ಬೀದರ್‌ | ರಾಜಸತ್ತೆ ಬದಿಗೊತ್ತಿ ಪ್ರಜಾಸತ್ತೆಯನ್ನು ಮುನ್ನೆಲೆಗೆ ತಂದ ಬಸವಣ್ಣ : ಬಸವರಾಜ ಬಲ್ಲೂರ್

Date:

Advertisements

ಬಸವಣ್ಣನವರ ವಚನಗಳು ಕುರುಡರು ಆನೆ ಮುಟ್ಟಿ ಅಂದಾಜಿಸಿದಂತಿವೆ ಎಂದು ಕರ್ನಾಟಕ ಪದವಿಪೂರ್ವ ಕಾಲೇಜು ಪ್ರಾಚಾರ್ಯ ಡಾ. ಬಸವರಾಜ ಬಲ್ಲೂರ ನುಡಿದರು.

ಬೀದರ್‌ ನಗರದ ಆರ್‌ಆರ್‌ಕೆ ಪದವಿ ಕಾಲೇಜಿನಲ್ಲಿ ಮತ್ತು ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ ವತಿಯಿಂದ ಬುಧವಾರ ಆಯೋಜಿಸಿದ್ದ ಸಾಂಸ್ಕೃತಿಕ ನಾಯಕ ಬಸವಣ್ಣನವರ ಜಯಂತಿ ಆಚರಣೆ ಕಾರ್ಯಕ್ರಮದಲ್ಲಿ ಅವರು ವಿಶೇಷ ಉಪನ್ಯಾಸ ನೀಡಿದರು.

ʼಇಂದಿಗೂ ಅವುಗಳ ಆಳ ಅಧ್ಯಯನ, ಅರ್ಥ ವಿವರಣೆಗೆ ನಿಲುಕದಂತಿವೆ. ಅಂದು ಚಾಲನೆಯಲ್ಲಿದ್ದ ರಾಜಸತ್ತೆಯನ್ನು ಬದಿಗೊತ್ತಿ ಮೊದಲ ಬಾರಿಗೆ ಪ್ರಜಾಸತ್ತೆಯನ್ನು ಮುನ್ನೆಲೆಗೆ ತಂದರು. ಈ ಕಾರಣಕ್ಕಾಗಿಯೇ ಕೆಳ ವರ್ಗದ ಮಹಿಳೆಯರೂ ವಚನ ರಚನೆಯಲ್ಲಿ ತೊಡಗಿಸಿಕೊಳ್ಳಲು, ಆಯ್ದಕ್ಕಿ ಲಕ್ಕಮ್ಮನಂಥವರು ಅಂದೇ ಭ್ರಷ್ಟಾಚಾರದ ನಿರ್ಮೂಲನೆಗೆ ಅಂತಃಶಕ್ತಿಯನ್ನು ತಂದುಕೊಳ್ಳಲು ಸಾಧ್ಯವಾಯಿತು. ಅಂತಹ ಶಕ್ತಿ ತುಂಬಿದವರೇ ಬಸವಣ್ಣನವರುʼ ಎಂದು ಹೇಳಿದರು.

Advertisements

ʼತನ್ನ ಸಂಬಂಧಗಳನ್ನು ತಳ ಸಮುದಾಯದವರೊಂದಿಗೆ ಅಪವರ್ಗೀಕರಣಗೊಳಿಸಿಕೊಳ್ಳುತ್ತಾರೆ. ತನ್ನ ಹುಟ್ಟನ್ನೇ ನಿರಾಕರಿಸುತ್ತ, ಕೆಳ ವರ್ಗಕ್ಕೆ ಸೇರಿಸಿಕೊಳ್ಳುವ ಶಕ್ತಿ ಅವರಲ್ಲಿತ್ತು. ತನ್ನ ಜೀವನದುದ್ದಕ್ಕೂ ಉತ್ತಮ ಮನುಷ್ಯರ, ಉತ್ತಮ ಸಮಾಜದಲ್ಲಿ ಜಾತಿ, ಮತ, ವರ್ಗ, ವರ್ಣಗಳ ಭೇದಗಳಿರಬಾರದೆಂದು ನುಡಿದರು. ಬಸವ ಜಯಂತಿಯ ಆಚರಣೆ ಮಾಡುವುದು ಅಂದರೆ ನಮ್ಮ ಆತ್ಮಾವಲೋಕನ ಮಾಡಿಕೊಳ್ಳುವುದು ಎಂದರ್ಥ. ಬಸವ ಜಯಂತಿಯ ಉತ್ಸವ ಅಂದರೆ ದೀನ ದಲಿತರ, ಕಾಯಕ ಜೀವಿಗಳ, ಜನಪರ, ಜೀವಪರ ಜಗತ್ತಿನ ಉತ್ಸವವೇ ಆಗಿದೆʼ ಎಂದು ನುಡಿದರು.

ಬೀದರ್ ವಿಶ್ವವಿದ್ಯಾಲಯದ ಸಿಂಡಿಕೇಟ್ ಸದಸ್ಯ ನಾಗಭೂಷಣ ಕಮಠಾಣೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ʼ900 ನೂರು ವರ್ಷಗಳ ಹಿಂದೆಯೇ ಬಸವಣ್ಣನವರು ಅನುಭವ ಮಂಟಪವೆಂಬ ಪಾರ್ಲಿಮೆಂಟ್ ನಮಗೆ ಕೊಟ್ಟಿದ್ದಾರೆ. ಅಲ್ಲಿ ಎಲ್ಲರಿಗೂ ಸೂಕ್ತ ಸ್ಥಾನಮಾನ ನೀಡಲಾಗಿತ್ತು. ಶಿಕ್ಷಣದ ವಿಷಯದಲ್ಲಿ ಶಿಕ್ಷಕರು ತಮ್ಮ ಜವಾಬ್ದಾರಿಯನ್ನು ಅರ್ಥಪೂರ್ಣವಾಗಿ ನಿಭಾಯಿಸಬೇಕುʼ ಎಂದು ನುಡಿದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಆರ್‌ಆರ್‌ಕೆ ಶಿಕ್ಷಣ ಸಮಿತಿಯ ಅಧ್ಯಕ್ಷ ಪ್ರಫುಲ್ ಪಾಂಡೆ ವಹಿಸಿದ್ದರು. ಶರಣಪ್ಪ ದೇಶಮುಖ, ಧನರಾಜ ತಾಂಡೂರೆ, ಶ್ರೀಕಾಂತ ಪಾಟೀಲ, ಮನೋಜಕುಮಾರ ಕುಲಕರ್ಣಿ, ಗುರುನಾಥ ಅಕ್ಕಣ್ಷನವರು ಮುಖ್ಯ ಅತಿಥಿಗಳಾಗಿದ್ದರು. ತಾಲ್ಲೂಕು ಕಸಾಪ ಅಧ್ಯಕ್ಷ ಟಿ.ಎಂ.ಮಚ್ಚೆ ಅವರು ಪರಿಷತ್ತಿನ ಕಾರ್ಯಚಟುವಟಿಕೆಗಳ ಕುರಿತು ಪ್ರಾಸ್ತಾವಿಕವಾಗಿ ಮಾತನಾಡಿದರು. ಡಾ.ಬಂಡಯ್ಯ ಸ್ವಾಮಿ ಸ್ವಾಗತಿಸಿದರು. ತಾಲ್ಲೂಕು ಕಸಾಪದ ಉಪಾಧ್ಯಕ್ಷ ಜಗನ್ನಾಥ ಕಮಲಾಪುರೆ ನಿರೂಪಿಸಿದರು. ಗೌರವ ಕಾರ್ಯದರ್ಶಿ ಉಮೇಶ ಜಾಬಾ ವಂದಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಯಾದಗಿರಿ | ಅತಿವೃಷ್ಟಿಯಿಂದ ಬೆಳೆ ಹಾನಿ: ರೈತರಿಗೆ ಪರಿಹಾರ ನೀಡುವಂತೆ ಆಗ್ರಹ

ಯಾದಗಿರಿ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ಬೆಳೆ ಹಾನಿದ ರೈತರಿಗೆ ಸಮೀಕ್ಷೆ ನಡೆಸಿ ಶೀಘ್ರದಲ್ಲಿ...

ಗುಬ್ಬಿ | ಜನಪದ ಸಾಹಿತ್ಯ ಎಂದೆಂದಿಗೂ ಜೀವಂತ : ಡಾ.ಮೂರ್ತಿ ತಿಮ್ಮನಹಳ್ಳಿ

ಕನ್ನಡ ಸಾಹಿತ್ಯ ಲೋಕದಲ್ಲಿ ಹಲವು ಪ್ರಕಾರಗಳ ಪೈಕಿ ಜನಪದ ಸಾಹಿತ್ಯ...

ಉಡುಪಿ | ಮಹೇಶ್‌ ಶೆಟ್ಟಿ ತಿಮರೋಡಿ ಬೆಂಬಲಿಗರ ಕಾರು ಪೊಲೀಸ್‌ ಅಧೀಕ್ಷರಕ ಕಾರಿಗೆ ಡಿಕ್ಕಿ !

ಬೆಳ್ತಂಗಡಿಯ ಸೌಜನ್ಯ ಪರ ಹೋರಾಟಗಾರ ಮಹೇಶ್‌ ಶೆಟ್ಟಿ ತಿಮರೋಡಿಯವರನ್ನು ಬ್ರಹ್ಮಾವರ ಪೊಲೀಸ್...

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

Download Eedina App Android / iOS

X