ಬೀದರ | ಏ.30 ರಂದು ಬಸವಣ್ಣನವರ ಜಯಂತಿ: ವಿಜೃಂಭಣೆಯಿಂದ ಆಚರಣೆಗೆ ನಿರ್ಧಾರ; ಡಿಸಿ ಶಿಲ್ಪಾ ಶರ್ಮಾ

Date:

ಕರ್ನಾಟಕದ ಸಾಂಸ್ಕೃತಿಕ ನಾಯಕ ವಿಶ್ವಗುರು ಬಸವಣ್ಣನವರ ಜಯಂತಿಯನ್ನು ಏ.30 ರಂದು ಜಿಲ್ಲೆಯಲ್ಲಿ ಅತ್ಯಂತ ವಿಜೃಂಭಣೆಯಿಂದ ಆಚರಿಸೋಣ ಎಂದು ಜಿಲ್ಲಾಧಿಕಾರಿ ಶಿಲ್ಪಾ ಶರ್ಮಾ ಅವರು ತಿಳಿಸಿದರು.

- Advertisement -

ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಏ.30 ರಂದು ನಡೆಯುವ ಬಸವ ಜಯಂತಿ ಆಚರಣೆ ಕುರಿತು ಮಂಗಳವಾರ ಕರೆದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

SIR ವಿರೋಧಿ ಹೋರಾಟ: ಡಿಕೆಶಿ–ಮಮತಾ ತೋರಿದ ದಾರಿ ವಿಪಕ್ಷಗಳಿಗೆ...

ಭಾರತದ ಪ್ರಜಾಪ್ರಭುತ್ವದ ಅಡಿಪಾಯವೇ ನ್ಯಾಯಯುತ, ಸ್ವತಂತ್ರ ಹಾಗೂ ಪಾರದರ್ಶಕ ಚುನಾವಣೆ. ಆದರೆ, ಅಧಿಕಾರದ ಗದ್ದುಗೆ ಏರಿರುವ ಮೋದಿ-ಶಾ ಜೋಡಿ, ಈ ಅಡಿಪಾಯವನ್ನೇ (ಚುನಾವಣಾ ಆಯೋಗವನ್ನೇ) ತಮ್ಮ ಸೂತ್ರದ ಬೊಂಬೆ ಮಾಡಿಕೊಂಡಿದೆ. ಎಸ್‌ಐಆರ್‌ ಹೆಸರಿನಲ್ಲಿ...

ಪೊಲೀಸ್ ಇಲಾಖೆ ಸುಧಾರಣೆಗೆ 3 ಸಮಿತಿ; ಬದಲಾವಣೆ ಅಗತ್ಯವೇ?...

ಪೊಲೀಸ್‌ ಇಲಾಖೆಯ ಕಾರ್ಯವೈಖರಿಯಲ್ಲಿ ಸುಧಾರಣೆ, ಡಿಜಿಟಲ್‌ ಟಚ್‌ ಹಾಗೂ ನೇಮಕಾತಿ ವ್ಯವಸ್ಥೆಯ ಪುನರ್‌ರಚನೆಗೆ ರಾಜ್ಯ ಸರ್ಕಾರ ಉನ್ನತ ಮಟ್ಟದ 3 ತಜ್ಞರ ಸಮಿತಿಗಳನ್ನು ರಚಿಸಿದೆ. ಆದರೆ, ಪೊಲೀಸ್‌ ಠಾಣೆಗಳಲ್ಲಿ ಸಾರ್ವಜನಿಕರು ಎದುರಿಸುವ ಸಮಸ್ಯೆಗಳಿಂದ...

ಪಾಕಿಸ್ತಾನದಲ್ಲಿ ಅಹಿಂಸಾ ಮೂರ್ತಿಯ ‘ರಹಸ್ಯರಕ್ಷಣೆ’: ಕರಾಚಿಯಿಂದ ಇಸ್ಲಾಮಾಬಾದ್‌ಗೆ ಗಾಂಧಿ...

ಪಾಕಿಸ್ತಾನದ ಇಸ್ಲಾಮಾಬಾದ್‌ನಲ್ಲಿರುವ ಭಾರತೀಯ ಹೈಕಮಿಷನ್ ಕಚೇರಿಯ ಪ್ರವೇಶ ದ್ವಾರದಲ್ಲಿ ಮಹಾತ್ಮ ಗಾಂಧೀಜಿಯವರ ಭವ್ಯ ಕಂಚಿನ ಪ್ರತಿಮೆ ಇಂದಿಗೂ ಗಾಂಭೀರ್ಯದಿಂದ ನಿಂತಿದೆ. ಕೈಯಲ್ಲಿ ಊರುಗೋಲು ಹಿಡಿದು ದೂರದ ದಿಗಂತವನ್ನು ದಿಟ್ಟಿಸುವಂತಿರುವ ಈ ಬಾಪೂ ಪ್ರತಿಮೆಯು...

‘ಏಪ್ರಿಲ್ 30 ರಂದು ಬೆಳಿಗ್ಗೆ 8:30ಕ್ಕೆ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಬಸವಣ್ಣನವರ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ ನಂತರ ಬಸವೇಶ್ವರ ವೃತ್ತದಲ್ಲಿರುವ ಬಸವೇಶ್ವರ ಪ್ರತಿಮೆಗೆ ಮಾಲಾರ್ಪಣೆ ಮತ್ತು ಪೂಜೆ ಸಲ್ಲಿಸಲಾಗುವುದು. ನಂತರ ಮೆರವಣಿಗೆಗೆ ನಡೆಯಲಿದೆ ಮತ್ತು ಸಂಜೆ ವೇದಿಕೆ ಕಾರ್ಯಕ್ರಮ ನಡೆಯಲಿದೆ’ ಎಂದರು.

‘ಅಂದು ಎಲ್ಲ ಸರ್ಕಾರಿ, ಅರೆ ಸರ್ಕಾರಿ ಕಚೇರಿ, ಶಾಲಾ,ಕಾಲೇಜುಗಳಲ್ಲಿ ಬಸವಣ್ಣನವರ ಭಾವಚಿತ್ರಕ್ಕೆ ಕಡ್ಡಾಯವಾಗಿ ಪೂಜೆ ಸಲ್ಲಿಸಬೇಕು. ಪೊಲೀಸ್ ಇಲಾಖೆ ವತಿಯಿಂದ ಬಂದೋಬಸ್ತ್ ನೀಡಲಾಗುವುದು. ಡಿಜೆ ಬಳಕೆಗೆ ಸಂಬಂಧಿಸಿದಂತೆ ಪೋಲಿಸ್ ಇಲಾಖೆಯಿಂದ ಅನುಮತಿ ಪಡೆಯಬೇಕು’ ಎಂದು ತಿಳಿಸಿದರು.

ಮೂರು ದಿನ ಬಸವ ಜಯಂತಿ ಆಚರಣೆ:

ಬಸವ ಜಯಂತಿ ಉತ್ಸವ ಸಮಿತಿ ಅಧ್ಯಕ್ಷ ಜೈರಾಜ್ ಖಂಡ್ರೆ ಅವರು ಮಾತನಾಡಿ, ‘ನಾವು ಬಸವ ಜಯಂತಿಯನ್ನು ಏಪ್ರಿಲ್ 28, 29 ಮತ್ತು 30ರವರೆಗೆ ಆಚರಿಸಲು ನಿರ್ಧರಿಸಲಾಗಿದೆ, ಏ.28 ರಂದು ಬೆಳಿಗ್ಗೆ ಗುಂಪಾದಿಂದ ಪಾಪನಾಶದವರೆಗೆ ಬೈಕ್ ರ‍್ಯಾಲಿ ನಡೆಯಲಿದೆ ಹಾಗೂ ಸಂಜೆ 6 ಗಂಟೆಗೆ ಬಸವ ಜಯಂತಿ ಉತ್ಸವ ಉದ್ಘಾಟನಾ ಕಾರ್ಯಕ್ರಮಕ್ಕೆ ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ ಬಿ.ಖಂಡ್ರೆ ಅವರು ಚಾಲನೆ ನೀಡಲಿದ್ದಾರೆ’ ಎಂದು ಮಾಹಿತಿ ನೀಡಿದರು.

1003550488

‘ಏ.29ಕ್ಕೆ ರಂಗಮಂದಿರದಲ್ಲಿ ವಚನ ಸಂಗೀತ ಕಾರ್ಯಕ್ರಮ, ಬಸವಾದಿ ಶರಣರ ವೇಷಭೂಷಣ ಮತ್ತು ನಾಟಕ ಕಾರ್ಯಕ್ರಮಗಳು ನಡೆಯಲಿವೆ ಮತ್ತು ಏ.30 ರಂದು ಸಂಜೆ 6 ಗಂಟೆಗೆ ಬಸವೇಶ್ವರ ವೃತ್ತದಲ್ಲಿ ಜಿಲ್ಲಾಧಿಕಾರಿಗಳು ವಚನ ಬೋಧಿಸುವ ಮೂಲಕ ಮೆರವಣಿಗೆಗೆ ಚಾಲನೆ ನೀಡಬೇಕು’ ಎಂದು ತಿಳಿಸಿದರು.

ಏ.24ರಂದು ಅನುಭವ ಮಂಟಪ ರಥಯಾತ್ರೆ:

ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ಸಿದ್ರಾಮ ಸಿಂಧೆ ಮಾತನಾಡಿ, ‘ಬೀದರ ಜಿಲ್ಲೆಗೆ ಬಾಗಲಕೋಟೆ ಜಿಲ್ಲೆಯಿಂದ ಅನುಭವ ಮಂಟಪ ಬಸವಾದಿ ಶರಣರ ವೈಭವ ಕಾರ್ಯಕ್ರಮದ ರಥಯಾತ್ರೆ ಇದೇ ಏ.23ರಂದು ಜಿಲ್ಲೆಗೆ ಬರಲಿದ್ದು, ಏ.24ಕ್ಕೆ ಬೆಳಿಗ್ಗೆ 9:30ಕ್ಕೆ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ರಥಯಾತ್ರೆಗೆ ಪೂಜೆ ಸಲ್ಲಿಸಲಾಗುವುದು’ ಎಂದು ತಿಳಿಸಿದರು.

ಈ ಸುದ್ದಿ ಓದಿದ್ದೀರಾ? ಬೀದರ್‌ | ಪಿಯುಸಿ ಪರೀಕ್ಷೆ ಫಲಿತಾಂಶ : ಜಿಲ್ಲೆಯ 13 ಪಿಯು ಕಾಲೇಜುಗಳಲ್ಲಿ ಶೂನ್ಯ ಫಲಿತಾಂಶ

ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ.ಗಿರೀಶ ಬದೋಲೆ, ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಚಂದ್ರಕಾಂತ ಪೂಜಾರಿ, ಅಪರ ಜಿಲ್ಲಾಧಿಕಾರಿ ಶಿವಕುಮಾರ ಶೀಲವಂತ, ಮುಖಂಡರಾದ ಶಿವಶರಣಪ್ಪ ವಾಲಿ, ವೈಜಿನಾಥ ಕಮಠಾಣೆ, ಬಾಬು ವಾಲಿ, ಬಸವರಾಜ ಬುಳ್ಳಾ, ರಾಜೇಂದ್ರ ಗಂದಗೆ, ಸುರೇಶ್ ಸ್ವಾಮಿ, ಸಂಜುಕುಮಾರ್ ಪಾಟೀಲ್, ವಿಜಯಕುಮಾರ ಪಾಟೀಲ, ಸೋಮಶೇಖರ ಅಮಲಾಪೂರೆ, ಮಾರುತಿ ಬೌದ್ಧೆ, ವಿಜಯಕುಮಾರ ಸೋನಾರೆ ಸೇರಿದಂತೆ ಸಮಾಜದ ವಿವಿಧ ಮುಖಂಡರು ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗದಗ | ಸಾರಿಗೆ ಬಸ್ ಟಾಯರ್ ಸ್ಪೋಟ ಪರಿಣಾಮ ಕಂಡಕ್ಟರ್ ಕಾಲಿಗೆ ಗಾಯ

ಲಕ್ಷ್ಮೇಶ್ವರ ಮಾರ್ಗದಲ್ಲಿ ಸಂಚರಿಸುತ್ತಿದ್ದ ವಾಯವ್ಯ ಕರ್ನಾಟಕ ಸಾರಿಗೆ ಸಂಸ್ಥೆಯ ಬಸ್ (ಸಂಖ್ಯೆ:...

ಉಡುಪಿ | ತುಳುನಾಡ ರಕ್ಷಣಾ ವೇದಿಕೆ ಮಹಿಳಾ ಘಟಕದಿಂದ ಅರ್ಥಪೂರ್ಣ ಗಾಂಧಿ ಜಯಂತಿ

ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರ ಜಯಂತಿಯ ಅಂಗವಾಗಿ ತುಳುನಾಡ ರಕ್ಷಣಾ ವೇದಿಕೆ (ರಿ.)...

ಉಡುಪಿ | ಸಮುದಾಯದ ಅಭಿವೃದ್ಧಿಗೆ ಉದ್ಯಮಿಗಳ ಒಗ್ಗಟ್ಟು ಅಗತ್ಯ: ಮುಮ್ತಾಜ್ ಮನ್ಸೂರಿ

ನಮ್ಮ ಸಮುದಾಯದ ದುರ್ಬಲ ವರ್ಗಗಳನ್ನು ಮೇಲಕ್ಕೆತ್ತಲು ಎಲ್ಲರೂ ಬೆಂಬಲ ಮತ್ತು ಸಹಕಾರದೊಂದಿಗೆ...