಶಿಕ್ಷಕ ಬಸವರಾಜ ಬಿರಾದಾರ ನಿರೂಪಿಸಿದರು. ಅಂಬಿಕಾ ಬಿರಾದಾರ ಸ್ವಾಗತಿಸಿದರು. ಶ್ರೀಕಾಂತ ಬಿರಾದಾರ ವಂದಿಸಿದರು. ಕಾರ್ಯಕ್ರಮಕ್ಕೂ ಮುನ್ನ ಪ್ರವೀಣ ಮ್ಯೂಜಿಕ್ ಅಕಾಡೆಮಿಯ ಮಕ್ಕಳು ನಾಡಗೀತೆ ಹಾಡಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಧಾರವಾಡ | ಕರ್ನಾಟಕ ವಿದ್ಯಾವರ್ಧಕ ಸಂಘದಲ್ಲಿ ಗಾಂಧಿ‌ ಜಯಂತಿ‌ ಆಚರಣೆ

ಧಾರವಾಡ ಪಟ್ಟಣದ ಕರ್ನಾಟಕ ವಿದ್ಯಾವರ್ಧಕ ಸಂಘದಲ್ಲಿ ರಾಷ್ಟ್ರಪತಿ ಮಹಾತ್ಮಾ ಗಾಂಧೀಜಿ ಹಾಗೂ ...

ಧಾರವಾಡ | ಎನ್‌.ಎಸ್‌.ಎಸ್‌ ವಿದ್ಯಾರ್ಥಿಗಳ ವ್ಯಕ್ತಿತ್ವ ವಿಕಸನದ ದಾರಿ: ನಾಲತವಾಡ

ವಿದ್ಯಾರ್ಥಿಗಳಲ್ಲಿ ಕೇವಲ ಶೈಕ್ಷಣಿಕ ಜ್ಞಾನವಷ್ಟೇ ಅಲ್ಲದೆ, ಸಾಮಾಜಿಕ ಜವಾಬ್ದಾರಿ, ನಾಯಕತ್ವ ಗುಣ...

ವಿಜಯಪುರ | ಮತದಾರರ ಹಕ್ಕು ರಕ್ಷಣೆಗೆ SIR ಪರಿಶೋಧನಾ ಪ್ರವಾಸ; ನಟ ಪ್ರಕಾಶ್ ರಾಜ್ ಭಾಗಿ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಗೆ ಸಂಬಂಧಿಸಿದಂತೆ ಮತದಾರರ...

ಯುವ ಪೀಳಿಗೆ ಸತ್ಯ, ಸರಳತೆಯ ತತ್ವಗಳನ್ನು ಅಳವಡಿಸಿಕೊಳ್ಳಬೇಕು: ಪ್ರೊ. ವಿಜಯಾ ಕೋರಿಶೆಟ್ಟಿ

ಸತ್ಯ, ಅಹಿಂಸೆ, ಸರಳತೆ, ಕರ್ತವ್ಯನಿಷ್ಠೆ ಮತ್ತು ನೈತಿಕ ಮೌಲ್ಯಗಳು ಕೇವಲ ಇತಿಹಾಸದ...